Just In
Don't Miss!
- News
ಪದ್ಮವಿಭೂಷಣ ಉಸ್ತಾದ್ ಗುಲಾಂ ಮುಸ್ತಾಫಾ ಖಾನ್ ವಿಧಿವಶ
- Movies
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- Finance
ಸಿಲಿಂಡರ್ ಬುಕ್ ಮಾಡಿದ ಎರಡು ಗಂಟೆಯೊಳಗೆ ಮನೆ ಬಾಗಿಲಿಗೆ ಡೆಲಿವರಿ
- Sports
ಆಸಿಸ್ ಬೌಲರ್ಗಳಿಗೆ ಪಾಂಟಿಂಗ್ ಚಾಟಿ: ಶಾರ್ದೂಲ್- ಸುಂದರ್ ಆಟಕ್ಕೆ ಮೆಚ್ಚುಗೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
140 ಕಿ.ಮೀ ಮೈಲೇಜ್ ನೀಡುವ ಸೂಪರ್ ಸೊಕೊ ಪಿಸಿಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ
ಚೀನಾ ಮೂಲದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ 'ಸೂಪರ್ ಸೊಕೊ' ತನ್ನ ಪಿಸಿಎಕ್ಸ್ ಎಲೆಕ್ಟ್ರಿಕ್ ಸ್ಕೂಟರನ್ನು ಯುರೋಪಿಯನ್ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಸೂಪರ್ ಸೊಕೊ ಪಿಸಿಎಕ್ಸ್ ಮಾದರಿಯು ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳಲ್ಲಿ ಒಂದಾಗಿದೆ.

ಸೂಪರ್ ಸೊಕೊ ಎಲೆಕ್ಟ್ರಿಕ್ ಸ್ಕೂಟರ್ ಸಿಂಗಲ್-ಬ್ಯಾಟರಿ ರೂಪಾಂತರದ ಬೆಲೆಯು ಸರಿಸುಮಾರು ರೂ.3.53 ಲಕ್ಷಗಳಾಗಿದೆ. ಹೆಚ್ಚಿನ ಡ್ಯುಯಲ್ ಬ್ಯಾಟರಿ ರೂಪಾಂತರದ ಬೆಲೆಯು ರೂ.4.61 ಲಕ್ಷಗಳಾಗಿದೆ. ಸೂಪರ್ ಸೊಕೊ ಪಿಸಿಎಕ್ಸ್ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ಸೂಪರ್ ಸೊಕೊ ಬ್ರಿಟನ್ ನಲ್ಲಿ ಅತ್ಯಂತ ಯಶಸ್ವಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾಗಿದೆ.

ಸೊಪರ್ ಸೊಕೊ ಕಂಪನಿಯು ತನ್ನ ಪೋರ್ಟ್ಫೋಲಿಯೊದಲ್ಲಿ ಸಿಯುಎಕ್ಸ್, ಸಿಯುಎಕ್ಸ್ ಡುಕಾಟಿ ವರ್ಷನ್, ಟಿಎಸ್ಎಕ್ಸ್, ಟಿಸಿ, ಸಿಪಿಎಕ್ಸ್ ಮತ್ತು ಟಿಸಿ ಮಾಕ್ಸ್ ಎಂಬ ಆರು ಮಾದರಿಗಳನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಕಡಿಮೆ ಬೆಲೆಯ ಜಿಮೊಪೈ ಮಿಸೊ ಮಿನಿ ಎಲೆಕ್ಟ್ರಿಕ್ ಸ್ಕೂಟರ್

ಸೂಪರ್ ಸೊಕೊ ಪಿಸಿಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬ್ಲ್ಯಾಕ್, ಗ್ರೇ ಮತ್ತು ಸಿಲ್ವರ್ ಬಣ್ಣಗಳಲ್ಲಿ ಲಭ್ಯವಿದೆ. ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಫುಲ್ ಎಲ್ಇಡಿ ಹೆಡ್‌ಲ್ಯಾಂಪ್, ದೊಡ್ಡ ಫ್ಲೈಸ್ಕ್ರೀನ್, ಡಿಜಿಟಲ್ ಇನ್ಸ್ ಟ್ರೂ,ಮೆಂಟ್ ಕನ್ಸೋಲ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಫೀಚರ್ ಗಳನ್ನು ಹೊಂದಿದೆ.

ಇನ್ನು ಈ ಹೊಸ ಸೂಪರ್ ಸೊಕೊ ಪಿಸಿಎಕ್ಸ್ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸೆಟಪ್ ಅನ್ನು ಅಳವಡಿಸಲಾಗಿದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಹೋಂಡಾ ಆಕ್ಟಿವಾ 6ಜಿ ಸ್ಕೂಟರ್

ಇನ್ನು ಈ ಹೊಸ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಡ್ಯುಯಲ್ ಫ್ಲಾಟ್ ಸೀಟ್ ಕಾನ್ಫಿಗರೇಶನ್ ಅನ್ನು ಒಳಗೊಂಡಿದೆ. ಪಿಸಿಎಕ್ಸ್ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ 8-ಸ್ಪೋಕ್ ಅಲಾಯ್ ವ್ಹೀಲ್ ಅನ್ನು ಅಳವಡಿಸಲಾಗಿದೆ,

ಈ ಹೊಸ ಸೂಪರ್ ಸೊಕೊ ಪಿಸಿಎಕ್ಸ್ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ರಿವರ್ಸ್ ಮೋಡ್ ಮತ್ತು ಸೂಪರ್ ಸೊಕೊ ಅಪ್ಲಿಕೇಶನ್ ಮೂಲಕ ಸ್ಮಾರ್ಟ್ ಫೋನ್ ಕನೆಕ್ಟ್ ಮಾಡಬಹುದಾಗಿದೆ. ಇನ್ನು ಈ ಸ್ಕೂಟರಿನ ಎರಡು ಕಡೆಗಳಲ್ಲಿ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಸೂಪರ್ ಸೊಕೊ ಸಿಪಿಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ 4 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಅನ್ನು ಅಳವಡಿಸಲಾಗಿದೆ. ಈ ಎಲೆಕ್ಟ್ರಿಕ್ ಮೋಟಾರ್ 5.36 ಬಿಹೆಚ್‌ಪಿ ಪವರ್ ಮತ್ತು 171 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಸೂಪರ್ ಸೊಕೊ ಸಿಪಿಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಒಂದು ಬಾರಿ ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಮಾಡಿದರೆ 140 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಶೇ.90 ರಷ್ಟು ಚಾರ್ಜ್ ಆಗಲು ಸುಮಾರು 3-4 ಗಂಟೆಗಳ ಸಮಯ ತೆಗೆದುಕೊಳ್ಳುತ್ತದೆ.