Just In
- 52 min ago Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- 1 hr ago ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್
- 1 hr ago ಮಹೀಂದ್ರಾ ಪ್ರೀಯರಿಗೆ ಭಾರೀ ಸಿಹಿಸುದ್ದಿ: ಗಲ್ಲಿಗಲ್ಲಿಯಲ್ಲಿ ಶುರುವಾಗುತ್ತಾ ಸ್ಕಾರ್ಪಿಯೋ ಹವಾ!
- 2 hrs ago ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡುತ್ತವೆ!
Don't Miss!
- News Karnataka rain: ಗುಡುಗು, ಸಿಡಿಲು ಬಡಿತದಿಂದ ರಕ್ಷಣೆ ಪಡೆಯಲು ಏನೇನು ಮಾಡಬೇಕು? ಸಲಹೆಗಳು ಇಲ್ಲಿವೆ
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕ್
ಸುಜುಕಿ ಮೋಟಾರ್ಸೈಕಲ್ ಕಂಪನಿಯು ತನ್ನ ಬಿಎಸ್ -6 ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕಿನ ಮಾಹಿತಿಗಳು ಬಹಿರಂಗವಾಗಿವೆ.
ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಸುಜುಕಿ ಕಂಪನಿಯು ತನ್ನ ಹೊಸ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ ಎಂದು ಟೀಸರ್ ಚಿತ್ರವನ್ನು ಹಂಚಿಕೊಂಡಿದ್ದರು. ಆದರೆ ದೇಶದಲ್ಲಿ ಕರೋನಾ ಆರ್ಭಟ ಹೆಚ್ಚಾದ ಕಾರಣ ಈ ಹೊಸ ಬೈಕಿನ ಬಿಡುಗಡೆಯು ವಿಳಂಬವಾಗಿದೆ. ಫೆಬ್ರವರಿ ತಿಂಗಳಲ್ಲಿ ನಡೆದ 2020ರ ಆಟೋ ಎಕ್ಸ್ಪೋದಲ್ಲಿ ಈ ಬಿಎಸ್ 6 ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕನ್ನು ಸುಜುಕಿ ಪ್ರದರ್ಶಿಸಿತು.
ಕಳೆದ ವರ್ಷದಲ್ಲಿ ಆರಂಭದಲ್ಲಿ ಬಿಎಸ್ 4 ಪ್ರೇರಿತ ಬೈಕನ್ನು ಬಿಡುಗಡೆಗೊಳಿಸಲಾಗಿತ್ತು. ಬಿಎಸ್-4 ಮಾದರಿಯಲ್ಲಿ 645 ಸಿಸಿ ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 8,800 ಆರ್ಪಿಎಂನಲ್ಲಿ 70 ಬಿಎಚ್ಪಿ ಪವರ್ ಮತ್ತು 6,500 ಆರ್ಪಿಎಂನಲ್ಲಿ 62 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್
ಈ ಎಂಜಿನ್ ನೊಂದಿಗೆ ಆರು ಸ್ಪೀಡ್ ಗೇರ್ಬಾಕ್ಸ್ ಅನ್ನು ಜೋಡಿಸಲಾಗಿದೆ. ಹೊಸ ಬಿಎಸ್-6 ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕಿನಲ್ಲಿ ಇದೇ ಎಂಜಿನ್ ಅನ್ನು ಅಳವಡಿಸಬಹುದು. ಬಿಹೆಚ್ಪಿ ಪವರ್ ನಲ್ಲಿ ಯಾವುದೆ ಬದಲಾವಣೆಗಳನ್ನು ಹೊಂದಿರುವುದಿಲ್ಲ ಆದರೆ 62.3 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಸುಜುಕಿ ಕಂಪನಿಯು ಹಿಂದಿನ ಬಿಎಸ್-4 ಮಾದರಿಯ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ. ಹೊಸ ಬಿಎಸ್-6 ಬೈಕಿನಲ್ಲಿ ಯಾವುದೇ ಹೆಚ್ಚಿನ ಬದಲಾವಣೆಗಳನ್ನು ಹೊಂದಿರುವುದಿಲ್ಲ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್ಎಕ್ಸ್ ಬೈಕ್
2020ರ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕಿನಲ್ಲಿ 43 ಎಂಎಂ ಟೆಲಿಸ್ಕೋಪಿಕ್ ಫೋರ್ಕ್ಗಳನ್ನು ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸಸ್ಪೆಂಷನ್ ಸೆಟಪ್ ಅನ್ನು ಹೊಂದಿದೆ. ಈ ಬೈಕಿನ ಮುಂಭಾಗ 310 ಎಂಎಂ ಡ್ಯುಯಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ ಒಂದೇ 260 ಎಂಎಂ ಡಿಸ್ಕ್ ಅನ್ನು ಹೊಂದಿದೆ. ಇದರೊಂದಿಗೆ ಡ್ಯುಯಲ್ ಚಾನೆಲ್ ಎಬಿಎಸ್ ಸ್ಟ್ಯಾಂಡರ್ಡ್ ಅಗಿ ಜೋಡಿಸಲಾಗಿದೆ.
ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕು ಹಿಂದಿನ ಮಾದರಿಯಂತೆ ಅದೇ ಮಾದರಿಯ ಬಣ್ಣಗಳ ಆಯ್ಕೆಗಳನ್ನು ಹೊಂದಿರಲಿದೆ. ಇದು ಚಾಂಪಿಯನ್ ಹಳದಿ ಮತ್ತು ಗ್ಲೇಸಿಯರ್ ಬಿಳಿ ಬಣ್ಣಗಳಾಗಿದೆ.
MOST
READ:
ದುಬಾರಿಯಾಯ್ತು
ಜನಪ್ರಿಯ
ಬಜಾಜ್
ಪಲ್ಸರ್
ಎನ್ಎಸ್
ಬೈಕುಗಳು
ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.7.52 ಲಕ್ಷಗಳಾಗಿದೆ. ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕಿನ ಬೆಲೆಯು ಹಿಂದಿನ ಮಾದರಿಗಿಂತ ತುಸು ಹೆಚ್ಚಾಗಿರಲಿದೆ.
ಸುಜುಕಿ ಕಂಪನಿಯು ಭಾರತದಲ್ಲಿ ಹೊಸ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕನ್ನು ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕನ್ನು ಸಿಕಿಡಿ ಮಾರ್ಗದ ಮೂಲಕ ಭಾರತಕ್ಕೆ ತರಲಾಗುತ್ತದೆ. ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕ್ ಭಾರತದಲ್ಲಿ ಬಿಡುಗಡೆಯಾದ ಬಳಿಕ ಕವಾಸಕಿ ವರ್ಸಿಸ್ 650 ಬೈಕಿಗೆ ಪೈಪೋಟಿ ನೀಡುತ್ತದೆ.