Just In
Don't Miss!
- News
Video: ದೆಹಲಿಯಲ್ಲಿ ರೈತನ ಸಾವಿನ ಭಯಾನಕ ದೃಶ್ಯ!
- Sports
ಐಎಸ್ಎಲ್: ನಾರ್ತ್ಈಸ್ಟ್ vs ಮೋಹನ್ ಬಾಗನ್, Live ಸ್ಕೋರ್
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Movies
ರಾಜಮೌಳಿಯ RRR ಚಿತ್ರಕ್ಕೆ ಎದುರಾಗಿ ಅಜಯ್ ದೇವಗನ್ ಸಿನಿಮಾ?
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Education
Republic Day Speech And Essay Ideas: ಗಣರಾಜ್ಯೋತ್ಸವ ಪ್ರಯುಕ್ತ ಭಾಷಣ ಮತ್ತು ಪ್ರಬಂಧ ಬರೆಯಲು ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಯಾಯ್ತು ಬಿಎಸ್-6 ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಅಡ್ವೆಂಚರ್-ಟೂರಿಂಗ್ ಬೈಕ್
ಸುಜುಕಿ ಮೋಟಾರ್ಸೈಕಲ್ ಕಂಪನಿಯು ತನ್ನ ಬಿಎಸ್-6 ವಿ-ಸ್ಟ್ರೋಮ್ 650 ಎಕ್ಸ್ಟಿ ಅಡ್ವೆಂಚರ್-ಟೂರಿಂಗ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಬಿಎಸ್-6 ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೆಲೆಯು ದೆಹಲಿಯ ಎಕ್ಸ್ ಶೋರೂಂ ಪ್ರಕಾರ ರೂ.8.84 ಲಕ್ಷಗಳಾಗಿದೆ.

ಹೊಸ ಬಿಎಸ್ -6 ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕಿಗಾಗಿ ದೇಶಾದ್ಯಂತ ಸುಜುಕಿ ಅಧಿಕೃತ ಡೀಲರುಗಳು ಬುಕ್ಕಿಂಗ್ ಅನ್ನು ಪ್ರಾರಂಭಿಸಿದ್ದಾರೆ. ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕಿನ ಪೀಚರ್ ಗಳನ್ನು ನವೀಕರಿಸಲಾಗಿಲ್ಲ, ಎಂಜಿನ್ ಅನ್ನು ಮಾತ್ರ ನವೀಕರಿಸಲಾಗಿದೆ. ಬಿಎಸ್ 4 ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಮಾದರಿಯ ಬೆಲೆಯನ್ನು ಬಿಎಸ್-6 ಮಾದರಿಗೆ ಹೋಲಿಸಿದರೆ ರೂ.1.4 ಲಕ್ಷ ಹೆಚ್ಚಾಗಿದೆ.

ಬಿಎಸ್-6 ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕ್ ಚಾಂಪಿಯನ್ ಯೆಲ್ಲೋ ಮತ್ತು ಪರ್ಲ್ ಗ್ಲೇಸಿಯರ್ ವೈಟ್ ಬಣ್ಣಗಳಲ್ಲಿ ಲಭ್ಯವಿರಲಿದೆ. ಫೆಬ್ರವರಿ ತಿಂಗಳಲ್ಲಿ ನಡೆದ 2020ರ ಆಟೋ ಎಕ್ಸ್ಪೋದಲ್ಲಿ ಈ ಬಿಎಸ್ 6 ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕನ್ನು ಸುಜುಕಿ ಪ್ರದರ್ಶಿಸಿದ್ದರು.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬಿಎಸ್-4 ಮಾದರಿಯ ಅದೇ 645 ಸಿಸಿ ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 8,800 ಆರ್ಪಿಎಂನಲ್ಲಿ 69.7 ಬಿಎಚ್ಪಿ ಪವರ್ ಮತ್ತು 6,500 ಆರ್ಪಿಎಂನಲ್ಲಿ 62 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇನ್ನು ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕಿನ ಸಸ್ಪೆಂಕ್ಷನ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 43 ಎಂಎಂ ಟೆಲಿಸ್ಕೋಪಿಕ್ ಫೋರ್ಕ್ಗಳನ್ನು ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸಸ್ಪೆಂಷನ್ ಸೆಟಪ್ ಅನ್ನು ಹೊಂದಿದೆ.
MOST READ: ಅಕ್ಟೋಬರ್ ತಿಂಗಳಿನಲ್ಲಿ 8 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಈ ಅಡ್ವೆಂಚರ್-ಟೂರಿಂಗ್ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗ 310 ಎಂಎಂ ಡ್ಯುಯಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ ಒಂದೇ 260 ಎಂಎಂ ಡಿಸ್ಕ್ ಅನ್ನು ಹೊಂದಿದೆ. ಇದರೊಂದಿಗೆ ಡ್ಯುಯಲ್ ಚಾನೆಲ್ ಎಬಿಎಸ್ ಸ್ಟ್ಯಾಂಡರ್ಡ್ ಅಗಿ ಜೋಡಿಸಲಾಗಿದೆ.

ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕಿನಲ್ಲಿ ಯಾವುದೇ ಹೊಸ ವಿನ್ಯಾಸ ಬದಲಾವಣೆಗಳನ್ನು ಹೊಂದಿಲ್ಲ. ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಬೈಕ್ ಎಲ್ಇಡಿ ಹೆಡ್ ಲ್ಯಾಂಪ್ ಗಳನ್ನು ಹೊದಿದ್ದು, ಹೊಂದಾಣಿಕೆ ಮಾಡಬಹುದಾದ ವಿಂಡ್ಸ್ಕ್ರೀನ್, ನಕಲ್ ಗಾರ್ಡ್ಗಳು, ಎಂಜಿನ್ ಪ್ರೊಟೆಕ್ಟರ್ ಸ್ಪೋಕ್ ವ್ಹೀಲ್ಸ್ ಮತ್ತು ಮೆತ್ತನೆಯ ಸಿಂಗಲ್-ಪೀಸ್ ಸೀಟ್ ಅನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್ಮಾಸ್ಟರ್ ಬೈಕ್

ಇನ್ನು ಈ ಹೊಸ ಅಡ್ವೆಂಚರ್-ಟೂರಿಂಗ್ ಬೈಕಿನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದ್ದು, ಇದರಲ್ಲಿ ಗೇರ್ ಪೋಷಿಸನ್,ಟ್ಯಾಕೋಮೀಟರ್ ಮತ್ತು ಡಿಜಿಟಲ್ ರೀಡ್ ಔಟ್ ಗಳನ್ನು ಒಳಗೊಂಡಿದೆ. ಕೆಳಗಿನ ಡಿಜಿಟಲ್ ವಿಭಾಗವು ಓಡೋಮೀಟರ್, ಟ್ವಿನ್-ಟ್ರಿಪ್ ಮೀಟರ್, ಕಾಲ್, ಫ್ಯೂಯಲ್ ಲೆವೆಲ್ ಮತ್ತು ಟ್ರ್ಯಾಕ್ಷನ್ ಕಂಟ್ರೋಲ್ ಮೋಡ್ ಗಳನ್ನು ಪ್ರದರ್ಶಿಸುತ್ತದೆ.

ಸುಜುಕಿ ಕಂಪನಿಯು ವಿ-ಸ್ಟ್ರೋಮ್ 650 ಎಕ್ಸ್ಟಿ ಅಡ್ವೆಂಚರ್-ಟೂರಿಂಗ್ ಬೈಕನ್ನು ಸಿಕಿಡಿ ಮಾರ್ಗದ ಮೂಲಕ ಭಾರತಕ್ಕೆ ತರಲಾಗುತ್ತದೆ. ಈ ಹೊಸ ಸುಜುಕಿ ವಿ-ಸ್ಟ್ರೋಮ್ 650 ಎಕ್ಸ್ಟಿ ಭಾರತೀಯ ಮಾರುಕಟ್ಟೆಯಲ್ಲಿ ಕವಾಸಕಿ ವರ್ಸಿಸ್ 650 ಬೈಕಿಗೆ ಪೈಪೋಟಿ ನೀಡುತ್ತದೆ.