Just In
- 33 min ago XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 2 hrs ago Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- 15 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 16 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
Don't Miss!
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತಕ್ಕೆ ಲಗ್ಗೆಯಿಡಲಿದೆ ಹೊಸ ಟ್ರಯಂಫ್ ಟೈಗರ್ 850 ಸ್ಪೋರ್ಟ್ ಬೈಕ್
ಬ್ರಿಟಿಷ್ ದ್ವಿಚಕ್ರ ತಯಾರಕ ಕಂಪನಿಯಾದ ಟ್ರಯಂಫ್ ಮೋಟರ್ಸೈಕಲ್ ತನ್ನ ಹೊಸ ಟೈಗರ್ 850 ಸ್ಪೋರ್ಟ್ ಬೈಕನ್ನು ಜಾಗತಿಕವಾಗಿ ಇತ್ತೀಚೆಗೆ ಅನಾವರಣಗೊಳಿಸಿತ್ತು. ಹೊಸ ಟ್ರಯಂಫ್ ಟೈಗರ್ 850 ಸ್ಪೋರ್ಟ್ ಬೈಕ್ ಬ್ರ್ಯಾಂಡ್ನ ಎಂಟ್ರಿ ಲೆವಲ್ ಮಾದರಿಯಾಗಿದೆ.
ಟ್ರಯಂಫ್ ಮೋಟಾರ್ಸೈಕಲ್ಸ್ ಇಂಡಿಯಾ ಕಂಪನಿಯು ತನ್ನ ಸರಣಿಯಲ್ಲಿ ಹೊಸ ಟೈಗರ್ 850 ಸ್ಪೋರ್ಟ್ ಬೈಕಿನ ಹೆಸರನ್ನು ಸೇರಿಸಲಾಗಿದೆ. ಈ ಹೊಸ ಟೈಗರ್ 850 ಸ್ಪೋರ್ಟ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಮುಂದಿಮ ವರ್ಷದ ಮಧ್ಯಂತರ ಅವಧಿಯಲ್ಲಿ ಬಿಡುಗಡೆಗೊಳಿಸಬಹುದು. ಹೊಸ ಟ್ರಯಂಫ್ ಟೈಗರ್ 850 ಸ್ಪೋರ್ಟ್ ಬೈಕ್ ಹೆಚ್ಚು ರಸ್ತೆ ಆಧಾರಿತ ಅಡ್ವೆಂಚರ್ ಟೂರರ್ ಎಂದು ಹೇಳಲಾಗುತ್ತದೆ,
ಹೊಸ ಟ್ರಯಂಫ್ ಟೈಗರ್ 850 ಸ್ಪೋರ್ಟ್ ಬೈಕ್ ಇದರ ದೊಡ್ಡಣ್ಣ ಟೈಗರ್ 900 ಮಾದರಿಯಂತೆ ವಿನ್ಯಾಸವಿದೆ. ಇವೆರಡರ ನಡುವೆ ವ್ಯತ್ಯಾಸವನ್ನು ತೋರಿಸಲು ಹೊಸ ಟೈಗರ್ 850 ಹೊಸ ಬಾಡಿ ಗ್ರಾಫಿಕ್ಸ್ ಮತ್ತು ಗ್ರ್ಯಾಫೈಟ್/ಡಯಾಬ್ಲೊ ರೆಡ್ ಮತ್ತು ಗ್ರ್ಯಾಫೈಟ್/ಕ್ಯಾಸ್ಪಿಯನ್ ಬ್ಲೂ ಎಂಬ ಎರಡು ಹೊಸ ಡ್ಯುಯಲ್-ಟೋನ್ ಬಣ್ಣಗಳನ್ನು ಹೊಂದಿವೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್ಮಾಸ್ಟರ್ ಬೈಕ್
ಟೈಗರ್ 900 ನಲ್ಲಿರುವಂತೆ ಹೊಸ ಟ್ರಯಂಫ್ ಟೈಗರ್ 850 ಸ್ಪೋರ್ಟ್ ಬೈಕ್ ಮುಂಭಾಗ ಹೊಂದಾಣಿಕೆ ಮಾಡಬಹುದಾದ ವಿಂಡ್ಶೀಲ್ಡ್, ಫ್ಯೂಯಲ್ ಟ್ಯಾಂಕ್, ರೇಡಿಯೇಟರ್ ಮತ್ತು ಎಲ್ಇಡಿ ಲೈಟ್ ಗಳನ್ನು ಹೊಂದಿವೆ. ಇನ್ನು ಈ ಟೈಗರ್ 850 ಸ್ಪೋರ್ಟ್ ಬೈಕಿನಲ್ಲಿ ಹಲವಾರು ಅಕ್ಸೇಸರೀಸ್ ಗಳನ್ನು ಹೊಂದಿರಲಿದೆ.
ಹೊಸ ಟ್ರಯಂಫ್ ಟೈಗರ್ 850 ಸ್ಪೋರ್ಟ್ ಅದೇ 888 ಸಿಸಿ ಲಿಕ್ವಿಡ್-ಕೂಲ್ಡ್ ಇನ್-ಲೈನ್ ಮೂರು ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 85 ಬಿಹೆಚ್ಪಿ ಪವರ್ ಮತ್ತು 82 ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್
ಟೈಗರ್ 900 ಬೈಕಿಗೆ ಹೋಲಿಸಿದರೆ 10 ಬಿಹೆಚ್ಪಿ ಪವರ್ ಮತ್ತು 5 ಎನ್ಎಂ ಟಾರ್ಕ್ ಕಡಿಮೆ ಉತ್ಪಾದಿಸುತ್ತದೆ. ಇನ್ನು ಎಂಜಿನ್ ಅನ್ನು ಸ್ಲಿಪ್ ಮತ್ತು ಅಸಿಸ್ಟ್ ಕ್ಲಚ್ನೊಂದಿಗೆ ಆರು-ಸ್ಪೀಡ್ ಗೇರ್ಬಾಕ್ಸ್ಗೆ ಜೋಡಿಸಲಾಗಿದೆ.
ಹೊಸ ಟ್ರಯಂಫ್ ಟೈಗರ್ 850 ಸ್ಪೋರ್ಟ್ ಬೈಕ್ ರೈನ್ ಮತ್ತು ರೋಡ್ ಎಂಬ ಎರಡು ರೈಡಿಂಗ್ ಮೋಡ್ಗಳೊಂದಿಗೆ ಬರಲಿದೆ: ಆದರೆ ಕ್ವಿಕ್-ಶಿಫ್ಟರ್ ಅನ್ನು ಹೆಚ್ಚುವರಿ ಅಕ್ಸೇಸರೀಸ್ ಆಗಿ ನೀಡಲಾಗುತ್ತದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್ಎಕ್ಸ್ ಬೈಕ್
ಈ ಹೊಸ ಟ್ರಯಂಫ್ ಟೈಗರ್ 850 ಸ್ಪೋರ್ಟ್ ಬೈಕಿನ ಸಸ್ಪೆಂಕ್ಷನ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 43 ಎಂಎಂ ಅಪ್ ಸೈಡ್ ಡೌನ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ಅನ್ನು ಒಳಗೊಂಡಿರುತ್ತದೆ.ಇನ್ನು ಹಿಂಭಾಗವು 170 ಎಂಎಂ ಅನ್ನು ಮ್ಯಾನುವಲ್ ಪ್ರಿ ಲೋಡ್ ಹೊಂದಾಣಿಕೆಯೊಂದಿಗೆ ನೀಡುತ್ತದೆ.
ಇನ್ನು ಪ್ರಮುಖವಾಗಿ ಹೊಸ ಟ್ರಯಂಫ್ ಟೈಗರ್ 850 ಸ್ಪೋರ್ಟ್ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಡಬಲ್ 320 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ ಒಂದೇ 255 ಎಂಎಂ ಡಿಸ್ಕ್ ಅನ್ನು ನೀಡಲಾಗುತ್ತದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಜೋಡಿಸಲಾಗುತ್ತದೆ.
ಹೊಸ ಟ್ರಯಂಫ್ ಟೈಗರ್ 850 ಸ್ಪೋರ್ಟ್ ಬೈಕ್ ಮುಂದಿನ ವರ್ಷದ ಮಧ್ಯಾಂತರ ಅವಧಿಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬಹುದು. ಇನ್ನು ಟೈಗರ್ 900 ಬೈಕ್ ಬೆಲೆಗೆ ಹೋಲಿಸಿದರೆ, ಟ್ರಯಂಫ್ ಟೈಗರ್ 850 ಸ್ಪೋರ್ಟ್ ಮಾದರಿಯನ್ನು ಕೈಗೆಟುಕುವ ಬೆಲೆಯಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.