Just In
- 7 min ago Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- 1 hr ago ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- 1 hr ago Google Maps: ಇವಿ ಮಾಲೀಕರೇ ಆತಂಕ ಬಿಡಿ... ಗೂಗಲ್ ಮ್ಯಾಪ್ಸ್ ಭರ್ಜರಿ ಅಪ್ಡೇಟ್!
- 2 hrs ago ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
Don't Miss!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- News ಚಾಮರಾಜನಗರ: ಚೊಂಬುಗಳ ಪಾರ್ಟಿ ಕಾಂಗ್ರೆಸ್
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Movies 'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟ್ರಯಂಫ್ ರಾಕೆಟ್ 3 ಜಿಟಿ ಬೈಕ್ ಬಿಡುಗಡೆ ದಿನಾಂಕ ಬಹಿರಂಗ
ಟ್ರಯಂಫ್ ಮೋಟಾರ್ಸೈಕಲ್ ತನ್ನ ರಾಕೆಟ್ 3 ಜಿಟಿ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಟ್ರಯಂಫ್ ಕಂಪನಿಯು ಕೊನೆಗೂ ತನ್ನ ಬಹುನಿರೀಕ್ಷಿತ ರಾಕೆಟ್ 3 ಜಿಟಿ ಬೈಕಿನ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಿದೆ.
ಟ್ರಯಂಫ್ ಕಂಪನಿಯು ಹೊಸ ರಾಕೆಟ್ 3 ಜಿಟಿ ಬೈಕನ್ನು ಇದೇ ತಿಂಗಳ 10ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುತ್ತದೆ. ಇದೀಗ ಟ್ರಯಂಫ್ ಕಂಫನಿಯು ಹೊಸ ರಾಕೆಟ್ 3 ಜಿಟಿ ಬೈಕಿನ ಹೊಸ ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಟ್ರಯಂಫ್ ಮೋಟಾರ್ಸೈಕಲ್ ತನ್ನ ರಾಕೆಟ್ 3 ಜಿಟಿ ಬೈಕನ್ನು ಕಳೆದ ವರ್ಷ ನಡೆದ 2019 ಇಂಡಿಯಾ ಬೈಕ್ ವೀಕ್ನಲ್ಲಿ ಅನಾವರಣಗೊಳಿಸಿದ್ದರು. ರಾಕೆಟ್ 3 ಜಿಟಿ ಬೈಕ್ ಅನ್ನು ಬ್ರಿಟಿನ್ ಮೂಲದ ಟ್ರಯಂಫ್ ಕಂಪನಿಯ ಹೊಸ ಪ್ಲಾಟ್ಫಾರಂ ಆಧಾರದ ಮೇಲೆ ನಿರ್ಮಿಸಲಾಗಿದೆ.
2020ರ ಹೊಸ ಟ್ರಯಂಫ್ ರಾಕೆಟ್ 3 ಜಿಟಿ ಬೈಕಿನಲ್ಲಿ ಮಾಸ್ ಬೈಕುಗಳಲ್ಲಿಯೇ ಅತಿ ದೊಡ್ಡದು ಎನ್ನಲಾದ 2,458 ಸಿಸಿಯ ಇನ್ ಲೈನ್ 3 ಸಿಲಿಂಡರ್ ಲಿಕ್ವಿಡ್ ಕೂಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್
ಈ ಎಂಜಿನ್ 6,000 ಆರ್ಪಿಎಂನಲ್ಲಿ 165 ಬಿಹೆಚ್ಪಿ ಪವರ್ ಹಾಗೂ 4,000 ಆರ್ಪಿಎಂನಲ್ಲಿ 221 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ಹೊಸದಾದ ಕ್ರಾಂಕ್ಕೇಸ್ ಅಸೆಂಬ್ಲಿ, ಬ್ಯಾಲೆನ್ಸರ್ ಶಾಫ್ಟ್ ಹಾಗೂ ಲ್ಯುಬ್ರಿಕೇಷನ್ ಸಿಸ್ಟಂಗಳನ್ನು ಹೊಂದಿದೆ. ಇದರಿಂದಾಗಿ ಈ ಎಂಜಿನ್ನ ತೂಕವು 18 ಕೆ.ಜಿಯಷ್ಟು ಕಡಿಮೆಯಾಗಿದೆ.
ಟ್ರಯಂಫ್ ಕಂಪನಿಯು ಈ ಬೈಕಿನ ತೂಕವನ್ನು ಹಳೆಯ ತಲೆಮಾರಿನ ಬೈಕಿಗೆ ಹೋಲಿಸಿದರೆ ಸುಮಾರು 40 ಕೆ.ಜಿಯಷ್ಟು ಕಡಿಮೆಗೊಳಿಸಿದೆ. ಟ್ರಯಂಫ್ ರಾಕೆಟ್ 3 ಬೈಕಿನಲ್ಲಿ ಹಲವಾರು ಫೀಚರ್ ಹಾಗೂ ಎಲೆಕ್ಟ್ರಾನಿಕ್ ಎಕ್ವಿಪ್ಮೆಂಟ್ಗಳಿವೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್ಮಾಸ್ಟರ್ ಬೈಕ್
2020ರ ರಾಕೆಟ್ 3 ಜಿಟಿ ಬೈಕಿನಲ್ಲಿ ಹೀಟೆಡ್ ಗ್ರಿಪ್, ಟಾರ್ಕ್ ಅಸಿಸ್ಟೆಡ್ ಕ್ಲಚ್, ಎಲ್ಇಡಿ ಹೆಡ್ಲ್ಯಾಂಪ್, ಟೇಲ್ಲೈಟ್, ಎಕ್ಸ್ ಟೆಂಡೆಡ್ ಫ್ಲೈ ಸ್ಕ್ರೀನ್, ಅಡ್ಜಸ್ಟಬಲ್ ಫುಟ್ಪೆಗ್, ಹಗುರ ತೂಕದ 20 ಸ್ಪೋಕ್ ಅಲ್ಯೂಮಿನಿಯಂ ವ್ಹೀಲ್ ಸೇರಿದಂತೆ ಹಲವು ಸ್ಟಾಂಡರ್ಡ್ ಫೀಚರ್ಗಳಿವೆ.
ಟ್ರಯಂಫ್ ರಾಕೆಟ್ 3 ಜಿಟಿ ಬೈಕ್ ಹೊಸ ಅಲ್ಯುಮಿನಿಯಂ ಚಾಸೀಸ್ ಅನ್ನು ಸಹ ಹೊಂದಿದೆ. ಇದು ಬೃಹತ್ ಎಂಜಿನ್ನ ಒತ್ತಡ ನಿವಾರಿಸುವಂತೆ ಕಾರ್ಯನಿರ್ವಹಿಸುತ್ತದೆ. ಇದರ ಜೊತೆಗೆ ಸಸ್ಪೆಂಷನ್ ಹಾಗೂ ಬ್ರೇಕ್ಗಳನ್ನು ಹೊಂದಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು
ರಾಕೆಟ್ 3 ಜಿಟಿ ಬೈಕಿನಲ್ಲಿ ಸಸ್ಪೆಂಷನ್ಗಳಿಗಾಗಿ ಮುಂಭಾಗದಲ್ಲಿ 47 ಎಂಎಂ ಯುಎಸ್ಡಿ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ಗಳಿವೆ. ಮುಂಭಾಗದ ಸಸ್ಪೆಂಷನ್ 120 ಎಂಎಂ ಟ್ರಾವೆಲ್ನೊಂದಿಗೆ ಬಂದರೆ, ಹಿಂಭಾಗವು 107 ಎಂಎಂ ಟ್ರಾವೆಲ್ನೊಂದಿಗೆ ಬರುತ್ತದೆ. ಈ ಎರಡೂ ಸಸ್ಪೆಂಷನ್ಗಳು ಶೋವಾ ಕಂಪನಿಯಾದಾಗಿವೆ
ಮುಂಭಾಗದ ಸಸ್ಪೆಂಷನ್ ಕಂಪ್ರೆಷನ್ ಹಾಗೂ ರಿಬೌಂಡ್ ಅಡ್ಜಸ್ಟಬಿಲಿಟಿಯೊಂದಿಗೆ ಬರುತ್ತದೆ. ಹಿಂಭಾಗದ ಸಸ್ಪೆಂಷನ್ ರಿಮೋಟ್ ಅಡ್ಜಸ್ಟರ್ ಹೊಂದಿದೆ. ಟ್ರಯಂಫ್ ರಾಕೆಟ್ 3 ಬೈಕಿನಲ್ಲಿ ಬ್ರೇಕಿಂಗ್ಗಳಿಗಾಗಿ ಮುಂಭಾಗದಲ್ಲಿ 320 ಎಂಎಂ ಟ್ವಿನ್ ಡಿಸ್ಕ್ ಹಾಗೂ ಹಿಂಭಾಗದಲ್ಲಿ ಸಿಂಗಲ್ 300 ಎಂಎಂ ಡಿಸ್ಕ್ ಬ್ರೇಕ್ ಗಳಿವೆ.