ಹೊಸ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಟ್ರಯಂಫ್ ಇಂಡಿಯಾ ಕಂಪನಿಯು ತನ್ನ ಹೊಸ ಸ್ಟ್ರೀಟ್ ಟ್ರಿಪಲ್ ಆರ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದೇ ತಿಂಗಳು ಈ ಹೊಸ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಬಿಡುಗಡೆಯಾಗಲಿದೆ ಎಂದು ಟ್ರಯಂಫ್ ಕಂಪನಿಯು ಖಚಿತಪಡಿಸಿದೆ.

ಹೊಸ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

2020ರ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕಿಗಿಂತ ಮೊದಲು ಸ್ಪೋರ್ಟ್ ನೇಕೆಡ್ ಬೈಕ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕನ್ನು ಬಿಡುಗಡೆಗೊಳಿಸಬೇಕಾಗಿತ್ತು. ಆದರೆ ಕರೋನಾ ವೈರಸ್ ಭೀತಿಯಿಂದಾಗಿ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನ ಬಿಡುಗಡೆಯನ್ನು ಮುಂದೂಡಲಾಗಿದೆ. ಇದೀಗ ಕಂಪನಿಯು ಮಿಡ್-ಸ್ಪೆಕ್ ರೂಪಾಂತರವಾದ ಸ್ಟ್ರೀಟ್ ಟ್ರಿಪಲ್ ಆರ್ ಬೈಕನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದೀಗ ಕೆಲವು ಆಯ್ದ ಡೀಲರ್ ಗಳು ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಗಾಗಿ ಬುಕ್ಕಿಂಗ್ ಅನ್ನು ಸ್ವೀಕರಿಸಲು ಪ್ರಾರಂಭಿಸಿದ್ದಾರೆ ಎಂದು ವರದಿಗಳು ಪ್ರಕಟವಾಗಿದೆ.

ಹೊಸ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಈ ಮಿಡಲ್ ವೇಟ್ ನೇಕೆಡ್ ಬೈಕ್ ಇತ್ತೀಚೆಗೆ ಬಿಡುಗಡೆಗೊಳಿಸಲಾದ ಆರ್‍ಎಸ್ ಆವೃತ್ತಿಗಿಂತ ಕೆಳಗಿನ ಸ್ಥಾನದಲ್ಲಿರುತ್ತದೆ. ಮುಂಬರುವ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಅನಲಾಗ್ ಟ್ಯಾಕೋಮೀಟರ್ನೊಂದಿಗೆ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿರಲಿದೆ.

MOST READ: ಬಿಡುಗಡೆಯಾಯ್ತು ದುಬಾರಿ ಕವಾಸಕಿ ಝಡ್‍ಎಕ್ಸ್ 25ಆರ್ ಬೈಕ್

ಹೊಸ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನ ಮುಂಭಾಗದಲ್ಲಿ 41 ಎಂಎಂ ಶೋವಾ ಅಪ್‍ಸೈಡ್ ಸಸ್ಪೆಂಷನ್ ಮತ್ತು ಹಿಂಭಾಗದಲ್ಲಿ ಹೊಂದಾಣಿಕೆ ಮಾಡಬಹುದಾದ ಮೊನೊ-ಶಾಕ್ ಅನ್ನು ಅಳವಡಿಸಲಾಗಿದೆ.

ಹೊಸ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಇನ್ನು ಈ ಹೊಸ ಸ್ಟ್ರೀಟ್ ಟ್ರಿಪಲ್ ಆರ್‍ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುದಾದರೆ ಮುಂಭಾಗದಲ್ಲಿ ಟ್ವಿನ್ 310 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಕೂಡ ಜೋಡಿಸಲಾಗಿದೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಹೊಸ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನಲ್ಲಿ 765 ಸಿಸಿ, 3-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 12,000 ಆರ್‌ಪಿಎಂನಲ್ಲಿ 116 ಬಿಹೆಚ್‌ಪಿ ಪವರ್ ಮತ್ತು 9,400 ಆರ್‌ಪಿಎಂನಲ್ಲಿ 77 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹೊಸ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಈ ಎಂಜಿನ್ ನೊಂದಿಗೆ ಸ್ಲಿಪ್-ಅಸಿಸ್ಟ್ ಕ್ಲಚ್ ಮೂಲಕ 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಈ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನಲ್ಲಿ ಮೂರು ರೈಡಿಂಗ್ ಮೋಡ್‌ಗಳನ್ನು ಸಹ ಹೊಂದಿರುತ್ತದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್‍ ಬೈಕ್ ರಗಡ್ ಲುಕ್ ಅನ್ನು ಹೊಂದಿದೆ. 2020ರ ಸ್ಟ್ರೀಟ್ ಟ್ರಿಪಲ್ ಆರ್‍ ಬೈಕ್, ಇಂಟಿಗ್ರೇಟೆಡ್ ಟ್ವಿನ್ ಎಲ್‍ಇ‍‍ಡಿ ಹೆಡ್‍‍ಲ್ಯಾಂಪ್ ಹಾಗೂ ಇಂಟಿಗ್ರೇಟೆಡ್ ಡಿ‍ಆರ್‍ಎಲ್‍‍ಗಳನ್ನು ಹೊಂದಿದೆ.

ಹೊಸ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಕೆಟಿಎಂ 790 ಡ್ಯೂಕ್ ಬೈಕಿಗೆ ಪೈಪೋಟಿ ನೀಡುತ್ತದೆ. ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಮಿಡಲ್ ವೇಟ್ ಸೆಗ್‍ಮೆಂಟ್ ನ ಬೈಕುಗಳಿಗೆ ಬೇಡಿಕೆ ಇರುವುದರಿಂದ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕನ್ನು ಬಿಡುಗಡೆಗೊಳಿಸಲು ಟ್ರಯಂಫ್ ಮುಂದಾಗಿದೆ.

Most Read Articles

Kannada
English summary
Triumph Street Triple R bookings open at select dealerships. Read In Kannada.
Story first published: Thursday, June 11, 2020, 10:07 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X