Just In
Don't Miss!
- News
ಕೇಂದ್ರ ಸರ್ಕಾರ ಎನ್ಐಎ ನೋಟಿಸ್ ಮೂಲಕ ಕಿರುಕುಳ ನೀಡುತ್ತಿದೆ:ರೈತರ ಆರೋಪ
- Movies
Bigg Boss Tamil 4: ಅತಿ ಹೆಚ್ಚು ಸಂಭಾವನೆ ಪಡೆದ ಸ್ಪರ್ಧಿಯೇ ವಿಜೇತ!
- Finance
ಸಿಲಿಂಡರ್ ಬುಕ್ ಮಾಡಿದ ಎರಡು ಗಂಟೆಯೊಳಗೆ ಮನೆ ಬಾಗಿಲಿಗೆ ಡೆಲಿವರಿ
- Sports
ಆಸಿಸ್ ಬೌಲರ್ಗಳಿಗೆ ಪಾಂಟಿಂಗ್ ಚಾಟಿ: ಶಾರ್ದೂಲ್- ಸುಂದರ್ ಆಟಕ್ಕೆ ಮೆಚ್ಚುಗೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಬಿಡುಗಡೆ ದಿನಾಂಕ ಬಹಿರಂಗ
ಟ್ರಯಂಫ್ ಇಂಡಿಯಾ ಕಂಪನಿಯು ತನ್ನ ಹೊಸ ಸ್ಟ್ರೀಟ್ ಟ್ರಿಪಲ್ ಆರ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಈ ಹೊಸ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನ ಬಿಡುಗಡೆಯ ದಿನಾಂಕ ಬಹಿರಂಗವಾಗಿದೆ.

2020ರ ಸ್ಟ್ರೀಟ್ ಟ್ರಿಪಲ್ ಆರ್ಎಸ್ ಬೈಕಿಗಿಂತ ಮೊದಲು ಸ್ಪೋರ್ಟ್ ನೇಕೆಡ್ ಬೈಕ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕನ್ನು ಬಿಡುಗಡೆಗೊಳಿಸಬೇಕಾಗಿತ್ತು. ಆದರೆ ಕರೋನಾ ವೈರಸ್ ಭೀತಿಯಿಂದಾಗಿ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನ ಬಿಡುಗಡೆಯನ್ನು ಮುಂದೂಡಿದರು. ಇದೀಗ ಕಂಪನಿಯು ಮಿಡ್-ಸ್ಪೆಕ್ ರೂಪಾಂತರವಾದ ಸ್ಟ್ರೀಟ್ ಟ್ರಿಪಲ್ ಆರ್ ಬೈಕನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನ್ನು ಇದೇ ತಿಂಗಳ 11ರಂದು ಬಿಡುಗಡೆಗೊಳಿಸಲಿದೆ.

ಈ ಮಿಡಲ್ ವೇಟ್ ನೇಕೆಡ್ ಬೈಕ್ ಇತ್ತೀಚೆಗೆ ಬಿಡುಗಡೆಗೊಳಿಸಲಾದ ಆರ್ಎಸ್ ಆವೃತ್ತಿಗಿಂತ ಕೆಳಗಿನ ಸ್ಥಾನದಲ್ಲಿರುತ್ತದೆ. ಮುಂಬರುವ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಅನಲಾಗ್ ಟ್ಯಾಜೋಮೀಟರ್ ನೊಂದಿಗೆ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿರಲಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನ ಮುಂಭಾಗದಲ್ಲಿ 41 ಎಂಎಂ ಶೋವಾ ಅಪ್ಸೈಡ್ ಸಸ್ಪೆಂಷನ್ ಮತ್ತು ಹಿಂಭಾಗದಲ್ಲಿ ಹೊಂದಾಣಿಕೆ ಮಾಡಬಹುದಾದ ಮೊನೊ-ಶಾಕ್ ಅನ್ನು ಅಳವಡಿಸಲಾಗಿದೆ.

ಇನ್ನು ಈ ಹೊಸ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುದಾದರೆ ಮುಂಭಾಗದಲ್ಲಿ ಟ್ವಿನ್ 310 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಕೂಡ ಜೋಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನಲ್ಲಿ 765 ಸಿಸಿ, 3-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 12,000 ಆರ್ಪಿಎಂನಲ್ಲಿ 116 ಬಿಹೆಚ್ಪಿ ಪವರ್ ಮತ್ತು 9,400 ಆರ್ಪಿಎಂನಲ್ಲಿ 77 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಎಂಜಿನ್ ನೊಂದಿಗೆ ಸ್ಲಿಪ್-ಅಸಿಸ್ಟ್ ಕ್ಲಚ್ ಮೂಲಕ 6-ಸ್ಪೀಡ್ ಗೇರ್ಬಾಕ್ಸ್ಗೆ ಜೋಡಿಸಲಾಗಿದೆ. ಈ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನಲ್ಲಿ ಮೂರು ರೈಡಿಂಗ್ ಮೋಡ್ಗಳನ್ನು ಸಹ ಹೊಂದಿರುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಟಿವಿಎಸ್ ಜೆಸ್ಟ್ 110 ಸ್ಕೂಟರ್

ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ರಗಡ್ ಲುಕ್ ಅನ್ನು ಹೊಂದಿದೆ. 2020ರ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್, ಇಂಟಿಗ್ರೇಟೆಡ್ ಟ್ವಿನ್ ಎಲ್ಇಡಿ ಹೆಡ್ಲ್ಯಾಂಪ್ ಹಾಗೂ ಇಂಟಿಗ್ರೇಟೆಡ್ ಡಿಆರ್ಎಲ್ಗಳನ್ನು ಹೊಂದಿದೆ. ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಕೆಟಿಎಂ 790 ಡ್ಯೂಕ್ ಬೈಕಿಗೆ ಪೈಪೋಟಿ ನೀಡುತ್ತದೆ.

ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಮಿಡಲ್ ವೇಟ್ ಸೆಗ್ಮೆಂಟ್ ನ ಬೈಕುಗಳಿಗೆ ಬೇಡಿಕೆ ಇರುವುದರಿಂದ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕನ್ನು ಬಿಡುಗಡೆಗೊಳಿಸಲು ಟ್ರಯಂಫ್ ಮುಂದಾಗಿದೆ.