ಬಿಡುಗಡೆಗೆ ಸಜ್ಜಾದ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಟ್ರಯಂಫ್ ಇಂಡಿಯಾ ಕಂಪನಿಯು ತನ್ನ ಹೊಸ ಸ್ಟ್ರೀಟ್ ಟ್ರಿಪಲ್ ಆರ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಮುಂದಿನ ವಾರದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಬಿಡುಗಡೆಗೆ ಸಜ್ಜಾದ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

2020ರ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕಿಗಿಂತ ಮೊದಲು ಸ್ಪೋರ್ಟ್ ನೇಕೆಡ್ ಬೈಕ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕನ್ನು ಬಿಡುಗಡೆಗೊಳಿಸಬೇಕಾಗಿತ್ತು. ಆದರೆ ಕರೋನಾ ವೈರಸ್ ಭೀತಿಯಿಂದಾಗಿ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನ ಬಿಡುಗಡೆಯನ್ನು ಮುಂದೂಡಿದರು. ಇದೀಗ ಕಂಪನಿಯು ಮಿಡ್-ಸ್ಪೆಕ್ ರೂಪಾಂತರವಾದ ಸ್ಟ್ರೀಟ್ ಟ್ರಿಪಲ್ ಆರ್ ಬೈಕನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದೀಗ ಕೆಲವು ಆಯ್ದ ಡೀಲರ್ ಗಳು ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಗಾಗಿ ಬುಕ್ಕಿಂಗ್ ಅನ್ನು ಸ್ವೀಕರಿಸಲು ಪ್ರಾರಂಭಿಸಿದ್ದಾರೆ ಎಂದು ವರದಿಗಳು ಪ್ರಕಟವಾಗಿದೆ.

ಬಿಡುಗಡೆಗೆ ಸಜ್ಜಾದ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಈ ಮಿಡಲ್ ವೇಟ್ ನೇಕೆಡ್ ಬೈಕ್ ಇತ್ತೀಚೆಗೆ ಬಿಡುಗಡೆಗೊಳಿಸಲಾದ ಆರ್‍ಎಸ್ ಆವೃತ್ತಿಗಿಂತ ಕೆಳಗಿನ ಸ್ಥಾನದಲ್ಲಿರುತ್ತದೆ. ಮುಂಬರುವ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಅನಲಾಗ್ ಟ್ಯಾಜೋಮೀಟರ್ ನೊಂದಿಗೆ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿರಲಿದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಬಿಡುಗಡೆಗೆ ಸಜ್ಜಾದ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನ ಮುಂಭಾಗದಲ್ಲಿ 41 ಎಂಎಂ ಶೋವಾ ಅಪ್‍ಸೈಡ್ ಸಸ್ಪೆಂಷನ್ ಮತ್ತು ಹಿಂಭಾಗದಲ್ಲಿ ಹೊಂದಾಣಿಕೆ ಮಾಡಬಹುದಾದ ಮೊನೊ-ಶಾಕ್ ಅನ್ನು ಅಳವಡಿಸಲಾಗಿದೆ.

ಬಿಡುಗಡೆಗೆ ಸಜ್ಜಾದ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಇನ್ನು ಈ ಹೊಸ ಸ್ಟ್ರೀಟ್ ಟ್ರಿಪಲ್ ಆರ್‍ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುದಾದರೆ ಮುಂಭಾಗದಲ್ಲಿ ಟ್ವಿನ್ 310 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಕೂಡ ಜೋಡಿಸಲಾಗಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿ‍ಎಸ್-6 ಬಜಾಜ್ ಪಲ್ಸರ್ ಎನ್ಎಸ್200 ಬೈಕ್

ಬಿಡುಗಡೆಗೆ ಸಜ್ಜಾದ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನಲ್ಲಿ 765 ಸಿಸಿ, 3-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 12,000 ಆರ್‌ಪಿಎಂನಲ್ಲಿ 116 ಬಿಹೆಚ್‌ಪಿ ಪವರ್ ಮತ್ತು 9,400 ಆರ್‌ಪಿಎಂನಲ್ಲಿ 77 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಬಿಡುಗಡೆಗೆ ಸಜ್ಜಾದ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಈ ಎಂಜಿನ್ ನೊಂದಿಗೆ ಸ್ಲಿಪ್-ಅಸಿಸ್ಟ್ ಕ್ಲಚ್ ಮೂಲಕ 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಈ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನಲ್ಲಿ ಮೂರು ರೈಡಿಂಗ್ ಮೋಡ್‌ಗಳನ್ನು ಸಹ ಹೊಂದಿರುತ್ತದೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಬಿಡುಗಡೆಗೆ ಸಜ್ಜಾದ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್‍ ಬೈಕ್ ರಗಡ್ ಲುಕ್ ಅನ್ನು ಹೊಂದಿದೆ. 2020ರ ಸ್ಟ್ರೀಟ್ ಟ್ರಿಪಲ್ ಆರ್‍ ಬೈಕ್, ಇಂಟಿಗ್ರೇಟೆಡ್ ಟ್ವಿನ್ ಎಲ್‍ಇ‍‍ಡಿ ಹೆಡ್‍‍ಲ್ಯಾಂಪ್ ಹಾಗೂ ಇಂಟಿಗ್ರೇಟೆಡ್ ಡಿ‍ಆರ್‍ಎಲ್‍‍ಗಳನ್ನು ಹೊಂದಿದೆ.

ಬಿಡುಗಡೆಗೆ ಸಜ್ಜಾದ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಕೆಟಿಎಂ 790 ಡ್ಯೂಕ್ ಬೈಕಿಗೆ ಪೈಪೋಟಿ ನೀಡುತ್ತದೆ. ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಮಿಡಲ್ ವೇಟ್ ಸೆಗ್‍ಮೆಂಟ್ ನ ಬೈಕುಗಳಿಗೆ ಬೇಡಿಕೆ ಇರುವುದರಿಂದ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕನ್ನು ಬಿಡುಗಡೆಗೊಳಿಸಲು ಟ್ರಯಂಫ್ ಮುಂದಾಗಿದೆ.

Most Read Articles

Kannada
English summary
2020 Triumph Street Triple R Likely To Be Launched Next Week. Read In Kannada.
Story first published: Saturday, July 18, 2020, 10:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more