ಬಿಡುಗಡೆಯಾಯ್ತು ಬಹುನಿರೀಕ್ಷಿತ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಟ್ರಯಂಫ್ ಇಂಡಿಯಾ ಕಂಪನಿಯು ತನ್ನ ಹೊಸ ಸ್ಟ್ರೀಟ್ ಟ್ರಿಪಲ್ ಆರ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.8.84 ಲಕ್ಷಗಳಾಗಿದೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಈ ಹೊಸ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿಗಾಗಿ ಬುಕ್ಕಿಂಗ್ ಸ್ವೀಕರಿಸಲು ಈಗಾಗಲೇ ಪ್ರಾರಂಭಿಸಲಾಗಿದೆ. ಈ ಹೊಸ ಸ್ಟ್ರೀಟ್ ಟ್ರಿಪಲ್ ಆರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ನೇಕೆಡ್ ಬೈಕುಗಳ ಸರಣಿಗೆ ಸೇರುತ್ತದೆ. ಈ ಹೊಸ ಬೈಕಿನ ಬಾಡಿ ಗ್ರಾಫಿಕ್ಸ್, ನವೀಕರಿಸಿದ ರಿಯರ್-ವ್ಯೂ ಮಿರರ್, ಮರುವಿನ್ಯಾಸಗೊಳಿಸಲಾದ ಎಕ್ಸಾಸ್ಟ್ ಮತ್ತು ಸಫಿಯರ್ ಬ್ಲ್ಯಾಕ್ ಮತ್ತು ಮ್ಯಾಟ್ ಸಿಲ್ವರ್ ಐಸ್ ಎಂಬ ಎರಡು ಹೊಸ ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನಲ್ಲಿ 765 ಸಿಸಿ, 3-ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 12,000 ಆರ್‌ಪಿಎಂನಲ್ಲಿ 116 ಬಿಹೆಚ್‌ಪಿ ಪವರ್ ಮತ್ತು 9,400 ಆರ್‌ಪಿಎಂನಲ್ಲಿ 77 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಬಿಡುಗಡೆಯಾಯ್ತು ಬಹುನಿರೀಕ್ಷಿತ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಈ ಎಂಜಿನ್ ನೊಂದಿಗೆ ಸ್ಲಿಪ್-ಅಸಿಸ್ಟ್ ಕ್ಲಚ್ ಮೂಲಕ 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಈ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನಲ್ಲಿ ಮೂರು ರೈಡಿಂಗ್ ಮೋಡ್‌ಗಳನ್ನು ಸಹ ಹೊಂದಿದೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಈ ಮಿಡಲ್ ವೇಟ್ ನೇಕೆಡ್ ಬೈಕ್ ಇತ್ತೀಚೆಗೆ ಬಿಡುಗಡೆಗೊಳಿಸಲಾದ ಆರ್‍ಎಸ್ ಆವೃತ್ತಿಗಿಂತ ಕೆಳಗಿನ ಸ್ಥಾನದಲ್ಲಿರುತ್ತದೆ. ಮುಂಬರುವ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್ ಅನಲಾಗ್ ಟ್ಯಾಜೋಮೀಟರ್ ನೊಂದಿಗೆ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಟಿವಿಎಸ್ ಜೆಸ್ಟ್ 110 ಸ್ಕೂಟರ್

ಬಿಡುಗಡೆಯಾಯ್ತು ಬಹುನಿರೀಕ್ಷಿತ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕಿನ ಮುಂಭಾಗದಲ್ಲಿ 41 ಎಂಎಂ ಶೋವಾ ಅಪ್‍ಸೈಡ್ ಸಸ್ಪೆಂಷನ್ ಮತ್ತು ಹಿಂಭಾಗದಲ್ಲಿ ಹೊಂದಾಣಿಕೆ ಮಾಡಬಹುದಾದ ಮೊನೊ-ಶಾಕ್ ಅನ್ನು ಅಳವಡಿಸಲಾಗಿದೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಇನ್ನು ಈ ಹೊಸ ಸ್ಟ್ರೀಟ್ ಟ್ರಿಪಲ್ ಆರ್‍ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುದಾದರೆ ಮುಂಭಾಗದಲ್ಲಿ ಟ್ವಿನ್ 310 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಕೂಡ ಜೋಡಿಸಲಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಬಿಡುಗಡೆಯಾಯ್ತು ಬಹುನಿರೀಕ್ಷಿತ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್‍ ಬೈಕ್ ರಗಡ್ ಲುಕ್ ಅನ್ನು ಹೊಂದಿದೆ. 2020ರ ಸ್ಟ್ರೀಟ್ ಟ್ರಿಪಲ್ ಆರ್‍ ಬೈಕ್, ಇಂಟಿಗ್ರೇಟೆಡ್ ಟ್ವಿನ್ ಎಲ್‍ಇ‍‍ಡಿ ಹೆಡ್‍‍ಲ್ಯಾಂಪ್ ಹಾಗೂ ಇಂಟಿಗ್ರೇಟೆಡ್ ಡಿ‍ಆರ್‍ಎಲ್‍‍ಗಳನ್ನು ಹೊಂದಿವೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕು ಭಾರತೀಯ ಮಾರುಕಟ್ಟೆಯಲ್ಲಿ ಕೆಟಿಎಂ 790 ಡ್ಯೂಕ್, ಬಿಎಂಡಬ್ಲ್ಯು ಎಫ್ 900 ಆರ್, ಮತ್ತು ಕವಾಸಕಿ ಝಡ್900 ಬೈಕಿಗೆ ಪೈಪೋಟಿ ನೀಡುತ್ತದೆ. ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಮಿಡಲ್ ವೇಟ್ ಸೆಗ್‍ಮೆಂಟ್ ನ ಬೈಕುಗಳಿಗೆ ಬೇಡಿಕೆ ಇರುವುದರಿಂದ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕನ್ನು ಬಿಡುಗಡೆಗೊಳಿಸಲಾಗಿದೆ.

More from DriveSpark

Article Published On: Tuesday, August 11, 2020, 13:59 [IST]
English summary
Triumph Street Triple R Launched In India. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+