ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕ್
ದೇಶಿಯ ಮಾರುಕಟ್ಟೆಯಲ್ಲಿರುವ ಐಷಾರಾಮಿ ಬೈಕ್‍ಗಳಲ್ಲಿ ಟ್ರಯಂಫ್ ಕಂಪನಿಯ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕ್ ಸಹ ಒಂದು. ಈ ಬೈಕ್ ಮುಂದಿನ ತಿಂಗಳು ಭಾರತದಲ್ಲಿ ಬಿಡುಗಡೆಯಾಗಲಿದೆ.

ಹೊಸ ಮಿಡ್ ಸರಣಿಯ ಈ ಸ್ಪೋರ್ಟ್ಸ್ ಬೈಕ್ ರಿವೈಸ್ ಮಾಡಲಾದ ಡಿಸೈನ್ ಆಕ್ಸೆಸರೀಸ್, ಆಫ್ ರ್‍ಯಾಕ್ ಟೆಕ್ನಾಲಜಿ ಹಾಗೂ ಮಿಡ್ ಸರಣಿಯ ಬಿಎಸ್ 6 ಎಂಜಿನ್ ಅನ್ನು ಹೊಂದಿದೆ. ಟ್ರಯಂಫ್ ಆರ್‍ಎಸ್ ಬೈಕ್, ರಾಕೆಟ್ 3 ಬೈಕಿನ ನಂತರ ಟ್ರಯಂಫ್ ಕಂಪನಿಯು ಭಾರತದಲ್ಲಿ ಬಿಡುಗಡೆಗೊಳಿಸುತ್ತಿರುವ ಎರಡನೇ ಬೈಕ್ ಆಗಿದೆ.

ಮಾರುಕಟ್ಟೆಯಲ್ಲಿರುವ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕಿನ ಬೆಲೆಯು ರೂ.11.13 ಲಕ್ಷಗಳಾಗಿದೆ. ಫೋಟೊಗಳಲ್ಲಿ ಕಾಣುವ ಬಿಎಸ್ 6 ಎಂಜಿನ್ ಹೊಂದಿರುವ ಹೊಸ ಬೈಕ್, ಮಾರುಕಟ್ಟೆಯಲ್ಲಿರುವ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕಿಗಿಂತ ಹೆಚ್ಚು ರಗಡ್ ಲುಕ್ ಅನ್ನು ಹೊಂದಿದೆ.

2020ರ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕ್, ಇಂಟಿಗ್ರೇಟೆಡ್ ಟ್ವಿನ್ ಎಲ್‍ಇಡಿ ಹೆಡ್‍ಲ್ಯಾಂಪ್ ಹಾಗೂ ಇಂಟಿಗ್ರೇಟೆಡ್ ಡಿಆರ್‍ಎಲ್‍ಗಳನ್ನು ಹೊಂದಿದೆ. ಟ್ರಯಂಫ್ ಕಂಪನಿಯು ಈ ಬೈಕಿನ ಬಾಡಿ ಪ್ಯಾನೆಲ್, ರೇರ್ ಸೀಟ್‍ಗಳಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದೆ.

ಈ ಬದಲಾವಣೆಗಳಿಂದ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕ್ ಸ್ಪೋರ್ಟಿಯಾಗಿ ಕಾಣುತ್ತದೆ. ಟ್ರಯಂಫ್ ಕಂಪನಿಯು ಈ ಬೈಕಿನ ಟಿಎಫ್‍ಟಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‍ನಲ್ಲಿ ಹೊಸ ಗ್ರಾಫಿಕ್ಸ್ ಗಳನ್ನು ಅಳವಡಿಸಲಿದೆ.

ಈ ಹೊಸ ಬೈಕಿನಲ್ಲಿ ಬ್ಲೂಟೂಥ್ ಸೇರಿದಂತೆ ಹಲವಾರು ಫೀಚರ್‍ಗಳಿರಲಿವೆ. ಅಂತರ್‍ರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಸ್ಟ್ರೀಟ್ ಟ್ರಿಪಲ್ ಆರ್‍ಎಸ್ ಬೈಕಿನಲ್ಲಿ 765 ಸಿಸಿಯ ಇನ್‍ಲೈನ್ ಎಂಜಿನ್ ಅಳವಡಿಸಲಾಗಿದೆ.

ಈ ಎಂಜಿನ್ ಅನ್ನು ಟ್ರಯಂಫ್ ಕಂಪನಿಯ ಮೋಟೊ 2 ಎಂಜಿನ್ ಅಪ್‍ಗ್ರೇಡ್ ಮಾಡುತ್ತಿರುವ ತಂಡವು ತಯಾರಿಸಿದೆ. ಈ ಬೈಕ್ ಹೊಸದಾದ ಎಕ್ಸಾಸ್ಟ್ ಸಿಸ್ಟಂ ಅನ್ನು ಹೊಂದಿದೆ.

ಈ ಬೈಕಿನಲ್ಲಿರುವ ಎಂಜಿನ್ 123 ಬಿಹೆಚ್‍ಪಿ ಪವರ್ ಹಾಗೂ 79 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಟ್ರಯಂಫ್ ಎಂಜಿನಿಯರ್‍ಗಳು ಈ ಬೈಕಿನಲ್ಲಿರುವ ರಿಸೆಷನ್ ಸೈಕಲ್ ಅನ್ನು 7%ನಷ್ಟು ಕಡಿಮೆಗೊಳಿಸಿದ್ದಾರೆ.

ಇದರಿಂದಾಗಿ ಬೈಕ್ ಸವಾರನು ಲೊ ಹಾಗೂ ಮಿಡ್ ಎಂಬ ಎರಡು ವಿಧದ ಸೈಲೆನ್ಸರ್ ಸೌಂಡ್ ಅನ್ನು ಪಡೆಯಬಹುದು. ಮಾರುಕಟ್ಟೆಯಲ್ಲಿರುವ ಬಿಎಸ್ 4 ಬೈಕಿನಲ್ಲಿ ಅಪ್‍ಶಿಫ್ಟ್ ಇದ್ದರೆ, ಹೊಸ ಬೈಕಿನಲ್ಲಿ ಅಪ್ ಅಂಡ್ ಡೌನ್ ಕ್ವಿಕ್ ಶಿಫ್ಟರ್ ಅನ್ನು ಅಳವಡಿಸಲಾಗಿದೆ.


Click it and Unblock the Notifications








