Just In
- 10 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 11 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 12 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 12 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುಬಾರಿಯಾಗಲಿದೆ 2020ರ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ಎಸ್ ಬೈಕ್
ಟ್ರಯಂಫ್ ಕಂಪನಿಯು ತನ್ನ ದುಬಾರಿ 2020ರ ಸ್ಟ್ರೀಟ್ ಟ್ರಿಪಲ್ ಆರ್ಎಸ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ಎಸ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.11.13 ಲಕ್ಷಗಳಾಗಿದೆ.
ಟ್ರಯಂಫ್ ಕಂಪನಿಯು 2020ರ ಸ್ಟ್ರೀಟ್ ಟ್ರಿಪಲ್ ಆರ್ಎಸ್ ಬೈಕಿನ ಬೆಲೆಯನ್ನು ಜೂನ್ 15 ರಿಂದ ಸುಮಾರು ರೂ.25 ಸಾವಿರವರೆಗೆ ಹೆಚ್ಚಿಸಬಹುದು ಎಂದು ವರದಿಗಳು ಪ್ರಕಟವಾಗಿದೆ. ಈ ಹೊಸ ಮಿಡ್ ಸರಣಿಯ ಈ ಸ್ಪೋರ್ಟ್ಸ್ ಬೈಕ್ ರಿವೈಸ್ ಮಾಡಲಾದ ಡಿಸೈನ್ ಆಕ್ಸೆಸರೀಸ್, ಆಫ್ ರ್ಯಾಕ್ ಟೆಕ್ನಾಲಜಿ ಹಾಗೂ ಮಿಡ್ ಸರಣಿಯ ಬಿಎಸ್ 6 ಎಂಜಿನ್ ಅನ್ನು ಹೊಂದಿದೆ. ಟ್ರಯಂಫ್ ಕಂಪನಿಯ ಐಷಾರಾಮಿ ಬೈಕುಗಳಲ್ಲಿ ಹೊಸ ಸ್ಟ್ರೀಟ್ ಟ್ರಿಪಲ್ ಆರ್ಎಸ್ ಕೂಡ ಒಂದಾಗಿದೆ.
ಬಿಎಸ್ 6 ಎಂಜಿನ್ ಹೊಂದಿರುವ ಹೊಸ ಬೈಕ್, ಮಾರುಕಟ್ಟೆಯಲ್ಲಿರುವ ಸ್ಟ್ರೀಟ್ ಟ್ರಿಪಲ್ ಆರ್ಎಸ್ ಬೈಕಿಗಿಂತ ಹೆಚ್ಚು ರಗಡ್ ಲುಕ್ ಅನ್ನು ಹೊಂದಿದೆ. 2020ರ ಸ್ಟ್ರೀಟ್ ಟ್ರಿಪಲ್ ಆರ್ಎಸ್ ಬೈಕ್, ಇಂಟಿಗ್ರೇಟೆಡ್ ಟ್ವಿನ್ ಎಲ್ಇಡಿ ಹೆಡ್ಲ್ಯಾಂಪ್ ಹಾಗೂ ಇಂಟಿಗ್ರೇಟೆಡ್ ಡಿಆರ್ಎಲ್ಗಳನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ದುಬಾರಿ ಕವಾಸಕಿ ಝಡ್ಎಕ್ಸ್ 25ಆರ್ ಬೈಕ್
ಟ್ರಯಂಫ್ ಕಂಪನಿಯು ಈ ಬೈಕಿನ ಬಾಡಿ ಪ್ಯಾನೆಲ್, ರೇರ್ ಸೀಟ್ಗಳಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದೆ. ಈ ಬದಲಾವಣೆಗಳಿಂದ ಸ್ಟ್ರೀಟ್ ಟ್ರಿಪಲ್ ಆರ್ಎಸ್ ಬೈಕ್ ಸ್ಪೋರ್ಟಿ ಲುಕ್ ಅನ್ನು ಹೊಂದಿದೆ.
ಟ್ರಯಂಫ್ ಕಂಪನಿಯು ಈ ಬೈಕಿನ ಟಿಎಫ್ಟಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ನಲ್ಲಿ ಹೊಸ ಗ್ರಾಫಿಕ್ಸ್ ಗಳನ್ನು ಅಳವಡಿಸಿದೆ. ಗ್ರಾಫಿಕ್ಸ್ ನಿಂದಾಗಿ ಈ ಬೈಕು ನೋಡಲು ಆಕರ್ಷಕವಾಗಿದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್
ಈ ಹೊಸ ಬೈಕಿನಲ್ಲಿ ಬ್ಲೂಟೂತ್ ಸೇರಿದಂತೆ ಹಲವಾರು ಫೀಚರ್ಗಳಿವೆ. ಅಂತರ್ರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಸ್ಟ್ರೀಟ್ ಟ್ರಿಪಲ್ ಆರ್ಎಸ್ ಬೈಕಿನಲ್ಲಿ 765 ಸಿಸಿಯ ಇನ್ಲೈನ್ ಎಂಜಿನ್ ಅಳವಡಿಸಲಾಗಿದೆ.
ಈ ಎಂಜಿನ್ 121 ಬಿಹೆಚ್ಪಿ ಪವರ್ ಹಾಗೂ 79 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಟ್ರಯಂಫ್ ಎಂಜಿನಿಯರ್ಗಳು ಈ ಬೈಕಿನಲ್ಲಿರುವ ರಿಸೆಷನ್ ಸೈಕಲ್ ಅನ್ನು 7%ನಷ್ಟು ಕಡಿಮೆಗೊಳಿಸಿದ್ದಾರೆ.
MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ
ಈ ಎಂಜಿನ್ ಅನ್ನು ಟ್ರಯಂಫ್ ಕಂಪನಿಯ ಮೋಟೊ 2 ಎಂಜಿನ್ ಅಪ್ಗ್ರೇಡ್ ಮಾಡುತ್ತಿರುವ ತಂಡವು ತಯಾರಿಸಿದೆ. ಈ ಬೈಕ್ ಹೊಸದಾದ ಎಕ್ಸಾಸ್ಟ್ ಸಿಸ್ಟಂ ಅನ್ನು ಹೊಂದಿದೆ. ಮಾರುಕಟ್ಟೆಯಲ್ಲಿರುವ ಬಿಎಸ್ 4 ಬೈಕಿನಲ್ಲಿ ಅಪ್ಶಿಫ್ಟ್ ಇದ್ದರೆ, ಹೊಸ ಬೈಕಿನಲ್ಲಿ ಅಪ್ ಅಂಡ್ ಡೌನ್ ಕ್ವಿಕ್ ಶಿಫ್ಟರ್ ಅನ್ನು ಅಳವಡಿಸಲಾಗಿದೆ.
ಟ್ರಯಂಫ್ ಆರ್ಎಸ್ ಬೈಕ್, ರಾಕೆಟ್ 3 ಬೈಕಿನ ನಂತರ ಟ್ರಯಂಫ್ ಕಂಪನಿಯು ಭಾರತದಲ್ಲಿ ಬಿಡುಗಡೆಗೊಳಿಸಿದ ಎರಡನೇ ಬೈಕ್ ಆಗಿದೆ. ಈ ಹೊಸ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ಎಸ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಕವಾಸಕಿ ಝಡ್900 ಮತ್ತು ಕೆಟಿಎಂ 790 ಡ್ಯೂಕ್ ಬೈಕುಗಳಿಗೆ ಪೈಪೋಟಿಯನ್ನು ನೀಡುತ್ತದೆ.