ಹೊಸ ಟ್ರಯಂಫ್ ಟೈಗರ್ 900 ಬೈಕ್ ಬಿಡುಗಡೆ ದಿನಾಂಕ ಬಹಿರಂಗ
ಬ್ರಿಟಿಷ್ ದ್ವಿಚಕ್ರ ತಯಾರಕ ಕಂಪನಿಯಾದ ಟ್ರಯಂಫ್ ಮೋಟರ್‌ಸೈಕಲ್ ತನ್ನ ಹೊಸ ಟ್ರಯಂಫ್ ಟೈಗರ್ 900 ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಟ್ರಯಂ ಟೈಗರ್ 900 ಬೈಕ್ ಭಾರತದಲ್ಲಿ ಬಿಡುಗಡೆಯಾಗುವ ದಿನಾಂಕ ಬಹಿರಂಗವಾಗಿದೆ.

ಹೊಸ ಟ್ರಯಂಫ್ ಟೈಗರ್ 900 ಬೈಕ್ ಇದೇ ತಿಂಗಳ 19ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಟ್ರಯಂಫ್ ಟೈಗರ್ 900 ಬೈಕ್ ಜಿಟಿ, ರ‌್ಯಾಲಿ ಮತ್ತು ರ‌್ಯಾಲಿ ಪ್ರೊ ಎಂಬ ಮೂರು ರೂಪಾಂತರಗಳಲ್ಲಿ ಬಿಡುಗಡೆಯಾಗಲಿದೆ. ಟ್ರಯಂಫ್ ಕಂಪನಿಯು ಈ ಹೊಸ ಟೈಗರ್ 900 ಬೈಕಿನ ಬುಕ್ಕಿಂಗ್ ಅನ್ನು ಇತೀಚೆಗೆ ಆರಂಭಿಸಿತು. ಹೊಸ ಟೈಗರ್ 900 ಬೈಕ್ ಗಾಗಿ ಗ್ರಾಹಕರು ಟೋಕನ್ ಮೊತ್ತ ರೂ.50,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಹೊಸ ಟೈಗರ್ 900 ಬೈಕ್ ಹೆಚ್ಚು ಪವರ್‍ಫುಲ್ ಎಂಜಿನ್ ಅನ್ನು ಹೊಂದಿದೆ. ಹೊಸ ಟೈಗರ್ 900 ಬೈಕಿನಲ್ಲಿ ಬೋಲ್ಡ್ - ಆನ್ ಸಬ್ ಫ್ರೇಮ್, ಹೊಸ ಅಲ್ಯೂಮಿನಿಯಂ ಸ್ವಿಂಗಾರ್ಮ್, ಹೊಸ ಎಲ್‍ಇಡಿ ಹೆಡ್‍ಲ್ಯಾಂಪ್, ಡಿಆರ್‍ಎಲ್ ಮತ್ತು ಟಿಎಫ್‍ಟಿ ಸ್ಕ್ರೀನ್ ಅನ್ನು ಅಳವಡಿಸಲಾಗಿದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಹೊಸ ಬೈಕ್ ಟೈಗರ್ 800 ಬೈಕ್‍ಗಿಂತ ಹಗುರವಾಗಿದೆ. ಟೈಗರ್ 900 ಬೈಕ್ ಟೈಟರ್ ಫ್ಯೂಯಲ್ ಟ್ಯಾಂಕ್ ಹೊಂದಿರುವುದರಿಂದ ಬೈಕ್ ಅನ್ನು ಸುಲಭವಾಗಿ ರೈಡ್ ಮಾಡಲು ಸಹಕಾರಿಯಾಗಿದೆ.

ಇದು ಟೈಗರ್ 800 ಮಾದರಿಯ ಅಲ್ಯೂಮಿನಿಯಂ ಫಿನಿಶ್‍ಗೆ ಹೋಲಿಸಿದರೆ ಪ್ಲಾಸ್ಟಿಕ್‍ನಿಂದ ಮಾಡಲ್ಪಟ್ಟ ನವೀಕರಿಸಿದ ಫ್ರಂಟ್ ಫೆಂಡರ್, ವಿಂಡ್‍ಸ್ಕ್ರೀನ್ ಮತ್ತು ಸಂಪ್ ಗಾರ್ಡ್ ಅನ್ನು ಹೊಂದಿದೆ. ಟ್ರಯಂಫ್ ಟೈಗರ್ 800 ಬೈಕಿನ ಎಕ್ಸ್‌ಆರ್ ಮತ್ತು ಎಕ್ಸ್‌ಸಿ ರೂಪಾಂತರಗಳನ್ನು ಟ್ರೈಗರ್ 900ನಲ್ಲಿ ಜಿಟಿ ಮತ್ತು ರ್‍ಯಾಲಿ ಮಾದರಿಗಳೊಂದಿಗೆ ಬದಲಾಯಿಸಿದೆ.
MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಟ್ರಯಂಫ್ ಟೈಗರ್ 900 ಬೈಕಿನಲ್ಲಿ 888 ಸಿಸಿ ಇನ್‍ಲೈನ್ 3 ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಯುರೋ 5 ಮತ್ತು ಬಿಎಸ್-6 ಮಾಲಿನ್ಯ ನಿಯಮದ ಅನುಸಾರವಾಗಿದೆ. ಈ ಎಂಜಿನ್ 94 ಬಿಹೆಚ್‍ಪಿ ಪವರ್ ಮತ್ತು 86 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಜಿಟಿ ರೂಪಾಂತರದಲ್ಲಿ ಸಸ್ಪೆಂಷನ್ ಮತ್ತು ಬ್ರೇಕಿಂಗ್ ಅನ್ನು 180 ಎಂಎಂ ಫ್ರಂಟ್ ಮತ್ತು 170 ರೇರ್ ಬ್ರೇಕ್‍ನೊಂದಿಗೆ ಅಡ್ಜೆಂಸ್ಟ್ ಮಾಡಬಹುದಾದ ಮೊನೊಶಾಕ್ ಅನ್ನು ಹೊಂದಿದೆ. ಪ್ರೊ ಟ್ರೀಮ್ 9 ಹಂತದ ಡ್ಯಾಂಪಿಂಗ್ ಮತ್ತು 4 ಫ್ರೀಪಿಕ್ಸ್ ಪ್ರೀ ಲೋಡ್ ಸೆಟ್ಟಿಂಗ್‍ಗಳೊಂದಿಗೆ ಎಲೆಕ್ಟ್ರಾನಿಕ್ ಅಡ್ಜೆಂಸ್ಟ್ ಬಲ್ ಹೊಂದಿರುವ ಮೊನೊಶಾಕ್ ಹೊಂದಿದೆ.
MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಈ ಬೈಕಿನಲ್ಲಿ ಮೆಟ್ಜೆಲರ್ ಟೂರನ್ಸ್ ನೆಕ್ಸ್ಟ್ ಟಯರ್‍ಗಳೊಂದಿಗೆ 19/17 ಅಲಾಯ್ ವ್ಹೀಲ್‍ಗಳನ್ನು ಹೊಂದಿದೆ. ಸ್ಟೈಲ್ಮಾ ಕ್ಯಾಲಿಪರ್‍ಗಳ ಮೂಲಕ ಬ್ರೇಕಿಂಗ್ ಹೊಂದಿದೆ. ಈ ಹೊಸ ಬೈಕ್ ಭಾರತದಲ್ಲಿ ರೂ.16 ಲಕ್ಷಗಳಿಂದ ರೂ.16.5 ಲಕ್ಷಗಳಿಗೆ ಮಾರಾಟವಾಗಬಹುದು ಎಂದು ನಿರೀಕ್ಷಿಸುತ್ತೇವೆ.

ಈ ಹೊಸ ಟ್ರಯಂಫ್ ಟೈಗರ್ 900 ಬೈಕ್ ಭಾರತದಲ್ಲಿ ಬಿಡುಗಡೆಯಾದ ಬಳಿಕ ಬಿಎಂಡಬ್ಲ್ಯು ಎಫ್ 850 ಜಿಎಸ್, ಹೊಸ ಹೋಂಡಾ ಆಫ್ರಿಕಾ ಟ್ವಿನ್ ಮತ್ತು ಡುಕಾಟಿ ಮಲ್ಟಿಸ್ಟ್ರಾಡಾ 950 ಬೈಕುಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications








