Just In
- 11 min ago
ದಿಢೀರನೆ ಕೈಕೊಟ್ಟ ಬ್ರೇಕ್, 3 ಕಿ.ಮೀ ರಿವರ್ಸ್ ಗೇರಿನಲ್ಲಿ ಸಾಗಿದ ಟ್ರಕ್ ಚಾಲಕ
- 48 min ago
ಕೈಗೆಟುಕುವ ದರದಲ್ಲಿ ಟಿವಿಎಸ್ ಎಕ್ಸ್ಎಲ್100 ವಿನ್ನರ್ ಎಡಿಷನ್ ಬಿಡುಗಡೆ
- 1 hr ago
ಭಾರತದಲ್ಲಿ ಅತಿದೊಡ್ಡ ಮಲ್ಟಿ ಬ್ರಾಂಡ್ ಕಾರ್ ಸರ್ವಿಸ್ ಸೆಂಟರ್ ತೆರೆದ ಬಾಷ್
- 13 hrs ago
ಮಧ್ಯಮ ಗಾತ್ರದ ಕಾರುಗಳಿಗೆ ಹೊಸ ಡೀಸೆಲ್ ಎಂಜಿನ್ ಪರಿಚಯಿಸಲು ಸಜ್ಜಾದ ಮಾರುತಿ ಸುಜುಕಿ
Don't Miss!
- News
ಬೆಂಗಳೂರಿನಲ್ಲಿ 24 ತಾಸಿನಲ್ಲಿ ಮೂರು ಶೂಟೌಟ್!
- Finance
"ಐಡಿಎಫ್ ಸಿ ಫಸ್ಟ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೇಲಿನ ನಗದು ಸಾಲಕ್ಕೆ ಬಡ್ಡಿ ಇಲ್ಲ"
- Sports
ಭಾರತ vs ಆಸ್ಟ್ರೇಲಿಯಾ: 91 ರನ್ ಗಳಿಸಿ ವಿಕೆಟ್ ಒಪ್ಪಿಸಿದ ಶುಬ್ಮನ್ ಗಿಲ್
- Lifestyle
ಕೂದಲು ಬೇಗನೆ ಬೆಳ್ಳಗಾಗುವುದು: ಇದು ನಿಮ್ಮ ದೇಹದ ಕುರಿತು ಏನು ಸೂಚಿಸುತ್ತದೆ?
- Education
Indian Forest Service Recruitment 2021: 70 ಡಿಐಜಿಎಫ್/ಎಐಜಿಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಚಿತ್ರೀಕರಣ ವೇಳೆ ಅಸ್ವಸ್ಥ: ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಟ್ರಯಂಫ್ ಟ್ರೈಡೆಂಟ್ 660 ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ
ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಟ್ರಯಂಫ್ ತನ್ನ ಟ್ರೈಡೆಂಟ್ 660 ರೋಡ್ಸ್ಟರ್ ಬೈಕನ್ನು ಜಾಗತಿವಾಗಿ ಇತ್ತೀಚೆಗೆ ಅನಾವರಣಗೊಳಿಸಿತ್ತು. ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಈ ಹೊಸ ಟ್ರಯಂಫ್ ಟ್ರೈಡೆಂಟ್ 660 ಬ್ರ್ಯಾಂಡ್ನ ಎಂಟ್ರಿ ಲೆವೆಲ್ ಮಾದರಿಯಾಗಿದೆ.

ಇದೀಗ ಟ್ರಯಂಫ್ ಇಂಡಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಟ್ರಯಂಫ್ ಟ್ರೈಡೆಂಟ್ 660 ಬೈಕಿಗಾಗಿ ಪ್ರಿ ಬುಕ್ಕಿಂಗ್ ಅನ್ನು ಆರಂಭಿಸಿದ್ದಾರೆ. ಈ ಹೊಸ ಟ್ರಯಂಫ್ ಟ್ರೈಡೆಂಟ್ 660 ರೋಡ್ಸ್ಟರ್ ಬೈಕ್ ಹಲವಾರು ಅತ್ಯಾಧುನಿಕ ಫೀಚರ್ ಗಳನ್ನು ಹೊಂದಿದ್ದು, ಜಾಗತಿಕವಾಗಿ ಬಹುನಿರೀಕ್ಷೆಯನ್ನು ಹುಟ್ಟು ಹಾಕಿದ ಬೈಕ್ ಇದಾಗಿದೆ. ಈ ಹೊಸ ಹೊಸ ಟ್ರಯಂಫ್ ಟ್ರೈಡೆಂಟ್ 660 ರೋಡ್ಸ್ಟರ್ ಬೈಕ್ ಅತ್ಯಂತ ಸೊಗಸಾದ ವಿನ್ಯಾಸ ಮತ್ತು ನವೀಕರಿಸಿದ ಎಂಜಿನ್ ಅನ್ನು ಸಹ ಹೊಂದಿದೆ. ಟ್ರಯಂಫ್ ಟ್ರೈಡೆಂಟ್ 660 ರೋಡ್ಸ್ಟರ್ ಹೊಸ ವಿನ್ಯಾಸ ಶೈಲಿಯನ್ನು ಒಳಗೊಂಡಿದೆ.

ಟ್ರೈಡೆಂಟ್ 660 ರೋಡ್ಸ್ಟರ್ ಬೈಕ್ ಸ್ಕಪಲ್ಟಡ್ ಫ್ಯೂಯಲ್ ಟ್ಯಾಂಕ್ ನೊಂದಿಗೆ ಮಸ್ಕಲರ್ ಲುಕ್ ಅನ್ನು ಹೊಂದಿದ್ದೆ. ಈ ಹೊಸ ಬೈಕ್ ಸಿಂಗಲ್-ಪೀಸ್ ಸೀಟ್, ಎಕ್ಸ್ಪೋಸ್ಡ್ ಫ್ರೇಮ್ ಮತ್ತು ಎಂಜಿನ್ ಮತ್ತು ವೃತ್ತಾಕಾರದ ಅಂಶಗಳೊಂದಿಗೆ ಸಣ್ಣದಾಗಿ ರೆಟ್ರೋ ಶೈಲಿಯನ್ನು ಒಳಗೊಂಡಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್ಮಾಸ್ಟರ್ ಬೈಕ್

ಹೊಸ ಟ್ರಯಂಫ್ ಟ್ರೈಡೆಂಟ್ 660 ರೋಡ್ಸ್ಟರ್ ಮ್ಯಾಟ್ ಜೆಟ್ ಬ್ಲಾಕ್/ಮ್ಯಾಟ್ ಸಿಲ್ವರ್ ಐಸ್, ಸಿಲ್ವರ್ ಐಸ್ ಮತ್ತು ಡಯಾಬ್ಲೊ ರೆಡ್, ಕ್ರಿಸ್ಟಲ್ ವೈಟ್ ಮತ್ತು ಸಾಫೈರ್ ಬ್ಲ್ಯಾಕ್ ಎಂಬ ನಾಲ್ಕು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರಲಿದೆ.

ಹೊಸ ಟ್ರಯಂಫ್ ಟ್ರೈಡೆಂಟ್ 660 ಬೈಕ್ ಎಲ್ಇಡಿ ಲೈಟಿಂಗ್ ಮತ್ತು ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಗಾಗಿ ಟಿಎಫ್ಟಿ ಡಿಸ್ ಪ್ಲೇಯನ್ನು ಸಹ ಒಳಗೊಂಡಿದೆ. ‘ಮೈ ಟ್ರಯಂಫ್' ಆ್ಯಪ್ ಬಳಸಿ ಡಿಜಿಟಲ್ ಡಿಸ್ಪ್ಲೇಯನ್ನು ರೈಡರ್ ಸ್ಮಾರ್ಟ್ಫೋನ್ಗೆ ಕನೆಕ್ಟ್ ಮಾದಬಹುದಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಇನ್ನು ಈ ಹೊಸ ಬೈಕಿನಲ್ಲಿ ರೈಡರ್ ಏಡ್ಸ್ ಮತ್ತು ಎಲೆಕ್ಟ್ರಾನಿಕ್ಸ್ ಅನ್ನು ಸಹ ನೀಡುತ್ತದೆ, ಉದಾಹರಣೆಗೆ ರೈಡ್-ಬೈ-ವೈರ್, ಟ್ರ್ಯಾಕ್ಷನ್ ಕಂಟ್ರೋಲ್, ರೈನ್ ಮತ್ತು ರೋಡ್ ರೈಡರ್ ಮೋಡ್ ಗಳು ಸೇರಿದಂತೆ ಇತರ ಹಲವಾರು ಫೀಚರ್ ಗಳನ್ನು ಹೊಂದಿದೆ.

ಹೊಸ ಟ್ರಯಂಫ್ ಟ್ರೈಡೆಂಟ್ 660 ಬೈಕಿನಲ್ಲಿ ಇನ್-ಲೈನ್ ಮೂರು-ಸಿಲಿಂಡರ್ 660 ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 10,250 ಆರ್ಪಿಎಂನಲ್ಲಿ 80 ಬಿಹೆಚ್ಪಿ ಮತ್ತು 6,250 ಆರ್ಪಿಎಂನಲ್ಲಿ 64 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ, ಎಂಜಿನ್ ನೊಂದಿಗೆ ಸ್ಲಿಪ್/ಅಸಿಸ್ಟ್ ಕ್ಲಚ್ನೊಂದಿಗೆ ಆರು-ಸ್ಪೀಡ್ ಗೇರ್ಬಾಕ್ಸ್ಗೆ ಜೋಡಿಸಲಾಗಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್ಎಕ್ಸ್ ಬೈಕ್

ಹೊಸ ಟ್ರಯಂಫ್ ಟ್ರೈಡೆಂಟ್ 660 ಬೈಕ್ ಟೂಬುಲರ್ ಸ್ಟೀಲ್ ಚಾಸಿಸ್ ಅನ್ನು ಹೊಂದಿದೆ. ಇನ್ನು ಈ ಹೊಸ ಬೈಕಿನ ಸಸ್ಪೆಂಕ್ಷನ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 41 ಎಂಎಂ ಶೋವಾ ಯುಎಸ್ಡಿ ಫೋರ್ಕ್ಗಳು ಮತ್ತು ಹಿಂಭಾಗದಲ್ಲಿ ಶೋವಾ ಮೊನೊ-ಶಾಕ್ ಸೆಟಪ್ ಅನ್ನು ಹೊಂದಿದೆ.

ಇನ್ನು ಈ ಟ್ರಯಂಫ್ ಟ್ರೈಡೆಂಟ್ 660 ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 310 ಎಂಎಂ ಟ್ವಿನ್ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಒಂದೇ ಡಿಸ್ಕ್ ಬ್ರೇಕ್ ಅನ್ನು ಹೊಂದಿದೆ, ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ನೀಡಲಾಗಿದೆ.

ಎಂಟ್ರಿ-ಲೆವೆಲ್ ಟ್ರಯಂಫ್ ಟ್ರೈಡೆಂಟ್ 660 ರೋಡ್ಸ್ಟರ್ ಬೈಕ್ ಮುಂದಿನ ವರ್ಷದ ಆರಂಭದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಭಾರತೀಯ ಮಾರುಕಟ್ಟೆಯಲ್ಲಿ ಟ್ರಯಂಫ್ ಟ್ರೈಡೆಂಟ್ 660 ಬೈಕಿಗೆ ಸ್ಮರ್ಧಾತ್ಮಕ ಬೆಲೆಯನ್ನು ನಿಗಧಿಪಡಿಸಬಹುದು. ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಕವಾಸಕಿ ಝಡ್ 650 ಬೈಕಿಗೆ ಪೈಪೋಟಿ ನೀಡುತ್ತದೆ.