ರೊನಿನ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಿವಿಎಸ್ ಹೊಸ ಕ್ರೂಸರ್ ಬೈಕ್
ದೇಶದ ಜನಪ್ರಿಯ ದ್ವಿಚಕ್ರ ವಾಹನ ಕಂಪನಿ ಟಿವಿಎಸ್ ಮೋಟಾರ್ ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ ಕ್ರೂಸರ್ ಕಾನ್ಸೆಪ್ಟ್ ಬೈಕ್ ಮಾದರಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಬೈಕಿನ ಅಧಿಕೃತ ಹೆಸರಿನ ಮಾಹಿತಿಯು ಬಹಿರಂಗವಾಗಿದೆ.

2018ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಝೆಪ್ಲಿನ್ ಹೆಸರಿನೊಂದಿಗೆ ಅನಾವರಣಗೊಂಡಿದ್ದ ಕ್ರೂಸರ್ ಬೈಕ್‌ನ್ನು ಇದೀಗ ಬಿಡುಗಡೆ ಮಾಡುತ್ತಿರುವ ಟಿವಿಎಸ್ ಕಂಪನಿಯು ರೊನಿನ್ ಹೆಸರನ್ನು ಅಧಿಕೃತವಾಗಿ ಕರೆಯುವ ಸಾಧ್ಯತೆಗಳಿದ್ದು, ಕೇಂದ್ರ ಸಾರಿಗೆ ಇಲಾಖೆಯಲ್ಲಿ ಸಲ್ಲಿಕೆ ಮಾಡಲಾಗಿರುವ ಟ್ರೆಡ್‌ಮಾರ್ಕ್ ಅರ್ಜಿಯಲ್ಲಿ ಹೊಸ ಬೈಕ್ ಮಾದರಿಯ ಹೆಸರು ಬಹಿರಂಗವಾಗಿದೆ. ಆದರೆ ಹೊಸ ಬೈಕಿಗಾಗಿ ಪಡೆದುಕೊಳ್ಳಲಾಗಿರುವ ಅಧಿಕೃತ ಹೆಸರು ಕ್ರೂಸರ್ ಮಾದರಿಗಾಗಿ ಪೆಡೆದಿರುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿಗಳಿಲ್ಲ.

ಹೀಗಾಗಿ ಹೊಸ ರೊನಿನ್ ಹೆಸರು ಕ್ರೂಸರ್ ಬೈಕಿಗೆ ಬಳಕೆ ಮಾಡಬಹುದು ಅಥವಾ ಬಿಎಂಡಬ್ಲ್ಯು ಮೊಟೊರಾಡ್ ಜೊತೆಗೂಡಿ ಅಭಿವೃದ್ದಿಗೊಳಿಸುತ್ತಿರುವ ಹೊಸ ಅಡ್ವೆಂಚರ್ ಬೈಕ್ ಮಾದರಿಗಾದರೂ ಬಳಕೆ ಮಾಡಬಹುದಾದ ಸಾಧ್ಯತೆಗಳಿವೆ.

ಆದರೆ ಸದ್ಯಕ್ಕೆ ಬಿಡುಗಡೆಯ ಹಂತದಲ್ಲಿರುವ ಕ್ರೂಸರ್ ಬೈಕ್ ಮಾದರಿಗಾಗಿಯೇ ಈ ಹೆಸರು ಬಳಕೆ ಮಾಡಬಹುದಾದ ಬಗ್ಗೆ ಹೆಚ್ಚು ಚರ್ಚೆಗಳಾಗುತ್ತಿದ್ದು, ಸದ್ಯದಲ್ಲೇ ರೊನಿನ್ ಹೆಸರು ಯಾವ ಬೈಕ್ ಮಾದರಿಗಾಗಿ ಎನ್ನುವುದು ಸ್ಪಷ್ಟವಾಗಲಿದೆ.
MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಇನ್ನು ಮೆಟ್ರೋ ನಗರ ಪ್ರದೇಶಗಳಲ್ಲಿ ಕ್ರೂಸರ್ ಬೈಕ್‌ಗಳಿಗೆ ಯುವ ಸಮುದಾಯವು ವಿಶೇಷ ಆಸಕ್ತಿ ತೋರುತ್ತಿದ್ದು, ಈ ಹಿನ್ನೆಲೆ ಬಜಾಜ್ ಅವೆಂಜರ್‌ಗಿಂತಲೂ ಉತ್ತಮವಾದ ಹೈ ಗ್ರೌಂಡ್ ಕ್ಲಿಯೆರೆನ್ಸ್ ಮತ್ತು ಥಂಡರ್‌ಬರ್ಡ್ 350 ಆವೃತ್ತಿಗಿಂತಲೂ ಕಡಿಮೆ ಬೆಲೆಯಲ್ಲಿ ಝೆಪ್ಲಿನ್ ಕ್ರೂಸರ್ ಕಾನ್ಸೆಪ್ಟ್ ಬೈಕ್ ಅನ್ನು ನಿರ್ಮಾಣ ಮಾಡಿದೆ.

2018ರ ದೆಹಲಿ ಆಟೋ ಮೇಳದಲ್ಲಿ ಪ್ರದರ್ಶನವಾಗಿದ್ದ ಈ ಹೊಸ ಬೈಕ್ 2020ರ ಕೊನೆಯಲ್ಲಿ ಇಲ್ಲವೆ 2021ರ ಆರಂಭದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಅತ್ಯಾಧುನಿಕ ರೈಡಿಂಗ್ ಸೌಲಭ್ಯದ ಜೊತೆ ಜೊತೆಗೆ ಕ್ಲಾಸಿಕ್ ವೈಶಿಷ್ಟ್ಯತೆಗಳೊಂದಿಗೆ ನಿರ್ಮಾಣವಾಗಿದೆ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಝೆಪ್ಲಿನ್ ಬೈಕ್ ಮಾದರಿಯು ಇನ್‌ಟ್ರಾಗೆಟೆಡ್ ಸ್ಟಾರ್ಟರ್ ಜನರೇಟರ್(ಐಎಸ್‌ಜಿ) ತಂತ್ರಜ್ಞಾನ ಪ್ರೇರಣೆ ಹೊಂದಿದ್ದು, ಅರಾಮದಾಯಕ ರೈಡಿಂಗ್ ಸೌಲಭ್ಯವನ್ನು ಒದಗಿಸುವುದ ಜೊತೆಗೆ ಪರ್ಫಾಮೆನ್ಸ್ ಮತ್ತು ಇಂಧನ ದಕ್ಷತೆಗೂ ಹೆಚ್ಚು ಸಹಕಾರಿಯಾಗಲಿದೆ.

ಎಂಜಿನ್ ಸಾಮರ್ಥ್ಯ
ಬಿಎಸ್-6 ವೈಶಿಷ್ಟ್ಯತೆಯ 212 ಸಿಸಿ ಲಿಕ್ವಿಡ್ ಕೂಲ್ಡ್ ಎಂಜಿನ್ ಮಾದರಿಯನ್ನು ಹೊಂದಿರುವ ಝೆಪ್ಲಿನ್ ಬೈಕ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಸೌಲಭ್ಯದೊಂದಿಗೆ 20-ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಅವೆಂಜರ್ 220 ಬೈಕಿಗಿಂತೂ ಉತ್ತಮ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿರಲಿದೆ.
MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಜೊತೆಗೆ ರೆಟ್ರೋ ಶೈಲಿಯ ವಿನ್ಯಾಸವನ್ನು ಹೊಂದಿರುವ ಝೆಪ್ಲಿನ್ ಬೈಕಿನಲ್ಲಿ ಫುಲ್ ಎಲ್ಇಡಿ ಲೈಟಿಂಗ್ ಸಿಸ್ಟಂ, ಸ್ಮಾರ್ಟ್ ಬಯೋ ಕೀ, ಎಲೆಕ್ಟ್ರಾನಿಕ್ ಸ್ಪಿಡೋ ಮೀಟರ್ ಮತ್ತು ಅಡ್ವೆಂಚರ್ ಬೈಕ್ ರೈಡ್ ಕ್ಷಣಗಳನ್ನು ಸೆರೆಹಿಡಿಯಲು ಹೆಚ್‌ಡಿ ಕ್ಯಾಮೆರಾ ಕೂಡಾ ಪಡೆದುಕೊಂಡಿರಲಿದೆ.


Click it and Unblock the Notifications