Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಯಾಯ್ತು ಹೊಸ ಯಮಹಾ ಎಂಟಿ-25 ಬೈಕ್
ಯಮಹಾ ಕಂಪನಿಯು ತನ್ನ ಬಹುನಿರೀಕ್ಷಿತ 2020ರ ಎಂಟಿ-25 ಬೈಕನ್ನು ಮಲೇಷಿಯಾದ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಎಂಟಿ-25 ಯಮಹಾ ಬೈಕುಗಳ ಸರಣಿಯಲ್ಲಿ ಜನಪ್ರಿಯ ಮಾದರಿಗಳಲ್ಲಿ ಇದು ಒಂದಾಗಿದೆ.

ಯಮಹಾ ಕಂಪನಿಯು ಈ ಎಂಟಿ-25 ಬೈಕನ್ನು ಮುಂದಿನ ವರ್ಷಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. 2020ರ ಯಮಹಾ ಎಂಟಿ-25 ಬೈಕಿನಲ್ಲಿ ಎಲ್ಇಡಿ ಡಿಆರ್ಎಲ್, ಎಲ್ಇಡಿ ಟೈಲೈಟ್, ಎಲ್ಇಡಿ ಟರ್ನ್ ಇಂಡಿಕೇಟರ್ಸ್ ಮತ್ತು ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ನೊಂದಿಗೆ ಪ್ರೊಜೆಕ್ಟರ್ ಹೆಡ್ ಲೈಟ್ ಅನ್ನು ಹೊಂದಿದೆ. ಸ್ಟೈಲಿಂಗ್ ವಿಷಯದಲ್ಲಿ ಮಸ್ಕಲರ್ ಫ್ಯೂಯಲ್ ಟ್ಯಾಂಕ್, ಸ್ಟೆಪ್-ಅಪ್ ಸ್ಯಾಡಲ್, ಸ್ಪ್ಲಿಟ್-ಸ್ಟೈಲ್ ಅಲಾಯ್ ವ್ಹೀಲ್ ಮತ್ತು ಎಂಜಿನ್ ಕೌಲ್ ಸೇರಿವೆ.

ಹೊಸ ಯಮಹಾ ಎಂಟಿ-25 ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ. ಈ 2020ರ ಯಮಹಾ ಎಂಟಿ-25 ಬೈಕ್ ಮಲೇಷಿಯಾದ ಮಾರುಕಟ್ಟೆಯಲ್ಲಿ ಐಸ್ ಫ್ಲೂ ಮತ್ತು ಯಮಹಾ ಬ್ಲೂ ಎಂಬ ಎರಡು ಬಣ್ಣಗಳಲ್ಲಿ ಲಭ್ಯವಿದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಇನ್ನು ಬೈಕಿನ ಹೃದಯ ಭಾಗ ಎಂದೇ ಹೇಳುವ ಯಾಂತ್ರಿಕ ವಿಷಯದ ಬಗ್ಗೆ ಹೇಳುವುದಾದರೆ. 2020ರ ಯಮಹಾ ಎಂಟಿ-25 ಬೈಕಿನಲ್ಲಿ 250 ಸಿಸಿ, ಪ್ಯಾರೆಲಲ್ ಟ್ವಿನ್ ಲಿಕ್ವಿಡ್ ಕೂಕ್ಡ್ ಎಂಜಿನ್ ಅನ್ನು ಹೊಂದಿದೆ.

ಈ ಎಂಜಿನ್ 12,000 ಆರ್‌ಪಿಎಂನಲ್ಲಿ 35 ಬಿಹೆಚ್‌ಪಿ ಪವರ್ ಮತ್ತು 10,000 ಆರ್‌ಪಿಎಂನಲ್ಲಿ 23.6 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

2020ರ ಯಮಹಾ ಎಂಟಿ-25 ಬೈಕಿನ ಸಸ್ಪೆಂಕ್ಷನ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 37 ಎಂಎಂ, ಕೆವೈಬಿ ಅಪ್ ಸೈಡ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಪ್ರೀ ಲೋಡ್ ಹೊಂದಾಣಿಕೆಯನ್ನು ಮಾಡಬಹುದಾದ ಮೊನೊ ಶಾಕ್ ಸೆಟಪ್ ಅನ್ನು ಅಳವಡಿಸಿದ್ದಾರೆ.

ಇನ್ನು ಹೊಸ ಯಮಹಾ ಎಂಟಿ-25 ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಎರಡು ಕಡೆಗಳಲ್ಲಿ ಡಿಸ್ಕ್ ಬ್ರೇಕ್ ಗಳನ್ನು ಅಳವಡಿಸಿದ್ದಾರೆ. ಇದರೊಂದಿಗೆ ಸ್ಟ್ಯಾಂಡರ್ಡ್ ಆಗಿ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಅಳವಡಿಸಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಭಾರತೀಯ ಮಾರುಕಟ್ಟೆಯಲ್ಲಿ ಯಮಹಾ ಕಂಪನಿಯು ಹೊಸ ಎಂಟಿ-25 ಬೈಕನ್ನು ಬಿಡುಗಡೆಗೊಳಿಸುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ. ಆದರೆ ಭಾರತದಲ್ಲಿ ಯಮಹಾ ಕಂಪನಿಯು 300 ಸಿಸಿ ಅಡ್ವೆಂಚರ್ ಬೈಕುಗಳಿಗೆ ಬೇಡಿಕೆ ಇದ್ದರೆ ಅದನ್ನು ಬಿಡುಗಡೆಗೊಳಿಸಲು ಸಿದ್ಧವಾಗಲಿದೆ ಎಂದು ಯಮಹಾ ಬಹಿರಂಗಪಡಿಸಿದೆ.

ಇತ್ತೀಚೆಗೆ ಕೆಟಿಎಂ ಮತ್ತು ಬಿಎಂಡಬ್ಲ್ಯು 300 ಸಿಸಿ ಅಡ್ವೆಂಚರ್ ಬೈಕುಗಳು ಗ್ರಾಹಕರ ಗಮನವನ್ನು ಸೆಳೆಯುಯಲ್ಲಿ ಯಶ್ವಸಿಯಾಗಿದೆ. ಇದರಿಂದ ಯಮಹಾ ಕಂಪನಿಯು ಕೂಡ ಬೇಡಿಕೆಯನ್ನು ಅನುಸರಿಸಿ 300 ಸಿಸಿ ಅಡ್ವೆಂಚರ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಚಿಂತಿಸಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಯಮಹಾ ಟೆನೆರೆ 300 ಅಡ್ವೆಂಚರ್ ಬೈಕನ್ನು ಬಿಡುಗಡೆಗೊಳಿಸಿದರೆ ಅದರಲ್ಲಿ ಎಂಟಿ-03 ಮಾದರಿಯಲ್ಲಿರುವಂತಹ ಎಂಜಿನ್ ಅನ್ನು ಅಳವಡಿಸಬಹುದು. ಈ ಯಮಹಾ ಟೆನೆರೆ 300 ಅಡ್ವೆಂಚರ್ ಬೈಕ್ ಬಿಡುಗಡೆಯಾದರೆ ಕೆಟಿಎಂ ಮತ್ತು ಬಿಎಂಡಬ್ಲ್ಯು ಮೋಟೊರಾಡ್ ಬ್ರ್ಯಾಂಡ್‌ಗಳ 300 ಸಿಸಿ ಅಡ್ವೆಂಚರ್ ಮಾದರಿಗಳಿಗೆ ಪೈಪೋಟಿ ನೀಡುತ್ತದೆ.

ಯಮಹಾ ಕಂಪನಿಯು ಭಾರತದಲ್ಲಿ ವರ್ಚುವಲ್ ಸ್ಟೋರ್ ಮೂಲಕ ಆನ್‌ಲೈನ್ ಮಾರಾಟವನ್ನು ನಡೆಸಲು ವೆಬ್‌ಸೈಟ್ ಅನ್ನು ಪ್ರಾರಂಭಿಸಿದೆ. ಯಮಹಾ ಕಂಪನಿಯು "ದಿ ಕಾಲ್ ಆಫ್ ದಿ ಬ್ಲೂ" ಎಂಬ ಅಭಿಯಾನದ ಮೂಲಕ ಗ್ರಾಹಕರಿಗೆ ಅತ್ಯಾಕರ್ಷಕ ಸೇವೆಯನ್ನು ಒದಗಿಸುತ್ತದೆ.

ಯಮಹಾ ಕಂಪನಿಯು ಹೊಸ ಎಂಟಿ-25 ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸುವುದರ ಬಗ್ಗೆ ಯಾವುದೇ ಮಾಹಿತಿಯನ್ನು ಅಧಿಕೃತವಾಗಿ ಬಹಿರಂಗವಾಗಿಲ್ಲ. ಇನ್ನು ಯಮಹಾ ಕಂಪನಿಯು ಮುಂಬರುವ ವರ್ಷಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಪ್ರೀಮಿಯಂ ಬೈಕುಗಳನ್ನು ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.