ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್

ಯಮಹಾ ಕಂಪನಿಯ ಎಕ್ಸ್‌ಎಸ್‌ಆರ್ 155 ರೆಟ್ರೊ-ಲುಕಿಂಗ್ ಬೈಕ್ ಅನ್ನು ಕಳೆದ ವರ್ಷ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಯಮಹಾ ಕಂಪನಿಯು ಈ ವರ್ಷದ ಕೊನೆಯಲ್ಲಿ ಈ ಜನಪ್ರಿಯ ಎಕ್ಸ್‌ಎಸ್‌ಆರ್ 155 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.

ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್

ಯಮಹಾ ಕಂಪನಿಯು ರೆಟ್ರೊ ಲುಕ್ ಅನ್ನು ಹೊಂದಿರುವ ಈ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ ಎಂದು ವರದಿಗಳು ಪ್ರಕಟವಾಗಿದೆ, ಈ ಯಮಹಾ ಎಕ್ಸ್‌ಎಸ್‌ಆರ್ 155 ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.1.4 ಲಕ್ಷಗಳಾಗಿದೆ. ಎಕ್ಸ್‌ಎಸ್‌ಆರ್ 155 ಮಾದರಿಯು ಕಂಪನಿಯ ‘ಸ್ಪೋರ್ಟ್ ಹೆರಿಟೇಜ್' ಸರಣಿಯಲ್ಲಿ ವಿಶ್ವದಾದ್ಯಂತ ಮಾರಾಟವಾಗುವ ಅತ್ಯಂತ ಚಿಕ್ಕ ಬೈಕು ಆಗಿದೆ.

ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್

ಈ ಹೊಸ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್ ಕ್ಲಾಸಿಕ್-ರೆಟ್ರೊ ವಿನ್ಯಾಸ ಮತ್ತು ಆಧುನಿಕ ಸ್ಪರ್ಶವನ್ನು ನೀಡಿದೆ. ಈ ಬೈಕ್ ದುಂಡಗಿನ ಆಕಾರದ ಹೆಡ್‌ಲೈಟ್ ಮತ್ತು ವಿಭಿನ್ನ ಶೈಲಿಯ ಇಂಧನ ಟ್ಯಾಂಕ್ ಅನ್ನು ಹೊಂದಿದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್

ಇನ್ನು ಈ ಬೈಕಿನಲ್ಲಿ ವೃತ್ತಾಕಾರದ ಟೈಲ್-ಲೈಟ್, ಸಿಂಗಲ್-ಪಾಡ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮತ್ತು ಸಿಂಗಲ್-ಪೀಸ್ ರಿಬ್ಬಡ್ ಸೀಟ್ ಅನ್ನು ಪಿಲಿಯನ್ ಗ್ರ್ಯಾಬ್ ಬೆಲ್ಟ್ ನೊಂದಿಗೆ ಮಧ್ಯದಲ್ಲಿ ಇರಿಸಲಾಗಿದೆ. ಇದು ಬೈಕಿನ ರೆಟ್ರೊ ಲುಕ್ ಅನ್ನು ಇನ್ನಷ್ಟು ಹೆಚ್ಚಿಸುತ್ತದೆ.

ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್

ಈ ಹೊಸ ಯಮಹಾ ಎಕ್ಸ್‌ಎಸ್‌ಆರ್ 155 ಬೈಕಿನಲ್ಲಿನ ಸಿಂಗಲ್-ಪಾಡ್ ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸವಾರರಿಗೆ ಹೆಚ್ಚಿನ ಮಾಹಿತಿಯನ್ನು ನೀಡುತ್ತದೆ. ಇದರಲ್ಲಿ ಡಿಜಿಟಲ್ ಟ್ರಿಪ್ ಮೀಟರ್, ಇಂಧನ ಗೇಜ್, ಸ್ಪೀಡೋಮೀಟರ್, ಒಡಿಒ ಜೊತೆ ಗೇರ್ ಇಂಡಿಕೇಟರ್ ಮತ್ತು ಟ್ರಿಪ್ ಇಂಡಿಕೇಟರ್ ಅನ್ನು ಒಳಗೊಂಡಿದೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್

ಈ ಯಮಹಾ ಎಕ್ಸ್‌ಎಸ್‌ಆರ್ 155 ಬೈಕಿನಲ್ಲಿ ಎಂಟಿ -15 ಮತ್ತು ಆರ್ 15ವಿ 3.0 ನಲ್ಲಿ ಅಳವಡಿಸುವರುವಂತಹ ಎಂಜಿನ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ‘ವಿವಿಎ' ತಂತ್ರಜ್ಞಾನದೊಂದಿಗೆ ಲಿಕ್ವಿಡ್-ಕೂಲ್ಡ್ ಸಿಂಗಲ್ ಸಿಲಿಂಡರ್ 155 ಸಿಸಿ ಎಂಜಿನ್ ಅನ್ನು ಹೊಂದಿದೆ.

ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್

ಈ ಎಂಜಿನ್ 18.9 ಬಿಹೆಚ್‍ಪಿ ಪವರ್ ಮತ್ತು 14.7 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಸ್ಲಿಪ್ ಅಸಿಸ್ಟ್ ಕ್ಲಚ್‌ನೊಂದಿಗೆ ಜೋಡಿಸಲಾಗಿದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್

ಯಮಹಾ ಎಕ್ಸ್‌ಎಸ್‌ಆರ್ 155 ಸ್ಟೀಲ್-ಡೆಲ್ಟಾಬಾಕ್ಸ್ ಫ್ರೇಮ್ ಅನ್ನು ಹೊಂದಿದೆ. ಈ ಬೈಕಿನಲಿ ಸಂಸ್ಪೆಕ್ಷನ್ ಗಾಗಿ ಮುಂಭಾಗದಲ್ಲಿ (ಯುಎಸ್‌ಡಿ) ಅಪ್‌ಸೈಡ್-ಡೌನ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಅನ್ನು ಅಳವಡಿಸಲಾಗಿದೆ.

ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್

ಇನ್ನು ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ ಮುಂಭಾಗದಲ್ಲಿ 282 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದ್ದಾರೆ. ಇದರೊಂದಿಗೆ ಅನ್ನು ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ.

ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಯಮಹಾ ಎಕ್ಸ್‌ಎಸ್‌ಆರ್ 155 ಬೈಕ್

ಯಮಹಾ ಎಕ್ಸ್‌ಎಸ್‌ಆರ್ 155 ಬೈಕಿನಲ್ಲಿ ಕ್ಲಾಸಿಕ್-ರೆಟ್ರೊ ವಿನ್ಯಾಸ ಹೊಂದಿದೆ. ಈ ಬೈಕ್ ಭಾರತದಲ್ಲಿ ಬಿಡುಗಡೆಯಾದ ಬಳಿಕ 150 ಸಿಸಿ ಸರಣಿಯಲ್ಲಿರುವ ಬೈಕುಗಳಿಗೆ ಪೈಪೋಟಿಯನ್ನು ನೀಡುತ್ತದೆ.

Article Published On: Tuesday, June 16, 2020, 12:25 [IST]
English summary
Yamaha XSR 155 Expected To Launch In India In This Year. Read In Kannada.
Read more on ಯಮಹಾ yamaha
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+