ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ರಾಯಲ್ ಎನ್‍‍ಫೀಲ್ಡ್ ಕ್ಲಾಸಿಕ್ 350

ರಾಯಲ್ ಎನ್‍‍ಫೀಲ್ಡ್ ಕಂಪನಿಯು ತನ್ನ ಹೊಸ ಕ್ಲಾಸಿಕ್ 350 ಬೈಕ್ ಅನ್ನು ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಸ್ಪಾಟ್ ಟೆಸ್ಟ್ ನಲ್ಲಿ ಹಲವು ವಿಷಯಗಳು ಬಹಿರಂಗವಾಗಿವೆ. ಅಲ್ಲದೇ ಹೊಸ ಕ್ಲಾಸಿಕ್ 350 ಬೈಕ್ ಅನ್ನು ಶೀಘ್ರದಲ್ಲೇ ರಾಯಲ್ ಎನ್‍‍ಫೀಲ್ಡ್ ಕಂಪನಿಯು ಬಿಡುಗಡೆಗೊಳಿಸಲಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ರಾಯಲ್ ಎನ್‍‍ಫೀಲ್ಡ್ ಕ್ಲಾಸಿಕ್ 350

ರಾಯಲ್ ಎನ್‍‍ಫೀಲ್ಡ್ ಬುಲೆಟ್ ಕ್ಲಾಸಿಕ್ 350 ಬೈಕ್ ಬ್ರ್ಯಾಂಡ್‍‍ನ ಸರಣಿಯಲ್ಲಿ ಹೆಚ್ಚು ಮಾರಾಟವಾಗುವ ಬೈಕ್‍‍ಗಳಲ್ಲಿ ಒಂದಾಗಿದೆ. ಫ್ಯೂಯಲ್ ಇಂಜೆಕ್ಷನ್ ತಂತ್ರಜ್ಞಾನದ ಸೇರ್ಪಡೆಯೊಂದಿಗೆ 350 ಸಿಸಿ ಸರಣಿಯಲ್ಲಿ ಬಿಎಸ್-6 ಎಂಜಿನ್ ಅನ್ನು ಬಿಡುಗಡೆಗೊಳಿಸಲು ಕಂಪನಿಯು ಸಜ್ಜಾಗಿದೆ. ಹೊಸ ರಾಯಲ್ ಎನ್‍‍ಫೀಲ್ಡ್ ಕ್ಲಾಸಿಕ್ 350 ಬೈಕ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಮೋಟಾರ್‍‍ಬೀಮ್ ಬಹಿರಂಗಪಡಿಸಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ರಾಯಲ್ ಎನ್‍‍ಫೀಲ್ಡ್ ಕ್ಲಾಸಿಕ್ 350

ರಾಯಲ್ ಎನ್‍‍ಫೀಲ್ಡ್, ಕ್ಲಾಸಿಕ್ 350 ಬೈಕಿ‍ನಲ್ಲಿ ಹೊಸದಾಗಿ ಅಲಾಯ್ ವ್ಹೀಲ್‍‍ಗಳನ್ನು ಅಳವಡಿಸಲಿದೆ. ಇದರ ಜೊತೆಯಲ್ಲಿ ಕ್ಲಾಸಿಕ್ 350 ಬೈಕ್ ಅನ್ನು ಹೊಸ ಬಣ್ಣಗಳಗಳಲ್ಲಿ ಬಿಡುಗಡೆಗೊಳಿಸಲಿದೆ. ರಾಯಲ್ ಎನ್‍‍ಫೀಲ್ಡ್ ಕ್ಲಾಸಿಕ್ 350 ಇನ್ನೂ ಮುಂದೆ ಕಲರ್‍‍ಫುಲ್ ಆಗಿರಲಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ರಾಯಲ್ ಎನ್‍‍ಫೀಲ್ಡ್ ಕ್ಲಾಸಿಕ್ 350

ಕ್ಲಾಸಿಕ್ 350 ಬೈಕಿನಲ್ಲಿ ಗನ್‍‍ಮೆಟಲ್ ಗ್ರೇ ಆವೃತ್ತಿಯಲ್ಲಿ ಅಲಾಯ್ ವ್ಹೀಲ್‍‍ಗಳನ್ನು ಅಳವಡಿಸಲಾಗುವುದು. ಸ್ಟೆಲ್ತ್ ಬ್ಲ್ಯಾಕ್ ಕ್ಲಾಸಿಕ್ 350 ಆವೃತ್ತಿಯಲ್ಲಿ ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಳಿಸಲಾಗುತ್ತದೆ. ಸ್ಪಾಟ್ ಟೆಸ್ಟ್ ಟೆಸ್ಟ್ ನಲ್ಲಿ ಈಬೈಕಿಗೆ ಹೊಸ ಅಲಾಯ್ ವ್ಹೀಲ್ ಮತ್ತು ಫ್ಲೈಸ್ಕ್ರೀನ್ ಅನ್ನು ಅಳವಡಿಸಲಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ರಾಯಲ್ ಎನ್‍‍ಫೀಲ್ಡ್ ಕ್ಲಾಸಿಕ್ 350

ರಾಯಲ್ ಎನ್‍‍ಫೀಲ್ಡ್ ಕಂಪನಿಯ ಬೈಕುಗಳ ಮಾರಾಟದಲ್ಲಿ ಕುಸಿತವಾಗಿದೆ. ಅತಿ ಹೆಚ್ಚು ಮಾರಾಟವಾಗುವ 350 ಸಿಸಿ ಸರಣಿಯ ಬೈಕುಗಳ ಮಾರಾಟದಲ್ಲಿ ಇಳಿಕೆಯಾಗಿದೆ. ಪ್ರೀಮಿಯಂ ಫೀಚರ್ಸ್‍‍ಗಳಿಗಾಗಿ ಹೆಚ್ಚಿದ ಸ್ಪರ್ಧೆಯಿಂದಾಗಿ ರಾಯಲ್ ಎನ್‍‍‍ಫೀಲ್ಡ್ ಹೆಚ್ಚಿನ ನವೀಕರಣಗಳನ್ನು ನಡೆಸುತ್ತಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ರಾಯಲ್ ಎನ್‍‍ಫೀಲ್ಡ್ ಕ್ಲಾಸಿಕ್ 350

ದೇಶಿಯ ಮಾರುಕಟ್ಟೆಯಲ್ಲಿ ಕ್ಲಾಸಿಕ್ 350 ಬೈಕ್ ಮಾರಾಟವನ್ನು ಹೆಚ್ಚಿಸಲು ರಾಯಲ್ ಎನ್‍‍ಫೀಲ್ಡ್ ಹೊಸ ಪ್ರಯತ್ನ ಮಾಡುತ್ತಿದೆ. ಇತ್ತೀಚಿಗೆ ಬಿಡುಗಡೆಯಾದ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಸಿಂಗಲ್ ಸೀಟ್ ಬೈಕು 346 ಸಿಸಿ ಸಿಂಗಲ್ ಸಿಲಿಂಡರ್ ಏರ್‍‍ಕೂಲ್ಡ್ ಎಂಜಿನ್ 5,250 ಆರ್‌ಪಿಎಂನಲ್ಲಿ 19.80 ಬಿಹೆಚ್‌ಪಿ ಪವರ್ ಮತ್ತು 4,000 ಆರ್‌ಪಿಎಂನಲ್ಲಿ 28 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ರಾಯಲ್ ಎನ್‍‍ಫೀಲ್ಡ್ ಕ್ಲಾಸಿಕ್ 350

ಈ ಎಂಜಿನ್‍‍ನೊಂದಿಗೆ 5 ಸ್ಪೀಡ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ರಾಯಲ್ ಎನ್‍‍ಫೀಲ್ಡ್ ಕ್ಲಾಸಿಕ್ 350 ಬೈಕಿನ ಬೆಲೆಯು ದೆಹಲಿಯ ಎಕ್ಸ್ ಶೋರೂಂ ಪ್ರಕಾರ ರೂ.1.64 ಲಕ್ಷಗಳಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ರಾಯಲ್ ಎನ್‍‍ಫೀಲ್ಡ್ ಕ್ಲಾಸಿಕ್ 350

ರಾಯಲ್ ಎನ್‍‍‍ಫೀಲ್ಡ್ ಕಂಪನಿಯು ತನ್ನ 500 ಸಿಸಿ ಯು‍ಸಿಇ ಸೆಗ್‍‍ಮೆಂಟ್‍‍ನ ಬೈ‍ಕುಗಳ ಉತ್ಪಾದನೆಯನ್ನು ಶೀಘ್ರದಲ್ಲೇ ಸ್ಥಗಿತಗೊಳಿಸುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ. ಆದರೆ ಈ ಸಂದರ್ಭದಲ್ಲಿ 500ಸಿಸಿ ಸೆಗ್‍‍ಮೆಂಟ್‍ ಬೈಕು‍ಗಳ ನೆನಪಿಗಾಗಿ ತಯಾರಕ ಕಂಪನಿಯು ಕ್ಲಾಸಿಕ್ 500 ಟ್ರಿಬ್ಯೂಟ್ ಬ್ಲ್ಯಾಕ್ ಲಿಮೆಟೆಡ್ ಆವೃತ್ತಿಯನ್ನು ಬಿಡುಗಡೆಗೊಳಿಸಲಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ರಾಯಲ್ ಎನ್‍‍ಫೀಲ್ಡ್ ಕ್ಲಾಸಿಕ್ 350

ಹೊಸ ರಾಯಲ್ ಎನ್‍‍ಫೀಲ್ಡ್ ಕ್ಲಾಸಿಕ್ 350 ಬೈಕ್ ಅನ್ನು ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಈ ಬೈಕ್ ಶೀಘ್ರದಲೇ ಬಾರತದಲ್ಲಿ ಬಿಡುಗಡೆಗೊಳಿಸಲಿದೆ. ಕಂಪನಿಯು ಬಿ‍ಎಸ್ 6 ಎಂಜಿನ್ ಹೊಂದಿರುವ ಕ್ಲಾಸಿಕ್ 350 ಬೈಕಿನ ಬಿಡುಗಡೆಯ ದಿನಾಂಕವನ್ನು ಶೀಘ್ರದಲ್ಲೇ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಗಳಿವೆ.

More from DriveSpark

Article Published On: Saturday, February 1, 2020, 19:09 [IST]
English summary
2020 Royal Enfield Classic 350 spied with new fancy alloys, flyscreen. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+