Just In
Don't Miss!
- Lifestyle
"ಸೋಮವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ"
- Finance
Flipkart Big Saving Days: ಆಪಲ್, ಸ್ಯಾಮ್ಸಂಗ್ ಸೇರಿ ಹಲವು ಬ್ರ್ಯಾಂಡ್ ಗಳ ಆಫರ್
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಒಡಿಸ್ಸಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಖರೀದಿ ಮೇಲೆ ಇಯರ್ ಎಂಡ್ ಆಫರ್ ಘೋಷಣೆ
ವರ್ಷದ ಕೊನೆಯಲ್ಲಿ ವಾಹನ ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ವಿವಿಧ ಆಟೋ ಕಂಪನಿಗಳು ಇಯರ್ ಎಂಡ್ ಆಫರ್ ಘೋಷಣೆ ಮಾಡಿದ್ದು, ಒಡಿಸ್ಸಿ ಕಂಪನಿಯು ಕಂಪನಿಯು ಕೂಡಾ ತನ್ನ ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮೇಲೆ ಹಲವು ಆಫರ್‌ಗಳನ್ನು ಘೋಷಿಸಿದೆ.

ಗುಜರಾತ್ ಮೂಲದ ಒಡಿಸ್ಸಿ ಎಲೆಕ್ಟ್ರಿಕ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ವಿವಿಧ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡುತ್ತಿದ್ದು, ಎಲ್ಲಾ ದ್ವಿಚಕ್ರಗಳ ವಾಹನಗಳ ಖರೀದಿ ಮೇಲೂ ಇಯರ್ ಎಂಡ್ ಆಫರ್ ನೀಡಲಾಗುತ್ತಿದೆ. ಒಡಿಸ್ಸಿ ಕಂಪನಿಯು ಸ್ಕೂಟರ್ ಮಾದರಿಗಳ ಮೇಲೆ ರೂ.3 ಸಾವಿರ ಡಿಸ್ಕೌಂಟ್ ಮತ್ತು ಎಲೆಕ್ಟ್ರಿಕ್ ಬೈಕ್ ಖರೀದಿ ಮೇಲೆ ಗರಿಷ್ಠ ರೂ.5 ಸಾವಿರ ಡಿಸ್ಕೌಂಟ್ ನೀಡುತ್ತಿದೆ.

ಒಡಿಸ್ಸಿ ಎಲೆಕ್ಟ್ರಿಕ್ ಕಂಪನಿಯು ದ್ವಿಚಕ್ರ ವಾಹನಗಳ ಮೇಲೆ ಆಫರ್ ಅನ್ನು ಈ ತಿಂಗಳು 23ರಿಂದಲೇ ಆರಂಭಿಸಿದ್ದು, ಈ ತಿಂಗಳು ಕೊನೆಯ 31ರ ತನಕ ಆಫರ್ ಲಭ್ಯವಿರಲಿವೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಒಡಿಸ್ಸಿ ಎಲೆಕ್ಟ್ರಿಕ್ ಕಂಪನಿಯು ಹ್ವಾಕ್, ರೇಸರ್ ಮತ್ತು ರೈಸರ್ ಲೈಟ್ ಎನ್ನುವ ಮೂರು ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತಿದ್ದು, ಇವೊಕಿಸ್ ಎನ್ನುವ ಒಂದು ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಅನ್ನು ಮಾರಾಟ ಮಾಡುತ್ತಿದೆ.

ಒಡಿಸ್ಸಿ ಕಂಪನಿಯು ತನ್ನ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಲೀಥಿಯಂ ಅಯಾನ್ ಮತ್ತು ಆ್ಯಸಿಡ್ ಬ್ಯಾಟರಿ ಮಾದರಿಗಳಲ್ಲಿ ಮಾರಾಟ ಮಾಡುತ್ತಿದ್ದು, ಸ್ಕೂಟರ್ ಮಾದರಿಗಳು ಲೀಥಿಯಂ ಅಯಾನ್ ಮತ್ತು ಆ್ಯಸಿಡ್ ಬ್ಯಾಟರಿ ಮಾದರಿಗಳಲ್ಲಿ ಖರೀದಿ ಲಭ್ಯವಿದ್ದಲ್ಲಿ ಎಲೆಕ್ಟ್ರಿಕ್ ಬೈಕ್ ಮಾದರಿಯು ಕೇವಲ ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿರುತ್ತದೆ.

ಬ್ಯಾಟರಿ ಪ್ಯಾಕ್ ಆಧಾರದ ಮೇಲೆ ಒಡಿಸ್ಸಿ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.59,500 ಮತ್ತು ಟಾಪ್ ಎಂಡ್ ಮಾದರಿಯು ರೂ. 70,500 ಬೆಲೆ ಪಡೆದುಕೊಂಡಿದೆ.

ಹ್ವಾಕ್, ರೇಸರ್ ಮತ್ತು ರೈಸರ್ ಲೈಟ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳು ಪ್ರತಿ ಚಾರ್ಜ್‌ಗೆ 70ಕಿ.ಮೀ ನಿಂದ 75 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಹೊಸ ಸ್ಕೂಟರ್‌ಗಳು ನಗರಪ್ರದೇಶದಲ್ಲಿ ಸಂಚಾರಕ್ಕೆ ಅನುಕೂಲಕರವಾಗುವಂತೆ ಪ್ರತಿ ಗಂಟೆಗೆ ಗರಿಷ್ಠ 45 ಕಿ.ಮೀ ಟಾಪ್ ಸ್ಪೀಡ್ ನೀಡಲಾಗಿದೆ.

ಇನ್ನು ಒಡಿಸ್ಸಿ ನಿರ್ಮಾಣದ ಇವೊಕಿಸ್ ಮೋಟಾರ್‌ಸೈಕಲ್ ಮಾದರಿಯು ಕೂಡಾ ಅತ್ಯುತ್ತಮ ತಾಂತ್ರಿಕ ಅಂಶಗಳನ್ನು ಹೊಂದಿದ್ದು, ಎಕ್ಸ್‌ಶೋರೂಂ ಪ್ರಕಾರ ಇವೊಕಿಸ್ ಇವಿ ಬೈಕ್ ಮಾದರಿಯು ರೂ. 1.50 ಲಕ್ಷ ಬೆಲೆ ಹೊಂದಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಇವೊಕಿಸ್ ಇವಿ ಮೋಟಾರ್‌ಸೈಕಲ್ ಮಾದರಿಯಲ್ಲಿ ಒಡಿಸ್ಸಿ ಕಂಪನಿಯು 4.32kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು, 3kW ಎಲೆಕ್ಟ್ರಿಕ್ ಮೋಟಾರ್ ಮೂಲಕ ಪ್ರತಿ ಚಾರ್ಜ್‌ಗೆ 140 ಕಿ.ಮೀ ಮೈಲೇಜ್‌ನೊಂದಿಗೆ ಪ್ರತಿ ಗಂಟೆಗೆ 80 ಕಿ.ಮೀ ಟಾಪ್ ಸ್ಪೀಡ್ ಹೊಂದಿದೆ.

ಹೋಂ ಚಾರ್ಜರ್ ಮೂಲಕ 6 ಗಂಟೆಗಳ ಅವಧಿಯಲ್ಲಿ ಪೂರ್ಣ ಪ್ರಮಾಣದ ಚಾರ್ಜ್ ಮಾಡಬಹುದಾಗಿದ್ದು, ಸಾಮಾನ್ಯ ಸ್ಟ್ರೀಟ್ ಫೈಟರ್ ಬೈಕ್ ಮಾದರಿಗಳಿಂತೆ ಅತ್ಯುತ್ತಮ ಡಿಸೈನ್‌ನೊಂದಿಗೆ ಸುರಕ್ಷತೆಯಲ್ಲೂ ಗಮನಸೆಳೆಯುತ್ತಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಸದ್ಯಕ್ಕೆ ಒಡಿಸ್ಸಿ ಕಂಪನಿಯು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಗುಜರಾತ್ ಮತ್ತು ಮಾಹಾರಾಷ್ಟ್ರದಲ್ಲಿ ಮಾತ್ರ ಮಾರಾಟ ಮಾಡುತ್ತಿದ್ದು, ಶೀಘ್ರದಲ್ಲೇ ಪ್ರಮುಖ ಮಾಹಾನಗರಗಳಲ್ಲಿ ಹೊಸ ವಾಹನ ಮಾರಾಟ ಮಳಿಗೆಗಳನ್ನು ತೆರೆಯುವ ಸಿದ್ದತೆಯಲ್ಲಿದೆ.