Just In
Don't Miss!
- Sports
ಯುಎಇ ಆಟಗಾರರಿಂದ ಮ್ಯಾಚ್ ಫಿಕ್ಸಿಂಗ್; ಅಮಾನತು ಮಾಡಿದ ಐಸಿಸಿ
- Movies
'ಬೆಲ್ ಬಾಟಂ-2' ಟೈಟಲ್ ಪೋಸ್ಟರ್ ಅನಾವರಣ: ಡಿಟೆಕ್ಟಿವ್ ದಿವಾಕರ್ ಈಸ್ ಬ್ಯಾಕ್
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- News
ಶಶಿಕಲಾ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿ
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಲೀಡ್ ಆ್ಯಸಿಡ್ ಬ್ಯಾಟರಿ ಪ್ರೇರಿತ ಇವಿ ಸ್ಕೂಟರ್ ಮಾರಾಟವನ್ನು ಸ್ಥಗಿತಗೊಳಿಸಿದ ಒಕಿನಾವ
ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಒಕಿನಾವ ಕಂಪನಿಯು ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಇವಿ ಸ್ಕೂಟರ್ ಉತ್ಪಾದನೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಪರಿಚಯಿಸಿದ್ದು, ಇದೀಗ ಲೀಡ್ ಆ್ಯಸಿಡ್ ಬ್ಯಾಟರಿ ಪ್ಯಾಕ್ ಪ್ರೇರಿತ ಸ್ಕೂಟರ್ ಮಾರಾಟವನ್ನು ಸ್ಥಗಿತಗೊಳಿಸಿದೆ.

ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದ ಆರಂಭದಲ್ಲಿ ಲೀಡ್ ಆ್ಯಸಿಡ್ ಮತ್ತು ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಪ್ರೇರಿತ ಮಾದರಿಗಳನ್ನು ಪರಿಚಯಿಸಿದ್ದ ಒಕಿನಾವ ಕಂಪನಿಯು ಇದೀಗ ಲೀಡ್ ಆ್ಯಸಿಡ್ ಮಾದರಿಗಳನ್ನು ಸ್ಥಗಿತಗೊಳಿಸಿ ಪೂರ್ಣ ಪ್ರಮಾಣದಲ್ಲಿ ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿರುವ ಸ್ಕೂಟರ್‌ಗಳನ್ನು ಮಾತ್ರ ಮಾರಾಟ ಮಾಡಲು ನಿರ್ಧರಿಸಿದೆ. ಆರಂಭಿಕ ಇವಿ ಸ್ಕೂಟರ್‌ಗಳನ್ನು ಹೊರತುಪಡಿಸಿ ಇನ್ನುಳಿದ ಮಾದರಿಗಳಲ್ಲಿ ಲೀಥಿಯಂ ಅಯಾನ್ ಮಾದರಿಗಳನ್ನು ಮಾತ್ರವೇ ಮಾರಾಟ ಮಾಡುತ್ತಿದ್ದು, ಇದೀಗ ಅಧಿಕೃತವಾಗಿ ಲೀಡ್ ಆ್ಯಸಿಡ್ ಮಾದರಿಗಳ ಮಾರಾಟವನ್ನು ಸ್ಥಗಿತ ಮಾಡಲಾಗಿದೆ.

ಮೊದಲ ಬಾರಿಗೆ ಬಿಡುಗಡೆ ಮಾಡಲಾಗಿದ್ದ ರಿಡ್ಜ್ ಆವೃತ್ತಿ ಹೊರತುಪಡಿಸಿ ಇನ್ನುಳಿದ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳಲ್ಲಿ ಈಗಾಗಲೇ ಲೀಥಿಯಂ ಅಯಾನ್ ಮಾದರಿಗಳೇ ಮಾರಾಟವಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆ ಕಾರ್ಯಾಚರಣೆಯಲ್ಲಿ ಬದಲಾವಣೆ ತರಲಾಗಿದೆ.

ಹೊಸ ಬದಲಾವಣೆ ನಂತರ ಒಕಿನಾವ ಕಂಪನಿಯು ಪ್ರೈಸ್, ಆರ್30, ಲೈಟ್, ರಿಡ್ಜ್ ಪ್ಲಸ್, ಪ್ರೈಸ್ ಪ್ರೊ ಮತ್ತು ಐ-ಪ್ರೈಸ್ ಪ್ರೊ ಪ್ಲಸ್ ಮಾದರಿಗಳನ್ನು ಮಾರಾಟ ಮಾಡಲಿದ್ದು, ಮಾರಾಟಗೊಳ್ಳಲಿರುವ ಪ್ರತಿ ಇವಿ ಮಾದರಿಯು ತೆಗೆದುಹಾಕಬಹುದಾದ ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿವೆ.

ಇನ್ನು ಕರೋನಾ ವೈರಸ್ ಪರಿಣಾಮ ಆಟೋ ಉತ್ಪಾದನಾ ವಿಭಾಗವು ತೀವ್ರ ಸಂಕಷ್ಟಕ್ಕೆ ಸಿಲುಕಿ ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ವೈರಸ್ ಭೀತಿಯ ನಡುವೆಯೂ ಹೊಸ ವಾಹನಗಳ ಖರೀದಿ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿರುವುದು ಆಟೋ ಉತ್ಪಾದನಾ ಕಂಪನಿಗಳಿಗೆ ಮತ್ತಷ್ಟು ಬಲಬಂದಿದೆ. ಕೋವಿಡ್ ಭಯದಿಂದ ಗ್ರಾಹಕರು ವೈರಸ್ ಭೀತಿಯಿಂದ ತಪ್ಪಿಸಿಕೊಳ್ಳಲು ಸ್ವಂತ ವಾಹನಗಳ ಬಳಕೆಯನ್ನು ಹೆಚ್ಚಿಸುತ್ತಿರುವುದು ಹೊಸ ವಾಹನಗಳ ಮಾರಾಟವು ಚೇತರಿಸಿಕೊಳ್ಳುತ್ತಿರುವುದಕ್ಕೆ ಪ್ರಮುಖ ಕಾರಣವಾಗಿದೆ.

ಇದೇ ಕಾರಣಕ್ಕೆ ಗ್ರಾಹಕರ ಬೇಡಿಕೆಯೆಂತೆ ಒಕಿನಾವ ಕಂಪನಿಯು ಆಟೋ ತಜ್ಞರ ಅಭಿಪ್ರಾಯದ ಮೇಲೆ ಶೋರೂಂಗಳ ಸಂಖ್ಯೆಯನ್ನು ಹೆಚ್ಚಿಸುವುದ ಜೊತೆಗೆ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುತ್ತಿದ್ದು, ವಿವಿಧ ಇವಿ ಸ್ಕೂಟರ್ ಮಾದರಿಗಳೊಂದಿಗೆ ಹೊಸ ಇವಿ ಬೈಕ್ ಮಾದರಿಯು ಸಹ ಪ್ರಮುಖ ಆಕರ್ಷಣೆಯಾಗಲಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

2018ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಕಾನ್ಸೆಪ್ಟ್ ಮಾದರಿಯನ್ನೇ ಇದೀಗ ಉತ್ಪಾದನೆ ಕೈಗೊಳ್ಳಲಾಗುತ್ತಿದ್ದು, ಇವಿ ಬೈಕ್ ಮಾದರಿಯಾದರೂ ಸಾಮಾನ್ಯ ಮಾದರಿಯ ಬೈಕ್ ಚಾಲನಾ ಅನುಭವ ನೀಡಲು ಹಲವಾರು ಹೊಸ ಮಾದರಿಯ ತಾಂತ್ರಿಕ ಸೌಲಭ್ಯಗಳನ್ನು ನೀಡಲಾಗಿದೆ.

ಮಾಹಿತಿಗಳ ಪ್ರಕಾರ, ಹೊಸ ಒಕಿ100 ಇವಿ ಬೈಕ್ ಮಾದರಿಯು 2.5kW ಮೋಟಾರ್‌ನೊಂದಿಗೆ ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿರಲಿದ್ದು, ಪ್ರತಿ ಗಂಟೆಗೆ 100 ಕಿ.ಮೀ ಟಾಪ್ ಸ್ಪೀಡ್‌ನೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 100ರಿಂದ 110 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಮತ್ತೊಂದು ಆಕರ್ಷಣೆ ಎಂದರೆ ಹೊಸ ಇವಿ ಬೈಕ್ ಮಾದರಿಯು ಸಂಪೂರ್ಣವಾಗಿ ದೇಶಿಯ ಮಾರುಕಟ್ಟೆಯಲ್ಲಿನ ಬಿಡಿಭಾಗಗಳೊಂದಿಗೆ ಅಭಿವೃದ್ದಿಗೊಳಿಸಲಾದ ಇವಿ ಬೈಕ್ ಮಾದರಿಯಾಗಿದ್ದು, ಹೊಸ ಬೈಕ್ ಬೆಲೆಯು ರೂ.1 ಲಕ್ಷದಿಂದ ರೂ.1.20 ಲಕ್ಷ ಬೆಲೆ ಅಂತರದಲ್ಲಿ ಖರೀದಿಗೆ ಲಭ್ಯವಾಗಲಿದೆ.