ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿದೆ ಒಕಿನಾವ ಒಕಿ100 ಎಲೆಕ್ಟ್ರಿಕ್ ಬೈಕ್
ಬಜೆಟ್ ಬೆಲೆಯಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿರುವ ಒಕಿನಾವ ಕಂಪನಿಯು ಶೀಘ್ರದಲ್ಲೇ ತನ್ನ ಮೊದಲ ಎಲೆಕ್ಟ್ರಿಕ್ ಬೈಕ್ ಮಾದರಿಯಾದ ಒಕಿ100 ಆವೃತ್ತಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

ಒಕಿನಾವ ಕಂಪನಿಯು ಸದ್ಯ ಗ್ರಾಹಕರ ಬೇಡಿಕೆಯೆಂತೆ ರಿಡ್ಜ್ 30, ರಿಡ್ಜ್, ಪ್ರೈಸ್, ಆರ್30, ಲೈಟ್, ರಿಡ್ಜ್ ಪ್ಲಸ್, ಪ್ರೈಸ್ ಪ್ರೊ ಮತ್ತು ಐ-ಪ್ರೈಸ್ ಪ್ರೊ ಪ್ಲಸ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಇದೀಗ ಬಿಡುಗಡೆಯಾಗಲಿರುವ ಒಕಿ100 ಮಾದರಿಯು ಕೂಡಾ ಹಲವಾರು ವಿಶೇಷತೆಗಳೊಂದಿಗೆ ಬಿಡುಗಡೆಯಾಗಲಿದೆ. ಹೊಸ ಇವಿ ಬೈಕ್ ಬಿಡುಗಡೆ ಕುರಿತಂತೆ ಕೆಲವು ಮಹತ್ವದ ಮಾಹಿತಿ ಹಂಚಿಕೊಳ್ಳಲಾಗಿದ್ದು, ಇದೇ ವರ್ಷ ದೀಪಾವಳಿ ಹೊತ್ತಿಗೆ ಖರೀದಿಗೆ ಲಭ್ಯವಿರಲಿದೆ.

ಸದ್ಯ ಕರೋನಾ ವೈರಸ್ ಪರಿಣಾಮ ಆಟೋ ಉತ್ಪಾದನಾ ವಿಭಾಗವು ತೀವ್ರ ಸಂಕಷ್ಟಕ್ಕೆ ಸಿಲುಕಿ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ವೈರಸ್ ಭೀತಿಯ ನಡುವೆಯೂ ಹೊಸ ವಾಹನಗಳ ಖರೀದಿ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿರುವುದು ಆಟೋ ಉತ್ಪಾದನಾ ಕಂಪನಿಗಳಿಗೆ ಮತ್ತಷ್ಟು ಬಲಬಂದಿದೆ.

ಕರೋನಾ ಸಂಕಷ್ಟದ ನಡುವೆಯೂ ಗ್ರಾಹಕರು ವೈರಸ್ ಭೀತಿಯಿಂದ ತಪ್ಪಿಸಿಕೊಳ್ಳಲು ಸ್ವಂತ ವಾಹನಗಳ ಬಳಕೆಯನ್ನು ಹೆಚ್ಚಿಸುತ್ತಿರುವುದು ಹೊಸ ವಾಹನಗಳ ಮಾರಾಟವು ಚೇತರಿಸಿಕೊಳ್ಳುತ್ತಿರುವುದಕ್ಕೆ ಪ್ರಮುಖ ಕಾರಣವಾಗಿದ್ದು, ಈ ಅವಕಾಶವನ್ನು ಬಳಸಿಕೊಳ್ಳುತ್ತಿರುವ ಆಟೋ ಕಂಪನಿಗಳು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಹೊಸ ಮಾದರಿಯ ವಾಹನಗಳನ್ನು ಪರಿಚಯಿಸುತ್ತಿವೆ.

ಒಕಿನಾವ ಕಂಪನಿಯು ಕೂಡಾ ಲಾಕ್‌ಡೌನ್ ಸಡಿಲಿಕೆ ನಂತರ ತಜ್ಞರ ಅಭಿಪ್ರಾಯದ ಮೇಲೆ ಶೋರೂಂಗಳ ಸಂಖ್ಯೆಯನ್ನು ಹೆಚ್ಚಿಸುವುದ ಜೊತೆಗೆ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಇವಿ ಬೈಕ್ ಮಾದರಿಯು ಪ್ರಮುಖ ಆಕರ್ಷಣೆಯಾಗಲಿದೆ. 2018ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಕಾನ್ಸೆಪ್ಟ್ ಮಾದರಿಯನ್ನೇ ಉತ್ಪಾದನೆ ಕೈಗೊಳ್ಳಲಾಗುತ್ತಿದ್ದು, ಇವಿ ಬೈಕ್ ಮಾದರಿಯಾದರೂ ಸಾಮಾನ್ಯ ಮಾದರಿಯ ಬೈಕ್ ಚಾಲನಾ ಅನುಭವ ನೀಡಲು ಹಲವಾರು ಹೊಸ ಮಾದರಿಯ ತಾಂತ್ರಿಕ ಸೌಲಭ್ಯಗಳನ್ನು ನೀಡಲಾಗಿದೆ.

ಮಾಹಿತಿಗಳ ಪ್ರಕಾರ, ಹೊಸ ಒಕಿ100 ಇವಿ ಬೈಕ್ ಮಾದರಿಯು 2.5kW ಮೋಟಾರ್‌ನೊಂದಿಗೆ ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿರಲಿದ್ದು, ಪ್ರತಿ ಗಂಟೆಗೆ 100 ಕಿ.ಮೀ ಟಾಪ್ ಸ್ಪೀಡ್‌ನೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 100 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.
MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ಮತ್ತೊಂದು ಆಕರ್ಷಣೆ ಎಂದರೆ ಹೊಸ ಇವಿ ಬೈಕ್ ಮಾದರಿಯು ಸಂಪೂರ್ಣವಾಗಿ ದೇಶಿಯ ಮಾರುಕಟ್ಟೆಯಲ್ಲಿನ ಬಿಡಿಭಾಗಗಳೊಂದಿಗೆ ಅಭಿವೃದ್ದಿಗೊಳಿಸಲಾದ ಇವಿ ಬೈಕ್ ಮಾದರಿಯಾಗಿದ್ದು, ಹೊಸ ಬೈಕ್ ಬೆಲೆಯು ರೂ.1 ಲಕ್ಷದಿಂದ ರೂ.1.20 ಲಕ್ಷ ಬೆಲೆ ಅಂತರದಲ್ಲಿ ಖರೀದಿಗೆ ಲಭ್ಯವಾಗಲಿದೆ.

ಇನ್ನು ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಪಡಿಸಿ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಹಲವು ಆಟೋ ಕಂಪನಿಗಳು ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಹೊಸ ಬದಲಾವಣೆಗೆ ಕಾರಣವಾಗಿದ್ದು, ಒಕಿನಾವ ಕಂಪನಿಯು ಕೂಡಾ ವಿವಿಧ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಮಾಡುವ ಮೂಲಕ ಹಲವಾರು ಹೊಸ ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ.
MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ಬಜೆಟ್ ಬೆಲೆಯಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಇವಿ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿರುವ ಒಕಿನಾವ ಕಂಪನಿಯು ರಾಜಸ್ತಾನದಲ್ಲಿ ವಾರ್ಷಿಕವಾಗಿ 80 ಸಾವಿರ ಯುನಿಟ್ ಉತ್ಪಾದನಾ ಘಟಕದ ಸೌಲಭ್ಯ ಹೊಂದಿದ್ದು, ಬಿಡುಗಡೆಗೆ ಸಿದ್ದವಾಗಿರುವ ಒಕಿ100 ಎಲೆಕ್ಟಿಕ್ ಬೈಕ್ ಮತ್ತು ಮ್ಯಾಕ್ಸಿ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಭಾರೀ ನೀರಿಕ್ಷೆ ಹುಟ್ಟುಹಾಕಿವೆ.


Click it and Unblock the Notifications








