ಒಕಿ100, ಮಾಕ್ಸಿ ಸ್ಕೂಟರ್ ಸೇರಿ ನಾಲ್ಕು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದೆ ಒಕಿನಾವ

ಬಜೆಟ್ ಬೆಲೆಯಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿರುವ ಒಕಿನಾವ ಕಂಪನಿಯು 2021ರ ಯೋಜನೆಗಳ ಬಗೆಗೆ ಮಹತ್ವದ ಸುಳಿವು ನೀಡಿದ್ದು, ಹೊಸ ವರ್ಷದ ಆರಂಭದಲ್ಲಿ ಒಕಿ100 ಇವಿ ಬೈಕ್ ಸೇರಿದಂತೆ ಒಟ್ಟು ನಾಲ್ಕು ಹೊಸ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಲಿದೆ.

ನಾಲ್ಕು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದೆ ಒಕಿನಾವ

ಒಕಿನಾವ ಕಂಪನಿಯು ಕಂಪನಿಯು ಸದ್ಯ ಗ್ರಾಹಕರ ಬೇಡಿಕೆಯೆಂತೆ ಪ್ರೈಸ್, ಆರ್30, ಲೈಟ್, ರಿಡ್ಜ್ ಪ್ಲಸ್, ಪ್ರೈಸ್ ಪ್ರೊ ಮತ್ತು ಐ-ಪ್ರೈಸ್ ಪ್ರೊ ಪ್ಲಸ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಭವಿಷ್ಯ ಯೋಜನೆಗಳಲ್ಲಿ ಒಕಿ100 ಸೇರಿದಂತೆ ಒಂದು ಮ್ಯಾಕ್ಸಿ ಸ್ಕೂಟರ್ ಮತ್ತು ಎರಡು ಹೈ ಸ್ಪೀಡ್ ಎಲೆಕ್ಟ್ರಿಕ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ. ಇದಕ್ಕಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡಿರುವ ಒಕಿನಾವ ಕಂಪನಿಯು ಹೊಸ ವಾಹನಗಳ ಜೊತೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಳನ್ನು ಸಹ ಉನ್ನತೀಕರಿಸುತ್ತಿದೆ.

ನಾಲ್ಕು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದೆ ಒಕಿನಾವ

ಸದ್ಯ ಕರೋನಾ ವೈರಸ್ ಪರಿಣಾಮ ಆಟೋ ಉತ್ಪಾದನಾ ವಿಭಾಗವು ತೀವ್ರ ಸಂಕಷ್ಟಕ್ಕೆ ಸಿಲುಕಿ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ವೈರಸ್ ಭೀತಿಯ ನಡುವೆಯೂ ಹೊಸ ವಾಹನಗಳ ಖರೀದಿ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿರುವುದು ಆಟೋ ಉತ್ಪಾದನಾ ಕಂಪನಿಗಳಿಗೆ ಮತ್ತಷ್ಟು ಬಲಬಂದಿದೆ.

ನಾಲ್ಕು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದೆ ಒಕಿನಾವ

ಕರೋನಾ ಸಂಕಷ್ಟದ ನಡುವೆಯೂ ಗ್ರಾಹಕರು ವೈರಸ್ ಭೀತಿಯಿಂದ ತಪ್ಪಿಸಿಕೊಳ್ಳಲು ಸ್ವಂತ ವಾಹನಗಳ ಬಳಕೆಯನ್ನು ಹೆಚ್ಚಿಸುತ್ತಿರುವುದು ಹೊಸ ವಾಹನಗಳ ಮಾರಾಟವು ಚೇತರಿಸಿಕೊಳ್ಳುತ್ತಿರುವುದಕ್ಕೆ ಪ್ರಮುಖ ಕಾರಣವಾಗಿದ್ದು, ಈ ಅವಕಾಶವನ್ನು ಬಳಸಿಕೊಳ್ಳುತ್ತಿರುವ ಆಟೋ ಕಂಪನಿಗಳು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಹೊಸ ಮಾದರಿಯ ವಾಹನಗಳನ್ನು ಪರಿಚಯಿಸುತ್ತಿವೆ.

ನಾಲ್ಕು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದೆ ಒಕಿನಾವ

ಒಕಿನಾವ ಕಂಪನಿಯು ಕೂಡಾ ಲಾಕ್‌ಡೌನ್ ಸಡಿಲಿಕೆ ನಂತರ ತಜ್ಞರ ಅಭಿಪ್ರಾಯದ ಮೇಲೆ ಶೋರೂಂಗಳ ಸಂಖ್ಯೆಯನ್ನು ಹೆಚ್ಚಿಸುವುದ ಜೊತೆಗೆ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಇವಿ ಬೈಕ್ ಮತ್ತು ಮ್ಯಾಕ್ಸಿ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಪ್ರಮುಖ ಆಕರ್ಷಣೆಯಾಗಲಿದೆ. 2018ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಒಕಿ100 ಕಾನ್ಸೆಪ್ಟ್ ಮತ್ತು 2020ರ ಆಟೋ ಎಕ್ಸ್‌ಫೋದಲ್ಲಿ ಅನಾವರಣಗೊಳಿಸಲಾಗಿದ್ದ ಮ್ಯಾಕ್ಸಿ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನೇ ಉತ್ಪಾದನೆಗೆ ಸಿದ್ದತೆ ನಡೆಸಲಾಗಿದೆ.

ನಾಲ್ಕು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದೆ ಒಕಿನಾವ

ಎಲೆಕ್ಟ್ರಿಕ್ ಮಾದರಿಯಾದರೂ ಸಾಮಾನ್ಯ ವಾಹನ ಮಾದರಿಯಲ್ಲೇ ಸಿದ್ದಗೊಳ್ಳುತ್ತಿರುವ ಒಕಿ100 ಮತ್ತು ಮ್ಯಾಕ್ಸಿ ಸ್ಕೂಟರ್ ಮಾದರಿಗಳು ಹಲವಾರು ಹೊಸ ಮಾದರಿಯ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಅತ್ಯುತ್ತಮ ಮೈಲೇಜ್ ಮೂಲಕ ಗ್ರಾಹಕರ ಪ್ರಮುಖ ಆಕರ್ಷಣೆಯಾಗಲಿವೆ.

ನಾಲ್ಕು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದೆ ಒಕಿನಾವ

2021ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಒಕಿ100 ಬೈಕ್ ಮಾದರಿಯು ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ತದನಂತರ ಮ್ಯಾಕ್ಸಿ ಸ್ಕೂಟರ್ ಸೇರಿದಂತೆ ಇನ್ನುಳಿದ ಎರಡು ಹೈ ಸ್ಪೀಡ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಿಡುಗಡೆಯಾಗಲಿವೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ನಾಲ್ಕು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದೆ ಒಕಿನಾವ

ಮಾಹಿತಿಗಳ ಪ್ರಕಾರ, ಹೊಸ ಒಕಿ100 ಇವಿ ಬೈಕ್ ಮಾದರಿಯು 2.5kW ಮೋಟಾರ್‌ನೊಂದಿಗೆ ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿರಲಿದ್ದು, ಪ್ರತಿ ಗಂಟೆಗೆ 100 ಕಿ.ಮೀ ಟಾಪ್ ಸ್ಪೀಡ್‌ನೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 100 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ನಾಲ್ಕು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದೆ ಒಕಿನಾವ

ಹಾಗೆಯೇ ಮ್ಯಾಕ್ಸಿ ಸ್ಕೂಟರ್ ಮಾದರಿಯು 4ಕಿ.ವ್ಯಾನ ಲಿಥಿಯಂ ಐಯಾನ್ ಬ್ಯಾಟರಿ ಪ್ಯಾಕ್‌ನೊಂದಿಗೆ ಪ್ರತಿ ಗಂಟೆಗೆ 100 ಕಿ.ಮೀ ಟಾಪ್ ಸ್ಪೀಡ್‌ನೊಂದಿಗೆ ಪ್ರತಿ ಚಾರ್ಚ್‌ಗೆ 120 ಕಿ.ಮೀ 130 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ನಾಲ್ಕು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದೆ ಒಕಿನಾವ

ಈ ಮೂಲಕ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಹೊಸ ಬದಲಾವಣೆಗೆ ಕಾರಣವಾಗಿರುವ ಒಕಿನಾವ ಕಂಪನಿಯು ಇಂಧನ ಚಾಲಿತ ವಾಹನಗಳಿಂದ ಇವಿ ವಾಹನಗಳತ್ತ ಗ್ರಾಹಕರನ್ನು ಸೆಳೆಯಲಿದ್ದು, ಹೊಸ ವಾಹನಗಳ ಉತ್ಪಾದನೆಗಾಗಿ ಕಂಪನಿಯು ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ.

More from DriveSpark

Article Published On: Monday, December 14, 2020, 15:02 [IST]
English summary
Okinawa Planning To Introduce 4 New Electric Models In 2021. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+