ಇವಿ ಸ್ಕೂಟರ್ ಬೇಡಿಕೆ ಹೆಚ್ಚಳ- 150 ಹೊಸ ಮಾರಾಟ ಮಳಿಗೆ ತೆರೆಯಲು ಸಿದ್ದವಾದ ಒಕಿನಾವ

ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಒಕಿನಾವ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಬೈಕ್ ಮಾದರಿಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದ್ದು, ಹೊಸ ಯೋಜನೆಗಳಿಗಾಗಿ ಭಾರೀ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿದೆ.

150 ಹೊಸ ಮಾರಾಟ ಮಳಿಗೆ ತೆರೆಯಲು ಸಿದ್ದವಾದ ಒಕಿನಾವ

ಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ಧಿ ಮತ್ತು ಮಾರಾಟದ ಮೇಲೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಎಲೆಕ್ಟ್ರಿಕ್ ವಾಹನಗಳ ನಿರ್ಮಾಣದತ್ತ ಮುಖ ಮಾಡುತ್ತಿವೆ. ಕೇಂದ್ರ ಸರ್ಕಾರವು ಸಹ ಈ ನಿಟ್ಟಿನಲ್ಲಿ ಇವಿ ವಾಹನಗಳ ಉತ್ಪಾದನೆಯನ್ನು ಹೆಚ್ಚಿಸಲು ಫೇಮ್ 2 ಯೋಜನೆಯನ್ನು ಜಾರಿಗೊಳಿಸಿದ್ದು, ಇದರ ಭಾಗವಾಗಿ ಒಕಿನಾವ ಕಂಪನಿಯು ತನ್ನ ಉದ್ಯಮ ಕ್ಷೇತ್ರದ ವಿಸ್ತರಣೆ ಮಾಡುತ್ತಿದೆ.

150 ಹೊಸ ಮಾರಾಟ ಮಳಿಗೆ ತೆರೆಯಲು ಸಿದ್ದವಾದ ಒಕಿನಾವ

ಸದ್ಯ ಮಾರುಕಟ್ಟೆಯಲ್ಲಿ ಅತ್ಯುತ್ತಮ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಪರಿಚಯಿಸಿ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿರುವ ಒಕಿನಾವ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಉತ್ಪನ್ನಗಳ ಬಿಡುಗಡೆಗಾಗಿ ಸಿದ್ದವಾಗುತ್ತಿದ್ದು, ಉತ್ಪಾದನಾ ಘಟಕದ ಸಾಮರ್ಥ್ಯವನ್ನು ಹೆಚ್ಚಿಸುವ ಮೂಲಕ ಇದೀಗ ಮಾರಾಟ ಮಳಿಗೆಗಳನ್ನು ವಿಸ್ತರಣೆಗೂ ಮುಂದಾಗಿದೆ.

150 ಹೊಸ ಮಾರಾಟ ಮಳಿಗೆ ತೆರೆಯಲು ಸಿದ್ದವಾದ ಒಕಿನಾವ

ಸದ್ಯ ದೇಶದ ಕೆಲವೇ ಮೊಟ್ರೊ ನಗರಗಳಲ್ಲಿ ಮಾತ್ರ ಮಾರಾಟ ಮಳಿಗೆಗಳನ್ನು ಹೊಂದಿರುವ ಒಕಿನಾವ ಕಂಪನಿಯು ಶೀಘ್ರದಲ್ಲೇ 150 ಮಳಿಗೆಗಳಿಗೆ ಚಾಲನೆ ನೀಡಲಿದ್ದು, ಹೊಸ ಯೋಜನೆಗಾಗಿ ಈಗಾಗಲೇ ಬರೋಬ್ಬರಿ ರೂ. 200 ಕೋಟಿಯಷ್ಟು ಬಂಡವಾಳ ಹೂಡಿಕೆ ಮಾಡಿದೆ.

150 ಹೊಸ ಮಾರಾಟ ಮಳಿಗೆ ತೆರೆಯಲು ಸಿದ್ದವಾದ ಒಕಿನಾವ

2015ರಲ್ಲಿ ಮೊದಲ ಬಾರಿಗೆ ಆರಂಭಗೊಂಡ ಒಕಿನಾವ ಕಂಪನಿಯು ಸದ್ಯ ರಾಜಸ್ತಾನದ ಆಳ್ವಾರ್‌ನಲ್ಲಿ ಒಂದು ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಘಟಕವನ್ನು ಹೊಂದಿದ್ದು, ಈ ಘಟಕದಲ್ಲಿ ವಾರ್ಷಿಕವಾಗಿ ಆರಂಭದಲ್ಲಿ 5 ಲಕ್ಷದಿಂದ ಇದೀಗ 10 ಲಕ್ಷ ಯುನಿಟ್ ಸ್ಕೂಟರ್ ಉತ್ಪಾದನೆಗೆ ಉನ್ನತೀಕರಿಸುವ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಅಷ್ಟೇ ಅಲ್ಲದೇ ವಿದೇಶಿ ಮಾರುಕಟ್ಟೆಗಳಿಗೂ ರಫ್ತು ಮಾಡುತ್ತಿದೆ.

150 ಹೊಸ ಮಾರಾಟ ಮಳಿಗೆ ತೆರೆಯಲು ಸಿದ್ದವಾದ ಒಕಿನಾವ

ಮುಂಬರುವ ದಿನಗಳಲ್ಲಿ ಚಾಲನೆಗೊಳ್ಳುವ ಹೊಸ ಸ್ಕೂಟರ್ ಮಾರಾಟ ಮಳಿಗೆಗಳಿಂದ ಮಾರಾಟ ಪ್ರಮಾಣವು ಮತ್ತಷ್ಟು ಹೆಚ್ಚಳವಾಗಲಿದ್ದು, ಎಥರ್, ರಿವೋಲ್ಟ್ ಸೇರಿದಂತೆ ಪ್ರಮುಖ ಇವಿ ಉತ್ಪಾದನಾ ಕಂಪನಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

MOST READ: ಎಲೆಕ್ಟ್ರಿಕ್ ಮಾದರಿಯಲ್ಲಿ ಬಿಡುಗಡೆಯಾಗಲಿವೆ ಯಜ್ಡಿ ಹೊಸ ಕ್ಲಾಸಿಕ್ ಬೈಕ್

150 ಹೊಸ ಮಾರಾಟ ಮಳಿಗೆ ತೆರೆಯಲು ಸಿದ್ದವಾದ ಒಕಿನಾವ

ಇನ್ನು ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಒಕಿನಾವ ಕಂಪನಿಯು ಇದೀಗ ಮೊದಲ ಬಾರಿಗೆ ಎಲೆಕ್ಟ್ರಿಕ್ ಬೈಕ್ ನಿರ್ಮಾಣಕ್ಕೆ ಚಾಲನೆ ನೀಡಿದ್ದು, ಹೊಸ ಬೈಕ್ ಮಾದರಿಯು ಮುಂಬರುವ ಸೆಪ್ಟೆಂಬರ್ ಅಥವಾ ಅಕ್ಟೋಬರ್ ಹೊತ್ತಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

150 ಹೊಸ ಮಾರಾಟ ಮಳಿಗೆ ತೆರೆಯಲು ಸಿದ್ದವಾದ ಒಕಿನಾವ

2018ರ ದೆಹಲಿ ಆಟೋ ಮೇಳದಲ್ಲಿ ಮೊದಲ ಬಾರಿಗೆ ಒಕಿ100 ಬೈಕ್ ಮಾದರಿಯ ಫೋಟೋ ಟೈಪ್ ಆವೃತ್ತಿಯನ್ನ ಪ್ರದರ್ಶನಗೊಳಿಸಿದ್ದ ಒಕಿನಾವ ಕಂಪನಿಯು ಇದೀಗ ಹೊಸ ಬೈಕಿನ ಉತ್ಪಾದನಾ ಆವೃತ್ತಿಯನ್ನು ಪ್ರದರ್ಶನಕ್ಕೆ ಸಜ್ಜಾಗಿದ್ದು, ರಿವೋಲ್ಟ್ ಬೈಕಿಗೆ ಇದು ಭರ್ಜರಿ ಪೈಪೋಟಿ ನೀಡಲಿದೆ.

MOST READ: ಬಜಾಜ್ ಅವೆಂಜರ್‌ಗೆ ಪೈಪೋಟಿಯಾಗಿ ಟಿವಿಎಸ್ ರೊನಿನ್ ಬಿಡುಗಡೆಗೆ ಸಿದ್ದತೆ

150 ಹೊಸ ಮಾರಾಟ ಮಳಿಗೆ ತೆರೆಯಲು ಸಿದ್ದವಾದ ಒಕಿನಾವ

ಹೊಸ ಬೈಕಿನ ಬ್ಯಾಟರಿ ಪ್ಯಾಕ್ ಕುರಿತಂತೆ ಅಧಿಕೃತ ಮಾಹಿತಿ ಇಲ್ಲವಾದರೂ ಹೊಸ ಬೈಕ್ ರಿವೋಲ್ಟ್ ಬೈಕ್ ಮಾದರಿಯಲ್ಲೇ ಬೆಲೆ, ಬ್ಯಾಟರಿ ರೇಂಜ್ ಪಡೆಯುವ ಸಾಧ್ಯತೆಗಳಿದ್ದು, ಪ್ರತಿ ಗಂಟೆಗೆ 100 ಕಿ.ಮೀ ಟಾಪ್ ಸ್ಪೀಡ್‌ನೊಂದಿಗೆ ಪ್ರತಿ ಚಾರ್ಜ್‌ಗೆ 150ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಧ್ಯತೆಗಳಿವೆ.

Most Read Articles

Kannada
English summary
Okinawa Plans To Expand Its Dealership Network By Adding More Than 150 Dealers Across India.
Story first published: Monday, July 20, 2020, 21:41 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X