ವಿಶ್ವದಲ್ಲೇ ಅತಿ ದೊಡ್ಡ ಇವಿ ಉತ್ಪಾದನಾ ಘಟಕ ತೆರೆಯಲಿದೆಯೆಂತೆ ಓಲಾ
ಕ್ಯಾಬ್ ಸೇವೆಗಳಲ್ಲಿ ಜನಪ್ರಿಯಗೊಂಡ ನಂತರ ಮೊದಲ ಬಾರಿಗೆ ಆಟೋ ಉತ್ಪಾದನಾ ಕ್ಷೇತ್ರ ಪ್ರವೇಶಿಸುತ್ತಿರುವ ಓಲಾ ಕಂಪನಿಯು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, ವಿಶ್ವದಲ್ಲೇ ಅತಿ ಇವಿ ವಾಹನಗಳ ಉತ್ಪಾದನಾ ಘಟಕ ತೆರೆಯುವ ಸಿದ್ದತೆಯಲ್ಲಿದೆ.

2021-22 ಹಣಕಾಸು ವರ್ಷದಲ್ಲಿ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿರುವ ಓಲಾ ಕಂಪನಿಯು ಭಾರತದಲ್ಲೇ ಉತ್ಪಾದನಾ ಘಟಕ ನಿರ್ಮಾಣಕ್ಕಾಗಿ ಸಿದ್ದತೆ ನಡೆಸುತ್ತಿದ್ದು, ಹೊಸ ಯೋಜನೆಗಾಗಿ ನೇದಲ್ಯಾಂಡ್ ಮೂಲದ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಕಂಪನಿಯೊಂದಿಗೆ ಬೃಹತ್ ಯೋಜನೆ ಸಿದ್ದಪಡಿಸಿದೆ. ಹೊಸ ಯೋಜನೆ ಅಡಿಯಲ್ಲಿ ವಿವಿಧ ರೇಂಜ್ ಮಾದರಿಯ ಹಲವು ಎಲೆಕ್ಟ್ರಿಕ್ ಉತ್ಪಾದನೆ ಮಾಡಿರುವ ಓಲಾ ಕಂಪನಿಯು ಭಾರತೀಯ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವ ತವಕದಲ್ಲಿದೆ.

ಹೆಚ್ಚುತ್ತಿರುವ ಇಂಧನ ಬೆಲೆಗಳ ಪರಿಣಾಮ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಆಟೋ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸುತ್ತಿವೆ.

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಈಗಾಗಲೇ ಸಾಂಪ್ರಾದಾಯಿಕ ವಾಹನಗಳನ್ನು ಮಾರಾಟ ಮಾಡುತ್ತಿರುವ ಕಂಪನಿಗಳಿಂತಲೂ ಸ್ಟಾರ್ಟ್ ಅಪ್ ಕಂಪನಿಗಳೇ ಹೆಚ್ಟಿನ ಮಟ್ಟದಲ್ಲಿ ಗ್ರಾಹಕರ ಗಮನಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ಈಗಾಗಲೇ ಹಲವಾರು ಸ್ಟಾರ್ಟ್-ಅಪ್ ಕಂಪನಿಗಳು ವಿವಿಧ ಮಾದರಿಯ ಇವಿ ವಾಹನಗಳನ್ನು ಮಾರಾಟ ಮಾಡುವ ಮೂಲಕ ಮುನ್ನಡೆ ಸಾಧಿಸುತ್ತಿವೆ.

ಈ ನಿಟ್ಟಿನಲ್ಲಿ ಹೊಸ ಪಯತ್ನಕ್ಕೆ ಕೈ ಹಾಕಿರುವ ದೇಶದ ಅತಿ ದೊಡ್ಡ ಕ್ಯಾಬ್ ಸೇವಾ ಕಂಪನಿಯಾದ ಓಲಾ ಕೂಡಾ ಇದೀಗ ಆಟೋ ಉತ್ಪಾದನಾ ಉದ್ಯಮದಲ್ಲಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, ಭಾರತದಲ್ಲೇ ಅತಿ ದೊಡ್ಡಇವಿ ಸ್ಕೂಟರ್ ನಿರ್ಮಾಣ ಘಟಕವನ್ನು ತೆರೆಯುವ ಯೋಜನೆಯಲ್ಲಿದೆ. ಹೊಸ ವಾಹನ ಉತ್ಪಾದನಾ ಘಟಕಕ್ಕಾಗಿ ವಿವಿಧ ರಾಜ್ಯಗಳಲ್ಲಿ ಒಟ್ಟು 100 ಏಕರೆ ಭೂಸ್ವಾಧೀನ ಪ್ರಕ್ರಿಯೆಗೆ ಪ್ರಸ್ತಾಪ ಸಲ್ಲಿಸಿದ್ದು, ಶೀಘ್ರದಲ್ಲೇ ಉತ್ಪಾದನಾ ಘಟಕ ಎಲ್ಲಿ ನಿರ್ಮಾಣವಾಗಲಿದೆ ಎನ್ನುವ ಮಾಹಿತಿಯನ್ನು ಪ್ರಕಟಿಸಲಿದೆ.

ಓಲಾ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಘಟಕದಲ್ಲಿ ವಾರ್ಷಿಕವಾಗಿ 20 ಲಕ್ಷ ಯುನಿಟ್ ಉತ್ಪಾದನೆ ಮಾಡುವ ಗುರಿಹೊಂದಿದ್ದು, ಹೊಸ ಯೋಜನೆಗಾಗಿ ಈಗಾಗಲೇ ನೆದರ್ಲ್ಯಾಂಡ್ ಮೂಲದ ಎಟರ್ಗೋ ಎನ್ನುವ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕಂಪನಿಯೊಂದಿಗೆ ಸಹಭಾಗೀತ್ವಕ್ಕೆ ಸಹಿ ಹಾಕಿದೆ.

ಎಟರ್ಗೋ ಕಂಪನಿಯು ಈಗಾಗಲೇ ಯುರೋಪಿನ ಪ್ರಮುಖ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆಯೊಂದಿಗೆ ವಿವಿಧ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಮಾರಾಟಮಾಡುತ್ತಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಆ್ಯಪ್‌ಸ್ಕೂಟರ್ ಮಾದರಿಯನ್ನು ಭಾರತದಲ್ಲೂ ಬಿಡುಗಡೆ ಮಾಡಲು ಸಿದ್ದತೆ ನಡೆಸಲಾಗುತ್ತಿದೆ.

ಎಟರ್ಗೋ ಆ್ಯಪ್‌ಸ್ಕೂಟರ್ ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 240 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ತೆಗೆದುಹಾಕಬಹುದಾದ ಬ್ಯಾಟರಿ ಸೌಲಭ್ಯದೊಂದಿಗೆ ಕೇವಲ 3 ಗಂಟೆಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಬಹುದಾಗಿದೆ.
MOST READ: ಬೈಕ್ ಚಾಲನೆ ವೇಳೆ ಕಳಪೆ ಹೆಲ್ಮೆಟ್ ಬಳಕೆಯನ್ನು ತಪ್ಪಿಸಲು ಹೊಸ ರೂಲ್ಸ್ ಜಾರಿಗೆ ತಂದ ಸಾರಿಗೆ ಇಲಾಖೆ

ಜೊತೆಗೆ ಸಿಟಿ ರೈಡಿಂಗ್‌ಗಾಗಿ ಅತ್ಯುತ್ತಮ ವಿನ್ಯಾಸ ಪಡೆದುಕೊಂಡಿರುವ ಎಟರ್ಗೋ ಆ್ಯಪ್‌ಸ್ಕೂಟರ್ ಮಾದರಿಯು ಕನೆಕ್ಟೆಡ್ ಫೀಚರ್ಸ್‌ನೊಂದಿಗೆ ಗರಿಷ್ಠ ಸುರಕ್ಷತೆ ಒದಗಿಸಲಿದ್ದು, ಪ್ರತಿ ಗಂಟೆಗೆ 45 ಕಿ.ಮೀ ಟಾಪ್ ಸ್ಪೀಡ್‌ನೊಂದಿಗೆ ಅತ್ಯುತ್ತಮ ರೈಡಿಂಗ್ ಅನುಭವ ಒದಗಿಸಲಿದೆ.

ಇದೇ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನೇ ಇದೀಗ ಓಲಾ ಕಂಪನಿಯು ಸಹಭಾಗೀತ್ವದ ಯೋಜನೆ ಅಡಿ ಭಾರತದಲ್ಲೇ ನಿರ್ಮಾಣ ಮಾಡಿ ಮಾರಾಟ ಮಾಡಲಿದ್ದು, ಮಾಹಿತಿಗಳ ಓಲಾ ಹೊಸ ಸ್ಕೂಟರ್ ಮಾದರಿಯು 2021ರ ಆರಂಭದಲ್ಲಿ ಅನಾವರಣಗೊಳಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಆದರೆ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಗೆಗೆ ಇನ್ನು ಕೂಡಾ ಯಾವುದೇ ಅಧಿಕೃತ ಮಾಹಿತಿಗಳನ್ನು ಬಿಟ್ಟುಕೊಡದ ಓಲಾ ಕಂಪನಿಯು ಎಟರ್ಗೋ ನಿರ್ಮಾಣದ ಪ್ರಸ್ತುತ ಖರೀದಿಗೆ ಲಭ್ಯವಿರುವ ಸ್ಕೂಟರ್ ಮಾದರಿಯನ್ನು ಬಿಡುಗಡೆ ಮಾಡಲಿದೆಯಾ ಅಥವಾ ಸಂಪೂರ್ಣವಾಗಿ ಹೊಸ ಉತ್ಪನ್ನಗಳನ್ನು ಸಿದ್ದಪಡಿಸುತ್ತಾ ಎನ್ನುವ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.


Click it and Unblock the Notifications








