ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಹೆಚ್ಚುತ್ತಿರುವ ಇಂಧನ ಬೆಲೆಗಳ ಪರಿಣಾಮ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಆಟೋ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸುತ್ತಿವೆ.

ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಈಗಾಗಲೇ ಸಾಂಪ್ರಾದಾಯಿಕ ವಾಹನಗಳನ್ನು ಮಾರಾಟ ಮಾಡುತ್ತಿರುವ ಕಂಪನಿಗಳಿಂತಲೂ ಸ್ಟಾರ್ಟ್ ಅಪ್ ಕಂಪನಿಗಳೇ ಹೆಚ್ಟಿನ ಮಟ್ಟದಲ್ಲಿ ಗ್ರಾಹಕರ ಗಮನಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ಈಗಾಗಲೇ ಹಲವಾರು ಸ್ಟಾರ್ಟ್-ಅಪ್ ಕಂಪನಿಗಳು ವಿವಿಧ ಮಾದರಿಯ ಇವಿ ವಾಹನಗಳನ್ನು ಮಾರಾಟ ಮಾಡುವ ಮೂಲಕ ಮುನ್ನಡೆ ಸಾಧಿಸುತ್ತಿವೆ.

ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಈ ನಿಟ್ಟಿನಲ್ಲಿ ಹೊಸ ಪಯತ್ನಕ್ಕೆ ಕೈ ಹಾಕಿರುವ ದೇಶದ ಅತಿ ದೊಡ್ಡ ಕ್ಯಾಬ್ ಸೇವಾ ಕಂಪನಿಯಾದ ಓಲಾ ಕೂಡಾ ಇದೀಗ ಆಟೋ ಉತ್ಪಾದನಾ ಉದ್ಯಮದಲ್ಲಿ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾಗುತ್ತಿದ್ದು, ಭಾರತದಲ್ಲೇ ಅತಿ ದೊಡ್ಡಇವಿ ಸ್ಕೂಟರ್ ನಿರ್ಮಾಣ ಘಟಕವನ್ನು ತೆರೆಯುವ ಯೋಜನೆಯಲ್ಲಿದೆ.

ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಹೌದು, ಹೊಸ ಯೋಜನೆಗಾಗಿ ಈಗಾಗಲೇ ವಿವಿಧ ರಾಜ್ಯ ಸರ್ಕಾರಗಳ ಜೊತೆ ಮಾತುಕತೆ ನಡೆಸಿರುವ ಓಲಾ ಹಿರಿಯ ಅಧಿಕಾರಿಗಳು ಹೊಸ ವಾಹನ ಉತ್ಪಾದನಾ ಘಟಕಕ್ಕಾಗಿ ಒಟ್ಟು 100 ಏಕರೆ ಭೂಸ್ವಾಧೀನ ಪ್ರಕ್ರಿಯೆಗೆ ಪ್ರಸ್ತಾಪ ಸಲ್ಲಿಸಿದ್ದು, ಹೊಸ ವಾಹನ ಉತ್ಪಾದನಾ ಘಟಕ ನಿರ್ಮಾಣಕ್ಕಾಗಿ ಅಂತಿಮ ನಿರ್ಧಾರವನ್ನು ಶೀಘ್ರದಲ್ಲೇ ಪ್ರಕಟಿಸುವ ಸಿದ್ದತೆಯಲ್ಲಿದೆ.

ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಓಲಾ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಘಟಕದಲ್ಲಿ ವಾರ್ಷಿಕವಾಗಿ 20 ಲಕ್ಷ ಯುನಿಟ್ ಉತ್ಪಾದನೆ ಮಾಡುವ ಗುರಿಹೊಂದಿದ್ದು, ಹೊಸ ಯೋಜನೆಗಾಗಿ ಈಗಾಗಲೇ ನೆದರ್ಲ್ಯಾಂಡ್ ಮೂಲದ ಎಟರ್ಗೋ ಎನ್ನುವ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕಂಪನಿಯೊಂದಿಗೆ ಸಹಭಾಗೀತ್ವಕ್ಕೆ ಸಹಿ ಹಾಕಿದೆ.

ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಎಟರ್ಗೋ ಕಂಪನಿಯು ಯುರೋಪಿನ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆಯೊಂದಿಗೆ ವಿವಿಧ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಮಾರಾಟಮಾಡುತ್ತಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಆ್ಯಪ್‌ಸ್ಕೂಟರ್ ಮಾದರಿಯನ್ನು ಭಾರತದಲ್ಲೂ ಬಿಡುಗಡೆ ಮಾಡಲು ಸಿದ್ದತೆ ನಡೆಸಲಾಗುತ್ತಿದೆ.

ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಎಟರ್ಗೋ ಆ್ಯಪ್‌ಸ್ಕೂಟರ್ ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 240 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ತೆಗೆದುಹಾಕಬಹುದಾದ ಬ್ಯಾಟರಿ ಸೌಲಭ್ಯದೊಂದಿಗೆ ಕೇವಲ 3 ಗಂಟೆಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಬಹುದಾಗಿದೆ.

ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಜೊತೆಗೆ ಸಿಟಿ ರೈಡಿಂಗ್‌ಗಾಗಿ ಅತ್ಯುತ್ತಮ ವಿನ್ಯಾಸ ಪಡೆದುಕೊಂಡಿರುವ ಎಟರ್ಗೋ ಆ್ಯಪ್‌ಸ್ಕೂಟರ್ ಮಾದರಿಯು ಕನೆಕ್ಟೆಡ್ ಫೀಚರ್ಸ್‌ನೊಂದಿಗೆ ಗರಿಷ್ಠ ಸುರಕ್ಷತೆ ಒದಗಿಸಲಿದ್ದು, ಪ್ರತಿ ಗಂಟೆಗೆ 45 ಕಿ.ಮೀ ಟಾಪ್ ಸ್ಪೀಡ್‌ನೊಂದಿಗೆ ಅತ್ಯುತ್ತಮ ರೈಡಿಂಗ್ ಅನುಭವ ಒದಗಿಸಲಿದೆ.

MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಇದೇ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನೇ ಇದೀಗ ಓಲಾ ಕಂಪನಿಯು ಸಹಭಾಗೀತ್ವದ ಯೋಜನೆ ಅಡಿ ಭಾರತದಲ್ಲೇ ನಿರ್ಮಾಣ ಮಾಡಿ ಮಾರಾಟ ಮಾಡಲಿದ್ದು, ಮಾಹಿತಿಗಳ ಓಲಾ ಹೊಸ ಸ್ಕೂಟರ್ ಮಾದರಿಯು 2021ರ ಆರಂಭದಲ್ಲಿ ಅನಾವರಣಗೊಳಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಆದರೆ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಗೆಗೆ ಇನ್ನು ಕೂಡಾ ಯಾವುದೇ ಅಧಿಕೃತ ಮಾಹಿತಿಗಳನ್ನು ಬಿಟ್ಟುಕೊಡದ ಓಲಾ ಕಂಪನಿಯು ಎಟರ್ಗೋ ನಿರ್ಮಾಣದ ಪ್ರಸ್ತುತ ಖರೀದಿಗೆ ಲಭ್ಯವಿರುವ ಸ್ಕೂಟರ್ ಮಾದರಿಯನ್ನು ಬಿಡುಗಡೆ ಮಾಡಲಿದೆಯಾ ಅಥವಾ ಸಂಪೂರ್ಣವಾಗಿ ಹೊಸ ಉತ್ಪನ್ನಗಳನ್ನು ಸಿದ್ದಪಡಿಸುತ್ತಾ ಎನ್ನುವ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಇನ್ನು ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಬಳಕೆಯನ್ನು ತಗ್ಗಿಸುವುದಕ್ಕಾಗಿ ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ವಿಶ್ವಾದ್ಯಂತ ಪ್ರಮುಖ ರಾಷ್ಟ್ರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಭಾರತದಲ್ಲೂ ಕೇಂದ್ರ ಸರ್ಕಾರವು ಫೇಮ್ 2 ಯೋಜನೆ ಅಡಿ ಇವಿ ವಾಹನಗಳ ಬಳಕೆಗೆ ಉತ್ತೇಜಿಸುತ್ತಿದೆ.

More from DriveSpark

Article Published On: Friday, November 20, 2020, 14:26 [IST]
English summary
Ola Introduces It's Electric Scooter Soon In India. Read in Kannada.
Read more on ಓಲಾ ola
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+