Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 3 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 3 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರತಿ ಚಾರ್ಜ್ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ
ಹೆಚ್ಚುತ್ತಿರುವ ಇಂಧನ ಬೆಲೆಗಳ ಪರಿಣಾಮ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಆಟೋ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸುತ್ತಿವೆ.

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಈಗಾಗಲೇ ಸಾಂಪ್ರಾದಾಯಿಕ ವಾಹನಗಳನ್ನು ಮಾರಾಟ ಮಾಡುತ್ತಿರುವ ಕಂಪನಿಗಳಿಂತಲೂ ಸ್ಟಾರ್ಟ್ ಅಪ್ ಕಂಪನಿಗಳೇ ಹೆಚ್ಟಿನ ಮಟ್ಟದಲ್ಲಿ ಗ್ರಾಹಕರ ಗಮನಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದು, ಈಗಾಗಲೇ ಹಲವಾರು ಸ್ಟಾರ್ಟ್-ಅಪ್ ಕಂಪನಿಗಳು ವಿವಿಧ ಮಾದರಿಯ ಇವಿ ವಾಹನಗಳನ್ನು ಮಾರಾಟ ಮಾಡುವ ಮೂಲಕ ಮುನ್ನಡೆ ಸಾಧಿಸುತ್ತಿವೆ.

ಈ ನಿಟ್ಟಿನಲ್ಲಿ ಹೊಸ ಪಯತ್ನಕ್ಕೆ ಕೈ ಹಾಕಿರುವ ದೇಶದ ಅತಿ ದೊಡ್ಡ ಕ್ಯಾಬ್ ಸೇವಾ ಕಂಪನಿಯಾದ ಓಲಾ ಕೂಡಾ ಇದೀಗ ಆಟೋ ಉತ್ಪಾದನಾ ಉದ್ಯಮದಲ್ಲಿ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾಗುತ್ತಿದ್ದು, ಭಾರತದಲ್ಲೇ ಅತಿ ದೊಡ್ಡಇವಿ ಸ್ಕೂಟರ್ ನಿರ್ಮಾಣ ಘಟಕವನ್ನು ತೆರೆಯುವ ಯೋಜನೆಯಲ್ಲಿದೆ.

ಹೌದು, ಹೊಸ ಯೋಜನೆಗಾಗಿ ಈಗಾಗಲೇ ವಿವಿಧ ರಾಜ್ಯ ಸರ್ಕಾರಗಳ ಜೊತೆ ಮಾತುಕತೆ ನಡೆಸಿರುವ ಓಲಾ ಹಿರಿಯ ಅಧಿಕಾರಿಗಳು ಹೊಸ ವಾಹನ ಉತ್ಪಾದನಾ ಘಟಕಕ್ಕಾಗಿ ಒಟ್ಟು 100 ಏಕರೆ ಭೂಸ್ವಾಧೀನ ಪ್ರಕ್ರಿಯೆಗೆ ಪ್ರಸ್ತಾಪ ಸಲ್ಲಿಸಿದ್ದು, ಹೊಸ ವಾಹನ ಉತ್ಪಾದನಾ ಘಟಕ ನಿರ್ಮಾಣಕ್ಕಾಗಿ ಅಂತಿಮ ನಿರ್ಧಾರವನ್ನು ಶೀಘ್ರದಲ್ಲೇ ಪ್ರಕಟಿಸುವ ಸಿದ್ದತೆಯಲ್ಲಿದೆ.

ಓಲಾ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಘಟಕದಲ್ಲಿ ವಾರ್ಷಿಕವಾಗಿ 20 ಲಕ್ಷ ಯುನಿಟ್ ಉತ್ಪಾದನೆ ಮಾಡುವ ಗುರಿಹೊಂದಿದ್ದು, ಹೊಸ ಯೋಜನೆಗಾಗಿ ಈಗಾಗಲೇ ನೆದರ್ಲ್ಯಾಂಡ್ ಮೂಲದ ಎಟರ್ಗೋ ಎನ್ನುವ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕಂಪನಿಯೊಂದಿಗೆ ಸಹಭಾಗೀತ್ವಕ್ಕೆ ಸಹಿ ಹಾಕಿದೆ.

ಎಟರ್ಗೋ ಕಂಪನಿಯು ಯುರೋಪಿನ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆಯೊಂದಿಗೆ ವಿವಿಧ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಮಾರಾಟಮಾಡುತ್ತಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಆ್ಯಪ್ಸ್ಕೂಟರ್ ಮಾದರಿಯನ್ನು ಭಾರತದಲ್ಲೂ ಬಿಡುಗಡೆ ಮಾಡಲು ಸಿದ್ದತೆ ನಡೆಸಲಾಗುತ್ತಿದೆ.

ಎಟರ್ಗೋ ಆ್ಯಪ್ಸ್ಕೂಟರ್ ಮಾದರಿಯು ಪ್ರತಿ ಚಾರ್ಜ್ಗೆ ಗರಿಷ್ಠ 240 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ತೆಗೆದುಹಾಕಬಹುದಾದ ಬ್ಯಾಟರಿ ಸೌಲಭ್ಯದೊಂದಿಗೆ ಕೇವಲ 3 ಗಂಟೆಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಬಹುದಾಗಿದೆ.

ಜೊತೆಗೆ ಸಿಟಿ ರೈಡಿಂಗ್ಗಾಗಿ ಅತ್ಯುತ್ತಮ ವಿನ್ಯಾಸ ಪಡೆದುಕೊಂಡಿರುವ ಎಟರ್ಗೋ ಆ್ಯಪ್ಸ್ಕೂಟರ್ ಮಾದರಿಯು ಕನೆಕ್ಟೆಡ್ ಫೀಚರ್ಸ್ನೊಂದಿಗೆ ಗರಿಷ್ಠ ಸುರಕ್ಷತೆ ಒದಗಿಸಲಿದ್ದು, ಪ್ರತಿ ಗಂಟೆಗೆ 45 ಕಿ.ಮೀ ಟಾಪ್ ಸ್ಪೀಡ್ನೊಂದಿಗೆ ಅತ್ಯುತ್ತಮ ರೈಡಿಂಗ್ ಅನುಭವ ಒದಗಿಸಲಿದೆ.
MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ಇದೇ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನೇ ಇದೀಗ ಓಲಾ ಕಂಪನಿಯು ಸಹಭಾಗೀತ್ವದ ಯೋಜನೆ ಅಡಿ ಭಾರತದಲ್ಲೇ ನಿರ್ಮಾಣ ಮಾಡಿ ಮಾರಾಟ ಮಾಡಲಿದ್ದು, ಮಾಹಿತಿಗಳ ಓಲಾ ಹೊಸ ಸ್ಕೂಟರ್ ಮಾದರಿಯು 2021ರ ಆರಂಭದಲ್ಲಿ ಅನಾವರಣಗೊಳಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಆದರೆ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಗೆಗೆ ಇನ್ನು ಕೂಡಾ ಯಾವುದೇ ಅಧಿಕೃತ ಮಾಹಿತಿಗಳನ್ನು ಬಿಟ್ಟುಕೊಡದ ಓಲಾ ಕಂಪನಿಯು ಎಟರ್ಗೋ ನಿರ್ಮಾಣದ ಪ್ರಸ್ತುತ ಖರೀದಿಗೆ ಲಭ್ಯವಿರುವ ಸ್ಕೂಟರ್ ಮಾದರಿಯನ್ನು ಬಿಡುಗಡೆ ಮಾಡಲಿದೆಯಾ ಅಥವಾ ಸಂಪೂರ್ಣವಾಗಿ ಹೊಸ ಉತ್ಪನ್ನಗಳನ್ನು ಸಿದ್ದಪಡಿಸುತ್ತಾ ಎನ್ನುವ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ಇನ್ನು ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಬಳಕೆಯನ್ನು ತಗ್ಗಿಸುವುದಕ್ಕಾಗಿ ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ವಿಶ್ವಾದ್ಯಂತ ಪ್ರಮುಖ ರಾಷ್ಟ್ರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಭಾರತದಲ್ಲೂ ಕೇಂದ್ರ ಸರ್ಕಾರವು ಫೇಮ್ 2 ಯೋಜನೆ ಅಡಿ ಇವಿ ವಾಹನಗಳ ಬಳಕೆಗೆ ಉತ್ತೇಜಿಸುತ್ತಿದೆ.