ಹೈ ಸ್ಪೀಡ್ ಎಲೆಕ್ಟ್ರಿಕ್ ಬೈಕ್ ಬಿಡುಗಡೆಗೊಳಿಸಿದ ಒನ್ ಎಲೆಕ್ಟ್ರಿಕ್

ಭಾರತದಲ್ಲಿ ದಿನೇ ದಿನೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದೆ. ಇದರಿಂದಾಗಿ ವಾಹನ ಸವಾರರು ಹೈರಾಣಾಗಿದ್ದಾರೆ. ಇದರ ಜೊತೆಗೆ ಹೆಚ್ಚುತ್ತಿರುವ ವಾಯು ಮಾಲಿನ್ಯ ಪ್ರಮಾಣವೂ ಸಹ ಜನರನ್ನು ಕಂಗೆಡಿಸಿದೆ.

ಹೈ ಸ್ಪೀಡ್ ಎಲೆಕ್ಟ್ರಿಕ್ ಬೈಕ್ ಬಿಡುಗಡೆಗೊಳಿಸಿದ ಒನ್ ಎಲೆಕ್ಟ್ರಿಕ್

ವಾಹನಗಳಿಂದ ಉಂಟಾಗುವ ವಾಯು ಮಾಲಿನ್ಯವನ್ನು ಕಡಿಮೆಗೊಳಿಸಲು ಹಾಗೂ ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಪರ್ಯಾಯವಾಗಿ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯು ದಿನೇ ದಿನೇ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಟಾರ್ಟ್ ಅಪ್ ಕಂಪನಿಗಳು ಸೇರಿದಂತೆ, ಜನಪ್ರಿಯ ವಾಹನ ತಯಾರಕ ಕಂಪನಿಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ಧಿಪಡಿಸಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುತ್ತಿವೆ.

ಹೈ ಸ್ಪೀಡ್ ಎಲೆಕ್ಟ್ರಿಕ್ ಬೈಕ್ ಬಿಡುಗಡೆಗೊಳಿಸಿದ ಒನ್ ಎಲೆಕ್ಟ್ರಿಕ್

ನೋಯ್ಡಾ ಮೂಲದ ಒನ್ ಎಲೆಕ್ಟ್ರಿಕ್ ಕಂಪನಿಯು ಹೊಸ ಎಲೆಕ್ಟ್ರಿಕ್ ಬೈಕ್ ಅನ್ನು ಅಭಿವೃದ್ಧಿಪಡಿಸಿ ಬಿಡುಗಡೆಗೊಳಿಸಿದೆ. ಮುಂದಿನ ತಿಂಗಳು ಈ ಬೈಕಿನ ವಿತರಣಾ ಕಾರ್ಯವು ಆರಂಭವಾಗಲಿದೆ.

MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ಹೈ ಸ್ಪೀಡ್ ಎಲೆಕ್ಟ್ರಿಕ್ ಬೈಕ್ ಬಿಡುಗಡೆಗೊಳಿಸಿದ ಒನ್ ಎಲೆಕ್ಟ್ರಿಕ್

ಕ್ರಿಡನ್ ಎಂಬ ಹೆಸರಿನ ಈ ಬೈಕ್ ಅನ್ನು ನಗರ ವಾಸಿಗಳನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿಪಡಿಸಲಾಗಿದೆ. ಒನ್ ಎಲೆಕ್ಟ್ರಿಕ್ ಕಂಪನಿಯು ಈ ಹೊಸ ಎಲೆಕ್ಟ್ರಿಕ್ ಬೈಕ್ ಹೈಸ್ಪೀಡ್ ಎಲೆಕ್ಟ್ರಿಕ್ ಬೈಕ್ ಮಾದರಿಯಾಗಿದೆ ಎಂದು ಹೇಳಿದೆ.

ಹೈ ಸ್ಪೀಡ್ ಎಲೆಕ್ಟ್ರಿಕ್ ಬೈಕ್ ಬಿಡುಗಡೆಗೊಳಿಸಿದ ಒನ್ ಎಲೆಕ್ಟ್ರಿಕ್

ಒನ್ ಎಲೆಕ್ಟ್ರಿಕ್ ಕಂಪನಿಯ ಪ್ರಕಾರ, ಈ ಬೈಕಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 95 ಕಿ.ಮೀಗಳಾಗಿದೆ. ಈ ಹೈ ಸ್ಪೀಡ್ ಎಲೆಕ್ಟ್ರಿಕ್ ಬೈಕಿನಲ್ಲಿರುವ ಎಲೆಕ್ಟ್ರಿಕ್ ಮೋಟರ್‌ 165 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ.

MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ಹೈ ಸ್ಪೀಡ್ ಎಲೆಕ್ಟ್ರಿಕ್ ಬೈಕ್ ಬಿಡುಗಡೆಗೊಳಿಸಿದ ಒನ್ ಎಲೆಕ್ಟ್ರಿಕ್

ಈ ಹಿನ್ನೆಲೆಯಲ್ಲಿ ಈ ಎಲೆಕ್ಟ್ರಿಕ್ ಬೈಕ್ ನಗರದಲ್ಲಿನ ಪ್ರಯಾಣಕ್ಕೆ ಸೂಕ್ತವಾಗಿದೆ. ಭಾರತದ ರಸ್ತೆಗಳನ್ನು ಗಮನದಲ್ಲಿಟ್ಟುಕೊಂಡು ಈ ಎಲೆಕ್ಟ್ರಿಕ್ ಬೈಕ್ ಅನ್ನು ತಯಾರಿಸಲಾಗಿದೆ. ಈ ಬೈಕಿನ ಮಾರಾಟಕ್ಕೆ ಅಗತ್ಯವಿರುವ ಎಲ್ಲಾ ಪರವಾನಗಿಗಳನ್ನು ಸರ್ಕಾರದಿಂದ ಪಡೆಯಲಾಗಿದೆ ಎಂದು ಒನ್ ಎಲೆಕ್ಟ್ರಿಕ್ ಹೇಳಿದೆ.

ಹೈ ಸ್ಪೀಡ್ ಎಲೆಕ್ಟ್ರಿಕ್ ಬೈಕ್ ಬಿಡುಗಡೆಗೊಳಿಸಿದ ಒನ್ ಎಲೆಕ್ಟ್ರಿಕ್

ಮೊದಲ ಹಂತದಲ್ಲಿ ಈ ಬೈಕ್ ಅನ್ನು ಬೆಂಗಳೂರು, ಚೆನ್ನೈ, ದೆಹಲಿ ಹಾಗೂ ಮುಂಬೈ ನಗರಗಳಲ್ಲಿ ಮಾರಾಟ ಮಾಡಲಾಗುವುದು. ನಂತರದ ದಿನಗಳಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಈ ಬೈಕ್ ಅನ್ನು ಮಾರಾಟ ಮಾಡಲಾಗುವುದು.

MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ಹೈ ಸ್ಪೀಡ್ ಎಲೆಕ್ಟ್ರಿಕ್ ಬೈಕ್ ಬಿಡುಗಡೆಗೊಳಿಸಿದ ಒನ್ ಎಲೆಕ್ಟ್ರಿಕ್

ಹೊಸ ಕ್ರಿಡನ್ ಎಲೆಕ್ಟ್ರಿಕ್ ಬೈಕಿನ ಬೆಲೆ ಭಾರತದ ಎಕ್ಸ್‌ಶೋರೂಂ ದರದಂತೆ ರೂ.1.29 ಲಕ್ಷಗಳಾಗಿದೆ. ಟ್ಯಾಕ್ಸಿ ಮಾರುಕಟ್ಟೆಗಾಗಿ ಒನ್ ಎಲೆಕ್ಟ್ರಿಕ್ ಕಂಪನಿಯು ವಿಶೇಷ ಬೈಕ್ ಮಾದರಿಯನ್ನು ಅಭಿವೃದ್ಧಿಪಡಿಸಿದೆ.

ಹೈ ಸ್ಪೀಡ್ ಎಲೆಕ್ಟ್ರಿಕ್ ಬೈಕ್ ಬಿಡುಗಡೆಗೊಳಿಸಿದ ಒನ್ ಎಲೆಕ್ಟ್ರಿಕ್

ಒನ್ ಎಲೆಕ್ಟ್ರಿಕ್ ಕಂಪನಿಯು ಮುಂದಿನ ವರ್ಷ 75 ಕಿ.ಮೀ ಟಾಪ್ ಸ್ಪೀಡ್ ಹೊಂದಿರುವ ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯನ್ನು ರೂ.1 ಲಕ್ಷಗಳ ಬಜೆಟ್ ನಲ್ಲಿ ಬಿಡುಗಡೆಗೊಳಿಸುವ ಯೋಜನೆಯನ್ನು ಹೊಂದಿದೆ.

Most Read Articles

Kannada
English summary
One Electric launches high speed electric bike in India. Read in Kannada.
Story first published: Friday, September 11, 2020, 9:54 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X