Just In
Don't Miss!
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- News
ಶಶಿಕಲಾ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿ
- Movies
ಎಸ್ಎಸ್ ರಾಜಮೌಳಿ ನಿರ್ಧಾರಕ್ಕೆ ಬೇಸರಗೊಂಡ ನಿರ್ಮಾಪಕ ಬೋನಿ ಕಪೂರ್
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Sports
ವಿರಾಟ್ ಕೊಹ್ಲಿ ಮತ್ತು ನನ್ನ ಮಧ್ಯೆ ಏನೂ ಬದಲಾಗಿಲ್ಲ: ಅಜಿಂಕ್ಯ ರಹಾನೆ
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೈ ಸ್ಪೀಡ್ ಎಲೆಕ್ಟ್ರಿಕ್ ಬೈಕ್ ಕ್ರಿಡನ್ ಮಾದರಿಯ ವಿತರಣೆಗೆ ಚಾಲನೆ ನೀಡಿದ ಒನ್ ಎಲೆಕ್ಟ್ರಿಕ್
ಭಾರತದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದ ಹೈರಾಣಗಿರುವ ವಾಹನ ಸವಾರು ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ಗಮನಹರಿಸಿದ್ದು, ಗ್ರಾಹಕರ ಬೇಡಿಕೆಯೆಂತೆ ಮಾರುಕಟ್ಟೆಯಲ್ಲಿ ಹಲವಾರು ಇವಿ ವಾಹನ ಮಾದರಿಗಳು ಭಾರೀ ಬೇಡಿಕೆ ಪಡೆದುಕೊಳ್ಳುತ್ತಿವೆ.

ಮೇಕ್ ಇನ್ ಇಂಡಿಯಾ ಅಭಿಯಾನದಡಿ ಒನ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಕಂಪನಿಯು ಕೂಡಾ ಭಾರತೀಯ ಗ್ರಾಹಕರ ಅಭಿರುಚಿಗೆ ತಕ್ಕಂತೆ ಕ್ರಿಡನ್ ಎನ್ನುವ ಹೈ ಸ್ಪೀಡ್ ಎಲೆಕ್ಟ್ರಿಕ್ ಬೈಕ್ ಮಾದರಿಯನ್ನು ಬಿಡುಗಡೆ ಮಾಡುವ ಮೂಲಕ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯ ವಿತರಣೆಗೆ ಇದೀಗ ಅಧಿಕೃತವಾಗಿ ಚಾಲನೆ ನೀಡಲಾಗಿದೆ.

ನೋಯ್ಡಾ ಮೂಲದ ಒನ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಹೊಸ ಕ್ರಿಡನ್ ಬೈಕ್ ಮಾದರಿಯನ್ನು ಸಿದ್ದಪಡಿದ್ದು, ಮೊದಲ ಹಂತವಾಗಿ ದೆಹಲಿ ಮತ್ತು ನೋಯ್ಡಾದಲ್ಲಿ ವಿತರಣೆ ಆರಂಭಿಸಿದೆ.

2021 ಜನವರಿ ಮಧ್ಯಂತರದಲ್ಲಿ ಮುಂಬೈ, ಪುಣೆ, ಬೆಂಗಳೂರು, ಚೆನ್ನೈ ಸೇರಿದಂತೆ ಪ್ರಮುಖ ನಗರಗಳಲ್ಲಿ ಹೊಸ ಬೈಕ್ ವಿತರಣೆ ಆರಂಭಿಸಲಿದ್ದು, ನಗರ ಪ್ರದೇಶದಲ್ಲಿ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ಈ ಇವಿ ಬೈಕ್ ಅಭಿವೃದ್ಧಿಪಡಿಸಲಾಗಿದೆ.

ಒನ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಕಂಪನಿಯ ಪ್ರಕಾರ, ಕ್ರಿಡನ್ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 95 ಕಿ.ಮೀ ಹೈ ಸ್ಪೀಡ್ ಹೊಂದಿದ್ದು, ಬೈಕಿನಲ್ಲಿರುವ ಎಲೆಕ್ಟ್ರಿಕ್ ಮೋಟಾರ್ ಗರಿಷ್ಠ 165 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಹಿನ್ನೆಲೆಯಲ್ಲಿ ಈ ಎಲೆಕ್ಟ್ರಿಕ್ ಬೈಕ್ ನಗರದಲ್ಲಿನ ಪ್ರಯಾಣಕ್ಕೆ ಸೂಕ್ತವಾಗಿದ್ದು, ಭಾರತದ ರಸ್ತೆಗಳನ್ನು ಗಮನದಲ್ಲಿಟ್ಟುಕೊಂಡು ಈ ಎಲೆಕ್ಟ್ರಿಕ್ ಬೈಕ್ ಅನ್ನು ತಯಾರಿಸಲಾಗಿದೆ.

ಹೊಸ ಕ್ರಿಡನ್ ಎಲೆಕ್ಟ್ರಿಕ್ ಬೈಕ್ ಮಾದರಿಯು ಭಾರತದಲ್ಲಿ ಎಕ್ಸ್‌ಶೋರೂಂ ದರದಂತೆ ರೂ.1.29 ಲಕ್ಷಗಳಾಗಿದ್ದು, ಟ್ಯಾಕ್ಸಿ ಮಾರುಕಟ್ಟೆಗಾಗಿ ಒನ್ ಎಲೆಕ್ಟ್ರಿಕ್ ಕಂಪನಿಯು ವಿಶೇಷ ಬೈಕ್ ಮಾದರಿಯನ್ನು ಅಭಿವೃದ್ಧಿಪಡಿಸಿದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಕ್ರಿಡನ್ ಮೋಟಾರ್‌ಸೈಕಲ್ ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 120 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಗರಿಷ್ಠ ಮೈಲೇಜ್ ಪಡೆದುಕೊಳ್ಳಲು ಟಾಪ್ ಸ್ಪೀಡ್ ಸರಾಸರಿಯಾಗ 50 ಕಿ.ಮೀ ವೇಗಕ್ಕಿಂತ ಕಡಿಮೆ ವೇಗದಲ್ಲಿ ಚಲಿಸಬೇಕಾಗುತ್ತದೆ.

ಹೊಸ ಕ್ರಿಡನ್ ಬೈಕ್ ಮಾದರಿಯು ಸಿಯೆಟ್ ನಿರ್ಮಾಣದ ಅಗಲವಾದ ಟೈರ್‌ಗಳು, ಬಲಿಷ್ಠ ಸಸ್ಪೆನ್ಷ್ ಹೊಂದಿದ್ದು, ಹೊಸ ಬೈಕ್ ಮಾದರಿಯ ದೀರ್ಘಕಾಲ ಬಾಳಿಕೆ ಬರುವುದಾಗಿ ಕಂಪನಿಯು ಹೊಸ ಬೈಕ್ ಮಾದರಿಯನ್ನು ಭಾರತದಲ್ಲಿ ಮಾತ್ರವಲ್ಲ ಜಾಗತಿಕ ಮಾರುಕಟ್ಟೆಯಲ್ಲೂ ಬಿಡುಗಡೆ ಮಾಡುವ ಯೋಜನೆಯಲ್ಲಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಇನ್ನು ಒನ್ ಎಲೆಕ್ಟ್ರಿಕ್ ಕಂಪನಿಯು ಮುಂದಿನ ವರ್ಷ 75 ಕಿ.ಮೀ ಟಾಪ್ ಸ್ಪೀಡ್ ಹೊಂದಿರುವ ಮತ್ತೊಂದು ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯನ್ನು ರೂ.1 ಲಕ್ಷಗಳ ಬಜೆಟ್ ನಲ್ಲಿ ಬಿಡುಗಡೆಗೊಳಿಸುವ ಯೋಜನೆಯನ್ನು ಹೊಂದಿದ್ದು, ಇದೀಗ ಕ್ರಿಡನ್ ವಿತರಣೆಯ ಮೇಲೆ ಗಮನಹರಿಸಲಿದೆ.