Just In
Don't Miss!
- News
ಹಿರಿಯೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಹೊಸ ರೂಪ
- Sports
ಐಎಸ್ಎಲ್: ನಾರ್ತ್ಈಸ್ಟ್ vs ಮೋಹನ್ ಬಾಗನ್, Live ಸ್ಕೋರ್
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Movies
ರಾಜಮೌಳಿಯ RRR ಚಿತ್ರಕ್ಕೆ ಎದುರಾಗಿ ಅಜಯ್ ದೇವಗನ್ ಸಿನಿಮಾ?
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Education
Republic Day Speech And Essay Ideas: ಗಣರಾಜ್ಯೋತ್ಸವ ಪ್ರಯುಕ್ತ ಭಾಷಣ ಮತ್ತು ಪ್ರಬಂಧ ಬರೆಯಲು ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಪ್ರಿಲಿಯಾ ಎಸ್ಎಕ್ಸ್ಆರ್ 160 ಸ್ಕೂಟರ್ ಉತ್ಪಾದನೆ
ಪಿಯಾಜಿಯೊ ಇಂಡಿಯಾ ಕಂಪನಿಯು ತನ್ನ ಎಪ್ರಿಲಿಯಾ ಎಸ್ಎಕ್ಸ್ಆರ್ 160 ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಪಿಯಾಜಿಯೊ ಎಪ್ರಿಲಿಯಾ ಎಸ್ಎಕ್ಸ್ಆರ್ 160 ಸ್ಕೂಟರ್ ಅನ್ನು ಮೊದಲ ಬಾರಿಗೆ ದೆಹಲಿಯಲ್ಲಿ ನಡೆದ 2020ರ ಆಟೋ ಎಕ್ಸ್ಪೋದಲ್ಲಿ ಅನಾವರಣಗೊಳಿಸಿತ್ತು.

ಪಿಯಾಜಿಯೊ ಪಿಯಾಜಿಯೊ ಇಂಡಿಯಾ ಗುರುವಾರ ತನ್ನ ಎಪ್ರಿಲಿಯಾ ಎಸ್ಎಕ್ಸ್ಆರ್ 160 ಉತ್ಪಾದನೆಯನ್ನು ಪ್ರಾರಂಭಿಸಲಿದೆ ಎಂದು ತಿಳಿಸಿದೆ. ಬಾರಾಮತಿಯ ಪಿಯಾಜಿಯೊ ಇಂಡಿಯಾದ ಸ್ಥಾವರದಲ್ಲಿ ಎಪ್ರಿಲಿಯಾ ಎಸ್ಎಕ್ಸ್ಆರ್ 160 ಸ್ಕೂಟರ್ ಉತ್ಪಾದಸಿಲಿದೆ. ಹೊಸ ಎಸ್ಎಕ್ಸ್ಆರ್ 160 ಸ್ಕೂಟರ್ ಗಾಗಿ ಕೆಲವು ಡೀಲರುಗಳು ಅನಧಿಕೃತವಾಗಿ ಬುಕ್ಕಿಂಗ್ ಸ್ಬೀಕರಿಸಲು ಪ್ರಾರಂಭಿಸಿದ್ದಾರೆ. ಎಪ್ರಿಲಿಯಾ ಎಸ್ಎಕ್ಸ್ಆರ್ 160 ಪ್ರೀಮಿಯಂ ಸ್ಕೂಟರ್ ಆಗಿದೆ.

ಕೆಲವು ಡೀಲರು ಟೋಕನ್ ಮೊತ್ತ ರೂ.5,000 ಗಳಿಗೆ ಬುಕ್ಕಿಂಗ್ ಅನ್ನು ಸ್ವೀಕರಿಸಲಾಗುತ್ತಿದೆ. ಈ ಹೊಸ ಎಪ್ರಿಲಿಯಾ ಹೊಸ ಎಸ್ಎಕ್ಸ್ಆರ್ 160 ಸ್ಕೂಟರ್ ಮುಂದಿನ ವಾರ ಅಥಾವ ಡಿಸೆಂಬರ್ ತಿಂಗಳ ಮೊದಲ ವಾರದಲ್ಲಿ ಬಿಡುಗಡೆಯಾಗಬಹುದೆಂದು ನಿರೀಕ್ಷಿಸುತ್ತೇವೆ. ಭಾರತದಲ್ಲಿ ಆಟೋಮ್ಯಾಟಿಕ್ ಸ್ಕೂಟರ್ಗಳಿಗೆ ಹೆಚ್ಚಿನ ಬೇಡಿಕೆಯಿದೆ.
MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್ಟಾರ್ಕ್ 125 ಸ್ಕೂಟರ್

ಇದರ ಜೊತೆಗೆ ಗ್ರಾಹಕರು ಹೆಚ್ಚು ಸಾಮರ್ಥ್ಯವನ್ನು ಹೊಂದಿರುವ ವಿಶಿಷ್ಟ ವಿನ್ಯಾಸದ ಸ್ಕೂಟರ್ಗಳಿಗೆ ಹೆಚ್ಚು ಗಮನವನ್ನು ನೀಡುತ್ತಿದ್ದಾರೆ. ಈ ಕಾರಣಕ್ಕಾಗಿ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಎಪ್ರಿಲಿಯಾ ತನ್ನ ಮ್ಯಾಕ್ಸಿ ಸ್ಕೂಟರ್ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ.

ಈ ಎಸ್ಎಕ್ಸ್ಆರ್ 160 ಸ್ಕೂಟರ್ ಸೈಡ್ ಹಾಗೂ ಹಿಂಭಾಗದಲ್ಲಿರುವ ಸ್ಟೈಲಿಶ್ ಲುಕ್ನ ಬಾಡಿ ಗ್ರಾಫಿಕ್ಸ್ ಹಾಗೂ ಡಿಸೈನ್ಗಳು ಈ ಸ್ಕೂಟರ್ಗಳಿಗೆ ಸ್ಪೋರ್ಟಿ ಲುಕ್ ನೀಡುತ್ತವೆ. ಎಪ್ರಿಲಿಯಾ ಎಸ್ಎಕ್ಸ್ಆರ್ 160 ಮ್ಯಾಕ್ಸಿ-ಸ್ಕೂಟರ್ ಯುರೋಪಿಯನ್ ಮತ್ತು ಆಗ್ನೇಯ ಏಷ್ಯಾದ ಮಾರುಕಟ್ಟೆಗಳಲ್ಲಿ ಜನಪ್ರಿಯ ಮಾದರಿಯಾಗಿದೆ.
MOST READ: ಎಪ್ರಿಲಿಯಾ ಎಸ್ಎಕ್ಸ್ಆರ್ 160 ಸ್ಕೂಟರ್ ಟೀಸರ್ ಚಿತ್ರ ಬಿಡುಗಡೆ

ಕರೋನಾ ಸೋಂಕಿನ ಭೀತಿಯಿಂದಾಗ ಎಪ್ರಿಲಿಯಾ ಎಸ್ಎಕ್ಸ್ಆರ್ 160 ಸ್ಕೂಟರ್ ಭಾರತದಲ್ಲಿ ಬಿಡುಗಡೆಯಾಗುವುದು ವಿಳಂಬವಾಗಿದೆ. ಎಸ್ಎಕ್ಸ್ಆರ್ 160 ಸ್ಕೂಟರ್ ಅನ್ನು ಕ್ರಾಸ್ಒವರ್ ಸ್ಕೂಟರ್ ರೀತಿಯಲ್ಲಿ ಕಾಣುವಂತೆ ವಿನ್ಯಾಸಗೊಳಿಸಲಾಗಿದೆ. ಈ ಸ್ಕೂಟರ್ನಲ್ಲಿ ಡ್ಯುಯಲ್ ಎಲ್ಇಡಿ ಹೆಡ್ಲೈಟ್, ಡ್ಯುಯಲ್ ಎಲ್ಇಡಿ ಟೇಲ್ ಲೈಟ್ ಕ್ಲಸ್ಟರ್ಗಳಿವೆ.

ದೊಡ್ಡ ಗಾತ್ರದ ವಿಂಡ್ಸ್ಕ್ರೀನ್ ಸಿಸ್ಟಂ, ಪೂರ್ಣ ಪ್ರಮಾಣದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಸೀಟಿನ ಕೆಳಗಿರಿಸಲಾಗಿದೆ. ಎಪ್ರಿಲಿಯಾ ಎಸ್ಎಕ್ಸ್ಆರ್ 160 ಸ್ಕೂಟರ್ನಲ್ಲಿ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅಳವಡಿಸಲಾಗಿದೆ.
MOST READ: ಅಕ್ಟೋಬರ್ ತಿಂಗಳಿನಲ್ಲಿ 8 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್

ಈ ಸ್ಕೂಟರಿನ ಸೈಡ್ ಹಾಗೂ ಹಿಂಭಾಗದಲ್ಲಿರುವ ಸ್ಟೈಲಿಶ್ ಲುಕ್ನ ಬಾಡಿ ಗ್ರಾಫಿಕ್ಸ್ ಹಾಗೂ ಡಿಸೈನ್ಗಳು ಸಹ ಈ ಸ್ಕೂಟರಿಗೆ ಸ್ಪೋರ್ಟಿ ಲುಕ್ ನೀಡುತ್ತವೆ. ಸ್ಕೂಟರ್ ಸವಾರ ಹಾಗೂ ಹಿಂಬದಿಯ ಪ್ರಯಾಣಿಕರಿಗೆ ಆರಾಮದಾಯಕವಾಗಿರುವ ಸೀಟ್ಗಳನ್ನು ನೀಡಲಾಗಿದೆ.

ಎಪ್ರಿಲಿಯಾ ಎಸ್ಎಕ್ಸ್ಆರ್ 160 ಸ್ಕೂಟರ್ 160 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿದೆ. ಇದು 3-ವ್ಯಾಲ್ಯೂ ಫ್ಯೂಯಲ್ ಇಂಜೆಕ್ಷನ್ ಅನ್ನು ಹೊಂದಿದೆ. ಈ ಎಂಜಿನ್ 11 ಬಿಹೆಚ್ಪಿ ಪವರ್ ಮತ್ತು 11.6 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಎಪ್ರಿಲಿಯಾ ಎಸ್ಎಕ್ಸ್ಆರ್ 160 ಪ್ರೀಮಿಯಂ ಸ್ಕೂಟರ್ ಬೆಲೆಯು ಸುಮಾರು ರೂ.1.5 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ. ಹೊಸ ಎಪ್ರಿಲಿಯಾ ಎಸ್ಎಕ್ಸ್ಆರ್ 160 ಪ್ರೀಮಿಯಂ ಸ್ಕೂಟರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಈ ಸ್ಕೋಟರ್ ಅನ್ನು ಸ್ಥಳೀಯವಾಗಿ ಅಭಿವೃದ್ದಿಪಡಿಸಲಾಗುತ್ತದೆ.