Just In
Don't Miss!
- News
ಹುಣಸೋಡು ಜಿಲೆಟಿನ್ ಸ್ಪೋಟ: ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ
- Sports
ಯುವರಾಜ್ ಸಿಂಗ್ ಕೋಚಿಂಗ್ ಬಹಳ ಉಪಯೋಗಕ್ಕೆ ಬಂತು: ಗಿಲ್
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಆರ್‌ವಿ300 ಮತ್ತು ಆರ್‌ವಿ400 ಇವಿ ಬೈಕ್ ಮಾದರಿಗಳ ಬೆಲೆ ಹೆಚ್ಚಿಸಿದ ರಿವೋಲ್ಟ್
ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ಉತ್ತಮ ಬೆಳವಣಿಗೆ ಕಂಡುಬರುತ್ತಿದ್ದು, ಹಲವಾರು ಆಟೋ ಕಂಪನಿಗಳು ವಿವಿಧ ಮಾದರಿಯ ಇವಿ ವಾಹನಗಳನ್ನು ಬಿಡುಗಡೆ ಮಾಡುವುದರೊಂದಿಗೆ ಮಾರಾಟ ವ್ಯಾಪ್ತಿಯನ್ನು ವಿಸ್ತರಿಸುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ಬಳಕೆಯು ಹೆಚ್ಚುತ್ತಿದಂತೆ ಹಲವಾರು ಸ್ಟಾರ್ಟ್‌ಅಪ್ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನ ಮಾದರಿಗಳೊಂದಿಗೆ ಗ್ರಾಹಕರ ಆಕರ್ಷಣೆ ಕಾರಣವಾಗಿದ್ದು, ಇವುಗಳಲ್ಲಿ ರಿವೋಲ್ಟ್ ಕೂಡಾ ಒಂದಾಗಿದೆ. ಇವಿ ಬೈಕ್ ಮಾದರಿಗಳನ್ನು ಬಿಡುಗಡೆ ಮಾಡಿದ ಕೆಲವೇ ದಿನಗಳಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಗ್ರಾಹಕರ ಬೇಡಿಕೆ ಹೆಚ್ಚುತ್ತಿದ್ದಂತೆ ಮಾರಾಟ ವ್ಯಾಪ್ತಿಯನ್ನು ಹೆಚ್ಚಿಸುತ್ತಿದೆ.

ಪುಣೆ ಮೂಲದ ರಿವೋಲ್ಟ್ ಕಂಪನಿಯು ಆರಂಭದಲ್ಲಿ ಪುಣೆ ಮತ್ತು ದೆಹಲಿಯಲ್ಲಿ ಮಾತ್ರವೇ ಹೊಸ ಎಲೆಕ್ಟ್ರಿಕ್ ಬೈಕ್‌ಗಳನ್ನು ಮಾರಾಟ ಮಾಡುತ್ತಿತ್ತು. ಇದೀಗ ಹೊಸದಾಗಿ ಮುಂಬೈ ಮಹಾನಗರದಲ್ಲೂ ಇವಿ ಬೈಕ್ ಮಾರಾಟ ಮಳಿಗೆಗಳನ್ನು ತೆರೆಯುವ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ರಿವೋಲ್ಟ್ ಕಂಪನಿಯು ಸದ್ಯ ಆರ್‌ವಿ300 ಮತ್ತು ಆರ್‌ವಿ400 ಎನ್ನುವ ಎರಡು ಎಲೆಕ್ಟ್ರಿಕ್ ಬೈಕ್‌ಗಳನ್ನು ಮಾರಾಟ ಮಾಡುತ್ತಿದ್ದು, ಅತ್ಯುತ್ತಮ ಮೈಲೇಜ್ ಪ್ರೇರಣೆಯೊಂದಿಗೆ ಬೆಲೆಯಲ್ಲೂ ಆಕರ್ಷಕವಾಗಿವೆ.

ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಗಳಿಗೆ ಬೇಡಿಕೆ ಹೆಚ್ಚಿದಂತೆ ಕಂಪನಿಯು ಇದೀಗ ಆರ್‌ವಿ300 ಮತ್ತು ಆರ್‌ವಿ400 ಇವಿ ಬೈಕ್ ಮಾದರಿಗಳ ಬೆಲೆ ಹೆಚ್ಚಳ ಮಾಡಿದ್ದು, ಆರ್‌ವಿ300 ಬೈಕ್ ಮಾದರಿಯ ಬೆಲೆ ರೂ. 10 ಸಾವಿರ ಮತ್ತು ಆರ್‌ವಿ400 ಇವಿ ಬೈಕ್ ಮಾದರಿಯ ಬೆಲೆಯಲ್ಲಿ ರೂ.14 ಸಾವಿರ ಹೆಚ್ಚಳ ಮಾಡಲಾಗಿದೆ.

ಗ್ರಾಹಕರು ಹೊಸ ಬೈಕ್ ಖರೀದಿಸುವಾಗ ತಮ್ಮ ಅನುಕೂಲಕ್ಕೆ ತಕ್ಕಂತೆ ದರ ಪಾವತಿ ಮಾಡಬಹುದಾಗಿದ್ದು, ಇಎಂಐ ಮೂಲಕ ಪಾವತಿ ಮಾಡುವುದಾದರೆ ಆರ್‌ವಿ400 ಇವಿ ಮಾದರಿಗಾಗಿ 24 ತಿಂಗಳಿಗೆ ರೂ. 6,075 ಮತ್ತು 36 ತಿಂಗಳ ಅವಧಿಗೆ ರೂ.4,399 ಪಾವತಿ ಮಾಡಬೇಕು. ಹಾಗೆಯೇ ಆರ್‌ವಿ300 ಇವಿ ಮಾದರಿಗಾಗಿ 24 ತಿಂಗಳಿಗೆ ರೂ.4,383 ಮತ್ತು 36 ತಿಂಗಳ ಅವಧಿಗೆ ರೂ.3,174 ಪಾವತಿ ಮಾಡಬೇಕು.

ಇಲ್ಲವಾದಲ್ಲಿ ಎಕ್ಸ್‌ಶೋರೂಂ ದರದಂತೆ ದರ ಪಾವತಿ ಮಾಡುವುದಾದರೇ ದೆಹಲಿ ಎಕ್ಸ್‌ಶೋರೂಂ ದರದಂತೆ ಆರ್‌ವಿ400 ಇವಿ ಮಾದರಿಗಾಗಿ ರೂ. 1,18,999 ಮತ್ತು ಆರ್‌ವಿ300 ಇವಿ ಮಾದರಿಗಾಗಿ ರೂ. 94,999 ಪಾವತಿ ಮಾಡಬೇಕಾಗುತ್ತದೆ.
MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಆರ್‌ವಿ300 ಬೈಕಿನಲ್ಲಿ 2.7kW ಲಿಥೀಯಂ-ಅಯಾನ್ ಬ್ಯಾಟರಿ ಪ್ಯಾಕ್ ಜೊತೆಗೆ 1.5kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಪ್ರತಿ ಗಂಟೆಗೆ 65 ಕಿ.ಮಿ ಟಾಪ್ ಸ್ಪೀಡ್‌ನೊಂದಿಗೆ ಸಿಂಗಲ್ ಚಾರ್ಜ್‌ನಲ್ಲಿ ಗರಿಷ್ಠ 180 ಕಿ.ಮಿ ಮೈಲೇಜ್ ಹಿಂದಿರುಗಿಸುತ್ತದೆ.

ಹಾಗೆಯೇ ಆರ್‌ವಿ400 ಬೈಕಿನಲ್ಲಿ 3.24kW ಲಿಥೀಯಂ-ಅಯಾನ್ ಬ್ಯಾಟರಿ ಪ್ಯಾಕ್ ಜೊತೆಗೆ 3kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಪ್ರತಿ ಗಂಟೆಗೆ 85 ಕಿ.ಮಿ ಟಾಪ್ ಸ್ಪೀಡ್‌ನೊಂದಿಗೆ ಸಿಂಗಲ್ ಚಾರ್ಜ್‌ನಲ್ಲಿ 156ಕಿ.ಮಿ ಮೈಲೇಜ್ ನೀಡುತ್ತದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ದೆಹಲಿಯಲ್ಲಿ ಹೊಸ ಇವಿ ಪಾಲಿಸಿ ಜಾರಿ ನಂತರ ಎಲೆಕ್ಟ್ರಿಕ್ ವಾಹನ ಮಾರಾಟವು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಮಾಲಿನ್ಯ ತಡೆಗಾಗಿ ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚಿಸುವ ಸಂಬಂಧ ಎಲೆಕ್ಟ್ರಿಕ್ ವಾಹನಗಳಿಗೆ ಕೇಂದ್ರ ಸರ್ಕಾರದ ಜಿಎಸ್‌ಟಿ ವಿನಾಯ್ತಿ ಜೊತೆಗೆ ದೆಹಲಿ ಸರ್ಕಾರದಿಂದ ಇವಿ ವಾಹನ ನೋಂದಣಿಗೆ ವಿನಾಯ್ತಿ, ರಸ್ತೆ ತೆರಿಗೆಯಿಂದ ವಿನಾಯ್ತಿ ನೀಡಿರುವುದೇ ಇವಿ ವಾಹನಗಳ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.