ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಎಲೆಕ್ಟ್ರಿಕ್ ಬೈಕ್‌ಗಳ ಬೆಲೆ ಹೆಚ್ಚಿಸಿದ ರಿವೋಲ್ಟ್

ಆಕರ್ಷಕ ಬೆಲೆಯೊಂದಿಗೆ ಅತ್ಯುತ್ತಮ ಮೈಲೇಜ್ ಪ್ರೇರಣೆ ಹೊಂದಿರುವ ರಿವೋಲ್ಟ್ ಎಲೆಕ್ಟ್ರಿಕ್ ಬೈಕ್‌‌ಗಳು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇದೀಗ ಹೊಸ ಬೈಕ್‌ಗಳ ಬೆಲೆಯನ್ನು ಹೆಚ್ಚಿಸಲಾಗಿದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಎಲೆಕ್ಟ್ರಿಕ್ ಬೈಕ್‌ಗಳ ಬೆಲೆ ಹೆಚ್ಚಿಸಿದ ರಿವೋಲ್ಟ್

ಪುಣೆ ಮೂಲದ ರಿವೋಲ್ಟ್ ಸಂಸ್ಥೆಯು ಸದ್ಯಕ್ಕೆ ಪುಣೆ ಮತ್ತು ದೆಹಲಿಯಲ್ಲಿ ಮಾತ್ರವೇ ಹೊಸ ಎಲೆಕ್ಟ್ರಿಕ್ ಬೈಕ್‌ಗಳನ್ನು ಮಾರಾಟ ಮಾಡುತ್ತಿದ್ದು, ಮುಂಬರುವ ಕೆಲವೇ ದಿನಗಳಲ್ಲಿ ದೇಶದ ಇತರೆ ಪ್ರಮುಖ ನಗರಗಳಲ್ಲೂ ಮಾರಾಟ ಜಾಲವನ್ನು ವಿಸ್ತರಣೆ ಮಾಡುವ ಇರಾದೆಯಲ್ಲಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಆರ್‌ವಿ300 ಮತ್ತು ಆರ್‌ವಿ400 ಎನ್ನುವ ಎರಡು ಎಲೆಕ್ಟ್ರಿಕ್ ಬೈಕ್‌ಗಳನ್ನು ಮಾರಾಟ ಮಾಡುತ್ತಿರುವ ರಿವೋಲ್ಟ್ ಸಂಸ್ಥೆಯು ಬೇಡಿಕೆಯ ಹೆಚ್ಚಿದಂತೆ ಹೊಸ ಬೈಕ್‌ಗಳ ಬೆಲೆಯಲ್ಲೂ ಏರಿಕೆ ಮಾಡಿದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಎಲೆಕ್ಟ್ರಿಕ್ ಬೈಕ್‌ಗಳ ಬೆಲೆ ಹೆಚ್ಚಿಸಿದ ರಿವೋಲ್ಟ್

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಮಾರಾಟದ ಮೇಲೆ ಹೆಚ್ಚಿನ ಒತ್ತು ನೀಡುತ್ತಿದ್ದು, ಜಿಎಸ್‌ಟಿಯಲ್ಲಿ ಇಳಿಕೆ, ತೆರಿಗೆ ವಿನಾಯ್ತಿ ಮತ್ತು ಸಬ್ಸಡಿ ಯೋಜನೆಗಳಿಂದಾಗಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಎಲೆಕ್ಟ್ರಿಕ್ ಬೈಕ್‌ಗಳ ಬೆಲೆ ಹೆಚ್ಚಿಸಿದ ರಿವೋಲ್ಟ್

ಇದರಲ್ಲಿ ರಿವೋಲ್ಟ್ ಹೊಸ ಎಲೆಕ್ಟ್ರಿಕ್ ಬೈಕ್‌‌ಗಳು ಕೂಡಾ ಪ್ರಮುಖ ಆಕರ್ಷಣೆಯಾಗಿದ್ದು, ಹೊಸ ಬೈಕ್‌ಗಳನ್ನು ತಿಂಗಳು ಇಎಂಐ ಆಧಾರದ ಮೇಲೆ ಬಿಡುಗಡೆ ಮಾಡಿದೆ. ಆರಂಭದಲ್ಲಿ 37 ತಿಂಗಳ ಅವಧಿಗೆ ಆರಂಭಿಕವಾಗಿ ರೂ.2999(ಆರ್‌ವಿ300), ರೂ.3499(ಆರ್‌ವಿ400 ಬೆಸ್) ಮತ್ತು ರೂ.3999(ಆರ್‌ವಿ400 ಪ್ರೀಮಿಯಂ) ದರ ನಿಗದಿ ಮಾಡಲಾಗಿತ್ತು.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಎಲೆಕ್ಟ್ರಿಕ್ ಬೈಕ್‌ಗಳ ಬೆಲೆ ಹೆಚ್ಚಿಸಿದ ರಿವೋಲ್ಟ್

ಆದರೆ ಇದೀಗ ಇಎಂಐ ಮೊತ್ತದಲ್ಲಿ ಹೆಚ್ಚಳ ಮಾಡಲಾಗಿದ್ದು, ಒಟ್ಟು ಇಎಂಐ ದರದಲ್ಲಿ ರೂ.5 ಸಾವಿರ ಹೆಚ್ಚಳವಾಗಿದೆ. ಇದರಲ್ಲಿ ಗ್ರಾಹಕರಿಗೆ ಮತ್ತೊಂದು ಆಯ್ಕೆಯನ್ನು ನೀಡಲಾಗಿದ್ದು, ಇಎಂಐ ಬೇಡ ಎನ್ನುವ ಗ್ರಾಹಕರು ಒಂದೇ ಹಂತದಲ್ಲಿ ದರ ಪಾವತಿಸುವ ಸೌಲಭ್ಯ ಕೂಡಾ ಇದೆ. ಎಕ್ಸ್‌ಶೋರೂಂ ಪ್ರಕಾರ ಆರ್‍‍‍ವಿ 300 ಬೈಕಿಗೆ ರೂ.84,999 ಹಾಗೂ ಆರ್‍‍ವಿ 400 ಪ್ರೀಮಿಯಂ ಬೈಕಿಗೆ ರೂ.98,999 ದರ ನಿಗದಿಪಡಿಸಲಾಗಿದ್ದು, ಹೊಸ ದರದಂತೆ ಇದೀಗ ರೂ.5 ಸಾವಿರ ಹೆಚ್ಚಳವಾಗಿದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಎಲೆಕ್ಟ್ರಿಕ್ ಬೈಕ್‌ಗಳ ಬೆಲೆ ಹೆಚ್ಚಿಸಿದ ರಿವೋಲ್ಟ್

ಇನ್ನು ಆರ್‌ವಿ300 ಬೈಕಿನಲ್ಲಿ 2.7kW ಲಿಥೀಯಂ-ಅಯಾನ್ ಬ್ಯಾಟರಿ ಪ್ಯಾಕ್ ಜೊತೆಗೆ 1.5kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಪ್ರತಿ ಗಂಟೆಗೆ 65 ಕಿ.ಮಿ ಟಾಪ್ ಸ್ಪೀಡ್‌ನೊಂದಿಗೆ ಸಿಂಗಲ್ ಚಾರ್ಜ್‌ನಲ್ಲಿ ಗರಿಷ್ಠ 180 ಕಿ.ಮಿ ಮೈಲೇಜ್ ಹಿಂದಿರುಗಿಸುತ್ತದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಎಲೆಕ್ಟ್ರಿಕ್ ಬೈಕ್‌ಗಳ ಬೆಲೆ ಹೆಚ್ಚಿಸಿದ ರಿವೋಲ್ಟ್

ಹಾಗೆಯೇ ಆರ್‌ವಿ400 ಬೈಕಿನಲ್ಲಿ 3.24kW ಲಿಥೀಯಂ-ಅಯಾನ್ ಬ್ಯಾಟರಿ ಪ್ಯಾಕ್ ಜೊತೆಗೆ 3kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಪ್ರತಿ ಗಂಟೆಗೆ 85 ಕಿ.ಮಿ ಟಾಪ್ ಸ್ಪೀಡ್‌ನೊಂದಿಗೆ ಸಿಂಗಲ್ ಚಾರ್ಜ್‌ನಲ್ಲಿ 156ಕಿ.ಮಿ ಮೈಲೇಜ್ ನೀಡುತ್ತದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಎಲೆಕ್ಟ್ರಿಕ್ ಬೈಕ್‌ಗಳ ಬೆಲೆ ಹೆಚ್ಚಿಸಿದ ರಿವೋಲ್ಟ್

ಬೈಕ್ ತಾಂತ್ರಿಕ ಸೌಲಭ್ಯಗಳು

ಹೊಸ ಬೈಕ್‌ಗಳಲ್ಲಿ ಸಿಟಿ, ಇಕೋ ಮತ್ತು ಸ್ಪೋರ್ಟ್ ರೈಡಿಂಗ್ ಮೋಡ್‌ಗಳನ್ನು ನೀಡಲಾಗಿದ್ದು, ಜೀಯೋ ಫೆನ್ಸಿಂಗ್, ಲೈವ್ ವೆಹಿಕಲ್ ಟ್ರ್ಯಾಕಿಂಗ್, ಟರ್ನ್ ಬೈ ಟರ್ನ್ ನೆವಿಗೆಷನ್, ರಿಯಲ್ ಟೈಮ್ ವೆಹಿಕಲ್ ಮತ್ತು ಬ್ಯಾಟರಿ ನಿರ್ವಹಣಾ ಸೌಲಭ್ಯಗಳು ಕೂಡಾ ರಿವೋಲ್ಟ್ ಹೊಸ ಬೈಕಿನಲ್ಲಿವೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಎಲೆಕ್ಟ್ರಿಕ್ ಬೈಕ್‌ಗಳ ಬೆಲೆ ಹೆಚ್ಚಿಸಿದ ರಿವೋಲ್ಟ್

ಬೈಕಿನ ತಾಂತ್ರಿಕ ಸೌಲಭ್ಯಗಳ ನಿರ್ವಹಣೆಗಾಗಿ ಪ್ರತ್ಯೇಕವಾಗಿ ಆ್ಯಪ್ ಕೂಡಾ ನೀಡಲಾಗಿದ್ದು, ಆ್ಯಪ್ ಮೂಲಕವೇ ಹೊಸ ಬೈಕಿನ ವೇಗ, ಶಬ್ದ, ಬ್ಯಾಟರಿ ಲಭ್ಯತೆ ಸೇರಿದಂತೆ ಸಂಪೂರ್ಣ ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಣ ಮಾಡಬಹುದಾಗಿದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಎಲೆಕ್ಟ್ರಿಕ್ ಬೈಕ್‌ಗಳ ಬೆಲೆ ಹೆಚ್ಚಿಸಿದ ರಿವೋಲ್ಟ್

ಆರ್‌ವಿ300 ಹಾಗೂ ಆರ್‌ವಿ400 ಬೈಕ್‌ಗಳನ್ನು ಖರೀದಿಸುವ ಗ್ರಾಹಕರಿಗೆ ಮತ್ತೊಂದು ವಿಶೇಷ ಸೌಲಭ್ಯ ನೀಡಿರುವ ರಿವೋಲ್ಟ್ ಸಂಸ್ಥೆಯು, ಮನೆಯಲ್ಲಿಯೇ ಚಾರ್ಜಿಂಗ್ ಮಾಡಿಕೊಳ್ಳಲು ಮಾತ್ರವಲ್ಲದೇ, ತೆಗೆದು ಹಾಕಬಹುದಾದ ಬ್ಯಾಟರಿ ಜೊತೆಗೆ ಬ್ಯಾಟರಿ ಸ್ಟೆಷನ್ ಮೂಲಕ ನಿಮ್ಮ ಅಗತ್ಯ ಸ್ಥಳಗಳಿಗೆ ಬ್ಯಾಟರಿ ಸೇವೆಗಳನ್ನು ಕೂಡಾ ಒದಗಿಸುತ್ತಿರುವುದು ಗ್ರಾಹಕರ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

Most Read Articles

Kannada
English summary
Revolt RV400 price increased upto Rs. 5000. Read in Kannada.
Story first published: Saturday, February 29, 2020, 8:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X