ಪುಣೆ ಮತ್ತು ದೆಹಲಿ ನಂತರ ಮುಂಬೈನಲ್ಲೂ ಅಧಿಕೃತ ವಾಹನ ಮಾರಾಟ ಆರಂಭಿಸಿದ ರಿವೋಲ್ಟ್
ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ಉತ್ತಮ ಬೆಳವಣಿಗೆ ಕಂಡುಬರುತ್ತಿದ್ದು, ಹಲವಾರು ಆಟೋ ಕಂಪನಿಗಳು ವಿವಿಧ ಮಾದರಿಯ ಇವಿ ವಾಹನಗಳನ್ನು ಬಿಡುಗಡೆ ಮಾಡುವುದರೊಂದಿಗೆ ಮಾರಾಟ ವ್ಯಾಪ್ತಿಯನ್ನು ವಿಸ್ತರಿಸುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ಬಳಕೆಯು ಹೆಚ್ಚುತ್ತಿದಂತೆ ಹಲವಾರು ಸ್ಟಾರ್ಟ್‌ಅಪ್ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನ ಮಾದರಿಗಳೊಂದಿಗೆ ಗ್ರಾಹಕರ ಆಕರ್ಷಣೆ ಕಾರಣವಾಗಿದ್ದು, ಇವುಗಳಲ್ಲಿ ರಿವೋಲ್ಟ್ ಕೂಡಾ ಒಂದಾಗಿದೆ. ಇವಿ ಬೈಕ್ ಮಾದರಿಗಳನ್ನು ಬಿಡುಗಡೆ ಮಾಡಿದ ಕೆಲವೇ ದಿನಗಳಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಗ್ರಾಹಕರ ಬೇಡಿಕೆ ಹೆಚ್ಚುತ್ತಿದ್ದಂತೆ ಮಾರಾಟ ವ್ಯಾಪ್ತಿಯನ್ನು ಹೆಚ್ಚಿಸುತ್ತಿದೆ.

ಪುಣೆ ಮೂಲದ ರಿವೋಲ್ಟ್ ಕಂಪನಿಯು ಆರಂಭದಲ್ಲಿ ಪುಣೆ ಮತ್ತು ದೆಹಲಿಯಲ್ಲಿ ಮಾತ್ರವೇ ಹೊಸ ಎಲೆಕ್ಟ್ರಿಕ್ ಬೈಕ್‌ಗಳನ್ನು ಮಾರಾಟ ಮಾಡುತ್ತಿತ್ತು. ಇದೀಗ ಹೊಸದಾಗಿ ಮುಂಬೈ ಮಹಾನಗರದಲ್ಲೂ ಇವಿ ಬೈಕ್ ಮಾರಾಟ ಮಳಿಗೆಗಳನ್ನು ತೆರೆಯುವ ಮೂಲಕ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ.

2021ರ ಅಂತ್ಯಕ್ಕೆ ದೇಶದ 20 ಪ್ರಮುಖ ನಗರಗಳಲ್ಲಿ ಹೊಸ ವಾಹನ ಮಾರಾಟ ಮಳಿಗೆ ತೆರೆಯುವ ಯೋಜನೆಯಲ್ಲಿರುವ ರಿವೋಲ್ಟ್ ಕಂಪನಿಯು ಮತ್ತಷ್ಟು ಹೊಸ ಮಾದರಿಯ ಇವಿ ಬೈಕ್ ಮಾದರಿಗಳನ್ನು ಬಿಡುಗಡೆ ಮಾಡುವ ತವಕದಲ್ಲಿದೆ.

ಇದಕ್ಕಾಗಿ ಈಗಾಗಲೇ ವಿವಿಧ ಸುತ್ತಿನ ಮಾರುಕಟ್ಟೆ ಅಧ್ಯಯನ ನಡೆಸಿರುವ ರಿವೋಲ್ಟ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ಮತ್ತಷ್ಟು ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಉತ್ಪನ್ನ ಸಿದ್ದಪಡಿಸುತ್ತಿದ್ದು, ಮುಂಬೈ ನಂತರ ನಮ್ಮ ಬೆಂಗಳೂರಿನಲ್ಲೂ ದೊಡ್ಡ ಮಟ್ಟದ ಮಾರಾಟ ಮಳಿಗೆ ಆರಂಭಿಸುವ ಯೋಜನೆಯಲ್ಲಿದೆ.

ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ರಿವೋಲ್ಟ್ ಕಂಪನಿಯು ಸದ್ಯ ಆರ್‌ವಿ300 ಮತ್ತು ಆರ್‌ವಿ400 ಎನ್ನುವ ಎರಡು ಎಲೆಕ್ಟ್ರಿಕ್ ಬೈಕ್‌ಗಳನ್ನು ಮಾರಾಟ ಮಾಡುತ್ತಿದ್ದು, ಅತ್ಯುತ್ತಮ ಮೈಲೇಜ್ ಪ್ರೇರಣೆಯೊಂದಿಗೆ ಬೆಲೆಯಲ್ಲೂ ಆಕರ್ಷಕವಾಗಿವೆ.

ಹೊಸ ಬೈಕ್‌ಗಳನ್ನು ಸಬ್‌ಸ್ಕೈಬ್ ಆಧಾರದ ಮೇಲೆ ಬಿಡುಗಡೆ ಮಾಡಿದ್ದು, 37 ತಿಂಗಳ ಅವಧಿಗೆ ಪ್ರತಿ ತಿಂಗಳು ಆರಂಭಿಕವಾಗಿ ರೂ.2999(ಆರ್‌ವಿ300), ರೂ.3499(ಆರ್‌ವಿ400 ಬೆಸ್) ಮತ್ತು ರೂ.3999(ಆರ್‌ವಿ400 ಪ್ರೀಮಿಯಂ) ದರ ನಿಗದಿ ಮಾಡಲಾಗಿದೆ.

ಸಬ್‌ಸ್ಕೈಬ್ ಆಯ್ಕೆ ಬೇಡ ಎನ್ನುವ ಗ್ರಾಹಕರು ಎಕ್ಸ್‌ಶೋರೂಂ ದರದಲ್ಲೂ ಬೆಲೆ ಪಾವತಿ ಮಾಡಬಹುದಾಗಿದ್ದು, ಹೊಸ ಇವಿ ಬೈಕ್ ಬೆಲೆಯು ಆರ್‍ವಿ 300 ಮಾದರಿಗೆ ರೂ.84,999 ಹಾಗೂ ಆರ್‍ವಿ 400 ಪ್ರೀಮಿಯಂ ಬೈಕ್ ಮಾದರಿಗೆ ರೂ.98,999 ದರ ನಿಗದಿಪಡಿಸಲಾಗಿದೆ.

ಆರ್ವಿ300 ಬೈಕಿನಲ್ಲಿ 2.7kW ಲಿಥೀಯಂ-ಅಯಾನ್ ಬ್ಯಾಟರಿ ಪ್ಯಾಕ್ ಜೊತೆಗೆ 1.5kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಪ್ರತಿ ಗಂಟೆಗೆ 65 ಕಿ.ಮಿ ಟಾಪ್ ಸ್ಪೀಡ್‌ನೊಂದಿಗೆ ಸಿಂಗಲ್ ಚಾರ್ಜ್‌ನಲ್ಲಿ ಗರಿಷ್ಠ 180 ಕಿ.ಮಿ ಮೈಲೇಜ್ ಹಿಂದಿರುಗಿಸುತ್ತದೆ.
MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಹಾಗೆಯೇ ಆರ್‌ವಿ400 ಬೈಕಿನಲ್ಲಿ 3.24kW ಲಿಥೀಯಂ-ಅಯಾನ್ ಬ್ಯಾಟರಿ ಪ್ಯಾಕ್ ಜೊತೆಗೆ 3kW ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಪ್ರತಿ ಗಂಟೆಗೆ 85 ಕಿ.ಮಿ ಟಾಪ್ ಸ್ಪೀಡ್‌ನೊಂದಿಗೆ ಸಿಂಗಲ್ ಚಾರ್ಜ್‌ನಲ್ಲಿ 156ಕಿ.ಮಿ ಮೈಲೇಜ್ ನೀಡುತ್ತದೆ.

ಹೊಸ ಇವಿ ಬೈಕ್‌ಗಳಲ್ಲಿ ಸಿಟಿ, ಇಕೋ ಮತ್ತು ಸ್ಪೋರ್ಟ್ ರೈಡಿಂಗ್ ಮೋಡ್‌ಗಳನ್ನು ನೀಡಲಾಗಿದ್ದು, ಜೀಯೋ ಫೆನ್ಸಿಂಗ್, ಲೈವ್ ವೆಹಿಕಲ್ ಟ್ರ್ಯಾಕಿಂಗ್, ಟರ್ನ್ ಬೈ ಟರ್ನ್ ನೆವಿಗೆಷನ್, ರಿಯಲ್ ಟೈಮ್ ವೆಹಿಕಲ್ ಮತ್ತು ಬ್ಯಾಟರಿ ನಿರ್ವಹಣಾ ಸೌಲಭ್ಯಗಳು ಕೂಡಾ ರಿವೋಲ್ಟ್ ಹೊಸ ಬೈಕಿನಲ್ಲಿವೆ.
MOST READ: ದ್ವಿಚಕ್ರ ವಾಹನಗಳ ಖರೀದಿ ಮೇಲೆ ಹೊಸ ಲೋನ್ ಆಫರ್ ಘೋಷಿಸಿದ ಹೋಂಡಾ

ಬೈಕಿನ ತಾಂತ್ರಿಕ ಸೌಲಭ್ಯಗಳ ನಿರ್ವಹಣೆಗಾಗಿ ಪ್ರತ್ಯೇಕವಾಗಿ ಆ್ಯಪ್ ಕೂಡಾ ನೀಡಲಾಗಿದ್ದು, ಆ್ಯಪ್ ಮೂಲಕವೇ ಹೊಸ ಬೈಕಿನ ವೇಗ, ಶಬ್ದ, ಬ್ಯಾಟರಿ ಲಭ್ಯತೆ ಸೇರಿದಂತೆ ಸಂಪೂರ್ಣ ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಣ ಮಾಡಬಹುದಾಗಿದೆ.


Click it and Unblock the Notifications








