ಹೊಸ ಫೀಚರ್ ಹೊಂದಲಿದೆ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕುಗಳು
ಚೆನ್ನೈ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ತನ್ನ ಜನಪ್ರಿಯ ಮಾದರಿಗಳಾದ ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕುಗಳನ್ನು ಬಿಎಸ್-6 ಆವೃತ್ತಿಯಲ್ಲಿ ಈ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಿತ್ತು. ರಾಯಲ್ ಎನ್‍ಫೀಲ್ಡ್ ಕಂಪನಿಯ ಈ ಟ್ವಿನ್ ಬೈಕುಗಳಿಗೆ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಹೊಂದಿದೆ.

ರಾಯಲ್ ಎನ್‍ಫೀಲ್ಡ್ ಕಂಪನಿಯು ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕುಗಳನ್ನು 2018ರ ನವೆಂಬರ್ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿದ್ದರು. ಈ ಎರಡೂ ಬೈಕುಗಳು ಭಾರತೀಯ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಿಸಿಯಾಗಿದೆ. ಇದೀಗ ಈ ರಾಯಲ್ ಎನ್‍ಫೀಲ್ಡ್ ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕುಗಳು ಹೊಸ ಫೀಚರ್ ಅನ್ನು ಪಡೆದುಕೊಳ್ಳಲಿದೆ.

ಈ ಟ್ವಿನ್ ಬೈಕುಗಳಲ್ಲಿ ಟ್ರಿಪ್ಪರ್ ಎಂಬ ಪ್ರತ್ಯೇಕ ಪಾಡ್ ಮೂಲಕ ಬ್ಲೂಟೂತ್ ಮತ್ತು ನ್ಯಾವಿಗೇಷನ್ ಅಸಿಸ್ಟ್ ಫೀಚರ್ ಅನ್ನು ಪಡೆದುಕೊಳ್ಳಲಿದೆ. ರಾಯಲ್ ಎನ್‍ಫೀಲ್ಡ್ ಕಂಪನಿಯು ಈ ಪೀಚರ್ ಅನ್ನು ಮೊದಲ ಬಾರಿಗೆ ನಿನ್ನೆ ಬಿಡುಗಡೆಗೊಂಡ ಮಿಟಿಯೊರ್ 350 ಬೈಕಿನಲ್ಲಿ ನೀಡಲಾಗಿದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಜಾಜ್ ಪಲ್ಸರ್ ಎನ್ಎಸ್ ಬೈಕುಗಳು

ಈ ಟ್ವಿನ್ ಬೈಕುಗಳ ಇಂಜಿನ್ ಸಾಮರ್ಥ್ಯ ಮತ್ತು ಹಲವಾರು ವೈಶಿಷ್ಟ್ಯಗಳಿಂದ ಕೂಡಿರುವ ಕಾರಣ ದೇಶಿಯ ಮಾರುಕಟ್ಟೆ ಗ್ರಾಹಕರು ಈ ಬೈಕ್‍ಗೆ ಫಿದಾ ಆದರು. ಎರಡೂ ಬೈಕ್‍ಗಳು ಪ್ಯಾರೆಲೆಲ್ ಟ್ವಿನ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿವೆ.

ಇಂಟರ್‍ಸೆಪ್ಟೆರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಎಂಬ ಎರಡು ಟ್ವಿನ್ ಬೈಕ್‍ಗಳು 649 ಸಿಸಿ ಏರ್/ಆಯಿಲ್ -ಕೂಲ್ಡ್ ಪ್ಯಾರೆಲೆಲ್-ಟ್ವಿನ್ ಎಂಜಿನ್ ಅನ್ನು ಹೊಂದಿವೆ. ಈ ಎಂಜಿನ್ 47 ಬಿಹೆಚ್‍ಪಿ ಪವರ್ ಮತ್ತು 52 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಎಂಜಿನ್‍ನೊಂದಿಗೆ ಸ್ಟ್ಯಾಂಡರ್ಡ್ ಅಸಿಸ್ಟ್ ಕ್ಲಚ್‍ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಬೈಕ್ ಸವಾರರ ಸುರಕ್ಷತೆಗಾಗಿ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍ಗಳಲ್ಲಿ ಮೂಂಭಾಗದಲ್ಲಿ 320ಎಂಎಂ ಮತ್ತು ಹಿಂಭಾಗದಲ್ಲಿ 240ಎಂಎಂನ ಡಿಸ್ಕ್ ಬ್ರೇಕ್‍ಗಳನ್ನು ಅಳವಡಿಸಲಾಗಿದ್ದು, ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿವೆ.

ಈ ಎರಡೂ ಬೈಕ್‍ಗಳು ಆಧುನಿಕ ಕ್ಲಾಸಿಕ್ ಲುಕ್ ಅನ್ನು ಹೊಂದಿವೆ. ರಡು ಬೈಕ್‍ಗಳು 41ಎಂಎಂ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ ಮತ್ತು ಹಿಂಭಾಗದಲ್ಲಿ 110ಎಂಎಂ ಟ್ವಿನ್ ಕಾಯಿಲ್-ಕವರ್, 650 ಟ್ವಿನ್ ಬೈಕ್‍ಗಳು 18 ಇಂಚಿನ 360 ಸ್ಪೋಕ್ ಅಲ್ಯುಮಿನಿಯಂ ಅಲಾಯ್ ವ್ಹೀಲ್‍ಗಳನ್ನು ಹೊಂದಿವೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಕಳೆದ ಬಾರಿ ರಾಯಲ್ ಎನ್‍ಫೀಲ್ಡ್ 650 ಸಿಸಿ ಬೈಕ್‍ಗಳಲ್ಲಿ ಸಣ್ಣ ಬದಲಾವಣೆಗಳನ್ನು ಮಾಡಲಾಗಿತ್ತು. ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಟಲ್ ಜಿಟಿ 650 ಬೈಕ್‍ಗಳ ಹೆಡ್‍ಲೈಟ್‍ಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿತ್ತು.

ಕಾಂಟಿನೆಂಟಲ್ ಜಿಟಿ 650 ಕೆಫೆ ರೇಸರ್ ವಿನ್ಯಾಸವನ್ನು ಆಧರಿಸಿದರೆ ಇನ್ನು ಇಂಟರ್‍ಸೆಪ್ಟರ್ 650 ಸ್ಕ್ರ್ಯಾಂಬ್ಲರ್ ಶೈಲಿಯ ವಿನ್ಯಾಸವನ್ನು ಆಧರಿಸಿದೆ. ಶೀಘ್ರದಲ್ಲೇ ರಾಯಲ್ ಎನ್‍ಫೀಲ್ಡ್ ಕಂಪನಿಯು ಟ್ವಿನ್ ಬೈಕುಗಳಿಗೆ ಹೊಸ ಟ್ರಿಪ್ಪರ್ ನ್ಯಾವಿಗೇಷನ್ ಅಸಿಸ್ಟ್ ಫೀಚರ್ ಅನ್ನು ನೀಡಬಹುದು ಎಂದು ನಿರೀಕ್ಷಿಸುತ್ತೇವೆ


Click it and Unblock the Notifications