Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜುಲೈ ಅವಧಿಯ ಮಾರಾಟದಲ್ಲಿ ಕುಸಿತ ಕಂಡ ಆರ್‌ಇ 650 ಟ್ವಿನ್ ಬೈಕ್‌ಗಳು
ಲಾಕ್‌ಡೌನ್‌ನಿಂದ ಸಂಪೂರ್ಣವಾಗಿ ಕುಸಿತ ಕಂಡಿದ್ದ ಹೊಸ ವಾಹನಗಳ ಮಾರಾಟವು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ತುಸು ಚೇತರಿಸಿಕೊಂಡಿದ್ದರೂ ಮೊದಲ ಸ್ಥಿತಿಯತ್ತ ಮರಳಲು ಇನ್ನು ಕೆಲ ತಿಂಗಳ ಕಾಲ ತೆಗೆದುಕೊಳ್ಳುವ ಸಾಧ್ಯತೆಗಳಿವೆ.

ರಾಯಲ್ ಎನ್‌ಫೀಲ್ಡ್ ಕೂಡಾ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಭಾರೀ ಪ್ರಮಾಣದ ಕುಸಿತಕಂಡ ನಂತರ ಇದೀಗ ಚೇತರಿಕೆ ಹಾದಿಯಲ್ಲಿದ್ದರೂ ಜುಲೈ ಅವಧಿಯಲ್ಲಿ ಶೇ.22.9 ರಷ್ಟು ಮಾರಾಟ ಕುಸಿತ ಕಂಡಿದೆ. ಜುಲೈ ಅವಧಿಯಲ್ಲಿ ಒಟ್ಟು 37,925 ಯುನಿಟ್ ಮಾರಾಟ ಮಾಡುವ ಮೂಲಕ ಬೈಕ್ ಮಾರಾಟದಲ್ಲಿ ಆರನೇ ಸ್ಥಾನಕ್ಕೆ ಕುಸಿದಿದ್ದು, ಕ್ಲಾಸಿಕ್ 350 ಮಾದರಿಯನ್ನು ಹೊರತುಪಡಿಸಿ ಇನ್ನುಳಿದ ಬೈಕ್ ಮಾರಾಟವು ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿವೆ.

ಅದರಲ್ಲೂ 650 ಟ್ವಿನ್ ಬೈಕ್ ಮಾದರಿಗಳಾದ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್ ಮಾದರಿಗಳ ಮಾರಾಟವು ತೀವ್ರವಾಗಿ ಕುಸಿತ ಕಂಡಿದ್ದು, ಜುಲೈ ಅವಧಿಯಲ್ಲಿ ಕೇವಲ 1,058 ಯುನಿಟ್ ಮಾತ್ರವೇ ಮಾರಾಟಗೊಂಡಿವೆ.

ಇನ್ನು ಕರೋನಾ ವೈರಸ್ ಪರಿಣಾಮ ಲಾಕ್‌ಡೌನ್ ವಿಧಿಸಿದ್ದರಿಂದ ಆಟೋ ಉದ್ಯಮವು ಭಾರೀ ಪರಿಣಾಮ ನಷ್ಟ ಅನುಭವಿಸಿದ್ದು, ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಹೊಸ ವಾಹನಗಳ ಮಾರಾಟವು ನಿಧಾನಗತಿಯಲ್ಲಿ ಚೇತರಿಕೆ ಕಾಣುತ್ತಿರುವುದು ಆಟೋ ಕಂಪನಿಗಳಿಗೆ ಸಮಾಧಾನ ತಂದಿದೆ ಎನ್ನಬಹುದು.

ಮುಂಬರುವ ದಿನಗಳಲ್ಲಿ ಹೊಸ ವಾಹನ ಮಾರಾಟ ಪ್ರಮಾಣವು ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿದ್ದು, ಕರೋನಾ ವೈರಸ್ ಪರಿಣಾಮ ಬಹುತೇಕ ಗ್ರಾಹಕರು ಸಾರ್ವಜನಿಕ ಸಾರಿಗೆ ಬಳಕೆಯಿಂದ ಹಿಂದೆ ಸರಿದು ಸ್ವಂತ ವಾಹನ ಬಳಕೆಗೆ ಆದ್ಯತೆ ನೀಡುತ್ತಿದ್ದಾರೆ.
MOST READ: ಕರೋನಾ ಸಂಕಷ್ಟ: ದ್ವಿಚಕ್ರ ವಾಹನ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ ನೀಡಲಿದೆ ಕೇಂದ್ರ ಸರ್ಕಾರ?

ಲಾಕ್‌ಡೌನ್ ಪರಿಣಾಮ ಆರ್ಥಿಕ ಸಂಕಷ್ಟ ಎದುರಾಗಿದ್ದರೂ ವೈರಸ್ ಭೀತಿಯಿಂದಾಗಿ ಸ್ವಂತ ವಾಹನಗಳ ಬಳಕೆ ಆದ್ಯತೆ ನೀಡಲಾಗುತ್ತಿದ್ದು, ಕಾರು ಮಾರಾಟ ಪ್ರಮಾಣಕ್ಕಿಂತಲೂ ಹೆಚ್ಚು ದ್ವಿಚಕ್ರ ವಾಹನಗಳ ಬೇಡಿಕೆಯು ದ್ವಿಗುಣಗೊಳ್ಳುವ ಸಾಧ್ಯತೆ ಹೆಚ್ಚಿದೆ.

ಲಾಕ್‌ಡೌನ್ ಸಡಿಲಿಕೆಯ ನಂತರ ಬಹುತೇಕ ವಾಹನ ಮಾದರಿಗಳ ಬೇಡಿಕೆ ಪ್ರಮಾಣವು ನಿಧಾನವಾಗಿ ಏರಿಕೆ ಕಾಣುತ್ತಿದ್ದು, ಮುಂಬರುವ ದಿನಗಳಲ್ಲಿ ದ್ವಿಚಕ್ರ ವಾಹನಗಳ ಮಾರಾಟ ಪ್ರಮಾಣವು ಗಣನೀಯವಾಗಿ ಹೆಚ್ಚಳವಾಗುವ ನೀರಿಕ್ಷೆಯಿದೆ.

ಈ ನಿಟ್ಟಿನಲ್ಲಿ ಮಾರುಕಟ್ಟೆ ಅಧ್ಯಯನ ನಡೆಸಿರುವ ರಾಯಲ್ ಎನ್‌ಫೀಲ್ಡ್ ಮಾತೃಸಂಸ್ಥೆಯಾದ ಐರಿಷ್ ಮೋಟಾರ್ಸ್ ಕಂಪನಿಯು ದ್ವಿಚಕ್ರ ವಾಹನ ಮಾರಾಟ ವ್ಯಾಪ್ತಿ ಹೆಚ್ಚಿಸಲು ಮುಂದಾಗಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಮಾರಾಟ ಮಳಿಗೆಗಳನ್ನು ತೆರೆಯಲು ಉತ್ಸುಕವಾಗಿದೆ.
MOST READ: ಬಜಾಜ್ ಅವೆಂಜರ್‌ಗೆ ಪೈಪೋಟಿಯಾಗಿ ಟಿವಿಎಸ್ ರೊನಿನ್ ಬಿಡುಗಡೆಗೆ ಸಿದ್ದತೆ

ಜೊತೆಗೆ ಭಾರತದಿಂದಲೇ ವಿದೇಶಿ ಮಾರುಕಟ್ಟೆಗಳಿಗೂ ರಫ್ತು ಪ್ರಮಾಣವನ್ನು ಹೆಚ್ಚಿಸುವ ಕುರಿತ ಯೋಜನೆ ರೂಪಿಸಿರುವ ಐರಿಷ್ ಮೋಟಾರ್ಸ್ ಕಂಪನಿಯು ರಾಯಲ್ ಎನ್‌ಫೀಲ್ಡ್ ಹೊಸ ಬೈಕ್ ಉತ್ಪನ್ನಗಳ ಮತ್ತಷ್ಟು ಹೂಡಿಕೆ ಮಾಡಲು ಸಿದ್ದವಾಗಿದೆ.