ಹೊಸ ಬಣ್ಣಗಳ ಆಯ್ಕೆಯನ್ನು ಹೊಂದಿದ ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350

ರಾಯಲ್ ಎನ್‍‍ಫೀಲ್ಡ್ ಕಂಪನಿಯು ತನ್ನ ಜನಪ್ರಿಯ ಹೊಸ ಬುಲೆಟ್ 350 ಬೈಕ್ ಅನ್ನು ಭಾರತದಲ್ಲಿ ಕೆಲವೇ ತಿಂಗಳ ಹಿಂದೆ ಬಿಡುಗಡೆಗೊಳಿಸಿದ್ದರು. ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350 ಬ್ರ್ಯಾಂಡ್ ನ ಅತ್ಯಂತ ಹಳೆಯ ಮಾದರಿಯಾಗಿದೆ.

ಹೊಸ ಬಣ್ಣಗಳ ಆಯ್ಕೆಯನ್ನು ಹೊಂದಿದ ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350

ಬುಲೆಟ್ 350 ಅತ್ಯಂತ ದೀರ್ಘಕಾಲದಿಂದ ಮಾರಾಟದಲ್ಲಿರುವ ಜನಪ್ರಿಯ ಮಾದರಿಯಾಗಿದೆ. ಇದು ಪ್ರಸ್ತುತ ಬ್ರಾಂಡ್‌ನ ಪೋರ್ಟ್ಫೋಲಿಯೊದಲ್ಲಿ ಮಾರಾಟದಲ್ಲಿದೆ. ಈ ಬುಲೆಟ್ ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಇದೀಗ ಕಂಪನಿಯು ಒಟ್ಟು ಏಳು ಬಣ್ಣಗಳ ಆಯ್ಕೆಗಳೊಂದಿಗೆ ಎರಡು ರೂಪಾಂತರಗಳಲ್ಲಿ ಹೊಸ ಬುಲೆಟ್ 350 ಬೈಕನ್ನು ವಿತರಸಲಾಗುತ್ತಿದೆ.

ಹೊಸ ಬಣ್ಣಗಳ ಆಯ್ಕೆಯನ್ನು ಹೊಂದಿದ ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350

ಬಿಎಸ್-6 ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬೈಕನ್ನು ಕಿಕ್‌ಸ್ಟಾರ್ಟ್ ಮತ್ತು ಎಲೆಕ್ಟ್ರಿಕ್ ಸ್ಟಾರ್ಟ್ ಎರಡೂ ರೂಪಾಂತರಗಳಲ್ಲಿ ಲಭ್ಯವಿದೆ. ಮೊದಲನೆಯದು ನಾಲ್ಕು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದ್ದರೆ, ಎರಡನೆಯದನ್ನು ಮೂರು ವಿಭಿನ್ನ ಬಣ್ಣಗಳಲ್ಲಿ ಲಭ್ಯವಿದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಬಣ್ಣಗಳ ಆಯ್ಕೆಯನ್ನು ಹೊಂದಿದ ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350

ಈ ಹೊಸ ಬೈಕನ್ನು ರೂ.1.21 ಲಕ್ಷ ಬೆಲೆಯಲ್ಲಿ ಪರಿಚಯಿಸಿದ್ದರು. ಆದರೆ ಇತ್ತೀಚೆಗೆ ಈ ಬೈಕಿನ ಎಲ್ಲಾ ರೂಪಾಂತರಗಳಿಗೆ ರೂ.2,755 ಗಳವರೆಗೆ ಬೆಲೆಯನ್ನು ಹೆಚ್ಚಿಸಲಾಗಿದೆ. ಹೊಸ ಬುಲೆಟ್ 350 ಬೈಕನ್ನು ಬಿಎಸ್-6 ಮಾಲಿನ್ಯ ನಿಯಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಅದನ್ನು ಹೊರತುಪಡಿಸಿ ಇತರೆ ಯಾವುದೇ ಪ್ರಮುಖ ಬದಲಾವಣೆಗನ್ನು ಮಾಡಲಾಗಿಲ್ಲ.

ಹೊಸ ಬಣ್ಣಗಳ ಆಯ್ಕೆಯನ್ನು ಹೊಂದಿದ ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350

ಈ ಹೊಸ ಬೈಕಿನಲ್ಲಿ ರಾಯಲ್ ಎನ್‍‍ಫೀಲ್ಡ್ ಕ್ಲಾಸಿಕ್ ಬೈಕಿನಲ್ಲಿರುವ ಮಾದರಿಯ ಎಂಜಿನ್ ಅನ್ನು ಅಳವಡಿಸಲಿದೆ. ಕ್ಲಾಸಿಕ್ 350 ಬೈಕಿನಲ್ಲಿರುವ 346 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್‍ನಂತೆಯೇ ಎಲೆಕ್ಟ್ರಾನಿಕ್ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅನ್ನು ಈ ಹೊಸ ಬೈಕಿನಲ್ಲಿ ಅಳವಡಿಸಿದೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಹೊಸ ಬಣ್ಣಗಳ ಆಯ್ಕೆಯನ್ನು ಹೊಂದಿದ ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350

ಅದರೆ ಬುಲೆಟ್ ಬೈಕಿನಲ್ಲಿರುವ ಎಂಜಿನ್ 19.3 ಬಿ‍‍ಹೆಚ್‍‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಕ್ಲಾಸಿಕ್ 350 ಬೈಕಿನ ಎಂಜಿನ್‍‍ಗೆ ಹೋಲಿಸಿದರೆ 0.71 ಬಿ‍‍ಹೆಚ್‍‍ಪಿ ಪವರ್ ಕಡೆಮೆ ಉತ್ಪಾದಿಸುತ್ತದೆ.

ಹೊಸ ಬಣ್ಣಗಳ ಆಯ್ಕೆಯನ್ನು ಹೊಂದಿದ ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350

ಟಾರ್ಕ್ ಅಂಕಿ ಅಂಶದಲ್ಲಿ ಯಾವುದೇ ಬದಲಾವಣೆಗಳು ಇಲ್ಲ, ಅದೇ 28 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಈ ಎಂಜಿನ್‍‍ನೊಂದಿಗೆ 5 ಸ್ಪೀಡ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

MOST READ: ಬಿಡುಗಡೆಯಾಯ್ತು ಬಹುನೀರಿಕ್ಷಿತ ಹೊಸ ಯಮಹಾ ಬೈಕುಗಳ ಟೀಸರ್

ಹೊಸ ಬಣ್ಣಗಳ ಆಯ್ಕೆಯನ್ನು ಹೊಂದಿದ ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350

ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350 ಬೈಕಿನಲ್ಲಿ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ ಮತ್ತು ಟ್ವಿನ್ ರೇರ್ ಶಾಕ್ ಅಬ್ಸಾರ್ಬರ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಸುರಕ್ಷತೆಗಾಗಿ 280 ಎಂಎಂ ಫ್ರಂಟ್ ಡಿಸ್ಕ್ ಮತ್ತು 153 ಎಂಎಂ ಡ್ರಮ್ ಬೈಕ್ ಅನ್ನು ಹೊಂದಿದೆ. ಸಿಂಗಲ್ ಚಾನೆಲ್ ಎಬಿಎಸ್ ಸ್ಟ್ಯಾಡಂರ್ಡ್ ಆಗಿ ಅಳವಡಿಸಿದೆ.

ಹೊಸ ಬಣ್ಣಗಳ ಆಯ್ಕೆಯನ್ನು ಹೊಂದಿದ ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350

ಹೊಸ ರಾಯಲ್ ಎನ್‍‍ಫೀಲ್ಡ್ ಬುಲೆಟ್ 350 ಬೈಕಿನ ಬೆಲೆಯನ್ನು ಇತ್ತೀಚೆಗೆ ತುಸು ಹೆಚ್ಚಿಸಿದ್ದರು. ರಾಯಲ್ ಎನ್‍‍ಫೀಲ್ಡ್ ಕಂಪನಿಯ ಸರಣಿಯಲ್ಲಿ ಬುಲೆಟ್ 350 ದೀರ್ಘಕಾಲದಿಂದ ಮಾರಾಟದಲ್ಲಿದೆ ಮತ್ತು ಜನಪ್ರಿಯ ಬೈಕುಗಳಲ್ಲಿ ಒಂದಾಗಿದೆ.

Most Read Articles

Kannada
English summary
Royal Enfield Bullet 350 BS6 available in 7 colour options. Read In Kannada.
Story first published: Thursday, May 28, 2020, 16:57 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X