ಬಿಡುಗಡೆಯಾಗಲಿದೆ ಹೊಸ ರಾಯಲ್ ಎನ್‍ಫೀಲ್ಡ್ ಹಿಮಾಲಯನ್ 250 ಬೈಕ್

ರಾಯಲ್ ಎನ್‌ಫೀಲ್ಡ್ ಕಂಪನಿಯು ಮುಂದಿನ ವರ್ಷದಲ್ಲಿ ಹೊಸ ಅಡ್ವೆಂಚರ್ ಬೈಕ್ ಬಿಡುಗಡೆಗೊಸಲಿದೆ. ಕಂಪನಿಯು ಈ ಮಾಹಿತಿಯನ್ನು ಅಧಿಕೃತವಾಗಿ ಬಹಿರಂಗಪಡಿಸಲಿಲ್ಲ. ಇತ್ತೀಚೆಗೆ ಭಾರತೀಯ ಮಾರುಕಟ್ಟೆಯಲ್ಲಿ ಅಡ್ವೆಂಚರ್ ಬೈಕುಗಳ ಬೇಡಿಕೆಯು ಹೆಚ್ಚಾಗುತ್ತಿದೆ.

ಬಿಡುಗಡೆಯಾಗಲಿದೆ ಹೊಸ ರಾಯಲ್ ಎನ್‍ಫೀಲ್ಡ್ ಹಿಮಾಲಯನ್ 250 ಬೈಕ್

ಭಾರತೀಯ ಮಾರುಕಟ್ಟೆಯಲ್ಲಿ ಡ್ಯುಯಲ್-ಪರ್ಪಸ್ ಅಡ್ವೆಂಚರ್ ಟೂರರ್ ಬೈಕುಗಳು ಉತ್ತಮವಾಗಿ ಮಾರಾಟವಾಗುತ್ತಿವೆ. ಇದರಿಂದ ರಾಯಲ್ ಎನ್‍ಫೀಲ್ಡ್ ಕಂಪನಿಯು ತನ ಜನಪ್ರಿಯ ಹಿಮಾಲಯನ್ ಬೈಕನ್ನು 250 ಸಿಸಿ ವಿಭಾಗದಲ್ಲಿ ಬಿಡುಗಡೆಗೊಳಿಸಲಿದೆ. ಮುಂದಿನ ವರ್ಷದಲ್ಲಿ ಈ ಹೊಸ ಹಿಮಾಲಯನ್ ಬೈಕನ್ನು ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಆದರೆ ರಾಯಲ್ ಎನ್‍ಫೀಲ್ಡ್ ಕಂಪನಿಯು ಅಧಿಕೃತವಾಗಿ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲಿಲ್ಲ.

ಬಿಡುಗಡೆಯಾಗಲಿದೆ ಹೊಸ ರಾಯಲ್ ಎನ್‍ಫೀಲ್ಡ್ ಹಿಮಾಲಯನ್ 250 ಬೈಕ್

ಇದರೊಂದಿಗೆ ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಜನಪ್ರಿಯ 2-3 ಮಾದರಿಗಳಿಗೆ ಸ್ಮಾರ್ಟ್ ಫೋನ್ ಕನೆಕ್ಟಿವಿಟಿ ಹೊಂದಿರುವ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಿದೆ. ಇದರ ಮೂಲಕ ಸವಾರರಿಗೆ ರೈಡಿಂಗ್ ಡೇಟಾವನ್ನು ಪಡೆಯಬಹುದು.

MOST READ: ಬಿಡುಗಡೆಯಾಯ್ತು ಬಹುನೀರಿಕ್ಷಿತ ಹೊಸ ಯಮಹಾ ಬೈಕುಗಳ ಟೀಸರ್

ಬಿಡುಗಡೆಯಾಗಲಿದೆ ಹೊಸ ರಾಯಲ್ ಎನ್‍ಫೀಲ್ಡ್ ಹಿಮಾಲಯನ್ 250 ಬೈಕ್

ಇನ್ನು ಕೆಲವು ಮಾದರಿಗಳಲ್ಲಿ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಫೀಚರ್ ಅನ್ನು ಅಳವಡಿಬಹುದು. ರಾಯಲ್ ಎನ್‍ಫೀಲ್ಡ್ ಕಂಪನಿಯು ಮುಂದಿನ ವರ್ಷಗಳಲ್ಲಿ ಹೊಸ 14 ಮಾದರಿಗಳನ್ನು ಬಿಡುಗಡೆಗೊಳಿಸಲಿದೆ. ಇದರಲ್ಲಿ ಹೊಸ ಹಿಮಾಲಯನ್ 250 ಕೂಡ ಒಂದಾಗಿದೆ.

ಬಿಡುಗಡೆಯಾಗಲಿದೆ ಹೊಸ ರಾಯಲ್ ಎನ್‍ಫೀಲ್ಡ್ ಹಿಮಾಲಯನ್ 250 ಬೈಕ್

ರಾಯಲ್ ಎನ್‍ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಮಾದರಿಗಳನ್ನು ಪರಿಚಯಿಸುವುದು ಖಚಿತವಗಿದೆ. ಇದಕ್ಕಾಗಿ ರಾಯಲ್ ಎನ್‍ಫೀಲ್ಡ್ ಕಂಪನಿಯು ಹೆಚ್ಚಿನ ಹೂಡಿಕೆಯನ್ನು ಮಾಡಲಿದೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಬಿಡುಗಡೆಯಾಗಲಿದೆ ಹೊಸ ರಾಯಲ್ ಎನ್‍ಫೀಲ್ಡ್ ಹಿಮಾಲಯನ್ 250 ಬೈಕ್

ಇದರ ನಡುವೆ ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಹೊಸ ಮೆಟಿಯೋರ್ 350 ಫೈರ್‌ಬಾಲ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.65 ಲಕ್ಷಗಳಾಗಿದೆ.

ಬಿಡುಗಡೆಯಾಗಲಿದೆ ಹೊಸ ರಾಯಲ್ ಎನ್‍ಫೀಲ್ಡ್ ಹಿಮಾಲಯನ್ 250 ಬೈಕ್

ಭಾರತೀಯ ಮಾರುಕಟ್ಟೆಯಲ್ಲಿ ಬಿಎಸ್-6 ಹಿಮಾಲಯನ್ ಬೈಕುಗಳು ದಾಖಲೆಯ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬಿಎಸ್-6 ಹಿಮಾಲಯನ್ ಬೈಕಿಗೆ ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.87 ದಿಂದ ರೂ.1.91ಲಕ್ಷಗಳಾಗಿದೆ.

MOST READ: ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ಸ್ಪೋರ್ಟ್ ಬೈಕ್

ಬಿಡುಗಡೆಯಾಗಲಿದೆ ಹೊಸ ರಾಯಲ್ ಎನ್‍ಫೀಲ್ಡ್ ಹಿಮಾಲಯನ್ 250 ಬೈಕ್

ಮಾರುಕಟ್ಟೆಯಲ್ಲಿರುವಹಿಮಾಲಯನ್ ಬಿಎಸ್-6 ಮಾದರಿಯಲ್ಲಿ 411 ಸಿಸಿಯ ಸಿಂಗಲ್ ಸಿಲಿಂಡರ್ ಏರ್ ಕೂಲ್ಡ್ ಎಂಜಿನ್ ಅಳವಡಿಸಿದೆ. ಈ ಎಂಜಿನ್ 24.5 ಬಿ‍‍ಹೆಚ್‍‍ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಬೈಕಿನಲ್ಲಿ 5 ಸ್ಪೀಡ್ ಗೇರ್‌ಬಾಕ್ಸ್ ನೀಡಲಾಗಿದೆ.

ಬಿಡುಗಡೆಯಾಗಲಿದೆ ಹೊಸ ರಾಯಲ್ ಎನ್‍ಫೀಲ್ಡ್ ಹಿಮಾಲಯನ್ 250 ಬೈಕ್

ಹೊಸ ರಾಯಲ್ ಎನ್‍ಫೀಲ್ಡ್ ಹಿಮಾಲಯನ್ 250 ಅಡ್ವೆಂಚರ್ ಬೈಕ್ ಮುಂದಿನ ವರ್ಷ ಬಿಡುಗಡೆಯಾಗಬಹುದು. ಈ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೀರೋ ಎಕ್ಸ್‌ಪಲ್ಸ್ 300 ಮತ್ತು ಕೆಟಿಎಂ 250 ಅಡ್ವೆಂಚರ್ ಬೈಕುಗಳಿಗೆ ಪೈಪೋಟಿಯನ್ನು ನೀಡುತ್ತದೆ.

Article Published On: Saturday, May 9, 2020, 21:29 [IST]
English summary
Royal Enfield Himalayan 250 India Launch Likely Next Year. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+