ಬಿಎಸ್-6 ಹಿಮಾಲಯನ್ ಬೈಕಿನ ಬೆಲೆ ಹೆಚ್ಚಿಸಿದ ರಾಯಲ್ ಎನ್‍ಫೀಲ್ಡ್
ಚೆನ್ನೈ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ತನ್ನ ಜನಪ್ರಿಯ ಬಿಎಸ್-6 ಹಿಮಾಲಯನ್ ಬೈಕನ್ನು ಈ ವರ್ಷದ ಆರಂಭದಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಬಿಎಸ್-6 ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕಿನ ಬೆಲೆಯನ್ನು ಎರಡನೇ ಬಾರಿ ಹೆಚ್ಚಿಸಿದೆ.

ಬಿಎಸ್-6 ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕಿನ ಎಲ್ಲಾ ರೂಪಾಂತರಗಳಿ ಅನುಗುಣವಾಗಿ ರೂ.1,837 ಗಳವರೆಗೆ ಬೆಲೆಯನ್ನು ಹೆಚ್ಚಿಸಿದೆ. ಬೆಲೆ ಏರಿಕೆಯ ಬಳಿಕ, ಬಿಎಸ್-6 ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕಿನ ಆರಂಭಿಕ ಬೆಲೆಯು ರೂ.1.91 ಲಕ್ಷಗಳಾಗಿದೆ. ಬಿಎಸ್-6 ಹಿಮಾಲಯನ್ ಬೈಕಿನಲ್ಲಿ ಹೊಸ 3 ಬಣ್ಣಗಳನ್ನು ಸೇರಿಸಲಾಗಿದೆ. ಹೊಸ 3 ಬಣ್ಣಗಳನ್ನು ಸೇರಿಸಿ ಒಟ್ಟು 6 ಬಣ್ಣಗಳಲ್ಲಿ ಬಿಎಸ್-6 ರಾಯಲ್ ಎನ್ಫೀಲ್ಡ್ ಹಿಮಾಲಯನ್ ಲಭ್ಯವಿರಲಿದೆ. ಈ ಬೈಕ್ ಸ್ಪೋಕ್ ವ್ಹೀಲ್, ಎಂಆರ್‍ಎಫ್ ಡ್ಯುಯಲ್ ಪರ್ಪಸ್ ಟಯರ್‍ಗಳನ್ನು ಹೊಂದಿದೆ.

ಬಿಎಸ್-6 ರಾಯಲ್ ಎನ್ಫೀಲ್ಡ್ ಹಿಮಾಲಯನ್ ಸ್ಪೋಕ್ ವ್ಹೀಲ್, ಎಂಆರ್‍ಎಫ್ ಡ್ಯುಯಲ್ ಪರ್ಪಸ್ ಟಯರ್‍ಗಳನ್ನು ಹೊಂದಿದೆ. ಫ್ಯೂಯಲ್ ಟ್ಯಾಂಕ್, ರೇರ್ ಲಗೇಜ್ ರ್‍ಯಾಕ್‍ನ ಮೇಲಿರುವ ರಾಕ್ ರೆಡ್ ಅಸೆಂಟ್‍ನೊಂದಿಗಿರುವ ಕಪ್ಪು ಬಣ್ಣವನ್ನು ಹೊಂದಿದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಇದರ ಜೊತೆಗೆ ಬ್ಲೂ ಹಾಗೂ ವೈಟ್ ಬಣ್ಣವನ್ನು ಹೊಂದಿರುವ ಮಾದರಿಗಳಿವೆ. ಬಾಡಿ ಪ್ಯಾನೆಲ್‍ಗಳು ಗ್ರಾವೆಲ್ ಗ್ರೇ ಬ್ಲಾಕ್ ಬಣ್ಣವನ್ನು ಹೊಂದಿವೆ. ಹೊಸ ಹಿಮಾಲಯನ್ ಬೈಕಿನಲ್ಲಿ ಸ್ವಿಚ್ಎಬಲ್ ಎಬಿಎಸ್ ಮತ್ತು ಹಾರ್ಜಾರ್ಡ್ ಲೈಟ್‍ಗಳನ್ನು ಹೊಂದಿವೆ.

ಈ ಫೀಚರ್ ಅನ್ನು ಹೊಂದಿರುವುದರಿಂದ ಹೆಚ್ಚಿನ ಆಫ್ ರೋಡ್ ಪ್ರಿಯರನ್ನು ಸೆಳೆಯುತ್ತದೆ. ಈ ಸ್ವಿಚ್‍ಬಲ್ ಮಾಡಬಹುದಾದ ಎಬಿಎಸ್ ಆಯ್ಕೆಯ ಸಹಾಯದಿಂದ ಸವಾರನಿಗೆ ಬೈಕಿನ ಬೆಲೆ ಹೆಚ್ಚು ಕಂಟ್ರೋಲ್ ಅನ್ನು ಹೊಂದಬಹುದು.
MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಇದರೊಂದಿಗೆ ಸವಾರ ಸುಲಭವಾಗಿ ಎಬಿಎಸ್ ಅನ್ನು ಆಫ್ ಮಾಡಬಹುದು ಮತ್ತು ಸಂಕಷ್ಠದ ಸನ್ನಿವೇಷದಲ್ಲಿ ಬೈಕ್ ನಿಲ್ಲಿಸಲು ಹಿಂದಿನ ಟಯರ್‍ಗಳನ್ನು ಲಾಕ್ ಮಾಡಬಹುದು. ಹಜಾರ್ಡ್ ಲೈಟ್‍ಗಳು ಕಠಿಣವಾದ ಹವಮಾನ ಪರಿಸ್ಥಿತಿಯಲ್ಲೂ ಸವಾರಿ ಮಾಡಲು ಹೆಚ್ಚು ಸಹಕಾರಿಯಾಗಿದೆ.

ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬಿಎಸ್-6 ಮಾದರಿಯಲ್ಲಿ 411 ಸಿಸಿಯ ಸಿಂಗಲ್ ಸಿಲಿಂಡರ್ ಏರ್ ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 24.3 ಬಿಹೆಚ್‍ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಬೈಕಿನಲ್ಲಿ 5 ಸ್ಪೀಡ್ ಗೇರ್‌ಬಾಕ್ಸ್ ನೀಡಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಬೈಕಿನ ಮುಂಭಾಗದಲ್ಲಿ 21 ಇಂಚಿನ ಮತ್ತು ಹಿಂಭಾಗದಲ್ಲಿ 17 ಇಂಚಿನ ಸ್ಪೋಕ್ ವ್ಹೀಲ್‍ಗಳಿದ್ದು, ಕ್ರಮವಾಗಿ 90/90 ಹಾಗೂ 120/90 ಸೆಕ್ಷನ್ ಟಯರ್‌ಗಳನ್ನು ಹೊಂದಿವೆ. ಬ್ರೇಕಿಂಗ್‍ಗಳಿಗಾಗಿ ಮುಂಭಾಗದಲ್ಲಿ ಎರಡು ಪಿಸ್ಟನ್ ಕ್ಯಾಲಿಪರ್‍ನ 300 ಎಂಎಂ ಫ್ರಂಟ್ ಡಿಸ್ಕ್ ಹಾಗೂ ಹಿಂಭಾಗದಲ್ಲಿ 240 ಎಂಎಂನ ಸಿಂಗಲ್ ಪಿಸ್ಟನ್ ಕ್ಯಾಲಿಪರ್‍ಗಳಿವೆ.

ಇದರೊಂದಿಗೆ ಅರ್ಜೆಂಟೀನಾದ ಪೊಲೀಸರು ಇತ್ತೀಚೆಗೆ ಅಡ್ವೆಂಚರ್ ಟೂರರ್ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕುಗಳನ್ನು ತಮ್ಮ ಪಡೆಗೆ ಹೊಸದಾಗಿ ಸೇರಿಸಿ ಕೊಂಡಿದ್ದಾರೆ. ಅರ್ಜೆಂಟೀನಾದ ಪೊಲೀಸ್ ಪಡೆಗಾಗಿ ಈ ಅಡ್ವೆಂಚರ್ ಟೂರರ್ ಬೈಕನ್ನು ವಿಶೇಷವಾಗಿ ಮಾಡಿಫೈಗೊಳಿಸಿದ್ದಾರೆ.
MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಅರ್ಜೆಂಟೀನಾದ ಪೊಲೀಸ್ ಪಡೆಗೆ ನೀಡಿದ ಎಲ್ಲಾ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕುಗಳನ್ನು ವಿಶೇಷ ನೀಲಿ ಬಣ್ಣವನ್ನು ಹೊಂದಿದೆ. ಇದರೊಂದಿಗೆ ಈ ಬೈಕಿನಲ್ಲಿ ಪಿಎ ಸಿಸ್ಟಂ ಮತ್ತು ಪೊಲೀಸ್ ಕೆಂಪು ಮತ್ತು ನೀಲಿ ಬೀಕನ್‍ಗಳನ್ನು ಒಳಗೊಂಡಿದೆ.

ಮಾಡಿಫೈಗೊಂಡ ಈ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕುಗಳ ಫ್ಯೂಯಲ್ ಟ್ಯಾಂಕ್ ಮೇಲ್ ಪಿಎಫ್‌ಎ ಲೋಗೋವನ್ನು ಹೊಂದಿದೆ. ಉಳಿದಂತೆ ಯಾವುದೇ ಇತರ ಬದಲಾವನೆಗಳನ್ನು ಮಾಡಲಾಗಿಲ್ಲ.

ಇನ್ನು ಬಿಎಸ್-6 ರಾಯಲ್ ಎನ್ಫೀಲ್ಡ್ ಹಿಮಾಲಯನ್ ದೇಶಿಯ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಜಿ 310 ಜಿಎಸ್ ಹಾಗೂ ಕವಾಸಕಿ ವರ್ಸಿಸ್-ಎಕ್ಸ್ 300, ಕೆಟಿಎಂ 390 ಬೈಕುಗಳಿಗೆ ಪೈಪೋಟಿ ನೀಡುತ್ತದೆ. ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕಿನ ಬೆಲೆಯನ್ನು ಹೆಚ್ಚಿಸಿರುವುದು ಆಫ್ ರೋಡ್ ಬೈಕ್ ಪ್ರಿಯರಿಗೆ ನಿರಾಸೆ ಮೂಡಿಸಿದೆ.


Click it and Unblock the Notifications








