ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಿಎಸ್-6 ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್
ಚೆನ್ನೈ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ತನ್ನ ಜನಪ್ರಿಯ ಬಿಎಸ್-6 ಹಿಮಾಲಯನ್ ಬೈಕ್ ಡೀಲರ್‍ಗಳ ಬಳಿ ತಲುಪಿದೆ. ಹೊಸ ಬಿಎಸ್-6 ಹಿಮಾಲಯನ್ ಬೈಕ್ ಅನ್ನು ರೂ.10,000 ಪಾವತಿಸಿ ಬುಕ್ಕಿಂಗ್ ಮಾಡಬಹುದಾಗಿದೆ.

2020ರ ಬಿಎಸ್-6 ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ಡೀಲರ್‍ಗಳ ಬಳಿ ತಲುಪಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿದೆ. ಈ ಬೈಕ್ ಸ್ಪೋಕ್ ವ್ಹೀಲ್, ಎಂಆರ್‍ಎಫ್ ಡ್ಯುಯಲ್ ಪರ್ಪಸ್ ಟಯರ್‍ಗಳನ್ನು ಹೊಂದಿದೆ. ಫ್ಯೂಯಲ್ ಟ್ಯಾಂಕ್, ರೇರ್ ಲಗೇಜ್ ರ್‍ಯಾಕ್‍ನ ಮೇಲಿರುವ ರಾಕಿ ರೆಡ್ ಅಸೆಂಟ್‍ನೊಂದಿಗಿರುವ ಕಪ್ಪು ಬಣ್ಣವನ್ನು ಹೊಂದಿದೆ. ಕೆಲವು ಭಾಗಗಳಿಗೆ ಕ್ರೋಮ್ ಬಣ್ಣವನ್ನು ಸಹ ನೀಡಲಾಗಿದೆ.

ಇದರ ಜೊತೆಗೆ ಬ್ಲೂ ಹಾಗೂ ವೈಟ್ ಬಣ್ಣವನ್ನು ಹೊಂದಿರುವ ಮಾದರಿಗಳಿವೆ. ಬಾಡಿ ಪ್ಯಾನೆಲ್‍ಗಳು ಗ್ರಾವೆಲ್ ಗ್ರೇ ಬ್ಲಾಕ್ ಬಣ್ಣವನ್ನು ಹೊಂದಿವೆ. ಹೊಸ ಹಿಮಾಲಯನ್ ಬೈಕಿನಲ್ಲಿ ಸ್ವಿಚ್ಎಬಲ್ ಎಬಿಎಸ್ ಮತ್ತು ಹಾರ್ಜಾರ್ಡ್ ಲೈಟ್‍ಗಳನ್ನು ಹೊಂದಿರಲಿದೆ. ಸ್ವಿಚ್‍ಬಲ್ ಮಾಡಬಹುದಾದ ಎಬಿಎಸ್ ಆಯ್ಕೆಯ ಸಹಾಯದಿಂದ ಸವಾರನಿಗೆ ಬೈಕಿನ ಬೆಲೆ ಹೆಚ್ಚು ಕಂಟ್ರೋಲ್ ಅನ್ನು ಹೊಂದಿದೆ. ಈ ಬೈಕಿನ ಎಂಜಿನ್ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿರಲಿದೆ.

ಸವಾರ ಸುಲಭವಾಗಿ ಎಬಿಎಸ್ ಅನ್ನು ಆಫ್ ಮಾಡಬಹುದು ಮತ್ತು ಸಂಕಷ್ಠದ ಸನ್ನಿವೇಷದಲ್ಲಿ ಬೈಕ್ ನಿಲ್ಲಿಸಲು ಹಿಂದಿನ ಟಯರ್‍ಗಳನ್ನು ಲಾಕ್ ಮಾಡಬಹುದು. ಹಜಾರ್ಡ್ ಲೈಟ್‍ಗಳು ಕಠಿಣವಾದ ಹವಮಾನ ಪರಿಸ್ಥಿತಿಯಲ್ಲೂ ಸವಾರಿ ಮಾಡಲು ಹೆಚ್ಚು ಸಹಕಾರಿಯಾಗಿವೆ.

ಹಿಮಾಲಯನ್ ಬಿಎಸ್-6 ಮಾದರಿಯಲ್ಲಿ 411 ಸಿಸಿಯ ಸಿಂಗಲ್ ಸಿಲಿಂಡರ್ ಏರ್ ಕೂಲ್ಡ್ ಎಂಜಿನ್ ಅಳವಡಿಸಲಾಗುವುದು. ಈ ಎಂಜಿನ್ 24.5 ಬಿಹೆಚ್‍ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಬೈಕಿನಲ್ಲಿ 5 ಸ್ಪೀಡ್ ಗೇರ್‌ಬಾಕ್ಸ್ ನೀಡಲಾಗುವುದು.

ರಾಯಲ್ ಎನ್ಫೀಲ್ಡ್ ಹಿಮಾಲಯನ್ ಅಡ್ವೆಂಚರ್ ಟೂರರ್ ಬೈಕಿನಲ್ಲಿ ಹಾಫ್ ಡ್ಯುಪ್ಲೆಕ್ಸ್ ಕ್ರೆಡಲ್ ಫ್ರೇಂಗಳಿವೆ. ಇವುಗಳೊಂದಿಗೆ ಮುಂಭಾಗದಲ್ಲಿ 41 ಎಂಎಂನ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ ಹಾಗೂ ಹಿಂಭಾಗದಲ್ಲಿ ಮೊನೊಶಾಕ್‍ಗಳಿವೆ.

ಬೈಕಿನ ಮುಂಭಾಗದಲ್ಲಿ 21 ಇಂಚಿನ ಮತ್ತು ಹಿಂಭಾಗದಲ್ಲಿ 17 ಇಂಚಿನ ಸ್ಪೋಕ್ ವ್ಹೀಲ್‍ಗಳಿದ್ದು, ಕ್ರಮವಾಗಿ 90/90 ಹಾಗೂ 120/90 ಸೆಕ್ಷನ್ ಟಯರ್‌ಗಳನ್ನು ಹೊಂದಿವೆ. ಬ್ರೇಕಿಂಗ್‍ಗಳಿಗಾಗಿ ಮುಂಭಾಗದಲ್ಲಿ ಎರಡು ಪಿಸ್ಟನ್ ಕ್ಯಾಲಿಪರ್‍ನ 300 ಎಂಎಂ ಫ್ರಂಟ್ ಡಿಸ್ಕ್ ಹಾಗೂ ಹಿಂಭಾಗದಲ್ಲಿ 240 ಎಂಎಂನ ಸಿಂಗಲ್ ಪಿಸ್ಟನ್ ಕ್ಯಾಲಿಪರ್‍ಗಳಿವೆ.

ರಾಯಲ್ ಎನ್‌ಫೀಲ್ಡ್ ಕಂಪನಿಯ ಹಿಮಾಲಯನ್ ಬೈಕ್ ತನ್ನ ಸೆಗ್‍ಮೆಂಟಿನಲ್ಲಿ ಉತ್ತಮವಾದ ಅಡ್ವೆಂಚರ್ ಟೂರರ್ ಬೈಕ್ ಆಗಿದೆ. ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.81 ಲಕ್ಷಗಳಾಗಿದೆ.

ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್‍ನಲ್ಲಿ ಹೊಸ ಫೀಚರ್ಸ್‍ಗಳನ್ನು ಹೊಂದಿರುವುದರಿಂದ ಅಳವಡಿಸಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು. ಈ ಬೈಕ್ ದೇಶಿಯ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಜಿ 310 ಜಿಎಸ್ ಹಾಗೂ ಕವಾಸಕಿ ವರ್ಸಿಸ್-ಎಕ್ಸ್ 300, ಕೆಟಿಎಂ 390 ಬೈಕುಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications