ಬಿಡುಗಡೆಯಾಯ್ತು ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಬೈಕ್

ಚೆನ್ನೈ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ತನ್ನ ಜನಪ್ರಿಯ ಬಿಎಸ್-6 ಹಿಮಾಲಯನ್ ಬೈಕ್ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ. ಹೊಸ ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಬೈಕ್ ಒಟ್ಟು 6 ಬಣ್ಣಗಳಲ್ಲಿ ಲಭ್ಯವಿದೆ.

ಬಿಡುಗಡೆಯಾಯ್ತು ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಬೈಕ್

ಹೊಸ ರಾಯಲ್ ಎನ್‍‍ಫೀಲ್ಡ್ ಬಿಎಸ್-6 ಹಿಮಾಲಯನ್ ಬೈಕಿಗೆ ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.87 ದಿಂದ ರೂ.1.91ಲಕ್ಷಗಳಾಗಿದೆ. ಬಿಎಸ್-6 ಹಿಮಾಲಯನ್ ಬೈಕಿನಲ್ಲಿ ಹೊಸ 3 ಬಣ್ಣಗಳನ್ನು ಸೇರಿಸಲಾಗಿದೆ. ಹೊಸ 3 ಬಣ್ಣಗಳನ್ನು ಸೇರಿಸಿ ಒಟ್ಟು 6 ಬಣ್ಣಗಳಲ್ಲಿ ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಲಭ್ಯವಿರಲಿದೆ. ಈ ಬೈಕ್ ಸ್ಪೋಕ್ ವ್ಹೀಲ್, ಎಂಆರ್‍ಎಫ್ ಡ್ಯುಯಲ್ ಪರ್ಪಸ್ ಟಯರ್‍‍ಗಳನ್ನು ಹೊಂದಿದೆ.

ಬಿಡುಗಡೆಯಾಯ್ತು ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಬೈಕ್

ಹೊಸ ಬೈಕ್ ಸ್ಪೋಕ್ ವ್ಹೀಲ್, ಎಂಆರ್‍ಎಫ್ ಡ್ಯುಯಲ್ ಪರ್ಪಸ್ ಟಯರ್‍‍ಗಳನ್ನು ಹೊಂದಿದೆ. ಫ್ಯೂಯಲ್ ಟ್ಯಾಂಕ್, ರೇರ್ ಲಗೇಜ್ ರ್‍ಯಾಕ್‍‍ನ ಮೇಲಿರುವ ರಾಕ್ ರೆಡ್ ಅಸೆಂಟ್‍‍‍ನೊಂದಿಗಿರುವ ಕಪ್ಪು ಬಣ್ಣವನ್ನು ಹೊಂದಿದೆ.

ಬಿಡುಗಡೆಯಾಯ್ತು ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಬೈಕ್

ಇದರ ಜೊತೆಗೆ ಬ್ಲೂ ಹಾಗೂ ವೈಟ್ ಬಣ್ಣವನ್ನು ಹೊಂದಿರುವ ಮಾದರಿಗಳಿವೆ. ಬಾಡಿ ಪ್ಯಾನೆಲ್‍‍ಗಳು ಗ್ರಾವೆಲ್ ಗ್ರೇ ಬ್ಲಾಕ್ ಬಣ್ಣವನ್ನು ಹೊಂದಿವೆ. ಹೊಸ ಹಿಮಾಲಯನ್ ಬೈಕಿನಲ್ಲಿ ಸ್ವಿಚ್ಎಬಲ್ ಎಬಿಎಸ್ ಮತ್ತು ಹಾರ್ಜಾರ್ಡ್ ಲೈ‍‍‍ಟ್‍ಗಳನ್ನು ಹೊಂದಿವೆ.

ಬಿಡುಗಡೆಯಾಯ್ತು ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಬೈಕ್

ಸ್ವಿಚ್‍‍ಬಲ್ ಮಾಡಬಹುದಾದ ಎಬಿಎಸ್ ಆಯ್ಕೆಯ ಸಹಾಯದಿಂದ ಸವಾರನಿಗೆ ಬೈಕಿನ ಬೆಲೆ ಹೆಚ್ಚು ಕಂಟ್ರೋಲ್ ಅನ್ನು ಹೊಂದಿದೆ. ಈ ಬೈಕಿನ ಎಂಜಿನ್ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿರಲಿದೆ. 2020ರ ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಬೈಕ್ ಡೀಲರ್‍‍ಗಳ ಬಳಿ ತಲುಪಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿದೆ.

ಬಿಡುಗಡೆಯಾಯ್ತು ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಬೈಕ್

ಸವಾರ ಸುಲಭವಾಗಿ ಎಬಿಎಸ್ ಅನ್ನು ಆಫ್ ಮಾಡಬಹುದು ಮತ್ತು ಸಂಕಷ್ಠದ ಸನ್ನಿವೇಷದಲ್ಲಿ ಬೈಕ್ ನಿಲ್ಲಿಸಲು ಹಿಂದಿನ ಟಯರ್‍‍ಗಳನ್ನು ಲಾಕ್ ಮಾಡಬಹುದು. ಹಜಾರ್ಡ್ ಲೈಟ್‍ಗಳು ಕಠಿಣವಾದ ಹವಮಾನ ಪರಿಸ್ಥಿತಿಯಲ್ಲೂ ಸವಾರಿ ಮಾಡಲು ಹೆಚ್ಚು ಸಹಕಾರಿಯಾಗಿವೆ.

ಬಿಡುಗಡೆಯಾಯ್ತು ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಬೈಕ್

ಹಿಮಾಲಯನ್ ಬಿಎಸ್-6 ಮಾದರಿಯಲ್ಲಿ 411 ಸಿಸಿಯ ಸಿಂಗಲ್ ಸಿಲಿಂಡರ್ ಏರ್ ಕೂಲ್ಡ್ ಎಂಜಿನ್ ಅಳವಡಿಸಲಾಗುವುದು. ಈ ಎಂಜಿನ್ 24.5 ಬಿ‍‍ಹೆಚ್‍‍ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಬೈಕಿನಲ್ಲಿ 5 ಸ್ಪೀಡ್ ಗೇರ್‌ಬಾಕ್ಸ್ ನೀಡಲಾಗುವುದು. ಬಿಎಸ್-6 ಹಿಮಾಲಯನ್ ಬೈಕಿನ ಬೆಲೆಯು ಬಣ್ಣಗಳ ಮೇಲೆ ನಿರ್ಧರವಾಗಿದೆ.

ಬೈಕಿನ ಬಣ್ಣಗಳು ಬೈಕಿನ ದರ
ಗ್ರಾನೈಟ್ ಬ್ಲ್ಯಾಕ್ ರೂ.1,86,811
ಸ್ಲೀಟ್ ಗ್ರೇ ರೂ.1,89,565
ಸ್ನೋ ವೈಟ್ ರೂ.1,86,811
ಗ್ರಾವೆಲ್ ಗ್ರೇ ರೂ.1,89,565
ಲೇಕ್ ಬ್ಲೂ ರೂ.1,91,401
ರಾಕ್ ರೆಡ್ ರೂ.1,91,401
ಬಿಡುಗಡೆಯಾಯ್ತು ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಬೈಕ್

ಬೈಕಿನ ಮುಂಭಾಗದಲ್ಲಿ 21 ಇಂಚಿನ ಮತ್ತು ಹಿಂಭಾಗದಲ್ಲಿ 17 ಇಂಚಿನ ಸ್ಪೋಕ್ ವ್ಹೀಲ್‍‍ಗಳಿದ್ದು, ಕ್ರಮವಾಗಿ 90/90 ಹಾಗೂ 120/90 ಸೆಕ್ಷನ್ ಟಯರ್‌ಗಳನ್ನು ಹೊಂದಿವೆ. ಬ್ರೇಕಿಂಗ್‍‍ಗಳಿಗಾಗಿ ಮುಂಭಾಗದಲ್ಲಿ ಎರಡು ಪಿಸ್ಟನ್ ಕ್ಯಾಲಿಪರ್‍‍ನ 300 ಎಂಎಂ ಫ್ರಂಟ್ ಡಿಸ್ಕ್ ಹಾಗೂ ಹಿಂಭಾಗದಲ್ಲಿ 240 ಎಂಎಂನ ಸಿಂಗಲ್ ಪಿಸ್ಟನ್ ಕ್ಯಾಲಿಪರ್‍‍ಗಳಿವೆ.

ಬಿಡುಗಡೆಯಾಯ್ತು ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಬೈಕ್

ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಬೈಕ್‍ನಲ್ಲಿ ಹೊಸ ಫೀಚರ್ಸ್‍‍ಗಳನ್ನು ಹೊಂದಿರುವುದರಿಂದ ಅಳವಡಿಸಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು. ಈ ಬೈಕ್ ದೇಶಿಯ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಜಿ 310 ಜಿಎಸ್ ಹಾಗೂ ಕವಾಸಕಿ ವರ್ಸಿಸ್-ಎಕ್ಸ್ 300, ಕೆಟಿ‍ಎಂ 390 ಬೈಕುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
BS6 RE Himalayan Launched From Rs. 1.86 Lakh, Gets 3 New Colours. Read in Kannada
Story first published: Monday, January 20, 2020, 15:57 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X