ಬಿಎಸ್-6 ಇಂಟರ್‍‍ಸೆಪ್ಟರ್ 650 ಬೈಕಿನ ವಿತರಣೆ ಆರಂಭಿಸಿದ ರಾಯಲ್ ಎನ್‍ಫೀಲ್ಡ್

ಚೆನ್ನೈ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ಕಂಪನಿಯ ತನ್ನ ಬಿಎಸ್-6 ಇಂಟರ್‍‍ಸೆಪ್ಟರ್ 650 ಬೈಕಿನ ವಿತರಣೆಯನ್ನು ಪ್ರಾರಂಭಿಸಿದೆ. ಕಳೆದ ತಿಂಗಳಲ್ಲಿ ಈ ಬಿಎಸ್-6 ಇಂಟರ್‍‍ಸೆಪ್ಟರ್ 650 ಬೈಕ್ ಎಲ್ಲಾ ಡೀಲರ್ ಗಳ ಬಳಿ ತಲುಪಿತ್ತು.

ಬಿಎಸ್-6 ಇಂಟರ್‍‍ಸೆಪ್ಟರ್ 650 ಬೈಕಿನ ವಿತರಣೆ ಆರಂಭಿಸಿದ ರಾಯಲ್ ಎನ್‍ಫೀಲ್ಡ್

ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟೆರ್ 650 ಬಿಎಸ್-4 ಮಾದರಿಗಳ ಯುನಿ‍‍ಟ್‍ಗಳು ಎಲ್ಲಾ ಡೀಲರ್‍‍ಗಳ ಬಳಿ ಮಾರಾಟವಾಗಿದೆ. ಈ ಹಿನ್ನಲೆಯಲ್ಲಿ ಹೊಸ ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕಿನ ಬುಕ್ಕಿಂಗ್ ಅನ್ನು ಪ್ರಾರಂಭಿಸಲಾಗಿದೆ. ಬಿಎಸ್-6 ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟೆರ್ 650 ಬೈಕ್‍‍ಗಾಗಿ ರೂ.10 ಸಾವಿರ ಪಾವತಿಸಿ ಬುಕ್ಕಿಂಗ್ ಅನ್ನು ಮಾಡಿಕೊಳ್ಳಬಹುದುದಾಗಿದೆ. ಇದೀಗ ಬಿಎಸ್-6 ಇಂಟರ್‍‍ಸೆಪ್ಟರ್ 650 ಬೈಕುಗಳ ವಿತರಣೆಯನ್ನು ಪ್ರಾರಂಭಿಸಲಾಗಿದೆ.

ಬಿಎಸ್-6 ಇಂಟರ್‍‍ಸೆಪ್ಟರ್ 650 ಬೈಕಿನ ವಿತರಣೆ ಆರಂಭಿಸಿದ ರಾಯಲ್ ಎನ್‍ಫೀಲ್ಡ್

ಹೊಸ ಬಿಎಸ್-6, ಇಂಟರ್‍‍ಸೆಪ್ಟೆರ್ 650 ಬೈಕಿನಲ್ಲಿ ಕಾಸ್ಮೆಟಿಕ್ ನವೀಕರಣಗಳನ್ನು ಮಾಡಿಲ್ಲವಾದರೂ, ರಾಯಲ್ ಎನ್‍‍ಫೀಲ್ಡ್ ಮಾಲೀಕರಿಗೆ ಬೇಕಾದರೆ ಡೀಲರ್‍‍‍ಗಳು ಮಾರ್ಪಾಡು ಮಾಡಿ ಕೊಡುತ್ತಾರೆಂಬ ನಿರೀಕ್ಷೆಗಳಿದೆ.

ಬಿಎಸ್-6 ಇಂಟರ್‍‍ಸೆಪ್ಟರ್ 650 ಬೈಕಿನ ವಿತರಣೆ ಆರಂಭಿಸಿದ ರಾಯಲ್ ಎನ್‍ಫೀಲ್ಡ್

ಈ ಬೈಕಿನ ಇಂಜಿನ್ ಸಾಮರ್ಥ್ಯ ಮತ್ತು ಹಲವಾರು ವೈಶಿಷ್ಟ್ಯಗಳಿಂದ ಕೂಡಿರುವ ಕಾರಣ ದೇಶಿಯ ಮಾರುಕಟ್ಟೆ ಗ್ರಾಹಕರು ಈ ಬೈಕ್‍‍ಗೆ ಫಿದಾ ಆದರು. ಈ ಬೈಕ್ ಪ್ಯಾರೆಲೆಲ್ ಟ್ವಿನ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ.

ಬಿಎಸ್-6 ಇಂಟರ್‍‍ಸೆಪ್ಟರ್ 650 ಬೈಕಿನ ವಿತರಣೆ ಆರಂಭಿಸಿದ ರಾಯಲ್ ಎನ್‍ಫೀಲ್ಡ್

ಹೊಸ ಇಂಟರ್‍‍ಸೆಪ್ಟೆರ್ 650 ಬೈಕ್ 649 ಸಿಸಿ ಏರ್/ಆಯಿಲ್ -ಕೂಲ್ಡ್ ಪ್ಯಾರೆಲೆಲ್-ಟ್ವಿನ್ ಎಂಜಿನ್ ಅನ್ನು ಹೊಂದಿವೆ. ಈ ಎಂಜಿನ್ 47 ಬಿ‍ಹೆಚ್‍ಪಿ ಪವರ್ ಮತ್ತು 52 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಬಿಎಸ್-6 ಇಂಟರ್‍‍ಸೆಪ್ಟರ್ 650 ಬೈಕಿನ ವಿತರಣೆ ಆರಂಭಿಸಿದ ರಾಯಲ್ ಎನ್‍ಫೀಲ್ಡ್

ಎಂಜಿನ್‍‍ನೊಂದಿಗೆ ಸ್ಟ್ಯಾಂಡರ್ಡ್ ಅಸಿಸ್ಟ್ ಕ್ಲಚ್‍‍‍ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಬೈಕ್ ಸವಾರರ ಸುರಕ್ಷತೆಗಾಗಿ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟೆರ್ 650 ಬೈಕನ ಮೂಂಭಾಗದಲ್ಲಿ 320ಎಂಎಂ ಮತ್ತು ಹಿಂಭಾಗದಲ್ಲಿ 240ಎಂಎಂನ ಡಿಸ್ಕ್ ಬ್ರೇಕ್‍‍ಗಳನ್ನು ಅಳವಡಿಸಲಾಗಿದ್ದು, ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿವೆ.

ಬಿಎಸ್-6 ಇಂಟರ್‍‍ಸೆಪ್ಟರ್ 650 ಬೈಕಿನ ವಿತರಣೆ ಆರಂಭಿಸಿದ ರಾಯಲ್ ಎನ್‍ಫೀಲ್ಡ್

ಹೊಸ ಇಂಟರ್‍‍ಸೆಪ್ಟರ್ 650 ಬೈಕಿನ ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ಕ್ರಮವಾಗಿ ರೂ.2.51 ಲಕ್ಷಗಳಾಗಿದೆ. ಈ ಬೈಕ್ ಆಧುನಿಕ ಕ್ಲಾಸಿಕ್ ಲುಕ್ ಅನ್ನು ಹೊಂದಿವೆ.

ಬಿಎಸ್-6 ಇಂಟರ್‍‍ಸೆಪ್ಟರ್ 650 ಬೈಕಿನ ವಿತರಣೆ ಆರಂಭಿಸಿದ ರಾಯಲ್ ಎನ್‍ಫೀಲ್ಡ್

ಇಂಟರ್‍‍ಸೆಪ್ಟರ್ 650 ಸ್ಕ್ರ್ಯಾಂಬ್ಲರ್ ಶೈಲಿಯ ವಿನ್ಯಾಸವನ್ನು ಆಧರಿಸಿದೆ. ಈ ಬೈಕ್ 41ಎಂಎಂ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ ಮತ್ತು ಹಿಂಭಾಗದಲ್ಲಿ 110ಎಂಎಂ ಟ್ವಿನ್ ಕಾಯಿಲ್-ಕವರ್, 650 ಟ್ವಿನ್ ಬೈಕ್‍ಗಳು 18 ಇಂಚಿನ 360 ಸ್ಪೋಕ್ ಅಲ್ಯುಮಿನಿಯಂ ಅಲಾಯ್ ವ್ಹೀಲ್‍‍ಗಳನ್ನು ಹೊಂದಿವೆ.

ಬಿಎಸ್-6 ಇಂಟರ್‍‍ಸೆಪ್ಟರ್ 650 ಬೈಕಿನ ವಿತರಣೆ ಆರಂಭಿಸಿದ ರಾಯಲ್ ಎನ್‍ಫೀಲ್ಡ್

ರಾಯಲ್ ಎನ್‍ಫೀಲ್ಡ್ ಕಂಪನಿಯ ಹಳೆಯ ತಲೆಮಾರಿನ ಬೈಕ್‍‍ಗಳಾದ ದಿ ಕ್ಲಾಸಿಕ್, ಬುಲೆಟ್ ಮತ್ತು ಥಂಡರ್ ಬರ್ಡ್ ಇವುಗಳು ಹೊಸ ಅಲೆಯನ್ನು ಸೃಷ್ಟಿಸಿದ ಬೈಕ್‍‍ಗಳಾಗಿವೆ. ಕಂಪನಿಯು ಅದೇ ಹಳೆಯ ಪ್ರಸಿದ್ದಿಯನ್ನು ಪಡೆಯಲು ಏನಾದರೂ ಮಾಡಬೇಕಾಗಿದೆ ಎಂದು ಯೋಚಿಸಿ ಹೊಸ ಇಂಟರ್‍‍ಸೆಪ್ಟರ್ 650 ಬೈಕ್ ಅನ್ನು ಪರಿಚಯಿಸಿದೆ.

Article Published On: Tuesday, March 24, 2020, 18:16 [IST]
English summary
Royal Enfield Interceptor 650 BS6 Deliveries Begin In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+