ಹೊಸ ಲುಕ್‍‍ನಲ್ಲಿ ಮಿಂಚಿದ ಮಾಡಿಫೈ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕ್

ಭಾರತದಲ್ಲಿ ಅತಿ ಹೆಚ್ಚು ಮಾಡಿಫೈ ಮಾಡಲಾಗುವ ಬೈಕ್ ರಾಯಲ್ ಎನ್‍ಫೀಲ್ಡ್ ಆಗಿದೆ. ಇಂದಿಗೂ ಭಾರತೀಯ ರಸ್ತೆಗಳಲ್ಲಿ ರಾಜನಂತೆ ಮೆರೆಯುತ್ತಿವೆ ರಾಯಲ್ ಎನ್‍ಫೀಲ್ಡ್ ಬೈಕ್‍‍ಗಳು. ರಾಯಲ್ ಎನ್‍ಫೀಲ್ಡ್ ಯುವಕರ ಕನಸಿನ ಬೈಕ್. ರಾಯಲ್ ಎನ್‍ಫೀಲ್ಡ್ ತನ್ನ ವಿಶಿಷ್ಟವಾದ ಲುಕ್ ಮತ್ತು ಆಕರ್ಷಕ ವಿನ್ಯಾಸದಿಂದ ಎಲ್ಲರ ಗಮನಸೆಳೆದ ಬೈಕ್.

ಹೊಸ ಲುಕ್‍‍ನಲ್ಲಿ ಮಿಂಚಿದ ಮಾಡಿಫೈ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕ್

ರಾಯಲ್ ಎನ್‍ಫೀಲ್ಡ್ ಬೈಕ್‌ ಮೇಲೆ ಕುಳಿತು ರೈಡ್‌ ಮಾಡುವುದೆಂದರೆ ಅದೊಂದು ಗತ್ತು. ಆರೇಳು ದಶಕಗಳಿಂದಲೂ ಅದೇ ಕ್ರೇಜ್‌, ಅದೇ ಟ್ರೆಂಡ್‌ ಉಳಿಸಿಕೊಂಡು ಬಂದಿರುವುದು ರಾಯಲ್‌ ಎನ್‌ಫೀಲ್ಡ್‌ ಬೈಕ್‌ಗಳ ಹೆಗ್ಗಳಿಕೆ. ಕಾಲೇಜು ಯುವಕರಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಈ ರಾಯಲ್ ಎನ್‍ಫಿಲ್ಡ್ ಬೈಕ್‍ಗಳ ಅಭಿಮಾನಿಗಳು. ಇಷ್ಟು ಅಭಿಮಾನಿಗಳನ್ನು ಹೊಂದಿರುವ ರಾಯಲ್ ಎನ್‍‍ಫೀಲ್ಡ್ ಬೈಕ್ ಅನ್ನು ಸೆಕ್ರ್ಯಾಂಬ್ಲರ್ ಮಾದರಿಯಂತೆ ಮಾಡಿಫೈ ಮಾಡಲಾಗಿದೆ.

ಹೊಸ ಲುಕ್‍‍ನಲ್ಲಿ ಮಿಂಚಿದ ಮಾಡಿಫೈ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕ್

ಥೈಲ್ಯಾಂಡ್ ಮೂಲದ ರೇಂಜರ್ ಕೋರಾಟ್ ಎಂಬ ಕಸ್ಟಂ ಅವರು ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕನ್ನು ಆಕರ್ಷಕವಾಗಿ ಮಾಡಿಫೈಗೊಗೊಳಿಸಿದ್ದಾರೆ. ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕಿನ ಎರಡು ತುದಿಗಳಲ್ಲಿ ಚೊಪಾಡ್-ಆಫ್ ಫೆಂಡರ್‌ಗಳನ್ನು ಅಳವಡಿಸಿದ್ದಾರೆ.

MOST READ: ಏಪ್ರಿಲ್ ತಿಂಗಳಲ್ಲಿ ಮಾರಾಟವಾದ ರಾಯಲ್ ಎನ್‍ಫೀಲ್ಡ್ ಬೈಕ್‍‍ಗಳೆಷ್ಟು ಗೊತ್ತಾ?

ಹೊಸ ಲುಕ್‍‍ನಲ್ಲಿ ಮಿಂಚಿದ ಮಾಡಿಫೈ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕ್

ಈ ಬೈಕಿನ ಟ್ಯಾಂಕ್ ಮೇಲೆ ಹಳದಿ ಬಣ್ಣವನ್ನು ಸಿಂಪಡಿಸಿದ್ದಾರೆ. ಈ ಬೈಕಿನಲ್ಲಿ ಟ್ವಿನ್ ಹೆಡ್ ಲೈಟ್ ಅನ್ನು ಅಳವಡಿಸಿದ್ದಾರೆ. ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕಿನಲ್ಲಿ ಕಸ್ಟಂ ಹ್ಯಾಂಡಲ್ ಬಾರ್, ಬ್ಯಾಷ್ ಪ್ಲೇಟ್ ಮತ್ತು ಕಾಂಟ್ರಾಸ್ಟ್ ನೊಂದಿಗೆ ಕಸ್ಟಂ ಸೀಟ್ ಅನ್ನು ಹೊಂದಿದೆ. ಬೈಕಿನ ಕ್ರ್ಯಾಶ್ ಗಾರ್ಡ್ ನಲ್ಲಿ ಹೆಚ್ಚುವರಿ ಲೈಟ್ ಅನ್ನು ಅಳವಡಿಸಿದ್ದಾರೆ.

ಹೊಸ ಲುಕ್‍‍ನಲ್ಲಿ ಮಿಂಚಿದ ಮಾಡಿಫೈ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕ್

ಈ ಬೈಕಿನಲ್ಲಿ ಎಕ್ಸಾಸ್ಟ್ ಸಿಸ್ಟಂ ಮತ್ತು ಸ್ಟಡ್ಡ್ ಡ್ಯುಯಲ್-ಪರ್ಪಸ್ ಟಯರ್ ಗಳನ್ನು ಅಳವಡಿಸಿದ್ದಾರೆ. ಈ ಮಾಡಿಫೈ ಮಾಡಲಾದ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕ್ ಸೆಕ್ರ್ಯಾಂಬ್ಲರ್ ಮಾದರಿಯ ಲುಕ್ ಅನ್ನು ಹೊಂದಿದೆ.

MOST READ: ಲಾಕ್‌ಡೌನ್ ನಡುವೆಯೂ ಭರ್ಜರಿ ಮಾರಾಟ ಕಂಡ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಹೊಸ ಲುಕ್‍‍ನಲ್ಲಿ ಮಿಂಚಿದ ಮಾಡಿಫೈ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕ್

ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಜನಪ್ರಿಯ ಮಾದರಿಗಳಾದ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ 650 ಬೈಕುಗಳನ್ನು ಬಿಎಸ್-6 ಆವೃತ್ತಿಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ರಾಯಲ್ ಎನ್‍‍ಫೀಲ್ಡ್ ಕಂಪನಿಯ ಈ ಟ್ವಿನ್ ಬೈಕುಗಳಿಗೆ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಹೊಂದಿದೆ.

ಹೊಸ ಲುಕ್‍‍ನಲ್ಲಿ ಮಿಂಚಿದ ಮಾಡಿಫೈ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕ್

ರಾಯಲ್ ಎನ್‍ಫೀಲ್ಡ್ ಕಂಪನಿಯು ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ 650 ಬೈಕುಗಳನ್ನು 2018ರ ನವೆಂಬರ್‌ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿದ್ದರು. ಈ ಎರಡೂ ಬೈಕುಗಳು ಭಾರತೀಯ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಿಸಿಯಾಗಿದೆ.

MOST READ: 25 ಸಾವಿರ ಗಡಿ ದಾಟಿದ ಯಮಹಾ ಎಂಟಿ-15 ಬೈಕಿನ ಮಾರಾಟ

ಹೊಸ ಲುಕ್‍‍ನಲ್ಲಿ ಮಿಂಚಿದ ಮಾಡಿಫೈ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕ್

ಕಳೆದ ಆರ್ಥಿಕ ವರ್ಷದಲ್ಲಿ ದಾಖಲೆಯ ಪ್ರಮಾಣದಲ್ಲಿ ಈ ರಾಯಲ್ ಎನ್‍ಫೀಲ್ಡ್ ಟ್ವಿನ್ ಬೈಕುಗಳು ಮಾರಾಟವಾಗಿವೆ. ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಟ್ವಿನ್ ಬೈಕುಗಳ ಒಟ್ಟು 20,188 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

ಹೊಸ ಲುಕ್‍‍ನಲ್ಲಿ ಮಿಂಚಿದ ಮಾಡಿಫೈ ರಾಯಲ್ ಎನ್‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಬೈಕ್

ಇಂಟರ್‍‍ಸೆಪ್ಟೆರ್ 650 ಮತ್ತು ಕಾಂಟಿ‍ನೆಂಟಲ್ ಜಿಟಿ 650 ಎಂಬ ಎರಡು ಟ್ವಿನ್ ಬೈಕ್‍‍ಗಳು 649 ಸಿಸಿ ಏರ್/ಆಯಿಲ್ -ಕೂಲ್ಡ್ ಪ್ಯಾರೆಲೆಲ್-ಟ್ವಿನ್ ಎಂಜಿನ್ ಅನ್ನು ಹೊಂದಿವೆ. ಈ ಎಂಜಿನ್ 47 ಬಿ‍ಹೆಚ್‍ಪಿ ಪವರ್ ಮತ್ತು 52 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

Most Read Articles

Kannada
English summary
This Custom Royal Enfield 650 Scrambler Looks Badass. Read in Kannada.
Story first published: Tuesday, May 5, 2020, 11:20 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X