ತಾತ್ಕಾಲಿಕವಾಗಿ ಸ್ಥಗಿತಗೊಂಡ ರಾಯಲ್ ಎನ್‍‍ಫೀಲ್ಡ್ ಟ್ವಿನ್ ಬೈಕುಗಳ ವಿತರಣೆ

ಚೆನ್ನೈ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ತನ್ನ ಜನಪ್ರಿಯ ಮಾದರಿಗಳಾದ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ 650 ಬೈಕುಗಳ ವಿತರಣೆಯನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಿದೆ.

ತಾತ್ಕಾಲಿಕವಾಗಿ ಸ್ಥಗಿತಗೊಂಡ ರಾಯಲ್ ಎನ್‍‍ಫೀಲ್ಡ್ ಟ್ವಿನ್ ಬೈಕುಗಳ ವಿತರಣೆ

ಕಂಪನಿಯು ಬಿಎಸ್-6 ಟ್ವಿನ್ ಬೈಕ್‍‍ಗಳನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸುವ ನಿರೀಕ್ಷೆಗಳಿವೆ. ಹೊಸ ಬಿಎಸ್-6, 650 ಟ್ವಿನ್ ಬೈಕ್‍‍ಗಳಲ್ಲಿ ಕಾಸ್ಮೆಟಿಕ್ ನವೀಕರಣಗಳನ್ನು ಮಾಡಿಲ್ಲವಾದರೂ, ರಾಯಲ್ ಎನ್‍‍ಫೀಲ್ಡ್ ಮಾಲೀಕರಿಗೆ ಬೇಕಾದರೆ ಡೀಲರ್‍‍‍ಗಳು ಮಾರ್ಪಾಡು ಮಾಡಿ ಕೊಡುತ್ತಾರೆಂಬ ನಿರೀಕ್ಷೆಗಳಿವೆ.

ತಾತ್ಕಾಲಿಕವಾಗಿ ಸ್ಥಗಿತಗೊಂಡ ರಾಯಲ್ ಎನ್‍‍ಫೀಲ್ಡ್ ಟ್ವಿನ್ ಬೈಕುಗಳ ವಿತರಣೆ

ಈ ಬೈಕಿನ ಇಂಜಿನ್ ಸಾಮರ್ಥ್ಯ ಮತ್ತು ಹಲವಾರು ವೈಶಿಷ್ಟ್ಯಗಳಿಂದ ಕೂಡಿರುವ ಕಾರಣ ದೇಶಿಯ ಮಾರುಕಟ್ಟೆ ಗ್ರಾಹಕರು ಈ ಬೈಕ್‍‍ಗೆ ಫಿದಾ ಆದರು. ಎರಡೂ ಬೈ‍ಕ್‍‍ಗಳು ಪ್ಯಾರೆಲೆಲ್ ಟ್ವಿನ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿವೆ.

ತಾತ್ಕಾಲಿಕವಾಗಿ ಸ್ಥಗಿತಗೊಂಡ ರಾಯಲ್ ಎನ್‍‍ಫೀಲ್ಡ್ ಟ್ವಿನ್ ಬೈಕುಗಳ ವಿತರಣೆ

ಇಂಟರ್‍‍ಸೆಪ್ಟೆರ್ 650 ಮತ್ತು ಕಾಂಟಿ‍ನೆಂಟಲ್ ಜಿಟಿ 650 ಎಂಬ ಎರಡು ಟ್ವಿನ್ ಬೈಕ್‍‍ಗಳು 649 ಸಿಸಿ ಏರ್/ಆಯಿಲ್ -ಕೂಲ್ಡ್ ಪ್ಯಾರೆಲೆಲ್-ಟ್ವಿನ್ ಎಂಜಿನ್ ಅನ್ನು ಹೊಂದಿವೆ. ಈ ಎಂಜಿನ್ 47 ಬಿ‍ಹೆಚ್‍ಪಿ ಪವರ್ ಮತ್ತು 52 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ತಾತ್ಕಾಲಿಕವಾಗಿ ಸ್ಥಗಿತಗೊಂಡ ರಾಯಲ್ ಎನ್‍‍ಫೀಲ್ಡ್ ಟ್ವಿನ್ ಬೈಕುಗಳ ವಿತರಣೆ

ಎಂಜಿನ್‍‍ನೊಂದಿಗೆ ಸ್ಟ್ಯಾಂಡರ್ಡ್ ಅಸಿಸ್ಟ್ ಕ್ಲಚ್‍‍‍ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಬೈಕ್ ಸವಾರರ ಸುರಕ್ಷತೆಗಾಗಿ ರಾಯಲ್ ಎನ್‍ಫೀಲ್ಡ್ 650 ಟ್ವಿನ್ ಬೈಕ್‍‍ಗಳಲ್ಲಿ ಮೂಂಭಾಗದಲ್ಲಿ 320ಎಂಎಂ ಮತ್ತು ಹಿಂಭಾಗದಲ್ಲಿ 240ಎಂಎಂನ ಡಿಸ್ಕ್ ಬ್ರೇಕ್‍‍ಗಳನ್ನು ಅಳವಡಿಸಲಾಗಿದ್ದು, ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿವೆ.

ತಾತ್ಕಾಲಿಕವಾಗಿ ಸ್ಥಗಿತಗೊಂಡ ರಾಯಲ್ ಎನ್‍‍ಫೀಲ್ಡ್ ಟ್ವಿನ್ ಬೈಕುಗಳ ವಿತರಣೆ

ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿ‍ನೆಂಟಲ್ ಜಿಟಿ 650 ಬೈಕುಗಳ ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ಕ್ರಮವಾಗಿ ರೂ.2.51 ಲಕ್ಷ ಮತ್ತು ರೂ.2.93 ಲಕ್ಷಗಳಾಗಿವೆ. ಈ ಎರಡೂ ಬೈಕ್‍ಗಳು ಆಧುನಿಕ ಕ್ಲಾಸಿಕ್ ಲುಕ್ ಅನ್ನು ಹೊಂದಿವೆ.

ತಾತ್ಕಾಲಿಕವಾಗಿ ಸ್ಥಗಿತಗೊಂಡ ರಾಯಲ್ ಎನ್‍‍ಫೀಲ್ಡ್ ಟ್ವಿನ್ ಬೈಕುಗಳ ವಿತರಣೆ

ಕಾಂಟಿನೆಂಟಲ್ ಜಿಟಿ 650 ಕೆಫೆ ರೇಸರ್ ವಿನ್ಯಾಸವನ್ನು ಆಧರಿಸಿದರೆ ಇನ್ನು ಇಂಟರ್‍‍ಸೆಪ್ಟರ್ 650 ಸ್ಕ್ರ್ಯಾಂಬ್ಲರ್ ಶೈಲಿಯ ವಿನ್ಯಾಸವನ್ನು ಆಧರಿಸಿದೆ. ಎರಡು ಬೈಕ್‍ಗಳು 41ಎಂಎಂ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ ಮತ್ತು ಹಿಂಭಾಗದಲ್ಲಿ 110ಎಂಎಂ ಟ್ವಿನ್ ಕಾಯಿಲ್-ಕವರ್, 650 ಟ್ವಿನ್ ಬೈಕ್‍ಗಳು 18 ಇಂಚಿನ 360 ಸ್ಪೋಕ್ ಅಲ್ಯುಮಿನಿಯಂ ಅಲಾಯ್ ವ್ಹೀಲ್‍‍ಗಳನ್ನು ಹೊಂದಿವೆ.

ತಾತ್ಕಾಲಿಕವಾಗಿ ಸ್ಥಗಿತಗೊಂಡ ರಾಯಲ್ ಎನ್‍‍ಫೀಲ್ಡ್ ಟ್ವಿನ್ ಬೈಕುಗಳ ವಿತರಣೆ

ಕಳೆದ ಬಾರಿ ರಾಯಲ್ ಎನ್‍‍ಫೀಲ್ಡ್ 650 ಸಿಸಿ ಬೈಕ್‍‍ಗಳಲ್ಲಿ ಸಣ್ಣ ಬದಲಾವಣೆಗಳನ್ನು ಮಾಡಲಾಗಿತ್ತು. ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಟಲ್ ಜಿಟಿ 650 ಬೈಕ್‍‍ಗಳ ಹೆಡ್‍‍ಲೈ‍ಟ್‍‍ಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿತ್ತು.

ತಾತ್ಕಾಲಿಕವಾಗಿ ಸ್ಥಗಿತಗೊಂಡ ರಾಯಲ್ ಎನ್‍‍ಫೀಲ್ಡ್ ಟ್ವಿನ್ ಬೈಕುಗಳ ವಿತರಣೆ

ರಾಯಲ್ ಎನ್‍ಫೀಲ್ಡ್ ತನ್ನ ಜನಪ್ರಿಯ ಮಾದರಿಗಳಾದ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿ‍ಟಿ 650 ಬೈಕುಗಳ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ರಾಯಲ್ ಎನ್‍‍ಫೀಲ್ಡ್ ತನ್ನ ಟ್ವಿನ್ ಬೈಕ್‍‍ಗಳ ವಿತರಣೆಯನ್ನು ಶೀಘ್ರದಲ್ಲೇ ಪ್ರಾರಂಭಿಸುತ್ತದೆಂಬ ನಿರೀಕ್ಷೆಗಳಿವೆ.

More from DriveSpark

Article Published On: Wednesday, January 8, 2020, 17:32 [IST]
English summary
Royal Enfield Interceptor, Continental GT 650 Deliveries Stopped Temporarily: Here's Why - Read in Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+