ರಾಯಲ್ ಎನ್‌ಫೀಲ್ಡ್ ಹೊಸ ಮಿಟಿಯೊರ್ 350 ಕ್ರೂಸರ್ ಬೈಕ್ ಬಿಡುಗಡೆ

ಕ್ಲಾಸಿಕ್ ಬೈಕ್ ಉತ್ಪಾದನೆಯಲ್ಲಿ ಜನಪ್ರಿಯವಾಗಿರುವ ರಾಯಲ್ ಎನ್‌ಫೀಲ್ಡ್ ಕಂಪನಿಯು ತನ್ನ ಹೊಸ ಮಿಟಿಯೊರ್ 350 ಕ್ರೂಸರ್ ಮೋಟಾರ್‌ಸೈಕಲ್ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಬೈಕ್ ಮಾದರಿಯು ಆಕರ್ಷಕ ಬೆಲೆಯೊಂದಿಗೆ ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಫೀಚರ್ಸ್ ಪಡೆದುಕೊಂಡಿದೆ.

ರಾಯಲ್ ಎನ್‌ಫೀಲ್ಡ್ ಹೊಸ ಮೆಟಿಯೊರ್ 350 ಕ್ರೂಸರ್ ಬೈಕ್ ಬಿಡುಗಡೆ

ರಾಯಲ್ ಎನ್‌ಫೀಲ್ಡ್ ನಿರ್ಮಾಣದ ಮತ್ತೊಂದು ಕ್ರೂಸರ್ ಬೈಕ್ ಮಾದರಿಯಾಗಿದ್ದ ಥಂಡರ್‌ಬರ್ಡ್ ಎಕ್ಸ್ ಬೈಕ್ ಮಾರಾಟ ಸ್ಥಗಿತಗೊಳಿಸಿದ ನಂತರ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಥಂಡರ್‌ಬರ್ಡ್ ಎಕ್ಸ್ ಸ್ಥಾನ ತುಂಬಲು ಮಿಟಿಯೊರ್ 350 ಬೈಕ್ ಮಾದರಿಯನ್ನು ಅಭಿವೃದ್ದಿಪಡಿಸಲಾಗಿದ್ದು, ಹೊಸ ಬೈಕ್ ಮಾದರಿಯು ಪ್ರಮುಖ ಮೂರು ವೆರಿಯೆಂಟ್‌ಗಳೊಂದಿಗೆ ಆರಾಮದಾಯಕ ಬೈಕ್ ಸವಾರಿಯನ್ನು ಒದಗಿಸಲಿವೆ.

ರಾಯಲ್ ಎನ್‌ಫೀಲ್ಡ್ ಹೊಸ ಮೆಟಿಯೊರ್ 350 ಕ್ರೂಸರ್ ಬೈಕ್ ಬಿಡುಗಡೆ

ಮೇಲ್ನೋಟಕ್ಕೆ ಮಿಟಿಯೊರ್ 350 ಬೈಕ್ ಮಾದರಿಯು ಥಂಡರ್‌ಬರ್ಡ್ ಎಕ್ಸ್ ಬೈಕ್ ಮಾದರಿಯ ಹೋಲಿಕೆಯನ್ನು ಪಡೆದುಕೊಂಡಿದ್ದರೂ ಸಹ ತಾಂತ್ರಿಕವಾಗಿ ಸಾಕಷ್ಟು ಭಿನ್ನತೆಗಳನ್ನು ಹೊಂದಿದ್ದು, ಹೊಸ ಬೈಕ್ ಮಾದರಿಯು ಫೈರ್‌ಬಾಲ್, ಸ್ಟೆಲ್ಲಾರ್ ಮತ್ತು ಸೂಪರ್‌ನೊವಾ ಎಂಬ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ರಾಯಲ್ ಎನ್‌ಫೀಲ್ಡ್ ಹೊಸ ಮೆಟಿಯೊರ್ 350 ಕ್ರೂಸರ್ ಬೈಕ್ ಬಿಡುಗಡೆ

ಚೆನ್ನೈ ಎಕ್ಸ್‌ಶೋರೂಂ ಪ್ರಕಾರ ಮಿಟಿಯೊರ್ 350 ಫೈರ್‌ಬಾಲ್ ಮಾದರಿಯು ರೂ. 1,75,825ಕ್ಕೆ, ಸ್ಟೆಲ್ಲಾರ್ ಮಾದರಿಯು ರೂ. 1,82,342ಕ್ಕೆ ಮತ್ತು ಹೈ ಎಂಡ್ ಮಾದರಿಯಾದ ಸೂಪರ್‌ನೊವಾ ರೂ. 1,90,536 ಬೆಲೆ ಹೊಂದಿದೆ.

ರಾಯಲ್ ಎನ್‌ಫೀಲ್ಡ್ ಹೊಸ ಮೆಟಿಯೊರ್ 350 ಕ್ರೂಸರ್ ಬೈಕ್ ಬಿಡುಗಡೆ

ಮಿಟಿಯೊರ್ 350 ಆರಂಭಿಕ ಮಾದರಿಯಾದ ಫೈರ್‌ಬಾಲ್‌ನಲ್ಲಿ ಬ್ಲ್ಯಾಕ್ ಔಟ್ ಕಾಂಪೊನೆಟ್ಸ್, ಸಿಂಗಲ್ ಟೋನ್ ಗ್ರಾಫಿಕ್ಸ್ ನೊಂದಿಗೆ ಫ್ಯೂಯಲ್ ಟ್ಯಾಂಕ್, ಬ್ಲ್ಯಾಕ್ ಔಟ್ ಎಂಜಿನ್ ಮತ್ತು ಕಲರ್ ರಿಮ್ ಟೇಪ್ ಅಳವಡಿಸಲಾಗಿದ್ದು, ಎರಡನೇ ಮಾದರಿಯಾದ ಸ್ಟೆಲ್ಲಾರ್ ರೂಪಾಂತರದಲ್ಲಿ ಬ್ಯಾಡ್ಜ್‌ಗಳು, ಕ್ರೋಮ್ ಎಕ್ಸಾಸ್ಟ್, ಕ್ರೋಮ್ ಹ್ಯಾಂಡಲ್‌ಬಾರ್ ಮತ್ತು ಕ್ರೋಮ್ ಇಎಫ್‌ಐ ಕವರ್ ಪಡೆದುಕೊಂಡಿದ್ದು, ಇದರಲ್ಲಿ ಬ್ಯಾಕ್ ರೆಸ್ಟ್ ಸಹ ಒಳಗೂಂಡಿದೆ.

ರಾಯಲ್ ಎನ್‌ಫೀಲ್ಡ್ ಹೊಸ ಮೆಟಿಯೊರ್ 350 ಕ್ರೂಸರ್ ಬೈಕ್ ಬಿಡುಗಡೆ

ಹೈ ಎಂಡ್ ಮಾದರಿಯಾದ ಸೂಪರ್‌ನೊವಾದಲ್ಲಿ ಡ್ಯುಯಲ್-ಟೋನ್ ಬಣ್ಣದ ಆಯ್ಕೆಯನ್ನು ಹೊಂದಿದ್ದು, ಇದು ಪ್ರೀಮಿಯಂ ಸೀಟ್ ಫಿನಿಶಿಂಗ್, ವಿಂಡ್‌ಸ್ಕ್ರೀನ್ ಮತ್ತು ಕ್ರೋಮ್ ಇಂಡಿಕೇಟರ್ ಸಹ ಹೊಂದಿದೆ. ಜೊತೆಗೆ ಹೊಸ ಬೈಕಿನಲ್ಲಿ ಟಿಪ್ಲರ್ ಸ್ಕ್ರೀನ್ ಒಳಗೊಂಡಿರುವ ಟರ್ನ್-ಬೈ-ಟರ್ನ್ ಗೂಗಲ್ ನ್ಯಾವಿಗೇಷನ್, ಬ್ಲೂಟೂತ್ ಮೂಲಕ ಕನೆಕ್ಟ್ ಮಾಡಬಹುದಾದ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಪಡೆದುಕೊಂಡಿದೆ.

ರಾಯಲ್ ಎನ್‌ಫೀಲ್ಡ್ ಹೊಸ ಮೆಟಿಯೊರ್ 350 ಕ್ರೂಸರ್ ಬೈಕ್ ಬಿಡುಗಡೆ

ಹಾಗೆಯೇ ಡಬಲ್ ಡೌನ್‌ಟ್ಯೂಬ್ ಕ್ರೆಡಲ್ ಫ್ರೇಮ್ ಮೇಲೆ ಅಭಿವೃದ್ದಿಗೊಂಡಿರುವ ಹೊಸ ಬೈಕ್ ಮಾದರಿಯು ಥಂಡರ್‌ಬರ್ಡ್ ಮಾದರಿಗಿಂತಲೂ ಹೆಚ್ಚು ಅರಾಮದಾಯಕ ರೈಡಿಂಗ್ ಒದಗಿಸಲಿದ್ದು, ಮುಂಭಾಗದಲ್ಲಿ 41-ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಟ್ವಿನ್ ಶಾಕ್‌ ಅಬ್ಸಾರ್ಬರ್‌ ನೀಡಲಾಗಿದೆ.

ರಾಯಲ್ ಎನ್‌ಫೀಲ್ಡ್ ಹೊಸ ಮೆಟಿಯೊರ್ 350 ಕ್ರೂಸರ್ ಬೈಕ್ ಬಿಡುಗಡೆ

ಹೊಸ ಬೈಕಿನಲ್ಲಿ ಮತ್ತೊಂದು ಪ್ರಮುಖ ಬದಲಾವಣೆ ಎಂದರೆ ಥಂಡರ್‌ಬರ್ಡ್ ಎಕ್ಸ್ ಮಾದರಿಗಿಂತಲೂ 6 ಕೆ.ಜಿ ಕಡಿಮೆ ತೂಕ ಹೊಂದಿರುವ ಹೊಸ ಮಿಟಿಯೊರ್ 350 ಬೈಕ್ ಮಾದರಿಯು 1,400-ಎಂಎಂ ವೀಲ್ಹ್‌ಬೆಸ್, 170-ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಪಡೆದುಕೊಂಡಿದೆ.

ರಾಯಲ್ ಎನ್‌ಫೀಲ್ಡ್ ಹೊಸ ಮೆಟಿಯೊರ್ 350 ಕ್ರೂಸರ್ ಬೈಕ್ ಬಿಡುಗಡೆ

ಎಂಜಿನ್ ಮತ್ತು ಪರ್ಫಾಮೆನ್ಸ್

ಹೊಸ ಮಿಟಿಯೊರ್ 350 ಬೈಕ್ ಮಾದರಿಯು ಹೊಸದಾಗಿ ಅಭಿವೃದ್ದಿಗೊಳಿಸಲಾದ ಜೆ-ಸೀರಿಸ್ ಮಾದರಿಯ 349-ಸಿಸಿ ಫ್ಯೂಲ್ ಇಂಜೆಕ್ಷೆಡ್ ಸಿಂಗಲ್ ಸಿಲಿಂಡರ್ ಹೊಂದಿದ್ದು, 5-ಸ್ಪೀಡ್ ಗೇ‌ರ್‌ಬಾಕ್ಸ್‌ನೊಂದಿಗೆ 20.2-ಬಿಎಚ್‌ಪಿ ಮತ್ತು 27-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ರಾಯಲ್ ಎನ್‌ಫೀಲ್ಡ್ ಹೊಸ ಮೆಟಿಯೊರ್ 350 ಕ್ರೂಸರ್ ಬೈಕ್ ಬಿಡುಗಡೆ

ಈ ಮೂಲಕ ಕ್ಲಾಸಿಕ್ ಬೈಕ್ ಖರೀದಿದಾರರನ್ನು ತನ್ನದೆಯಾದ ವೈಶಿಷ್ಟ್ಯತೆಗಳೊಂದಿಗೆ ಗಮನಸೆಳೆಯಲಿರುವ ಮಿಟಿಯೊರ್ 350 ಬೈಕ್ ಮಾದರಿಯು ಇತ್ತೀಚೆಗೆ ಬಿಡುಗಡೆಯಾಗಿರುವ ಹಲವು ಕ್ಲಾಸಿಕ್ ಬೈಕ್ ಮಾದರಿಗಳಿಗೆ ಪೈಪೋಟಿ ನೀಡಲಿದ್ದು, ಹೊಸ ಬೈಕ್ ಖರೀದಿಗಾಗಿ ರಾಯಲ್ ಎನ್‌ಫೀಲ್ಡ್ ಕಂಪನಿಯು ಇಂದಿನಿಂದಲೇ ಬುಕ್ಕಿಂಗ್ ಆರಂಭಿಸುವ ಮೂಲಕ ಹೊಸ ಬೈಕ್ ಖರೀದಿ 3 ವರ್ಷಗಳ ವಾರಂಟಿ ನೀಡುತ್ತಿದೆ.

More from DriveSpark

Article Published On: Friday, November 6, 2020, 12:52 [IST]
English summary
Royal Enfield Meteor 350 Launched In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+