ಬಿಡುಗಡೆಯಾಗಲಿದೆ ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್

ಚೆನ್ನೈ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಹೊಸ ಮೆಟಿಯೋರ್ 350 ಫೈರ್‌ಬಾಲ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಶೀಘ್ರದಲ್ಲೇ ಬಿಡುಗಡೆಯಾಗಲಿರುವ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬಹುನಿರೀಕ್ಷಿತ ಬೈಕುಗಳಲ್ಲಿ ಒಂದಾಗಿದೆ.

ಬಿಡುಗಡೆಯಾಗಲಿದೆ ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್

ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಮೆಟಿಯೋರ್ 350 ಫೈರ್‌ಬಾಲ್ ಬೈಕನ್ನು ಮುಂದಿನ ತಿಂಗಳು ತಿಂಗಳು ಬಿಡುಗಡೆಯಾಗಲಿದೆ ಎಂದು ವರದಿಗಳಾಗಿದೆ. ಅಲ್ಲದೇ ಮುಂದಿನ ತಿಂಗಳು ಶೋರೂಂಗಳಿಗೆ ಈ ಹೊಸ ಬೈಕ್ ತಲುಪಲಿದೆ. ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.65 ಲಕ್ಷಗಳಾಗಿರಲಿದೆ.

ಬಿಡುಗಡೆಯಾಗಲಿದೆ ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್

ಹೊಸ ರಾಯಲ್ ಎನ್‍ಫೀಲ್ಡ್ ಕಂಪನಿಯ ಬೈಕುಗಳ ಸರಣಿಯಲ್ಲಿ ಮೊದಲ ಬಾರಿಗೆ ಮೆಟಿಯೋರ್ 350 ಫೈರ್‌ಬಾಲ್ ಬೈಕಿನಲ್ಲಿ ಬ್ಲೂಟೂತ್ ಕನೆಕ್ಟಿವಿಟಿ, ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಫೀಚರ್ ಗಳು ಹೊಂದಿರಬಹುದು ಎಂದು ವರದಿಗಳು ಪ್ರಕಟವಾಗಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಬುಲೆಟ್ 350 ಬೈಕ್

ಬಿಡುಗಡೆಯಾಗಲಿದೆ ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್

ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಚಿತ್ರಗಳು ಇತ್ತೀಚೆಗೆ ಆನ್‌ಲೈನ್‌ನಲ್ಲಿ ಬಹಿರಂಗವಾಗಿವೆ. ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನಲ್ಲಿ ವೃತ್ತಕಾರದ ಹೆಡ್ ಲ್ಯಾಂಪ್, ಅಲಾಯ್ ವ್ಹೀಲ್ ಮತ್ತು ಬ್ಲ್ಯಾಕ್ ಔಟ್ ಎಕ್ಸಾಟ್ ಅನ್ನು ಹೊಂದಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ಥಂಡರ್‍‍ಬರ್ಡ್ ಎಕ್ಸ್ 350 ಬೈಕಿನ ಬದಲಾಗಿ ಹೊಸ ಮೆಟಿಯೋರ್ 350 ಬೈಕನ್ನು ಬಿಡುಗಡೆಗೊಳಿಸುತ್ತಿದೆ.

ಬಿಡುಗಡೆಯಾಗಲಿದೆ ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್

ಹೊಸ ಫೀಚರ್ಸ್‍ಗಳನ್ನು ಹೊರತುಪಡಿಸಿ ಈ ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕನ್ನು ಕೂಡ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ. ಈ ಬೈಕಿನಲ್ಲಿ 346 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಫ್ರಿ ಕ್ಯಾಟಲಿಕ್ ಕರ್ನವಾಟರ್ ಅನ್ನು ಎಕ್ಸಾಸ್ಟ್ ಸಿಸ್ಟಂನೊಂದಿಗೆ ಜೋಡಿಸಲಾಗಿದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಬಿಡುಗಡೆಯಾಗಲಿದೆ ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್

ಈ ಎಂಜಿನ್ ಉತ್ತಮ ಇಂಧನ ಧಕ್ಷತೆಯನು ಹೊಂದಿದೆ. ಪ್ರಸ್ತುತ ಟ್ಯಾಪೆಟ್-ವಾಲ್ವ್ ಯುಸಿಇ 346 ಸಿಸಿ ಎಂಜಿನ್‌ಗಳಿಗಿಂತ ಹೆಚ್ಚಿನ ಕಾರ್ಯಕ್ಷಮತೆಯನ್ನು ನೀಡುತ್ತದೆ. ಪ್ರಸ್ತುತ ಬಿಎಸ್-4 ಪ್ರೇರಿತ 346 ಸಿಸಿ ಸಿಂಗಲ್ ಸಿಲಿಂಡರ್, ಏರ್-ಕೂಲ್ಡ್ ಎಂಜಿನ್ ಎಂಜಿನ್ 19.1 ಬಿಹೆಚ್‌ಪಿ ಪವರ್ ಮತ್ತು 28 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಬಿಡುಗಡೆಯಾಗಲಿದೆ ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್

ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಮುಂಭಾಗಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳನ್ನು ಮತ್ತು ಹಿಂಭಾಗದಲ್ಲಿ ಟ್ವಿನ್ ಶಾಕ್ ಸೆಟಪ್ ಅನ್ನು ಒಳಗೊಂಡಿದೆ.ಈ ಬೈಕಿನಲ್ಲಿ ಸವಾರರ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಸುರಕ್ಷತೆಗಾಗಿ ಬೈಕಿನ ಮುಂಭಾಗದಲ್ಲಿ ಮತ್ತು ಹಿಂಭಾಗ ಟಯರ್‍ಗಳಲ್ಲಿ ಡಿಸ್ಕ್ ಬ್ರೇಕ್ ಗಳನ್ನು ಅಳವಡಿಸಲಾಗಿದೆ.

MOST READ: ಬಿಡುಗಡೆಯಾಯ್ತು ಬಹುನೀರಿಕ್ಷಿತ ಹೊಸ ಯಮಹಾ ಬೈಕುಗಳ ಟೀಸರ್

ಬಿಡುಗಡೆಯಾಗಲಿದೆ ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್

ಇದರೊಂದಿಗೆ ಈ ಬೈಕಿನಲ್ಲಿ ಕಂಪನಿಯು ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸುವ ಸಾಧ್ಯತೆಗಳಿದೆ. ಮಾರುಕಟ್ಟೆಯಲ್ಲಿರುವ ಥಂಡರ್‍‍ಬರ್ಡ್‍‍ನಲ್ಲಿರುವ ಎಂಜಿನ್ ಹೆಚ್ಚಿನ ಪ್ರಮಾಣದ ವೈಬ್ರೆಷನ್ ಅನ್ನು ಹೊಂದಿದೆ.

ಬಿಡುಗಡೆಯಾಗಲಿದೆ ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್

ಹೊಸ ಬೈಕಿನಲ್ಲಿ ಅಳವಡಿಸಲಾಗುವ ಎಂಜಿನ್ ಹೊಸ ಟೆಕ್ನಾಲಜಿಯನ್ನು ಹೊಂದಿರಲಿದ್ದು, ವೈಬ್ರೆಷನ್ ಸಮಸ್ಯೆಯನ್ನು ಹೋಗಲಾಡಿಸಲಿದೆ. ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕ್ ಥಂಡರ್‌ಬರ್ಡ್ ಎಕ್ಸ್ 350 ಮಾದರಿಯ ರೆಟ್ರೂ-ಅರ್ಬನ್ ಕ್ರೂಸರ್ ವಿನ್ಯಾಸವನ್ನು ಹೊಂದಿದೆ.

More from DriveSpark

Article Published On: Wednesday, May 20, 2020, 16:29 [IST]
English summary
Royal Enfield Meteor 350 Launch Likely Delayed To Next Month. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+