ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಬೆಲೆ ಮಾಹಿತಿ ಬಹಿರಂಗ

ಚೆನ್ನೈ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಹೊಸ ಮೆಟಿಯೋರ್ 350 ಫೈರ್‌ಬಾಲ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಬೆಲೆಯು ಬಹಿರಂಗವಾಗಿದೆ.

ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಬೆಲೆ ಮಾಹಿತಿ ಬಹಿರಂಗ

ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.65 ಲಕ್ಷಗಳಾಗಿದೆ. ಇತ್ತೀಚೆಗೆ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕ್ ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಿತ್ತು. ಹೊಸ ಮೆಟಿಯೋರ್ 350 ಬೈಕಿನ ಹಲವು ಮಾಹಿತಿಗಳು ಬಹಿರಂಗವಾಗಿದೆ. ಈ ಹೂಸ ಬೈಕಿನಲ್ಲಿ ಟ್ವಿನ್ ಪೊಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಸೈಡ್ ಪ್ಯಾನೆಲ್ ನಲ್ಲಿ ಮಾನಿಕರ್ ಅನ್ನು ಅಳವಡಿಸಿರುವುದು ಸ್ಪಾಟ್ ಟೆಸ್ಟ್ ಬಹಿರಂಗವಾಗಿದೆ. ಹೊಸ ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ.

ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಬೆಲೆ ಮಾಹಿತಿ ಬಹಿರಂಗ

ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಚಿತ್ರಗಳು ಇತ್ತೀಚೆಗೆ ಆನ್‌ಲೈನ್‌ನಲ್ಲಿ ಬಹಿರಂಗವಾಗಿವೆ. ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನಲ್ಲಿ ವೃತ್ತಕಾರದ ಹೆಡ್ ಲ್ಯಾಂಪ್, ಅಲಾಯ್ ವ್ಹೀಲ್ ಮತ್ತು ಬ್ಲ್ಯಾಕ್ ಔಟ್ ಎಕ್ಸಾಟ್ ಅನ್ನು ಹೊಂದಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ಥಂಡರ್‍‍ಬರ್ಡ್ ಎಕ್ಸ್ 350 ಬೈಕಿನ ಬದಲಾಗಿ ಹೊಸ ಮೆಟಿಯೋರ್ 350 ಬೈಕನ್ನು ಬಿಡುಗಡೆಗೊಳಿಸುತ್ತಿದೆ.

MOST READ: ಬಹಿರಂಗವಾಯ್ತು ಬಿಎಸ್-6 ಬೆನೆಲ್ಲಿ ಇಂಪೀರಿಯಲ್ 400 ಬೈಕಿನ ಬೆಲೆ

ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಬೆಲೆ ಮಾಹಿತಿ ಬಹಿರಂಗ

ಹೊಸ ಫೀಚರ್ಸ್‍ಗಳನ್ನು ಹೊರತುಪಡಿಸಿ ಈ ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕನ್ನು ಕೂಡ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ. ಈ ಬೈಕಿನಲ್ಲಿ 346 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಫ್ರಿ ಕ್ಯಾಟಲಿಕ್ ಕರ್ನವಾಟರ್ ಅನ್ನು ಎಕ್ಸಾಸ್ಟ್ ಸಿಸ್ಟಂನೊಂದಿಗೆ ಜೋಡಿಸಲಾಗಿದೆ.

ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಬೆಲೆ ಮಾಹಿತಿ ಬಹಿರಂಗ

ಈ ಎಂಜಿನ್ ಉತ್ತಮ ಇಂಧನ ಧಕ್ಷತೆಯನು ಹೊಂದಿದೆ. ಪ್ರಸ್ತುತ ಟ್ಯಾಪೆಟ್-ವಾಲ್ವ್ ಯುಸಿಇ 346 ಸಿಸಿ ಎಂಜಿನ್‌ಗಳಿಗಿಂತ ಹೆಚ್ಚಿನ ಕಾರ್ಯಕ್ಷಮತೆಯನ್ನು ನೀಡುತ್ತದೆ. ಪ್ರಸ್ತುತ ಬಿಎಸ್-4 ಪ್ರೇರಿತ 346 ಸಿಸಿ ಸಿಂಗಲ್ ಸಿಲಿಂಡರ್, ಏರ್-ಕೂಲ್ಡ್ ಎಂಜಿನ್ ಎಂಜಿನ್ 19.1 ಬಿಹೆಚ್‌ಪಿ ಪವರ್ ಮತ್ತು 28 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಬಿಡುಗಡೆಯಾಯ್ತು ಬಹುನೀರಿಕ್ಷಿತ ಹೊಸ ಯಮಹಾ ಬೈಕುಗಳ ಟೀಸರ್

ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಬೆಲೆ ಮಾಹಿತಿ ಬಹಿರಂಗ

ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಮುಂಭಾಗಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳನ್ನು ಮತ್ತು ಹಿಂಭಾಗದಲ್ಲಿ ಟ್ವಿನ್ ಶಾಕ್ ಸೆಟಪ್ ಅನ್ನು ಒಳಗೊಂಡಿದೆ.ಈ ಬೈಕಿನಲ್ಲಿ ಸವಾರರ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಸುರಕ್ಷತೆಗಾಗಿ ಬೈಕಿನ ಮುಂಭಾಗದಲ್ಲಿ ಮತ್ತು ಹಿಂಭಾಗ ಟಯರ್‍ಗಳಲ್ಲಿ ಡಿಸ್ಕ್ ಬ್ರೇಕ್ ಗಳನ್ನು ಅಳವಡಿಸಲಾಗಿದೆ.

ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಬೆಲೆ ಮಾಹಿತಿ ಬಹಿರಂಗ

ಇದರೊಂದಿಗೆ ಈ ಬೈಕಿನಲ್ಲಿ ಕಂಪನಿಯು ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸುವ ಸಾಧ್ಯತೆಗಳಿದೆ. ಮಾರುಕಟ್ಟೆಯಲ್ಲಿರುವ ಥಂಡರ್‍‍ಬರ್ಡ್‍‍ನಲ್ಲಿರುವ ಎಂಜಿನ್ ಹೆಚ್ಚಿನ ಪ್ರಮಾಣದ ವೈಬ್ರೆಷನ್ ಅನ್ನು ಹೊಂದಿದೆ. ಹೊಸ ಬೈಕಿನಲ್ಲಿ ಅಳವಡಿಸಲಾಗುವ ಎಂಜಿನ್ ಹೊಸ ಟೆಕ್ನಾಲಜಿಯನ್ನು ಹೊಂದಿರಲಿದ್ದು, ವೈಬ್ರೆಷನ್ ಸಮಸ್ಯೆಯನ್ನು ಹೋಗಲಾಡಿಸಲಿದೆ.

MOST READ: ಹೊಸ ಸುಜುಕಿ ಜಿಕ್ಸರ್ 250 ಟ್ವಿನ್ ಬೈಕುಗಳ ಟೀಸರ್ ಬಿಡುಗಡೆ

ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಬೆಲೆ ಮಾಹಿತಿ ಬಹಿರಂಗ

ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕ್ ಥಂಡರ್‌ಬರ್ಡ್ ಎಕ್ಸ್ 350 ಮಾದರಿಯ ರೆಟ್ರೂ-ಅರ್ಬನ್ ಕ್ರೂಸರ್ ವಿನ್ಯಾಸವನ್ನು ಹೊಂದಿದೆ. ಹೊಸ ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.

ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕಿನ ಬೆಲೆ ಮಾಹಿತಿ ಬಹಿರಂಗ

ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಫೈರ್‌ಬಾಲ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಬಜಾಜ್ ಅವೆಂಜರ್ 220 ಸ್ಟ್ರೀಟ್ ಮತ್ತು ಜಾವಾ 300 ಬೈಕುಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Tuesday, April 28, 2020, 21:07 [IST]
English summary
Royal Enfield Meteor 350 price. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+