Just In
- 12 min ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 20 min ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 29 min ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
- 1 hr ago Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
Don't Miss!
- Movies ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀಘ್ರದಲ್ಲೇ ಬಿಡುಗಡೆಯಾಗಲಿದೆ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಫೈರ್ಬಾಲ್ ಬೈಕ್
ಚೆನ್ನೈ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್ಫೀಲ್ಡ್ ಕಂಪನಿಯು ತನ್ನ ಮೆಟಿಯೋರ್ 350 ಫೈರ್ಬಾಲ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಶೀಘ್ರದಲ್ಲೇ ಬಿಡುಗಡೆಯಾಗಲಿರುವ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಫೈರ್ಬಾಲ್ ಭಾರತೀಯ ಮಾರುಕಟ್ಟೆಯಲ್ಲಿ ಬಹುನಿರೀಕ್ಷಿತ ಬೈಕುಗಳಲ್ಲಿ ಒಂದಾಗಿದೆ.
ರಾಯಲ್ ಎನ್ಫೀಲ್ಡ್ ಕಂಪನಿಯು ತನ್ನ ಮೆಟಿಯೋರ್ 350 ಫೈರ್ಬಾಲ್ ಬೈಕನ್ನು ಮುಂದಿನ ತಿಂಗಳ ಕೊನೆಯಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಗಳಾಗಿದೆ. ಅಲ್ಲದೇ ಮುಂದಿನ ತಿಂಗಳು ಶೋರೂಂಗಳಿಗೆ ಈ ಹೊಸ ಬೈಕ್ ತಲುಪಲಿದೆ. ಹೊಸ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಫೈರ್ಬಾಲ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.65 ಲಕ್ಷಗಳಾಗಿರಲಿದೆ.
ಹೊಸ ರಾಯಲ್ ಎನ್ಫೀಲ್ಡ್ ಕಂಪನಿಯ ಬೈಕುಗಳ ಸರಣಿಯಲ್ಲಿ ಮೊದಲ ಬಾರಿಗೆ ಮೆಟಿಯೋರ್ 350 ಫೈರ್ಬಾಲ್ ಬೈಕಿನಲ್ಲಿ ಬ್ಲೂಟೂತ್ ಕನೆಕ್ಟಿವಿಟಿ, ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಫೀಚರ್ ಗಳು ಹೊಂದಿರಬಹುದು ಎಂದು ನೀರಿಕ್ಷಿಸಲಾಗಿದೆ.
MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್ಪಲ್ಸ್ 200 ಬೈಕಿನ ಮಾಹಿತಿ
ಹೊಸ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಫೈರ್ಬಾಲ್ ಬೈಕಿನ ಚಿತ್ರಗಳು ಇತ್ತೀಚೆಗೆ ಆನ್ಲೈನ್ನಲ್ಲಿ ಬಹಿರಂಗವಾಗಿವೆ. ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಫೈರ್ಬಾಲ್ ಬೈಕಿನಲ್ಲಿ ವೃತ್ತಕಾರದ ಹೆಡ್ ಲ್ಯಾಂಪ್, ಅಲಾಯ್ ವ್ಹೀಲ್ ಮತ್ತು ಬ್ಲ್ಯಾಕ್ ಔಟ್ ಎಕ್ಸಾಟ್ ಅನ್ನು ಹೊಂದಿದೆ. ರಾಯಲ್ ಎನ್ಫೀಲ್ಡ್ ಕಂಪನಿಯು ಥಂಡರ್ಬರ್ಡ್ ಎಕ್ಸ್ 350 ಬೈಕಿನ ಬದಲಾಗಿ ಹೊಸ ಮೆಟಿಯೋರ್ 350 ಬೈಕನ್ನು ಬಿಡುಗಡೆಗೊಳಿಸುತ್ತಿದೆ.
ಹೊಸ ಫೀಚರ್ಸ್ಗಳನ್ನು ಹೊರತುಪಡಿಸಿ ಈ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಫೈರ್ಬಾಲ್ ಬೈಕನ್ನು ಕೂಡ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ. ಈ ಬೈಕಿನಲ್ಲಿ 346 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಫ್ರಿ ಕ್ಯಾಟಲಿಕ್ ಕರ್ನವಾಟರ್ ಅನ್ನು ಎಕ್ಸಾಸ್ಟ್ ಸಿಸ್ಟಂನೊಂದಿಗೆ ಜೋಡಿಸಲಾಗಿದೆ.
MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ
ಈ ಎಂಜಿನ್ ಉತ್ತಮ ಇಂಧನ ಧಕ್ಷತೆಯನು ಹೊಂದಿದೆ. ಪ್ರಸ್ತುತ ಟ್ಯಾಪೆಟ್-ವಾಲ್ವ್ ಯುಸಿಇ 346 ಸಿಸಿ ಎಂಜಿನ್ಗಳಿಗಿಂತ ಹೆಚ್ಚಿನ ಕಾರ್ಯಕ್ಷಮತೆಯನ್ನು ನೀಡುತ್ತದೆ. ಪ್ರಸ್ತುತ ಬಿಎಸ್-4 ಪ್ರೇರಿತ 346 ಸಿಸಿ ಸಿಂಗಲ್ ಸಿಲಿಂಡರ್, ಏರ್-ಕೂಲ್ಡ್ ಎಂಜಿನ್ ಎಂಜಿನ್ 19.1 ಬಿಹೆಚ್ಪಿ ಪವರ್ ಮತ್ತು 28 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಫೈರ್ಬಾಲ್ ಬೈಕಿನ ಮುಂಭಾಗಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಗಳನ್ನು ಮತ್ತು ಹಿಂಭಾಗದಲ್ಲಿ ಟ್ವಿನ್ ಶಾಕ್ ಸೆಟಪ್ ಅನ್ನು ಒಳಗೊಂಡಿದೆ.ಈ ಬೈಕಿನಲ್ಲಿ ಸವಾರರ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಸುರಕ್ಷತೆಗಾಗಿ ಬೈಕಿನ ಮುಂಭಾಗದಲ್ಲಿ ಮತ್ತು ಹಿಂಭಾಗ ಟಯರ್ಗಳಲ್ಲಿ ಡಿಸ್ಕ್ ಬ್ರೇಕ್ ಗಳನ್ನು ಅಳವಡಿಸಲಾಗಿದೆ.
MOST READ: ಬಿಎಸ್-6 ಎಂಜಿನ್ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ಸ್ಪೋರ್ಟ್ ಬೈಕ್
ಇದರೊಂದಿಗೆ ಈ ಬೈಕಿನಲ್ಲಿ ಕಂಪನಿಯು ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಬಹುದು. ಮಾರುಕಟ್ಟೆಯಲ್ಲಿರುವ ಥಂಡರ್ಬರ್ಡ್ನಲ್ಲಿರುವ ಎಂಜಿನ್ ಹೆಚ್ಚಿನ ಪ್ರಮಾಣದ ವೈಬ್ರೆಷನ್ ಅನ್ನು ಹೊಂದಿದೆ.
ಹೊಸ ಬೈಕಿನಲ್ಲಿ ಅಳವಡಿಸಲಾಗುವ ಎಂಜಿನ್ ಹೊಸ ಟೆಕ್ನಾಲಜಿಯನ್ನು ಹೊಂದಿರಲಿದ್ದು, ವೈಬ್ರೆಷನ್ ಸಮಸ್ಯೆಯನ್ನು ಹೋಗಲಾಡಿಸಲಿದೆ. ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಫೈರ್ಬಾಲ್ ಬೈಕ್ ಥಂಡರ್ಬರ್ಡ್ ಎಕ್ಸ್ 350 ಮಾದರಿಯ ರೆಟ್ರೂ-ಅರ್ಬನ್ ಕ್ರೂಸರ್ ವಿನ್ಯಾಸವನ್ನು ಹೊಂದಿದೆ. ಈ ಬಹುನೀರಿಕ್ಷಿತ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಫೈರ್ಬಾಲ್ ಬೈಕನ್ನು ಶೀಘ್ರದಲ್ಲೇ ಬಿಡುಗಡೆಯಾಗಲಿದೆ..