ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ರಾಯಲ್ ಎನ್‍‍ಫೀಲ್ಡ್ ಮೆಟಿಯೋರ್ 350 ಬೈಕ್

ಚೆನ್ನೈ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಹೊಸ ಮೆಟಿಯೋರ್ 350 ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದೀಗ ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಬೈಕ್ ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಿರುವುದು ಬಹಿರಂಗವಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ರಾಯಲ್ ಎನ್‍‍ಫೀಲ್ಡ್ ಮೆಟಿಯೋರ್ 350 ಬೈಕ್

ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಬೈಕ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ಮ್ಯಾಡ್ ಬೈಕರ್ ಬಹಿರಂಗಪಡಿಸಿದೆ. ಹೊಸ ಮೆಟಿಯೋರ್ 350 ಬೈಕಿನ ಹಲವು ಮಾಹಿತಿಗಳು ಬಹಿರಂಗವಾಗಿದೆ. ಈ ಹೂಸ ಬೈಕಿನಲ್ಲಿ ಟ್ವಿನ್ ಪೊಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಸೈಡ್ ಪ್ಯಾನೆಲ್ ನಲ್ಲಿ ಮಾನಿಕರ್ ಅನ್ನು ಅಳವಡಿಸುವುದು ಸ್ಪಾಟ್ ಟೆಸ್ಟ್ ಬಹಿರಂಗವಾಗಿದೆ. ಹೊಸ ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ರಾಯಲ್ ಎನ್‍‍ಫೀಲ್ಡ್ ಮೆಟಿಯೋರ್ 350 ಬೈಕ್

ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಬೈಕಿನಲ್ಲಿ ಹೆಡ್ ಲ್ಯಾಂಪ್, ಅಲಾಯ್ ವ್ಹೀಲ್ ಮತ್ತು ಬ್ಲ್ಯಾಕ್ ಔಟ್ ಎಕ್ಸಾಟ್ ಅನ್ನು ಹೊಂದಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ಥಂಡರ್‍‍ಬರ್ಡ್ ಎಕ್ಸ್ 350 ಬೈಕಿನ ಬದಲಾಗಿ ಹೊಸ ಮೆಟಿಯೋರ್ 350 ಬೈಕನ್ನು ಬಿಡುಗಡೆಗೊಳಿಸುತ್ತಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ರಾಯಲ್ ಎನ್‍‍ಫೀಲ್ಡ್ ಮೆಟಿಯೋರ್ 350 ಬೈಕ್

ಹೊಸ ಫೀಚರ್ಸ್‍ಗಳನ್ನು ಹೊರತುಪಡಿಸಿ ಈ ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಬೈಕನ್ನು ಕೂಡ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ. ಈ ಬೈಕಿನಲ್ಲಿ 346 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಫ್ರಿ ಕ್ಯಾಟಲಿಕ್ ಕರ್ನವಾಟರ್ ಅನ್ನು ಎಕ್ಸಾಸ್ಟ್ ಸಿಸ್ಟಂನೊಂದಿಗೆ ಜೋಡಿಸಲಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ರಾಯಲ್ ಎನ್‍‍ಫೀಲ್ಡ್ ಮೆಟಿಯೋರ್ 350 ಬೈಕ್

ಈ ಎಂಜಿನ್ ಉತ್ತಮ ಇಂಧನ ಧಕ್ಷತೆಯನು ಹೊಂದಿದೆ. ಪ್ರಸ್ತುತ ಟ್ಯಾಪೆಟ್-ವಾಲ್ವ್ ಯುಸಿಇ 346 ಸಿಸಿ ಎಂಜಿನ್‌ಗಳಿಗಿಂತ ಹೆಚ್ಚಿನ ಕಾರ್ಯಕ್ಷಮತೆಯನ್ನು ನೀಡುತ್ತದೆ. ಪ್ರಸ್ತುತ ಬಿಎಸ್-4 ಪ್ರೇರಿತ 346 ಸಿಸಿ ಸಿಂಗಲ್ ಸಿಲಿಂಡರ್, ಏರ್-ಕೂಲ್ಡ್ ಎಂಜಿನ್ ಎಂಜಿನ್ 19.1 ಬಿಹೆಚ್‌ಪಿ ಪವರ್ ಮತ್ತು 28 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ರಾಯಲ್ ಎನ್‍‍ಫೀಲ್ಡ್ ಮೆಟಿಯೋರ್ 350 ಬೈಕ್

ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಬೈಕಿನ ಮುಂಭಾಗಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳನ್ನು ಮತ್ತು ಹಿಂಭಾಗದಲ್ಲಿ ಟ್ವಿನ್ ಶಾಕ್ ಸೆಟಪ್ ಅನ್ನು ಒಳಗೊಂಡಿದೆ.ಈ ಬೈಕಿನಲ್ಲಿ ಸವಾರರ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿದೆ. ಸುರಕ್ಷತೆಗಾಗಿ ಬೈಕಿನ ಮುಂಭಾಗದಲ್ಲಿ ಮತ್ತು ಹಿಂಭಾಗ ಟಯರ್‍ಗಳಲ್ಲಿ ಡಿಸ್ಕ್ ಬ್ರೇಕ್ ಗಳನ್ನು ಅಳವಡಿಸಲಾಗಿದೆ.

MOST READ: ಬಿಎಸ್-6 ಇಂಟರ್‍‍ಸೆಪ್ಟರ್ 650 ಬೈಕಿನ ವಿತರಣೆ ಆರಂಭಿಸಿದ ರಾಯಲ್ ಎನ್‍ಫೀಲ್ಡ್

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ರಾಯಲ್ ಎನ್‍‍ಫೀಲ್ಡ್ ಮೆಟಿಯೋರ್ 350 ಬೈಕ್

ಇದರೊಂದಿಗೆ ಈ ಬೈಕಿನಲ್ಲಿ ಕಂಪನಿಯು ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸುವ ಸಾಧ್ಯತೆಗಳಿದೆ. ಮಾರುಕಟ್ಟೆಯಲ್ಲಿರುವ ಥಂಡರ್‍‍ಬರ್ಡ್‍‍ನಲ್ಲಿರುವ ಎಂಜಿನ್ ಹೆಚ್ಚಿನ ಪ್ರಮಾಣದ ವೈಬ್ರೆಷನ್ ಅನ್ನು ಹೊಂದಿದೆ. ಹೊಸ ಬೈಕಿನಲ್ಲಿ ಅಳವಡಿಸಲಾಗುವ ಎಂಜಿನ್ ಹೊಸ ಟೆಕ್ನಾಲಜಿಯನ್ನು ಹೊಂದಿರಲಿದ್ದು, ವೈಬ್ರೆಷನ್ ಸಮಸ್ಯೆಯನ್ನು ಹೋಗಲಾಡಿಸಲಿದೆ.

MOST READ: ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಬೈಕ್

ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಬೈಕ್ ಥಂಡರ್‌ಬರ್ಡ್ ಎಕ್ಸ್ 350 ಮಾದರಿಯ ರೆಟ್ರೂ-ಅರ್ಬನ್ ಕ್ರೂಸರ್ ವಿನ್ಯಾಸವನ್ನು ಹೊಂದಿದೆ. ಹೊಸ ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: 100ರ ಗಡಿ ದಾಟಿದ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ರಾಯಲ್ ಎನ್‍‍ಫೀಲ್ಡ್ ಮೆಟಿಯೋರ್ 350 ಬೈಕ್

ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.6೦ ರಿಂದ 1.8೦ ಲಕ್ಷಗಳಾವರೆಗೆ ಇರಬಹುದು ಎಂದು ಅಂದಾಜಿಸಲಾಗಿದೆ. ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಬಜಾಜ್ ಅವೆಂಜರ್ 220 ಸ್ಟ್ರೀಟ್ ಮತ್ತು ಜಾವಾ 300 ಬೈಕುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
Royal Enfield Meteor 350 Spied. Read in Kanada.
Story first published: Monday, March 30, 2020, 18:03 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more