ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ ರಾಯಲ್ ಎನ್‌ಫೀಲ್ಡ್ ಹೊಸ ಮಿಟಿಯೊರ್ 350

ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತದಲ್ಲಿ ಮಾತ್ರ ವಿಶ್ವದ ಪ್ರಮುಖ 50ಕ್ಕಿಂತಲೂ ಹೆಚ್ಚು ರಾಷ್ಟ್ರ ಮಾರಾಟ ಜಾಲವನ್ನು ಹೊಂದಿದ್ದು, ಹೊಸದಾಗಿ ಬಿಡುಗಡೆಯಾದ ಮಿಟಿಯೊರ್ 350 ಕ್ರೂಸರ್ ಬೈಕ್ ಮಾದರಿಯನ್ನು ವಿದೇಶಿ ಮಾರುಕಟ್ಟೆಗಳಲ್ಲೂ ಪರಿಚಯಿಸುವ ಮೂಲಕ ಹೊಸ ಬೈಕ್ ರಫ್ತು ಪ್ರಕ್ರಿಯೆಗೆ ಚಾಲನೆ ನೀಡಿದೆ.

ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ ರಾಯಲ್ ಎನ್‌ಫೀಲ್ಡ್ ಹೊಸ ಮಿಟಿಯೊರ್ 350

ಭಾರತದಿಂದ ರಫ್ತುಗೊಳ್ಳುವ ಹೊಸ ವಾಹನಗಳಲ್ಲಿ ರಾಯಲ್ ಎನ್‌ಫೀಲ್ಡ್ ನಿರ್ಮಾಣದ ವಿವಿಧ ಬೈಕ್ ಮಾದರಿಗಳು ಮುಂಚೂಣಿಯಲ್ಲಿದ್ದು, ಕಂಪನಿಯು ದೇಶಿಯ ಮಾರುಕಟ್ಟೆಯಿಂದಲೇ ವಿಶ್ವದ ಪ್ರಮುಖ ರಾಷ್ಟ್ರಗಳಿಗೆ ರಫ್ತು ಕೈಗೊಳ್ಳುತ್ತದೆ. ಹೊಸದಾಗಿ ಬಿಡುಗಡೆಯಾಗಿರುವ ಮಿಟಿಯೊರ್ 350 ಬೈಕ್ ಮಾದರಿಯು ಸದ್ಯ ರಾಯಲ್ ಎನ್‌ಫೀಲ್ಡ್ ನಿರ್ಮಾಣದ ಇತರೆ ಬೈಕ್ ಮಾದರಿಗಳಿಂತಲೂ ಹೆಚ್ಚು ಆಕರ್ಷಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಕ್ರೂಸರ್ ಬೈಕ್ ಮಾದರಿಯು ಶೀಘ್ರದಲ್ಲೇ ವಿದೇಶಿ ಮಾರುಕಟ್ಟೆಗಳಲ್ಲೂ ಮಾರಾಟ ಪ್ರಕ್ರಿಯೆಗೆ ಚಾಲನೆ ಪಡೆದುಕೊಳ್ಳಲಿದೆ.

ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ ರಾಯಲ್ ಎನ್‌ಫೀಲ್ಡ್ ಹೊಸ ಮಿಟಿಯೊರ್ 350

ಹೊಸ ಬೈಕ್ ಮಾದರಿಯು ಕ್ಲಾಸಿಕ್ ಬೈಕ್ ಪ್ರಿಯರ ಬೇಡಿಕೆಯೆಂತೆ ಹಲವಾರು ಹೊಸ ರೈಡಿಂಗ್ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಂಡಿದ್ದು, ತಾಂತ್ರಿಕವಾಗಿ ಈ ಹಿಂದಿನ ಥಂಡರ್‌ಬರ್ಡ್ ಎಕ್ಸ್ ಮಾದರಿಗಿಂತಲೂ ಸಾಕಷ್ಟು ವಿಭಿನ್ನತೆಗಳನ್ನು ಹೊಂದಿದೆ.

ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ ರಾಯಲ್ ಎನ್‌ಫೀಲ್ಡ್ ಹೊಸ ಮಿಟಿಯೊರ್ 350

ಹೊಸ ಬೈಕ್ ಮಾದರಿಯು ಫೈರ್‌ಬಾಲ್, ಸ್ಟೆಲ್ಲಾರ್ ಮತ್ತು ಸೂಪರ್‌ನೊವಾ ಎಂಬ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬೆಂಗಳೂರಿನಲ್ಲಿ ಆನ್‌ರೋಡ್ ಪ್ರಕಾರ ರೂ.2.18 ಲಕ್ಷ (ಫೈರ್‌ಬಾಲ್), ರೂ. 2.36 ಲಕ್ಷ (ಸ್ಟೆಲ್ಲಾರ್) ಮತ್ತು ಹೈ ಎಂಡ್ ಮಾದರಿಯಾದ (ಸೂಪರ್‌ನೊವಾ) ಮಾದರಿಯು ರೂ. 2.25 ಲಕ್ಷ ಬೆಲೆ ಹೊಂದಿದೆ.

ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ ರಾಯಲ್ ಎನ್‌ಫೀಲ್ಡ್ ಹೊಸ ಮಿಟಿಯೊರ್ 350

ಡಬಲ್ ಡೌನ್‌ಟ್ಯೂಬ್ ಕ್ರೆಡಲ್ ಫ್ರೇಮ್ ಮೇಲೆ ಅಭಿವೃದ್ದಿಗೊಂಡಿರುವ ಹೊಸ ಬೈಕ್ ಮಾದರಿಯು ಥಂಡರ್‌ಬರ್ಡ್ ಮಾದರಿಗಿಂತಲೂ ಹೆಚ್ಚು ಅರಾಮದಾಯಕ ರೈಡಿಂಗ್ ಒದಗಿಸಲಿದ್ದು, ಮುಂಭಾಗದಲ್ಲಿ 41-ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಟ್ವಿನ್ ಶಾಕ್‌ ಅಬ್ಸಾರ್ಬರ್‌ ನೀಡಲಾಗಿದೆ.

ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ ರಾಯಲ್ ಎನ್‌ಫೀಲ್ಡ್ ಹೊಸ ಮಿಟಿಯೊರ್ 350

ಹೊಸ ಬೈಕಿನಲ್ಲಿ ಮತ್ತೊಂದು ಪ್ರಮುಖ ಬದಲಾವಣೆ ಎಂದರೆ ಥಂಡರ್‌ಬರ್ಡ್ ಎಕ್ಸ್ ಮಾದರಿಗಿಂತಲೂ 6 ಕೆ.ಜಿ ಕಡಿಮೆ ತೂಕ ಹೊಂದಿರುವ ಹೊಸ ಮಿಟಿಯೊರ್ 350 ಬೈಕ್ ಮಾದರಿಯು 1,400-ಎಂಎಂ ವೀಲ್ಹ್‌ಬೆಸ್, 170-ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಪಡೆದುಕೊಂಡಿದೆ. ಹೊಸ ಮಿಟಿಯೊರ್ 350 ಬೈಕ್ ಮಾದರಿಯು ಹೊಸದಾಗಿ ಅಭಿವೃದ್ದಿಗೊಳಿಸಲಾದ ಜೆ-ಸೀರಿಸ್ ಮಾದರಿಯ ಎಂಜಿನ್ ಬಳಕೆ ಮಾಡಲಾಗಿದ್ದು, ಹೊಸ ಎಂಜಿನ್‌ನಿಂದಾಗಿ ಬೈಕಿನ ವೈಬ್ರೆಷನ್ ಪ್ರಮಾಣವು ಸಾಕಷ್ಟು ಸುಧಾರಣೆಯಾಗಿದೆ.

ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ ರಾಯಲ್ ಎನ್‌ಫೀಲ್ಡ್ ಹೊಸ ಮಿಟಿಯೊರ್ 350

ಎಂಜಿನ್ ಮತ್ತು ಪರ್ಫಾಮೆನ್ಸ್

ಮಿಟಿಯೊರ್ 350 ಬೈಕ್ ಮಾದರಿಯು 349-ಸಿಸಿ ಫ್ಯೂಲ್ ಇಂಜೆಕ್ಷೆಡ್ ಸಿಂಗಲ್ ಸಿಲಿಂಡರ್ ಹೊಂದಿದ್ದು, 5-ಸ್ಪೀಡ್ ಗೇ‌ರ್‌ಬಾಕ್ಸ್‌ನೊಂದಿಗೆ 20.2-ಬಿಎಚ್‌ಪಿ ಮತ್ತು 27-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ ರಾಯಲ್ ಎನ್‌ಫೀಲ್ಡ್ ಹೊಸ ಮಿಟಿಯೊರ್ 350

ಮಿಟಿಯೊರ್ 350 ಆರಂಭಿಕ ಮಾದರಿಯಾದ ಫೈರ್‌ಬಾಲ್‌ನಲ್ಲಿ ಬ್ಲ್ಯಾಕ್ ಔಟ್ ಕಾಂಪೊನೆಟ್ಸ್, ಸಿಂಗಲ್ ಟೋನ್ ಗ್ರಾಫಿಕ್ಸ್ ನೊಂದಿಗೆ ಫ್ಯೂಯಲ್ ಟ್ಯಾಂಕ್, ಬ್ಲ್ಯಾಕ್ ಔಟ್ ಎಂಜಿನ್ ಮತ್ತು ಕಲರ್ ರಿಮ್ ಟೇಪ್ ಅಳವಡಿಸಲಾಗಿದ್ದು, ಎರಡನೇ ಮಾದರಿಯಾದ ಸ್ಟೆಲ್ಲಾರ್ ರೂಪಾಂತರದಲ್ಲಿ ಬ್ಯಾಡ್ಜ್‌ಗಳು, ಕ್ರೋಮ್ ಎಕ್ಸಾಸ್ಟ್, ಕ್ರೋಮ್ ಹ್ಯಾಂಡಲ್‌ಬಾರ್ ಮತ್ತು ಕ್ರೋಮ್ ಇಎಫ್‌ಐ ಕವರ್ ಪಡೆದುಕೊಂಡಿದ್ದು, ಇದರಲ್ಲಿ ಬ್ಯಾಕ್ ರೆಸ್ಟ್ ಸಹ ಒಳಗೂಂಡಿದೆ.

ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ ರಾಯಲ್ ಎನ್‌ಫೀಲ್ಡ್ ಹೊಸ ಮಿಟಿಯೊರ್ 350

ಹೈ ಎಂಡ್ ಮಾದರಿಯಾದ ಸೂಪರ್‌ನೊವಾದಲ್ಲಿ ಡ್ಯುಯಲ್-ಟೋನ್ ಬಣ್ಣದ ಆಯ್ಕೆಯನ್ನು ಹೊಂದಿದ್ದು, ಇದು ಪ್ರೀಮಿಯಂ ಸೀಟ್ ಫಿನಿಶಿಂಗ್, ವಿಂಡ್‌ಸ್ಕ್ರೀನ್ ಮತ್ತು ಕ್ರೋಮ್ ಇಂಡಿಕೇಟರ್ ಸಹ ಹೊಂದಿದೆ. ಜೊತೆಗೆ ಹೊಸ ಬೈಕಿನಲ್ಲಿ ಟಿಪ್ಲರ್ ಸ್ಕ್ರೀನ್ ಒಳಗೊಂಡಿರುವ ಟರ್ನ್-ಬೈ-ಟರ್ನ್ ಗೂಗಲ್ ನ್ಯಾವಿಗೇಷನ್, ಬ್ಲೂಟೂತ್ ಮೂಲಕ ಕನೆಕ್ಟ್ ಮಾಡಬಹುದಾದ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಪಡೆದುಕೊಂಡಿದೆ.

MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ವಿದೇಶಿ ಮಾರುಕಟ್ಟೆಗಳಲ್ಲೂ ಸದ್ದು ಮಾಡಲಿದೆ ರಾಯಲ್ ಎನ್‌ಫೀಲ್ಡ್ ಹೊಸ ಮಿಟಿಯೊರ್ 350

ಹಾಗೆಯೇ ಡಬಲ್ ಡೌನ್‌ಟ್ಯೂಬ್ ಕ್ರೆಡಲ್ ಫ್ರೇಮ್ ಮೇಲೆ ಅಭಿವೃದ್ದಿಗೊಂಡಿರುವ ಹೊಸ ಬೈಕ್ ಮಾದರಿಯು ಥಂಡರ್‌ಬರ್ಡ್ ಮಾದರಿಗಿಂತಲೂ ಹೆಚ್ಚು ಅರಾಮದಾಯಕ ರೈಡಿಂಗ್ ಒದಗಿಸಲಿದ್ದು, ಮುಂಭಾಗದಲ್ಲಿ 41-ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಟ್ವಿನ್ ಶಾಕ್‌ ಅಬ್ಸಾರ್ಬರ್‌ ನೀಡಲಾಗಿದೆ.

Most Read Articles

Kannada
English summary
Royal Enfield Meteor 350 to be exported to international markets. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X