Just In
- 1 hr ago ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- 2 hrs ago TVS iQube: ಲಕ್ಷಾಂತರ ಭಾರತೀಯರ ನೆಚ್ಚಿನ ಸ್ಕೂಟರ್ನ ಡೌನ್ಪೇಮೆಂಟ್, ಇಎಂಐ, ಲೋನ್ ವಿವರ!
- 2 hrs ago viral video: ಬೆಂಗಳೂರಿನಲ್ಲಿ ಮಾತ್ರ ಸಾಧ್ಯ: ಹೆಣ್ಮಗು.. ಹೆಣ್ಮಗು ಓಹ್.. ಎಂದ ನೆಟ್ಟಿಗರು!
- 2 hrs ago ಯುಗಾದಿ ಜಾತ್ರೆ: ಶ್ರೀಶೈಲ ಮಲ್ಲಿಕಾರ್ಜುನನ ಭಕ್ತರಿಗೆ ಸಿಹಿಸುದ್ದಿ.. NWKRTCಯಿಂದ ವಿಶೇಷ ಬಸ್ ಸೇವೆ
Don't Miss!
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- News Priyank Kharge Life Threat: ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Movies 'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಯಲ್ ಎನ್ಫೀಲ್ಡ್ ಹೊಸ ಮಿಟಿಯೊರ್ 350 ಬೈಕ್ ಮಾದರಿಗೆ ಭರ್ಜರಿ ಬೇಡಿಕೆ
ಹೊಸದಾಗಿ ಬಿಡುಗಡೆಯಾಗಿರುವ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350 ಕ್ರೂಸರ್ ಬೈಕ್ ಮಾದರಿಯು ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕ್ರೂಸರ್ ಬೈಕ್ ಖರೀದಿಗಾಗಿ ಇದುವರೆಗೆ ಬರೋಬ್ಬರಿ 8 ಸಾವಿರ ಬುಕ್ಕಿಂಗ್ ದಾಖಲಾಗಿದೆ.
ಕಳೆದ ವಾರವಷ್ಟೇ ಬಿಡುಗಡೆಗೊಂಡಿರುವ ಮಿಟಿಯೊರ್ 350 ಕ್ರೂಸರ್ ಬೈಕ್ ಮಾದರಿಯು ತಾಂತ್ರಿಕವಾಗಿ ಈ ಹಿಂದಿನ ಥಂಡರ್ಬರ್ಡ್ ಎಕ್ಸ್ ಮಾದರಿಗಿಂತಲೂ ಸಾಕಷ್ಟು ವಿಭಿನ್ನತೆಗಳನ್ನು ಹೊಂದಿದೆ. ಹೊಸ ಬೈಕ್ ಮಾದರಿಯು ಫೈರ್ಬಾಲ್, ಸ್ಟೆಲ್ಲಾರ್ ಮತ್ತು ಸೂಪರ್ನೊವಾ ಎಂಬ ಮೂರು ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬೆಂಗಳೂರಿನಲ್ಲಿ ಆನ್ರೋಡ್ ಪ್ರಕಾರ ರೂ.2.18 ಲಕ್ಷ (ಫೈರ್ಬಾಲ್), ರೂ. 2.36 ಲಕ್ಷ (ಸ್ಟೆಲ್ಲಾರ್) ಮತ್ತು ಹೈ ಎಂಡ್ ಮಾದರಿಯಾದ (ಸೂಪರ್ನೊವಾ) ಮಾದರಿಯು ರೂ. 2.25 ಲಕ್ಷ ಬೆಲೆ ಹೊಂದಿದೆ.
ಡಬಲ್ ಡೌನ್ಟ್ಯೂಬ್ ಕ್ರೆಡಲ್ ಫ್ರೇಮ್ ಮೇಲೆ ಅಭಿವೃದ್ದಿಗೊಂಡಿರುವ ಹೊಸ ಬೈಕ್ ಮಾದರಿಯು ಥಂಡರ್ಬರ್ಡ್ ಮಾದರಿಗಿಂತಲೂ ಹೆಚ್ಚು ಅರಾಮದಾಯಕ ರೈಡಿಂಗ್ ಒದಗಿಸಲಿದ್ದು, ಮುಂಭಾಗದಲ್ಲಿ 41-ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಟ್ವಿನ್ ಶಾಕ್ ಅಬ್ಸಾರ್ಬರ್ ನೀಡಲಾಗಿದೆ.
ಹೊಸ ಬೈಕಿನಲ್ಲಿ ಮತ್ತೊಂದು ಪ್ರಮುಖ ಬದಲಾವಣೆ ಎಂದರೆ ಥಂಡರ್ಬರ್ಡ್ ಎಕ್ಸ್ ಮಾದರಿಗಿಂತಲೂ 6 ಕೆ.ಜಿ ಕಡಿಮೆ ತೂಕ ಹೊಂದಿರುವ ಹೊಸ ಮಿಟಿಯೊರ್ 350 ಬೈಕ್ ಮಾದರಿಯು 1,400-ಎಂಎಂ ವೀಲ್ಹ್ಬೆಸ್, 170-ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಪಡೆದುಕೊಂಡಿದೆ.
ಹೊಸ ಮಿಟಿಯೊರ್ 350 ಬೈಕ್ ಮಾದರಿಯು ಹೊಸದಾಗಿ ಅಭಿವೃದ್ದಿಗೊಳಿಸಲಾದ ಜೆ-ಸೀರಿಸ್ ಮಾದರಿಯ ಎಂಜಿನ್ ಬಳಕೆ ಮಾಡಲಾಗಿದ್ದು, ಹೊಸ ಎಂಜಿನ್ನಿಂದಾಗಿ ಬೈಕಿನ ವೈಬ್ರೆಷನ್ ಪ್ರಮಾಣವು ಸಾಕಷ್ಟು ಸುಧಾರಣೆಯಾಗಿದೆ. ಮಿಟಿಯೊರ್ 350 ಬೈಕ್ ಮಾದರಿಯು 349-ಸಿಸಿ ಫ್ಯೂಲ್ ಇಂಜೆಕ್ಷೆಡ್ ಸಿಂಗಲ್ ಸಿಲಿಂಡರ್ ಹೊಂದಿದ್ದು, 5-ಸ್ಪೀಡ್ ಗೇರ್ಬಾಕ್ಸ್ನೊಂದಿಗೆ 20.2-ಬಿಎಚ್ಪಿ ಮತ್ತು 27-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ
ಮಿಟಿಯೊರ್ 350 ಆರಂಭಿಕ ಮಾದರಿಯಾದ ಫೈರ್ಬಾಲ್ನಲ್ಲಿ ಬ್ಲ್ಯಾಕ್ ಔಟ್ ಕಾಂಪೊನೆಟ್ಸ್, ಸಿಂಗಲ್ ಟೋನ್ ಗ್ರಾಫಿಕ್ಸ್ ನೊಂದಿಗೆ ಫ್ಯೂಯಲ್ ಟ್ಯಾಂಕ್, ಬ್ಲ್ಯಾಕ್ ಔಟ್ ಎಂಜಿನ್ ಮತ್ತು ಕಲರ್ ರಿಮ್ ಟೇಪ್ ಅಳವಡಿಸಲಾಗಿದ್ದು, ಎರಡನೇ ಮಾದರಿಯಾದ ಸ್ಟೆಲ್ಲಾರ್ ರೂಪಾಂತರದಲ್ಲಿ ಬ್ಯಾಡ್ಜ್ಗಳು, ಕ್ರೋಮ್ ಎಕ್ಸಾಸ್ಟ್, ಕ್ರೋಮ್ ಹ್ಯಾಂಡಲ್ಬಾರ್ ಮತ್ತು ಕ್ರೋಮ್ ಇಎಫ್ಐ ಕವರ್ ಪಡೆದುಕೊಂಡಿದ್ದು, ಇದರಲ್ಲಿ ಬ್ಯಾಕ್ ರೆಸ್ಟ್ ಸಹ ಒಳಗೂಂಡಿದೆ.
ಹೈ ಎಂಡ್ ಮಾದರಿಯಾದ ಸೂಪರ್ನೊವಾದಲ್ಲಿ ಡ್ಯುಯಲ್-ಟೋನ್ ಬಣ್ಣದ ಆಯ್ಕೆಯನ್ನು ಹೊಂದಿದ್ದು, ಇದು ಪ್ರೀಮಿಯಂ ಸೀಟ್ ಫಿನಿಶಿಂಗ್, ವಿಂಡ್ಸ್ಕ್ರೀನ್ ಮತ್ತು ಕ್ರೋಮ್ ಇಂಡಿಕೇಟರ್ ಸಹ ಹೊಂದಿದೆ. ಜೊತೆಗೆ ಹೊಸ ಬೈಕಿನಲ್ಲಿ ಟಿಪ್ಪರ್ ಪಾಡ್ ಒಳಗೊಂಡಿರುವ ಟರ್ನ್-ಬೈ-ಟರ್ನ್ ಗೂಗಲ್ ನ್ಯಾವಿಗೇಷನ್, ಬ್ಲೂಟೂತ್ ಮೂಲಕ ಕನೆಕ್ಟ್ ಮಾಡಬಹುದಾದ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಪಡೆದುಕೊಂಡಿದೆ.
MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್
ಹಾಗೆಯೇ ಡಬಲ್ ಡೌನ್ಟ್ಯೂಬ್ ಕ್ರೆಡಲ್ ಫ್ರೇಮ್ ಮೇಲೆ ಅಭಿವೃದ್ದಿಗೊಂಡಿರುವ ಹೊಸ ಬೈಕ್ ಮಾದರಿಯು ಥಂಡರ್ಬರ್ಡ್ ಮಾದರಿಗಿಂತಲೂ ಹೆಚ್ಚು ಅರಾಮದಾಯಕ ರೈಡಿಂಗ್ ಒದಗಿಸಲಿದ್ದು, ಮುಂಭಾಗದಲ್ಲಿ 41-ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಟ್ವಿನ್ ಶಾಕ್ ಅಬ್ಸಾರ್ಬರ್ ನೀಡಲಾಗಿದೆ.