ಮಿಟಿಯೊರ್ 350 ಕ್ರೂಸರ್ ಬೈಕ್ ವಿತರಣೆಗೆ ಚಾಲನೆ ನೀಡಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಕ್ರೂಸರ್ ಬೈಕ್ ಮಾದರಿಯಾದ ಮಿಟಿಯೊರ್ 350 ಬೈಕ್ ವಿತರಣೆಗೆ ದೇಶದ ಪ್ರಮುಖ ನಗರಗಳಲ್ಲಿ ಅಧಿಕೃತವಾಗಿ ಚಾಲನೆ ನೀಡಿದ್ದು, ಹೊಸ ಬೈಕ್ ಮಾದರಿಯು ಕ್ಲಾಸಿಕ್ ಬೈಕ್ ಪ್ರಿಯರ ಬೇಡಿಕೆಯೆಂತೆ ಹಲವಾರು ಹೊಸ ರೈಡಿಂಗ್ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಂಡಿದೆ.

ಮಿಟಿಯೊರ್ 350 ಕ್ರೂಸರ್ ಬೈಕ್ ವಿತರಣೆಗೆ ಚಾಲನೆ ನೀಡಿದ ರಾಯಲ್ ಎನ್‌ಫೀಲ್ಡ್

ಮಿಟಿಯೊರ್ 350 ಹೊಸ ಬೈಕ್ ಮಾದರಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಫೀಚರ್ಸ್‌ಗಳೊಂದಿಗೆ ಪ್ರಮುಖ ಮೂರು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ತಾಂತ್ರಿಕವಾಗಿ ಥಂಡರ್‌ಬರ್ಡ್ ಎಕ್ಸ್ ಮಾದರಿಗಿಂತಲೂ ಸಾಕಷ್ಟು ವಿಭಿನ್ನತೆಗಳನ್ನು ಹೊಂದಿದೆ. ಹೊಸ ಬೈಕ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಫೈರ್‌ಬಾಲ್, ಸ್ಟೆಲ್ಲಾರ್ ಮತ್ತು ಸೂಪರ್‌ನೊವಾ ಎಂಬ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಆಕರ್ಷಕ ಬೆಲೆ ಪಡೆದುಕೊಂಡಿದೆ.

ಮಿಟಿಯೊರ್ 350 ಕ್ರೂಸರ್ ಬೈಕ್ ವಿತರಣೆಗೆ ಚಾಲನೆ ನೀಡಿದ ರಾಯಲ್ ಎನ್‌ಫೀಲ್ಡ್

ಹೊಸ ಬೈಕ್ ಮಾದರಿಯು ಬೆಂಗಳೂರಿನಲ್ಲಿ ಆನ್‌ರೋಡ್ ಪ್ರಕಾರ ರೂ.2.18 ಲಕ್ಷ (ಫೈರ್‌ಬಾಲ್), ರೂ. 2.36 ಲಕ್ಷ (ಸ್ಟೆಲ್ಲಾರ್) ಮತ್ತು ಹೈ ಎಂಡ್ ಮಾದರಿಯಾದ (ಸೂಪರ್‌ನೊವಾ) ಮಾದರಿಯು ರೂ. 2.25 ಲಕ್ಷ ಬೆಲೆ ಹೊಂದಿದೆ.

ಮಿಟಿಯೊರ್ 350 ಕ್ರೂಸರ್ ಬೈಕ್ ವಿತರಣೆಗೆ ಚಾಲನೆ ನೀಡಿದ ರಾಯಲ್ ಎನ್‌ಫೀಲ್ಡ್

ಡಬಲ್ ಡೌನ್‌ಟ್ಯೂಬ್ ಕ್ರೆಡಲ್ ಫ್ರೇಮ್ ಮೇಲೆ ಅಭಿವೃದ್ದಿಗೊಂಡಿರುವ ಹೊಸ ಬೈಕ್ ಮಾದರಿಯು ಥಂಡರ್‌ಬರ್ಡ್ ಮಾದರಿಗಿಂತಲೂ ಹೆಚ್ಚು ಅರಾಮದಾಯಕ ರೈಡಿಂಗ್ ಒದಗಿಸಲಿದ್ದು, ಮುಂಭಾಗದಲ್ಲಿ 41-ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಟ್ವಿನ್ ಶಾಕ್‌ ಅಬ್ಸಾರ್ಬರ್‌ ನೀಡಲಾಗಿದೆ.

ಮಿಟಿಯೊರ್ 350 ಕ್ರೂಸರ್ ಬೈಕ್ ವಿತರಣೆಗೆ ಚಾಲನೆ ನೀಡಿದ ರಾಯಲ್ ಎನ್‌ಫೀಲ್ಡ್

ಹೊಸ ಬೈಕಿನಲ್ಲಿ ಮತ್ತೊಂದು ಪ್ರಮುಖ ಬದಲಾವಣೆ ಎಂದರೆ ಥಂಡರ್‌ಬರ್ಡ್ ಎಕ್ಸ್ ಮಾದರಿಗಿಂತಲೂ 6 ಕೆ.ಜಿ ಕಡಿಮೆ ತೂಕ ಹೊಂದಿರುವ ಹೊಸ ಮಿಟಿಯೊರ್ 350 ಬೈಕ್ ಮಾದರಿಯು 1,400-ಎಂಎಂ ವೀಲ್ಹ್‌ಬೆಸ್, 170-ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಪಡೆದುಕೊಂಡಿದೆ. ಹೊಸ ಮಿಟಿಯೊರ್ 350 ಬೈಕ್ ಮಾದರಿಯು ಹೊಸದಾಗಿ ಅಭಿವೃದ್ದಿಗೊಳಿಸಲಾದ ಜೆ-ಸೀರಿಸ್ ಮಾದರಿಯ ಎಂಜಿನ್ ಬಳಕೆ ಮಾಡಲಾಗಿದ್ದು, ಹೊಸ ಎಂಜಿನ್‌ನಿಂದಾಗಿ ಬೈಕಿನ ವೈಬ್ರೆಷನ್ ಪ್ರಮಾಣವು ಸಾಕಷ್ಟು ಸುಧಾರಣೆಯಾಗಿದೆ.

ಮಿಟಿಯೊರ್ 350 ಕ್ರೂಸರ್ ಬೈಕ್ ವಿತರಣೆಗೆ ಚಾಲನೆ ನೀಡಿದ ರಾಯಲ್ ಎನ್‌ಫೀಲ್ಡ್

ಎಂಜಿನ್ ಮತ್ತು ಪರ್ಫಾಮೆನ್ಸ್

ಮಿಟಿಯೊರ್ 350 ಬೈಕ್ ಮಾದರಿಯು 349-ಸಿಸಿ ಫ್ಯೂಲ್ ಇಂಜೆಕ್ಷೆಡ್ ಸಿಂಗಲ್ ಸಿಲಿಂಡರ್ ಹೊಂದಿದ್ದು, 5-ಸ್ಪೀಡ್ ಗೇ‌ರ್‌ಬಾಕ್ಸ್‌ನೊಂದಿಗೆ 20.2-ಬಿಎಚ್‌ಪಿ ಮತ್ತು 27-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ಮಿಟಿಯೊರ್ 350 ಕ್ರೂಸರ್ ಬೈಕ್ ವಿತರಣೆಗೆ ಚಾಲನೆ ನೀಡಿದ ರಾಯಲ್ ಎನ್‌ಫೀಲ್ಡ್

ಮಿಟಿಯೊರ್ 350 ಆರಂಭಿಕ ಮಾದರಿಯಾದ ಫೈರ್‌ಬಾಲ್‌ನಲ್ಲಿ ಬ್ಲ್ಯಾಕ್ ಔಟ್ ಕಾಂಪೊನೆಟ್ಸ್, ಸಿಂಗಲ್ ಟೋನ್ ಗ್ರಾಫಿಕ್ಸ್ ನೊಂದಿಗೆ ಫ್ಯೂಯಲ್ ಟ್ಯಾಂಕ್, ಬ್ಲ್ಯಾಕ್ ಔಟ್ ಎಂಜಿನ್ ಮತ್ತು ಕಲರ್ ರಿಮ್ ಟೇಪ್ ಅಳವಡಿಸಲಾಗಿದ್ದು, ಎರಡನೇ ಮಾದರಿಯಾದ ಸ್ಟೆಲ್ಲಾರ್ ರೂಪಾಂತರದಲ್ಲಿ ಬ್ಯಾಡ್ಜ್‌ಗಳು, ಕ್ರೋಮ್ ಎಕ್ಸಾಸ್ಟ್, ಕ್ರೋಮ್ ಹ್ಯಾಂಡಲ್‌ಬಾರ್ ಮತ್ತು ಕ್ರೋಮ್ ಇಎಫ್‌ಐ ಕವರ್ ಪಡೆದುಕೊಂಡಿದ್ದು, ಇದರಲ್ಲಿ ಬ್ಯಾಕ್ ರೆಸ್ಟ್ ಸಹ ಒಳಗೂಂಡಿದೆ.

ಮಿಟಿಯೊರ್ 350 ಕ್ರೂಸರ್ ಬೈಕ್ ವಿತರಣೆಗೆ ಚಾಲನೆ ನೀಡಿದ ರಾಯಲ್ ಎನ್‌ಫೀಲ್ಡ್

ಹೈ ಎಂಡ್ ಮಾದರಿಯಾದ ಸೂಪರ್‌ನೊವಾದಲ್ಲಿ ಡ್ಯುಯಲ್-ಟೋನ್ ಬಣ್ಣದ ಆಯ್ಕೆಯನ್ನು ಹೊಂದಿದ್ದು, ಇದು ಪ್ರೀಮಿಯಂ ಸೀಟ್ ಫಿನಿಶಿಂಗ್, ವಿಂಡ್‌ಸ್ಕ್ರೀನ್ ಮತ್ತು ಕ್ರೋಮ್ ಇಂಡಿಕೇಟರ್ ಸಹ ಹೊಂದಿದೆ. ಜೊತೆಗೆ ಹೊಸ ಬೈಕಿನಲ್ಲಿ ಟಿಪ್ಲರ್ ಸ್ಕ್ರೀನ್ ಒಳಗೊಂಡಿರುವ ಟರ್ನ್-ಬೈ-ಟರ್ನ್ ಗೂಗಲ್ ನ್ಯಾವಿಗೇಷನ್, ಬ್ಲೂಟೂತ್ ಮೂಲಕ ಕನೆಕ್ಟ್ ಮಾಡಬಹುದಾದ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಪಡೆದುಕೊಂಡಿದೆ.

MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ಮಿಟಿಯೊರ್ 350 ಕ್ರೂಸರ್ ಬೈಕ್ ವಿತರಣೆಗೆ ಚಾಲನೆ ನೀಡಿದ ರಾಯಲ್ ಎನ್‌ಫೀಲ್ಡ್

ಹಾಗೆಯೇ ಡಬಲ್ ಡೌನ್‌ಟ್ಯೂಬ್ ಕ್ರೆಡಲ್ ಫ್ರೇಮ್ ಮೇಲೆ ಅಭಿವೃದ್ದಿಗೊಂಡಿರುವ ಹೊಸ ಬೈಕ್ ಮಾದರಿಯು ಥಂಡರ್‌ಬರ್ಡ್ ಮಾದರಿಗಿಂತಲೂ ಹೆಚ್ಚು ಅರಾಮದಾಯಕ ರೈಡಿಂಗ್ ಒದಗಿಸಲಿದ್ದು, ಮುಂಭಾಗದಲ್ಲಿ 41-ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಟ್ವಿನ್ ಶಾಕ್‌ ಅಬ್ಸಾರ್ಬರ್‌ ನೀಡಲಾಗಿದೆ.

Image Courtesy: Gobinder Singh/Facebook

More from DriveSpark

Article Published On: Monday, November 9, 2020, 12:18 [IST]
English summary
Royal Enfield Meteor 350 Delivery Starts in India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+