ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಮಿಟಿಯೊರ್ 350

ಹೊಸದಾಗಿ ಬಿಡುಗಡೆಯಾಗಿರುವ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಕ್ರೂಸರ್ ಬೈಕ್ ಮಾದರಿಯು ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕ್ರೂಸರ್ ಬೈಕ್ ಖರೀದಿಗಾಗಿ ಇದುವರೆಗೆ ಬರೋಬ್ಬರಿ 20 ಸಾವಿರಕ್ಕೂ ಅಧಿಕ ಬುಕ್ಕಿಂಗ್ ದಾಖಲಾಗಿದೆ.

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಮಿಟಿಯೊರ್ 350

ನವೆಂಬರ್ 6ರಂದು ಬಿಡುಗಡೆಗೊಂಡಿರುವ ಮಿಟಿಯೊರ್ 350 ಕ್ರೂಸರ್ ಬೈಕ್ ಮಾದರಿಯು ತಾಂತ್ರಿಕವಾಗಿ ಈ ಹಿಂದಿನ ಥಂಡರ್‌ಬರ್ಡ್ ಎಕ್ಸ್ ಮಾದರಿಗಿಂತಲೂ ಸಾಕಷ್ಟು ವಿಭಿನ್ನತೆಗಳನ್ನು ಹೊಂದಿದ್ದು, ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಬೈಕ್ ಬಿಡುಗಡೆಗೊಳಿಸಿದ ಮೊದಲ ತಿಂಗಳಿನಲ್ಲಿ ಒಟ್ಟು 7,031 ಯುನಿಟ್ ವಿತರಣೆ ಮಾಡುವ ಮೂಲಕ ಉತ್ತಮ ಮಾರಾಟ ದಾಖಲಿಸಿದೆ.

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಮಿಟಿಯೊರ್ 350

ಹೊಸ ಬೈಕ್ ಮಾದರಿಯು ಫೈರ್‌ಬಾಲ್, ಸ್ಟೆಲ್ಲಾರ್ ಮತ್ತು ಸೂಪರ್‌ನೊವಾ ಎಂಬ ಮೂರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬೆಂಗಳೂರಿನಲ್ಲಿ ಆನ್‌ರೋಡ್ ಪ್ರಕಾರ ರೂ.2.18 ಲಕ್ಷ (ಫೈರ್‌ಬಾಲ್), ರೂ. 2.36 ಲಕ್ಷ (ಸ್ಟೆಲ್ಲಾರ್) ಮತ್ತು ಹೈ ಎಂಡ್ ಮಾದರಿಯಾದ (ಸೂಪರ್‌ನೊವಾ) ಮಾದರಿಯು ರೂ. 2.25 ಲಕ್ಷ ಬೆಲೆ ಹೊಂದಿದೆ.

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಮಿಟಿಯೊರ್ 350

ಡಬಲ್ ಡೌನ್‌ಟ್ಯೂಬ್ ಕ್ರೆಡಲ್ ಫ್ರೇಮ್ ಮೇಲೆ ಅಭಿವೃದ್ದಿಗೊಂಡಿರುವ ಹೊಸ ಬೈಕ್ ಮಾದರಿಯು ಥಂಡರ್‌ಬರ್ಡ್ ಮಾದರಿಗಿಂತಲೂ ಹೆಚ್ಚು ಅರಾಮದಾಯಕ ರೈಡಿಂಗ್ ಒದಗಿಸಲಿದ್ದು, ಮುಂಭಾಗದಲ್ಲಿ 41-ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಟ್ವಿನ್ ಶಾಕ್‌ ಅಬ್ಸಾರ್ಬರ್‌ ನೀಡಲಾಗಿದೆ.

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಮಿಟಿಯೊರ್ 350

ಹೊಸ ಬೈಕಿನಲ್ಲಿ ಮತ್ತೊಂದು ಪ್ರಮುಖ ಬದಲಾವಣೆ ಎಂದರೆ ಥಂಡರ್‌ಬರ್ಡ್ ಎಕ್ಸ್ ಮಾದರಿಗಿಂತಲೂ 6 ಕೆ.ಜಿ ಕಡಿಮೆ ತೂಕ ಹೊಂದಿರುವ ಹೊಸ ಮಿಟಿಯೊರ್ 350 ಬೈಕ್ ಮಾದರಿಯು 1,400-ಎಂಎಂ ವೀಲ್ಹ್‌ಬೆಸ್, 170-ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಪಡೆದುಕೊಂಡಿದೆ. ಹೊಸ ಮಿಟಿಯೊರ್ 350 ಬೈಕ್ ಮಾದರಿಯು ಹೊಸದಾಗಿ ಅಭಿವೃದ್ದಿಗೊಳಿಸಲಾದ ಜೆ-ಸೀರಿಸ್ ಮಾದರಿಯ ಎಂಜಿನ್ ಬಳಕೆ ಮಾಡಲಾಗಿದ್ದು, ಹೊಸ ಎಂಜಿನ್‌ನಿಂದಾಗಿ ಬೈಕಿನ ವೈಬ್ರೆಷನ್ ಪ್ರಮಾಣವು ಸಾಕಷ್ಟು ಸುಧಾರಣೆಯಾಗಿದೆ.

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಮಿಟಿಯೊರ್ 350

ಮಿಟಿಯೊರ್ 350 ಬೈಕ್ ಮಾದರಿಯು 349-ಸಿಸಿ ಫ್ಯೂಲ್ ಇಂಜೆಕ್ಷೆಡ್ ಸಿಂಗಲ್ ಸಿಲಿಂಡರ್ ಹೊಂದಿದ್ದು, 5-ಸ್ಪೀಡ್ ಗೇ‌ರ್‌ಬಾಕ್ಸ್‌ನೊಂದಿಗೆ 20.2-ಬಿಎಚ್‌ಪಿ ಮತ್ತು 27-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಮಿಟಿಯೊರ್ 350

ಮಿಟಿಯೊರ್ 350 ಆರಂಭಿಕ ಮಾದರಿಯಾದ ಫೈರ್‌ಬಾಲ್‌ನಲ್ಲಿ ಬ್ಲ್ಯಾಕ್ ಔಟ್ ಕಾಂಪೊನೆಟ್ಸ್, ಸಿಂಗಲ್ ಟೋನ್ ಗ್ರಾಫಿಕ್ಸ್ ನೊಂದಿಗೆ ಫ್ಯೂಯಲ್ ಟ್ಯಾಂಕ್, ಬ್ಲ್ಯಾಕ್ ಔಟ್ ಎಂಜಿನ್ ಮತ್ತು ಕಲರ್ ರಿಮ್ ಟೇಪ್ ಅಳವಡಿಸಲಾಗಿದ್ದು, ಎರಡನೇ ಮಾದರಿಯಾದ ಸ್ಟೆಲ್ಲಾರ್ ರೂಪಾಂತರದಲ್ಲಿ ಬ್ಯಾಡ್ಜ್‌ಗಳು, ಕ್ರೋಮ್ ಎಕ್ಸಾಸ್ಟ್, ಕ್ರೋಮ್ ಹ್ಯಾಂಡಲ್‌ಬಾರ್ ಮತ್ತು ಕ್ರೋಮ್ ಇಎಫ್‌ಐ ಕವರ್ ಪಡೆದುಕೊಂಡಿದ್ದು, ಇದರಲ್ಲಿ ಬ್ಯಾಕ್ ರೆಸ್ಟ್ ಸಹ ಒಳಗೂಂಡಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಮಿಟಿಯೊರ್ 350

ಹೈ ಎಂಡ್ ಮಾದರಿಯಾದ ಸೂಪರ್‌ನೊವಾದಲ್ಲಿ ಡ್ಯುಯಲ್-ಟೋನ್ ಬಣ್ಣದ ಆಯ್ಕೆಯನ್ನು ಹೊಂದಿದ್ದು, ಇದು ಪ್ರೀಮಿಯಂ ಸೀಟ್ ಫಿನಿಶಿಂಗ್, ವಿಂಡ್‌ಸ್ಕ್ರೀನ್ ಮತ್ತು ಕ್ರೋಮ್ ಇಂಡಿಕೇಟರ್ ಸಹ ಹೊಂದಿದೆ.

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಮಿಟಿಯೊರ್ 350

ಜೊತೆಗೆ ಹೊಸ ಬೈಕಿನಲ್ಲಿ ಟಿಪ್ಪರ್ ಪಾಡ್ ಒಳಗೊಂಡಿರುವ ಟರ್ನ್-ಬೈ-ಟರ್ನ್ ಗೂಗಲ್ ನ್ಯಾವಿಗೇಷನ್, ಬ್ಲೂಟೂತ್ ಮೂಲಕ ಕನೆಕ್ಟ್ ಮಾಡಬಹುದಾದ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಪಡೆದುಕೊಂಡಿದೆ.

MOST READ: ಅತಿ ಕಡಿಮೆ ಬೆಲೆಯಲ್ಲಿ ಬಿಎಸ್ಐ ಸರ್ಟಿಫೈಡ್ ಟ್ರೆಡ್ ಹೆಲ್ಮೆಟ್ ಬಿಡುಗಡೆ

ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಉತ್ತಮ ಬೇಡಿಕೆ ಪಡೆದುಕೊಂಡ ಮಿಟಿಯೊರ್ 350

ಹಾಗೆಯೇ ಡಬಲ್ ಡೌನ್‌ಟ್ಯೂಬ್ ಕ್ರೆಡಲ್ ಫ್ರೇಮ್ ಮೇಲೆ ಅಭಿವೃದ್ದಿಗೊಂಡಿರುವ ಹೊಸ ಬೈಕ್ ಮಾದರಿಯು ಥಂಡರ್‌ಬರ್ಡ್ ಮಾದರಿಗಿಂತಲೂ ಹೆಚ್ಚು ಅರಾಮದಾಯಕ ರೈಡಿಂಗ್ ಒದಗಿಸಲಿದ್ದು, ಮುಂಭಾಗದಲ್ಲಿ 41-ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಟ್ವಿನ್ ಶಾಕ್‌ ಅಬ್ಸಾರ್ಬರ್‌ ನೀಡಲಾಗಿದೆ.

Most Read Articles

Kannada
English summary
Royal Enfield Meteor 350 First Month Sales 7,031 Units. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X